Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಸಚಿವ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದ ಕೊಡಗಿನ ಜನ
    ಅಡುಗೆ ಮನೆ

    ಸಚಿವ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದ ಕೊಡಗಿನ ಜನ

    ಕೊಡಗಿನಲ್ಲಿ ನಿರಂತರ ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸಾವನ್ನಪ್ಪುತ್ತಿದ್ದರು ಸಚಿವ ಈಶ್ವರ್ ಖಂಡ್ರೆ ಮಾತ್ರ ಕೊಡಗು ಜಿಲ್ಲೆಗೂ ತನಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಜನಸಾಮಾನ್ಯರಲ್ಲಿ ಅಸಮಾಧಾನ ಉಂಟುಮಾಡಿದೆ. ಸರಕಾರ ಆಡಳಿತಕ್ಕೆ ಬಂದ ಬಳಿಕ ಕೇವಲ ಒಂದು ಬಾರಿ ಮಾತ್ರ ಜಿಲ್ಲೆಗೆ ಭೇಟಿ ನೀಡಿರುವ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಸಾಮಾನ್ಯ ಜನ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದು ಹೇಳುತ್ತಿರುವ ಹಾಸ್ಯದ ಮಾತುಗಳು ಜನವಲದಲ್ಲಿ ಹರಿದಾಡುತ್ತಿದೆ.

    ಸತ್ತಿದ್ದು ಕಾರ್ಮಿಕ: ದಿನಗೂಲಿ ನೌಕರರ ಜೊತೆ ಸಭೆ

    ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ರಾಜ್ಯ ವನ್ಯ ಜೀವಿ ಘಟಕದ ದಿನಗೂಲಿ ಹೊರಗುತ್ತಿಗೆ ನೌಕರರ ನಿಯೋಗದಿಂದ ಅರಣ್ಯ ಸಚಿವರ ಭೇಟಿ ಮಾಡಿ ಚರ್ಚೆ ನಡೆಸಲಾಯಿತಾದರೂ ಎಲ್ಲೂ ಸೋಮವಾರ ಮೃತಪಟ್ಟ ಕಾರ್ಮಿಕನ ಬಗ್ಗೆ ಚರ್ಚೆ ನಡೆದಿಲ್ಲ ಕನಿಷ್ಠ ಸಂತಾಪವನ್ನು ಸೂಚಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಅರಣ್ಯ ಇಲಾಕೆಯ ದಿನಗೂಲಿ ನೌಕರರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಆವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಆವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು. ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು. ದಿನಗೂಲಿ ಸೇವಾ ಅವಧಿ, ಸೇವಾ ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಕೊಡಗಿನ ಜಮ್ಮಮಾಲೆ ಸಮಸ್ಯೆಯ ಶೀಘ್ರ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಲಾಯಿತು.
    ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕ್ರಮ ವಹಿಸಲಾಗುವುದೆಂದು ತಿಳಿಸಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಗೌರವ ಅಧ್ಯಕ್ಷರಾದ ಎ ಎಂ ನಾಗರಾಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಸಭೆಯಲ್ಲಿ ಸಚಿವರು ಆನೆ ದಾಳಿಯಿಂದ ಮೃತಪಟ್ಟ ಕೂಲಿ ಕಾರ್ಮಿಕ ಹಾಗೂ ಆ ಘಟನೆಯ ಬಗ್ಗೆ ಮಾತನಾಡದೆ ಇರುವುದು ಸಾರ್ವಜನಿಕ ವಲಯದಲ್ಲಿ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕೊಡಗು ಜಿಲ್ಲೆ ಕೂಡ ಸಚಿವರ ಆಡಳಿತ ವ್ಯವಸ್ಥೆಗೆ ಒಳಪಟ್ಟಿದ್ದು ಎಂಬುವುದನ್ನು ಅರಿತು ಜಿಲ್ಲೆಗೆ ಭೇಟಿನೀಡಬೇಕಾದ ಅವಶ್ಯಕತೆಯಿದೆ

    Previous Articleಪಟ್ಟೆದಾರ ಸಮಸ್ಯೆ ಕುರಿತು ಸಚಿವರೊಂದಿಗೆ ಸಭೆ
    Next Article ಕರಾಟೆಯಲ್ಲಿ ಸುಂಟಿಕೊಪ್ಪದ ವಿದ್ಯಾರ್ಥಿನಿ ಜೀವಿಕ ಸಾಧನೆ

    Related Posts

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.