ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್,ಮಡಿಕೇರಿ ತಾಲೂಕು ವತಿಯಿಂದ ಪದವಿಪೂರ್ವ ಕಾಲೇಜು ಮಕ್ಕಳಿಗೆ ಆನ್ಲೈನ್ ಜಾನಪದ ಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ಜಾನಪದ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯು ಮಡಿಕೇರಿ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು ಶ್ರೀ ಮತಿ ಕೂಡಕಂಡಿ ಓಂ ಶ್ರೀ ದಯಾನಂದ, ವಾಟ್ಸಾಪ್ ಸಂಖ್ಯೆ :6363376487ಗೆ ದಿನಾಂಕ 05/02/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಡಿಜಿಟಲ್ ಅಭಿನಂದನಾಪತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಡಿಕೇರಿ ತಾಲೂಕು ಅಧ್ಯಕ್ಷರಾದ ಪಾಲೆರ ಕೆ ಮಂದಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

