ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎ. ಎಸ್ ಪೊನ್ನಣ್ಣ ನವರು ಭಾಗಿ

ಕೊಡಗು ಜಿಲ್ಲೆಯ, ಸೋಮವಾರಪೇಟೆ ತಾಲೂಕು ಶಾಂತಳ್ಳಿಯಲ್ಲಿ ಜರುಗಿದ ಶ್ರೀ ಕ್ಷೇತ್ರ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಸ್ಥಳೀಯ ಭಕ್ತಾಭಿಮಾನಿಗಳ ಆಹ್ವಾನದ ಮೇರೆಗೆ ತೆರಳಿದ ಮಾನ್ಯ ಶಾಸಕರು, ಶ್ರೀ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಸಂಸದರಾದ ಯುದುವೀರ್ ಒಡೆಯರ್, ಪಕ್ಷದ ಮುಖಂಡರಾದ ಲೋಕೇಶ್, ಸತೀಶ್, ಪ್ರತೀಶ್, ಮಾಜಿ ಶಾಸಕರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕೊಡಗು ನ್ಯೂಸ್

