Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘದ ನಿರ್ದೇಶಕರ ಪಟ್ಟಿ ಪರಿಷ್ಕರಣೆ ಸಭೆ
    ಜಿಲ್ಲೆ

    ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘದ ನಿರ್ದೇಶಕರ ಪಟ್ಟಿ ಪರಿಷ್ಕರಣೆ ಸಭೆ

    ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆ

    ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘದ ನಿರ್ದೇಶಕರ ಪಟ್ಟಿ ಪರಿಷ್ಕರಣೆಗೆ ತೀರ್ಮಾನ

    ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಈಗಾಗಲೇ ತಾಲ್ಲೂಕುವಾರು ಆಯ್ಕೆ ಮಾಡಿರುವ ಪಟ್ಟಿಯನ್ನು ಪರಿಷ್ಕರಿಸಲು ಸೋಮವಾರ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

     

    ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

    ಈ ಕುರಿತು ವಿಷಯ ಪ್ರಸ್ತಾಪಿಸಿದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿ ಸದಸ್ಯರ ಗಮನಕ್ಕೆ ಬಾರದೆ ಪಟ್ಟಿಯನ್ನು ಕಳುಹಿಸಿಕೊಡಲಾಗಿದ್ದು, ಈ ಪಟ್ಟಿಯನ್ನು ಪರಿಷ್ಕರಿಸುವಂತಾಗಬೇಕು ಎಂದು ಸಭೆಯ ಗಮನಕ್ಕೆ ತಂದರು.

    ಈ ಕುರಿತು ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಪಟ್ಟಿಯಲ್ಲಿ ಲೋಪಗಳಿದ್ದಲ್ಲಿ ಪರಿಷ್ಕರಿಸುವಂತಾಗಬೇಕು. ಆದರೆ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರ ಗಮನಕ್ಕೆ ತಂದು ಪಟ್ಟಿಯನ್ನು ತಯಾರಿಸಬೇಕಿತ್ತು ಎಂದು ಅವರು ನುಡಿದರು.

    ಗ್ಯಾರಂಟಿ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಅದನ್ನು ಬಿಟ್ಟು ಅಧಿಕಾರಿಗಳು ಪಟ್ಟಿ ತಯಾರಿಸುವುದು ಸರಿಯಲ್ಲ ಎಂದು ವಿ.ಪಿ.ಶಶಿಧರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

    ಇದಕ್ಕೆ ಸದಸ್ಯರು ಧ್ವನಿಗೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘದ ಸದಸ್ಯತ್ವ ಪಡೆಯಲು 1000 ರೂ. ನೀಡಿ ನೋಂದಣಿಯಾಗಬೇಕಿದೆ. ಆ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಶಿಶು ಕಲ್ಯಾಣ ಅಧಿಕಾರಿಗಳು ಮಾಹಿತಿ ಒದಗಿಸಿರುವಂತೆ ಪಟ್ಟಿ ಕಳುಹಿಸಲಾಗಿದೆ ಎಂದು ಹೇಳಿದರು.

    ಜಿಲ್ಲೆಯ 5 ತಾಲ್ಲೂಕಿನಲ್ಲಿ ಪ್ರತೀ 10 ಜನರಂತೆ 50 ಜನರನ್ನು ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಂಘದ ನಿರ್ದೇಶಕರಾಗಿ ಪಟ್ಟಿ ತಯಾರಿಸಲಾಗಿದೆ ಎಂದು ಅವರು ವಿವರಿಸಿದರು.

    ಅಂಗನವಾಡಿ ಕಾರ್ಯಕರ್ತರ ನೇಮಕಾತಿ ಸಂಬಂಧ ಸ್ಥಳೀಯರಿಗೆ ಆದ್ಯತೆ ನೀಡುವಂತೆ ವಿ.ಪಿ.ಶಶಿಧರ ಅವರು ಸಲಹೆ ಮಾಡಿದರು.

    ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕಾಂತರಾಜು ಅವರು ಮಾತನಾಡಿ ಪಡಿತರ ಚೀಟಿ ವಿತರಣೆಯಲ್ಲಿ ಸಾಕಷ್ಟು ಗೊಂದಲವಿದ್ದು, ಬಿಪಿಎಲ್ ಪಡಿತರ ಚೀಟಿದಾರರನ್ನು ಎಪಿಎಲ್‍ಗೆ ವರ್ಗಾಯಿಸಿದ್ದು, ಇದನ್ನು ಕೂಡಲೇ ಪರಿಶೀಲಿಸಬೇಕು. ಬಡವರಿಗೆ ಅನ್ಯಾಯವಾಗಬಾರದು ಎಂದು ಹೇಳಿದರು.

    ಈ ಕುರಿತು ಪ್ರತಿಕ್ರಿಯಿಸಿದ ಧರ್ಮಜ ಉತ್ತಪ್ಪ ಅವರು ಬಿಪಿಎಲ್‍ನಿಂದ ಎಪಿಎಲ್ ಆಗಿದ್ದಲ್ಲಿ ಯಾವುದೇ ಕುಟುಂಬ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಮನವಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುವಂತಾಗಬೇಕು. ಅರ್ಹರೆಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸುವಂತೆ ತಿಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಆಹಾರ ನಿರೀಕ್ಷಕರಾದ ವೀಣಾ ಅವರು ಇತ್ತೀಚೆಗೆ ಬಿಪಿಎಲ್ ನಿಂದ ಎಪಿಎಲ್‍ಗೆ ಬದಲಾಗಿದ್ದಲ್ಲಿ, ಸರಿಪಡಿಸಿಕೊಳ್ಳಲು ಅವಕಾಶವಿದೆ. ಆದರೆ ಈ ಹಿಂದೆ ಆಗಿರುವುದನ್ನು ಸದ್ಯ ಬದಲಾಯಿಸಲು ಅವಕಾಶವಿಲ್ಲ ಎಂದು ಅವರು ವಿವರಿಸಿದರು.

    ಯುವನಿಧಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಂಜುನಾಥ್ ಅವರು ಜಿಲ್ಲೆಯಲ್ಲಿ ಪದವಿ 1625, ಡಿಪ್ಲೋಮಾ 24 ಮಂದಿ ಒಟ್ಟು 1649 ಮಂದಿ ಯುವನಿಧಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ವಿವರಿಸಿದರು. ಇದುವರೆಗೆ 438.87 ಲಕ್ಷ ರೂ ಪಾವತಿಯಾಗಿದೆ ಎಂದು ಹೇಳಿದರು.

    ಯುವನಿಧಿ ಯೋಜನೆ ಸಂಬಂಧಿಸಿದಂತೆ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವಂತೆ ಧರ್ಮಜ ಉತ್ತಪ್ಪ ಅವರು ಸಲಹೆ ಮಾಡಿದರು.

    ಗೃಹಜ್ಯೋತಿ ಯೋಜನೆಯಡಿ 2,01,331 ಸ್ಥಾವರಗಳಲ್ಲಿ ಗೃಹಜ್ಯೋತಿ ಯೋಜನೆ ಕಲ್ಪಿಸಲಾಗಿದ್ದು, ಶೇ.99.15 ರಷ್ಟು ಪ್ರಗತಿ ಸಾಧಿಸಲಾಗಿದೆ. 731.28 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದು ಸೆಸ್ಕ್ ಇಇ ರಾಮಚಂದ್ರ ಅವರು ಹೇಳಿದರು.

    ಶಕ್ತಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಈರಸಪ್ಪ ಅವರು ಅಗತ್ಯವಿರುವ ಕಡೆಗಳಲ್ಲಿ ಕೆಎಸ್‍ಆರ್‍ಟಿಸಿ ಬಸ್‍ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

    ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್ ಅವರು ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು. ಸದಸ್ಯರಾದ ಸುಂದರ ಎಸ್.ಕೆ., ಮುಸ್ತಪ, ಪಿ.ಎಲ್.ಸುರೇಶ್, ಎನ್.ಆರ್.ಪದವಿ, ಕೆ.ಜಿ.ಫೀಟರ್, ಮಂದ್ರೀರ ಮೋಹನ್ ದಾಸ್, ಜಾನ್ಸನ್ ಪಿ.ವಿ., ಜಿ.ಪಂ.ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ಇತರರು ಹಲವು ಮಾಹಿತಿ ನೀಡಿದರು.

    Previous Articleಶಾಸಕ ಪೊನ್ನಣ್ಣನವರಿಂದ ಮಾಕುಟಕ್ಕೆ ದಿಡೀರ್ ಭೇಟಿ
    Next Article ಶ್ರೀ ಮಕ್ಕಿ ಶಾಸ್ತವು ದೇವಸ್ಥಾನಕ್ಕಿಂದು ಶಾಸಕರಾದ ಎ.ಎಸ್ ಪೊನ್ನಣ್ಣನವರ ಭೇಟಿ

    Related Posts

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.