ಏರ್ ರೈಫಲ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಶ್ಯ ನಿಶಾಂತ್

ಗೋಣಿಕೊಪ್ಪಲು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಆಯೋಜಿಸಿದ್ದ ಕರ್ನಾಟಕ ಸ್ಟೇಟ್ ಗೇಮ್ಸ್ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್ನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ರೈಫಲ್ಸ್ ಅಸೋಸಿಯೇಷನ್ ನಡೆಸಿಕೊಟ್ಟ ಸ್ಪರ್ಧೆಯಲ್ಲಿ ಗೋಣಿಕೊಪ್ಪಲಿನ ಕಾಲ್ಸ್ / ಎಎಸ್ಎಫ್ ಶೂಟರ್ ಸಾಶ್ಯ ನಿಶಾಂತ್ ಪಾಲ್ಗೊಂಡು 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ 625.5 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ.
ಕೊಡಗು ನ್ಯೂಸ್

