ಕರಡ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು: ಕರಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ನಿವೃತ್ತ ಸಿಐಎಸ್ಎಫ್ ಬೇಪಡಿಯಂಡ ಎಸ್.ಅಯ್ಯಣ್ಣನವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು, ಉತ್ತಮ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು,ದೇಶಾಭಿಮಾನ ರೂಡಿಸಿಕೊಳ್ಳಬೇಕು ಮಕ್ಕಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷೆ ಎಂ.ಎ. ನೇತ್ರಾವತಿ ವಹಿಸಿದರು.
ದಿನದ ಮಹತ್ವದ ಕುರಿತು ಮುಖ್ಯ ಶಿಕ್ಷಕಿ ಲಿಲಾವತಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು,ಭಾಷಣ,ಹಾಡು ನೃತ್ಯಗಳು ನಡೆಯಿತು.
ಸಂವಿಧಾನ ಪೀಠಿಕೆ ಓದಲಾಯಿತು.
ಅತಿಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭ ಸಲಹಾ ಸಮಿತಿಯ ಸದಸ್ಯರಾದ ಐತಿಚಂಡ ಬೀಮಯ್ಯ,ಎಸ್ ಡಿಎಂಸಿ ಸದಸ್ಯರಾದ ಬಿಂದು,ಪ್ರಿಯ, ಪೋಷಕರು,ಗ್ರಾಮಸ್ಥರು,ಅತಿಥಿ ಶಿಕ್ಷಕಿ ಫಶೀಲ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಡಿಕೆ ಲಿಲಾವತಿ ಸ್ವಾಗತಿಸಿ ಸರ್ವರನ್ನು ವಂದಿಸಿದರು.

