Close Menu
Kodagu News
    ಹೊಸ ಸುದ್ದಿ

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯೇ ಬಜೆಟ್ ನ ಉದ್ದೇಶವಾಗಿದೆ
    ಜಿಲ್ಲೆ

    ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯೇ ಬಜೆಟ್ ನ ಉದ್ದೇಶವಾಗಿದೆ

    ವಿಕಸಿತ ಭಾರತವನ್ನು ನಿರ್ಮಿಸುವ ಗುರಿ ಯೇ ಬಜೆಟ್ ಉದ್ದೇಶವಾಗಿದೆ

    ಮಡಿಕೇರಿ, ಫೆ. 2: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಸರ್ವ ಸ್ಪರ್ಶಿ, ಸರ್ವ ವ್ಯಾಪಿಯಾಗಿದೆ ಎಂದು ಮಾಜಿ ಸಭಾಪತಿ ಕೆ.ಜಿ. ಬೋಪಯ್ಯ ಬಣ್ಣಿಸಿದರು.

    ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಗ್ರ ಭಾರತದ ಅಭಿವೃದ್ಧಿ ದೃಷ್ಟಿಕೋನದಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಿದ್ದು, ಎಲ್ಲಾ ವರ್ಗದವರಿಗೂ ಒಂದಲ್ಲ ಒಂದು ರೀತಿ ಅನುಕೂಲಕರ ಅಂಶಗಳಿಂದ ಬಜೆಟ್ ಕೂಡಿದೆ. ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಿಲ್ಲ. ಬದಲಾಗಿ ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯನ್ನು ಹೊಂದಿರುವುದು ಸ್ಪಷ್ಟವಾಗಿದೆ. ಕೃಷಿ, ರಕ್ಷಣಾ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅಲ್ಲದೆ ಇದೊಂದು ಯುವಜನತೆ ಪರ ಬಜೆಟ್ ಕೂಡ ಆಗಿದೆ ಎಂದು ಹೇಳಿದರು.

    ಟೀಕೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳು ಈ ಬಜೆಟ್ ಅನ್ನು ಟೀಕಿಸುತ್ತಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಪೂರಕವಾಗುವ ಹಲವು ಕಾರ್ಯಕ್ರಮಗಳಿವೆ. ಬೆಂಗಳೂರು ಅಭಿವೃದ್ಧಿಗೆ ರೂ. 5 ಸಾವಿರ ಕೋಟಿ ನೀಡಲಾಗಿದೆ. ತಲಾ ಆದಾಯ ಕಡಿಮೆ ಇರುವ ಈಶಾನ್ಯ ರಾಜ್ಯಗಳ ಅಭಿವೃದ್ಧಿಗಾಗಿ ಹೆಚ್ಚಿನ ಕಾರ್ಯಕ್ರಮವನ್ನು ನೀಡಲಾಗಿದೆ. ರಾಜ್ಯಗಳಿಗೆ 1.4 ಲಕ್ಷ ಕೋಟಿ ಹೆಚ್ಚುವರಿ ಅನುದಾನ ನೀಡಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಸಮಗ್ರ ಭಾರತದ ದೃಷ್ಟಿಕೋನದಲ್ಲಿ ಬಜೆಟ್ ಮಂಡಿಸಬೇಕು. ಪ್ರಸಕ್ತ ಆಯವ್ಯಯದಲ್ಲಿ ಸಾಲದ ಪ್ರಮಾಣವೂ ಕಡಿಮೆಯಾಗಿದೆ ಎಂದು ವಿವರಿಸಿದರು.

    ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ವಿಕಸಿತ ಭಾರತ ದೃಷ್ಟಿಯಲ್ಲಿ ಬಜೆಟ್ ಮಂಡನೆಯಾಗಿದ್ದು, ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಕೇಂದ್ರ ಇಟ್ಟಿದೆ. ಯಾವುದೇ ತೆರಿಗೆಯನ್ನು ಹೆಚ್ಚಿಸದೆ ದೇಶದ ಎಲ್ಲಾ ವರ್ಗಕ್ಕೂ ಸಹಾಯಕವಾಗುವ ಬಜೆಟ್ ಅನ್ನು ಮಂಡಿಸಲಾಗಿದೆ. ಇಡೀ ದೇಶದ ಜನ, ಆರ್ಥಿಕ ತಜ್ಞರು ಪ್ರಸಕ್ತ ಬಜೆಟ್ ಅನ್ನು ಸ್ವಾಗತಿಸಿದ್ದಾರೆ. ರಕ್ಷಣಾ ಕ್ಷೇತ್ರವನ್ನು ಬಲಪಡಿಸಲು ಸರಕಾರ ಮುಂದಾಗಿದೆ. ಕೃಷಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ, ಬೆಂಗಳೂರು-ಚೈನ್ನೆöÊ ಹಾಗೂ ಹೈದರಬಾದ್‌ಗೆ ಹೈಸ್ಪೀಡ್ ರೈಲು, ಶ್ರೀಗಂಧ, ಕೋಕೋ, ತೆಂಗು, ಗೇರು ಹಣ್ಣು ಕೃಷಿಗೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರೋತ್ಸಾಹ, ಔಷಧಗಳ ಬೆಲೆ ಇಳಿಕೆ ಹೀಗೆ ಎಲ್ಲಾ ವಲಯಕ್ಕೂ ಸಮಾನ ಪ್ರಮಾಣದ ಒತ್ತನ್ನು ಕೇಂದ್ರ ಸರಕಾರ ನೀಡಿದೆ. ಜೊತೆಗೆ ಕ್ರೀಡಾ ವಲಯವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಕ್ರೀಡಾ ತರಬೇತಿ ಕೇಂದ್ರಗಳು, ನುರಿತ ತರಬೇತುದಾರರ ನಿಯೋಜನೆಯನ್ನು ಸೇರಿಸಿರುವುದು ಗಮನಾರ್ಹ ಎಂದು ಶ್ಲಾಘಿಸಿದರು.

    ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಬಿ.ಕೆ. ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಮಾಧ್ಯಮ ಪ್ರಮುಖ್ ಸಜಿಲ್ ಕೃಷ್ಣನ್ ಉಪಸ್ಥಿತರಿದ್ದರು.

    Previous Articleಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್
    Next Article ಮಾಲ್ದಾರೆ ಪೊಲೀಸ್ ಉಪಠಾಣೆಗೆ ಎಸ್ಪಿ ಬಿಂದುಮಣಿ ಭೇಟಿ

    Related Posts

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.