- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ 98.2% ಅಂಕ; 9.72 CGPA ಗಳಿಸಿ ಅಮೋಘ ಸಾಧನೆ — MCA ವ್ಯಾಸಂಗಕ್ಕೆ ಪ್ರವೇಶ ಮಡಿಕೇರಿ: ಅಂತಿಮ ವರ್ಷದ BCA (Bachelor of Computer Applications) ಪದವಿ ಪರೀಕ್ಷೆಯಲ್ಲಿ ಮೇಕೇರಿ ಗ್ರಾಮದ ಕುಮಾರಿ ಇಂಪನ ಕೆ.ಡಿ. ಅವರು ಶೇ.98.2ರಷ್ಟು ಅಂಕಗಳೊಂದಿಗೆ 9.72 CGPA ಗಳಿಸಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂಪನ ಅವರು ಮೇಕೇರಿ ಗ್ರಾಮದ ನಿವೃತ್ತ ಸರ್ಕಾರಿ ನೌಕರ ಧರ್ಮಲಿಂಗ ಹಾಗೂ ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುಳಸಿ ದಂಪತಿಯ ಪುತ್ರಿ. ಕಠಿಣ ಪರಿಶ್ರಮ, ಪೋಷಕರ ನಿರಂತರ ಪ್ರೋತ್ಸಾಹ ಹಾಗೂ ಉಪನ್ಯಾಸಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ. ಇಂಪನ ಅವರು ಮಡಿಕೇರಿಯ ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 89.7% ಹಾಗೂ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 97.33% ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದರು. ಪ್ರಸ್ತುತ…
ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ ಮಡಿಕೇರಿ, ಆ.25: ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಆ.23ರಂದು ನಡೆದ ರಾಷ್ಟ್ರ ಮಟ್ಟದ ಇಂಡಿಪೆಂಡೆನ್ಸ್ ಕಪ್–2026 ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ಮೂರ್ನಾಡು ಹಾಗೂ ಚೇರಂಬಾಣೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಒಕಿನೊವ ಷೋರಿನ್-ರಿಯೋ ಕರಾಟೆ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ದೇಶದ ವಿವಿಧ ಭಾಗಗಳಿಂದ ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು. ಮೂರ್ನಾಡು ಎಜುಕೇಶನ್ ಸೊಸೈಟಿಯ ಅಲೈನಾ ಯು.ಎಸ್. ಕರಾಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿ ಗಳಿಸಿದ್ದಾರೆ. ರಿಫಾ ಫಾತಿಮಾ ಬಿ.ಆರ್. ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಕುಮಿಟೆಯಲ್ಲಿ ತೃತೀಯ ಸ್ಥಾನ ಪಡೆದು ಟ್ರೋಫಿ ಪಡೆದಿದ್ದಾರೆ. ವರ್ಷಾ ಬಿ.ಎನ್. ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ. ಮೂರ್ನಾಡು ಹೈಸ್ಕೂಲ್‌ನ ಬಿಪಿನ್ ಚಿನ್ನಪ್ಪ ಬಿ.ಎಂ. ಕಟಾ ವಿಭಾಗದಲ್ಲಿ…
ಆ.27ರಂದು ಮಡಿಕೇರಿಯಲ್ಲಿ ಸಭೆ; ಹಾಲಿ–ಮಾಜಿ ಜನಪ್ರತಿನಿಧಿಗಳು, ಸಂಘ–ಸಂಸ್ಥೆಗಳ ಪ್ರಮುಖರು ಹಾಗೂ ಚಿಂತಕರಿಗೆ ಸಂಸದ ಯದುವೀರ್ ಆಹ್ವಾನ ಮಡಿಕೇರಿ: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ. ಕಸ್ತೂರಿ ರಂಗನ್ ವರದಿಯ ಶಿಫಾರಸುಗಳ ಜಾರಿ ಕೊಡಗು ಜಿಲ್ಲೆಯ ಭೌಗೋಳಿಕತೆ, ಕೃಷಿ, ಪರಿಸರ ಹಾಗೂ ಜನಜೀವನದ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮಹತ್ವದ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 27ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ನಗರದ ರಾಜದರ್ಶನ್ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಕೊಡಗು ಜಿಲ್ಲೆಯ ಹಾಲಿ ಹಾಗೂ ಮಾಜಿ ಸಂಸದರು, ಶಾಸಕರು, ಚುನಾಯಿತ ಹಾಲಿ–ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳ ಮುಖ್ಯಸ್ಥರು, ಪ್ರಗತಿಪರ ಚಿಂತಕರು ಹಾಗೂ ನಾಗರಿಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಕಸ್ತೂರಿ ರಂಗನ್ ವರದಿ ಜಾರಿಯಿಂದ ರೈತರು, ಬೆಳೆಗಾರರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಉಂಟಾಗಬಹುದಾದ ಸಾಧಕ–ಬಾಧಕಗಳು, ಜಿಲ್ಲೆಯ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ…
ಮಡಿಕೇರಿ–ವಿರಾಜಪೇಟೆ ರಾಜ್ಯ ಹೆದ್ದಾರಿಯ ಮೇಕೇರಿ ಬಳಿ ಕಳೆದ ವರ್ಷ ಕುಸಿದ ರಸ್ತೆ; ತಿರುವಿನಲ್ಲೇ ಅಪಾಯದ ಸ್ಥಿತಿ, ಜಿಲ್ಲಾಡಳಿತದ ವಿರುದ್ಧ ನಿರ್ಲಕ್ಷ್ಯದ ಆರೋಪ ಮಡಿಕೇರಿ: ಮಡಿಕೇರಿ–ವಿರಾಜಪೇಟೆ ರಾಜ್ಯ ಹೆದ್ದಾರಿಯ ಮೇಕೇರಿ ಬಳಿ ಕಳೆದ ವರ್ಷ ಕುಸಿದಿರುವ ರಸ್ತೆಗೆ ವರ್ಷ ಕಳೆದರೂ ತಡೆಗೋಡೆ ನಿರ್ಮಾಣವಾಗದೆ ವಾಹನ ಸವಾರರು ಆತಂಕದಿಂದ ಸಂಚರಿಸುವಂತಾಗಿದೆ. ಕಳೆದ ವರ್ಷ ರಸ್ತೆ ಕುಸಿದ ಬಳಿಕ ತಡೆಗೋಡೆ ನಿರ್ಮಿಸಿ ರಸ್ತೆ ಸುರಕ್ಷಿತಗೊಳಿಸುವ ಅಗತ್ಯವಿದ್ದರೂ, ಇದುವರೆಗೆ ಯಾವುದೇ ಶಾಶ್ವತ ಕಾಮಗಾರಿ ಕೈಗೊಂಡಿರುವುದು ಕಂಡುಬಂದಿಲ್ಲ. ಅದರಲ್ಲೂ ರಸ್ತೆಯು ತಿರುವಿನಲ್ಲೇ ಕುಸಿದಿರುವುದರಿಂದ ವಾಹನ ಸವಾರರಿಗೆ ಹೆಚ್ಚಿನ ಅಪಾಯ ಎದುರಾಗಿದೆ. ತಿರುವಿನಲ್ಲಿ ಎರಡೂ ಬದಿಯಿಂದ ಏಕಕಾಲದಲ್ಲಿ ವಾಹನಗಳು ಬಂದಾಗ ಪರಸ್ಪರ ದಾರಿ ನೀಡಲು ಸಾಕಷ್ಟು ಸ್ಥಳಾವಕಾಶ ಇಲ್ಲದಂತಾಗಿದ್ದು, ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತಷ್ಟು ಹದಗೆಡುವ ಆತಂಕವೂ ಸ್ಥಳೀಯರಲ್ಲಿ ಮೂಡಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಇಂತಹ ಅಪಾಯಕಾರಿ ಸ್ಥಿತಿ ಮುಂದುವರಿದಿದ್ದರೂ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು…
ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಉಡುಪಿ | ದಕ್ಷಿಣ ಕನ್ನಡ | ಉತ್ತರ ಕನ್ನಡ | ಶಿವಮೊಗ್ಗ | ಕೊಡಗು ಚಿಕ್ಕಮಗಳೂರು | ಬೆಳಗಾವಿ | ಕಲಬುರಗಿ | ಬೀದರ್ ಈ ಜಿಲ್ಲೆಗಳಲ್ಲಿ 64.5ರಿಂದ 115.4 ಮಿ.ಮೀ.ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗಿನಲ್ಲಿ ಕೂಡ ಇಂದು ಕೆಲವು ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 24ರಂದು ಶ್ರೀಮಂಗಲದಲ್ಲಿ 8 ಸೆಂ.ಮೀ. ಮತ್ತು ಸಂತಹಳ್ಳಿಯಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದ್ದು, ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕೊಡಗಿನಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಕೊಡಗು ಜಿಲ್ಲೆಯಲ್ಲಿ ಇಂದು ಕೂಡ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 25ರಂದು ದಕ್ಷಿಣ ಒಳನಾಡು ಕರ್ನಾಟಕಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಮಡಿಕೇರಿ,…
ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ನೇಪಾಳದ ಕಠ್ಮಂಡುವಿನಲ್ಲಿ ನಡೆದ ಅಂತರರಾಷ್ಟ್ರೀಯ ಮೂರನೇ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಸಾಧನೆ ಸೋಮವಾರಪೇಟೆ ತಾಲ್ಲೂಕಿನ ಬೇಳೂರು ಗ್ರಾಮ ಪಂಚಾಯಿತಿ ನೌಕರ ರಷೀದ್ ಅವರ ಪುತ್ರ ಮಹಮ್ಮದ್ ಯಾಸೀನ್ ಅವರು ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮೂರನೇ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದು ಕರ್ನಾಟಕ ಹಾಗೂ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ ಗೋಣಿಕೊಪ್ಪ: ಕಾವೇರಿ ಕಾಲೇಜು ಸಮೀಪದ ‘ಕೂರ್ಗ್ ಎಕ್ಸ್‌ಪ್ರೆಸ್ ಕಾಫಿ ಶಾಪ್’ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರೋಪಿಯನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 5ರಂದು ರಾತ್ರಿ ಕಾಫಿ ಶಾಪ್‌ನಿಂದ ಸುಮಾರು ₹4 ಸಾವಿರ ನಗದು ಕಳವಾಗಿತ್ತು. ಈ ಕುರಿತು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ವಿಶೇಷ ತನಿಖಾ ತಂಡವು ತಲೆಮರೆಸಿಕೊಂಡಿದ್ದ ಕಣ್ಣೂರು ಜಿಲ್ಲೆಯ ಇರಿಟ್ಟಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಸಲಿಂ.ಟಿ.ಎ (44) ಎಂಬಾತನನ್ನು ಆಗಸ್ಟ್ 23ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಇತರ ಕಳವು ಪ್ರಕರಣಗಳಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಗೋಣಿಕೊಪ್ಪ ಪೊಲೀಸ್ ಠಾಣೆಯ ಮತ್ತೊಂದು ಪ್ರಕರಣದಲ್ಲಿ ಸುಮಾರು ₹37 ಸಾವಿರ, ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ₹8 ಸಾವಿರ ಹಾಗೂ ಕೇರಳದ ಇರಿಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಒಟ್ಟು ₹51,650 ನಗದು ಕಳವು…
ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ 2026ರ SIR ಕರಡು ಮತದಾರರ ಪಟ್ಟಿಯ ಅಧಿಕೃತ ಮಾಹಿತಿಯ ಪ್ರಕಾರ, 2023ರ ಸಂಖ್ಯೆಗೆ ಹೋಲಿಕೆ ಮಾಡಿದರೆ ಕೊಡಗಿನಲ್ಲಿ ಮತದಾರರ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ. ಮಡಿಕೇರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಒಟ್ಟು 4,05,803 ಮತದಾರರು ಇದ್ದಾರೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ 4,57,735 ಮತದಾರರು ಇದ್ದರು. ಇದೀಗ 51,932 ಮತದಾರರ ಇಳಿಕೆ ಕಂಡುಬಂದಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2,09,115 ಮತದಾರರಿದ್ದು, 1,01,316 ಪುರುಷರು, 1,07,797 ಮಹಿಳೆಯರು ಹಾಗೂ ಇಬ್ಬರು ಇತರೆ ಮತದಾರರಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ 1,96,688 ಮತದಾರರಿದ್ದು, 96,978 ಪುರುಷರು, 99,708 ಮಹಿಳೆಯರು ಹಾಗೂ ಇಬ್ಬರು ಇತರೆ ಮತದಾರರಿದ್ದಾರೆ. SIR ಪ್ರಕ್ರಿಯೆಯಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿದ ವೇಳೆ ಜಿಲ್ಲೆಯಲ್ಲಿ 62,854 ಮತದಾರರು ಗಣತಿ ನಮೂನೆ ಸಲ್ಲಿಸದಿರುವುದು ಗುರುತಿಸಲಾಗಿದೆ. ಇದರಲ್ಲಿ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಎರಡು ಕಡೆ ಹೆಸರು ಹೊಂದಿರುವವರು…
ಓಣಂ ಹಬ್ಬದ ಸಂಭ್ರಮವನ್ನು ಸವಿಯಲು ಕೊಫಿಯಾ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ವತಿಯಿಂದ ಆಗಸ್ಟ್ 26ರಂದು ವಿಶೇಷ ಓಣಂ ಸಧ್ಯೆ ಆಯೋಜಿಸಲಾಗಿದೆ. ಸಾಂಪ್ರದಾಯಿಕ ಬಾಳೆ ಎಲೆಯಲ್ಲಿ ವಿವಿಧ ಬಗೆಯ ಖಾದ್ಯಗಳೊಂದಿಗೆ ಒಟ್ಟು 29 ಐಟಂಗಳ ವಿಶೇಷ ಸಧ್ಯೆ ಲಭ್ಯವಿರಲಿದೆ. ಹಬ್ಬದ ಸಾಂಪ್ರದಾಯಿಕ ರುಚಿಯೊಂದಿಗೆ ಓಣಂ ಸಂಭ್ರಮವನ್ನು ಅನುಭವಿಸುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಲಾಗಿದೆ. ಡೈನ್-ಇನ್ ಸಧ್ಯೆಗೆ ₹349 ಹಾಗೂ ಪಾರ್ಸೆಲ್‌ಗೆ ₹399 ದರ ನಿಗದಿಪಡಿಸಲಾಗಿದೆ. ಪಾರ್ಸೆಲ್ ಸೇವೆ ಸೀಮಿತವಾಗಿದ್ದು, ಮುಂಗಡ ಬುಕ್ಕಿಂಗ್‌ಗೆ ಅವಕಾಶವಿದೆ. ಓಣಂ ಸಧ್ಯೆ ಬುಕ್ಕಿಂಗ್ ಹಾಗೂ ಆರ್ಡರ್‌ಗಾಗಿ +91 99005 00874, +91 98802 24787 ಹಾಗೂ +91 94814 44787 ಸಂಖ್ಯೆಯನ್ನು ಸಂಪರ್ಕಿಸಬಹುದು.
ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ಮಳೆಗಾಗಿ ಪ್ರಾರ್ಥಿಸಿ ಕೊಡಗಿನ ಪಾಡಿಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು. ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ಭಕ್ತಾಧಿಗಳು ಉಪಸ್ಥಿತರಿದ್ದರು.
