ಭಾರತ ಸಂವಿಧಾನ ಜಾರಿಯಾದ ದಿನದ ಶುಭಾಶಯಗಳು:-ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಹಾಗೂ ಪೊನ್ನಂಪೇಟೆಯ ಜೂನಿಯರ್ ಕಾಲೇಜು ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು.
ಈ ಕಾರ್ಯಕ್ರಮಗಳ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಮೊದಲಿಗೆ ರಾಷ್ಟ್ರಧ್ವಜೋರಾಹಣ ಮಾಡಿ ಧ್ವಜವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಶಾಸಕರು, ಇಡೀ ವಿಶ್ವಕ್ಕೆ ಮಾದರಿಯಾದ ಭಾರತದ ಸಂವಿಧಾನ ಜಾರಿಯಾದ ಈ ದಿನದಂದು ನಾವುಗಳು ಹೆಮ್ಮೆಯಿಂದ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.
ಇದು ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಪ್ರಾಮುಖ್ಯತೆಯ ದಿನವಾಗಿದೆ. ಈ ಗಣತಂತ್ರ ಹಬ್ಬವನ್ನು ಆಚರಿಸುವ ಮೂಲಕ, ನಾವು ನಮ್ಮ ದೇಶದ ಸಾಂವಿಧಾನಿಕ, ಸಾಂಸ್ಕೃತಿಕ ಹಾಗೂ ವೈವಿಧ್ಯಮಯ ಅನನ್ಯತೆಯನ್ನು ವಿಶ್ವಾದ್ಯಂತ ಸಾರೋಣ. ಗಣತಂತ್ರ ವ್ಯವಸ್ಥೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ನಾಡಿನ ಏಳಿಗೆಗಾಗಿ ಶ್ರಮಿಸೋಣ ಎಂದು ಕರೆ ನೀಡಿದರು. ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವೀಕ್ಷಿಸಿದ ಮಾನ್ಯ ಶಾಸಕರು ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರು ಜಾನ್ಸನ್, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ವಿರಾಜಪೇಟೆ ಬಗರ್ ಹುಕುಂ ಅಧ್ಯಕ್ಷರು ಸಲಾಂ, ಪೊನ್ನಂಪೇಟೆ ಬಗರ್ ಹುಕುಂ ಅಧ್ಯಕ್ಷರು ಲಾಲಾ ಅಪ್ಪಣ್ಣ, ಮಾಜಿ ಪುರಸಭೆ ಸದಸ್ಯರು ರಾಜೇಶ್ ಪದ್ಮನಾಭ, ಹಿರಿಯರು ಮುಕಳೇರ ಕುಶಾಲಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರೀರ ನವೀನ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲೀರ ರಶೀದ್, ತಹಶೀಲ್ದಾರ್ ಪ್ರವೀಣ್, ಪೊಲೀಸ್ ಅಧಿಕಾರಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕೊಡಗು ನ್ಯೂಸ್

