Author: Kodagu-admin

ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ: ಹದಗೆಟ್ಟ ರಸ್ತೆಗಳಿಂದ ವಾಹನ ಸವಾರರ ಪರದಾಟ ಮಡಿಕೇರಿ: ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಮಡಿಕೇರಿ ನಗರದಲ್ಲಿ ಹದಗೆಟ್ಟ ರಸ್ತೆಗಳು ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ನಿತ್ಯ ನರಕಯಾತನೆ ಉಂಟುಮಾಡುತ್ತಿವೆ. ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಮಳೆ ನೀರು ತುಂಬಿ ಕೆರೆಯಂತಾಗಿರುವುದರಿಂದ ವಾಹನ ಸಂಚಾರ ದುಸ್ತರವಾಗಿದೆ. ಸಂಪಿಗೆಕಟ್ಟೆ ಪ್ರದೇಶದಲ್ಲಿ ರಸ್ತೆ ಗುಂಡಿಗಳಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದ್ದು, ಗುಂಡಿಗಳ ಆಳ ಅಂದಾಜಿಸಲು ಸಾಧ್ಯವಾಗದ ಕಾರಣ ದ್ವಿಚಕ್ರ ವಾಹನ ಸವಾರರು ಹಾಗೂ ಆಟೋ ಚಾಲಕರು ಅಪಾಯದ ನಡುವೆಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಸೀಟ್ ರಸ್ತೆಯೂ ಗುಂಡಿಗಳಿಂದ ತುಂಬಿದ್ದು, ಪ್ರವಾಸಿಗರು ಹಾಗೂ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಾಲಾ ಮಕ್ಕಳನ್ನು ಪ್ರತಿದಿನ ದ್ವಿಚಕ್ರ ವಾಹನಗಳಲ್ಲಿ ಕರೆದುಕೊಂಡು ಹೋಗುವ ಪೋಷಕರಿಗೂ ರಸ್ತೆ ಗುಂಡಿಗಳು ಜೀವಕ್ಕೆ ಅಪಾಯವಾಗುತ್ತಿವೆ. ಮಳೆ ನೀರಿನಿಂದ ಗುಂಡಿಗಳು ಕಾಣಿಸದೇ ಜಾರಿಬೀಳುವ ಭೀತಿ ಹೆಚ್ಚಾಗಿದೆ. ನಗರಸಭೆ ಕೆಲವೆಡೆ ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯ ಕೈಗೊಂಡಿದ್ದರೂ, ಮಳೆಯ ನಡುವೆ…

Read More

ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ KODAGU NEWS UPDATE ಎಸ್ ಎಸ್ ಎಫ್ ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಬಾಗವಹಿಸಿ ಪ್ರಥಮ ಸ್ಥಾನ ಪಡೆದು ಎಸ್ ಎಸ್ ಎಫ್ ನಾಪೋಕ್ಲು ಯೂನಿಟ್ ನ ಪ್ರತಿಭೆ ಕೆ.ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು ಮಡಿಕೇರಿ: ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸಮಯೋಚಿತ ಚಿಕಿತ್ಸೆ ನೀಡುವಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಗಂಭೀರ ನಿರ್ಲಕ್ಷ್ಯ ವಹಿಸಿದ ಪರಿಣಾಮ ಮಹಿಳೆ ಮತ್ತು ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟ ವೈದ್ಯರು, ಆಸ್ಪತ್ರೆಯ ಆಡಳಿತ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತಿಯೊಬ್ಬರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ದೂರುದಾರ ಹರೀಶ್ ಹೆಚ್.ಸಿ. ಅವರ ದೂರಿನ ಪ್ರಕಾರ, ಅವರ ಪತ್ನಿ ಸೀಮಾದೇವಿ ಹೆಚ್.ಎಸ್. ಅವಳಿ ಮಕ್ಕಳಿಗೆ ಗರ್ಭಿಣಿಯಾಗಿದ್ದು, ಆರಂಭದಿಂದಲೇ ನಿಯಮಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆಗೆ ಒಳಗಾಗುತ್ತಿದ್ದರು. ವೈದ್ಯರ ಸಲಹೆಯಂತೆ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜುಲೈ 8ರಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಾದ…

Read More

ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ ಮಡಿಕೇರಿ: ನಗರದ ಜಿಟಿ ರಸ್ತೆಯಲ್ಲಿ ರಸ್ತೆ ಬದಿಯಲ್ಲಿ ಉಂಟಾಗಿರುವ ಕೆಸರು ಹಾಗೂ ಮಣ್ಣಿನ ರಾಶಿಯಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಂತರವಾಗಿ ಜೆಸಿಬಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಪರಿಣಾಮ ಆ ಭಾಗ ಗದ್ದೆಯಂತಾಗಿದ್ದು, ಮಳೆ ನೀರು ಸೇರಿ ಕೆಸರಿನ ಮಯವಾಗಿರುವುದರಿಂದ ನಡೆದಾಡುವುದೇ ದುಸ್ತರವಾಗಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ನಗರದಲ್ಲಿ ಭಾರೀ ವಾಹನಗಳ ನಿಲುಗಡೆಗೆ ನಿಷೇಧ ಹೇರಿದ್ದರೂ, ಕಳೆದ ಕೆಲವು ದಿನಗಳಿಂದ ಜೆಸಿಬಿ ವಾಹನವನ್ನು ತೆರವುಗೊಳಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮಡಿಕೇರಿಯ ಸೌಂದರ್ಯಕ್ಕೆ ಕಪ್ಪುಚುಕ್ಕೆಯಾಗಿರುವ ಈ ಪರಿಸ್ಥಿತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾದಚಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಜೆಸಿಬಿ ವಾಹನವನ್ನು ತೆರವುಗೊಳಿಸಿ, ರಸ್ತೆ ಬದಿಯ ಕೆಸರನ್ನು ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ವೀರಾಜಪೇಟೆ: ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿರುವ ಎನ್ನಲಾದ ದುಷ್ಕೃತ್ಯವನ್ನು ಖಂಡಿಸಿ ಪ್ರತಿಭಟನೆ ಮುಂದುವರಿದಿದೆ. ಘಟನೆಯ ಸಂಬಂಧ ಇಂದು ಬೆಳಿಗ್ಗೆಯಿಂದಲೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು, ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಯಾರಾದರೂ ಒತ್ತಡ ಕಾರಣವೇ ಎಂಬ ಅನುಮಾನ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವದಂತೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡಕ್ಕೂ ಮಣಿಯದೆ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆಯಿಂದ ಜಿಲ್ಲೆಯ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಪ್ರಕರಣದ ಕುರಿತು ಸ್ಪಷ್ಟನೆ ನೀಡಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Read More

ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ ಸೋಮವಾರಪೇಟೆ: ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ದೇಶವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಷ್ಟ್ರದ ಭದ್ರತೆ ಮತ್ತು ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ನೀತಿಗಳನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಸೇರಿದಂತೆ ಕೆಲವು ಪಕ್ಷಗಳು ದೇಶದ ಏಕತೆ ಮತ್ತು ಭದ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ನಿಲುವುಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ಹಿತಾಸಕ್ತಿ ಕ್ರಮಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್, ಹರಪಳ್ಳಿ ರವೀಂದ್ರ, ಪ್ರಸನ್ನ ಎಡಿಕೇರಿ, ದರ್ಶನ್ ಜಯಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Read More

ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ ವೀರಾಜಪೇಟೆ: ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನಧಿಕೃತವಾಗಿ ಸಮಾಧಿ (ಗೋರಿ) ನಿರ್ಮಿಸಲಾಗಿದೆ ಎಂದು ಆರೋಪಿಸಿ, ಅದರ ವಿರುದ್ಧ ಜುಲೈ 27ರಂದು ಬೆಳಿಗ್ಗೆ 10 ಗಂಟೆಗೆ ದೇವಾಲಯದ ಕಮಾನು ಬಳಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸುರಕ್ಷಾ ಸಮಿತಿ ಪ್ರಕಟಿಸಿದೆ. ಸಮಿತಿಯ ಪ್ರಕಟಣೆಯಲ್ಲಿ, ಈ ಕೃತ್ಯದಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಪ್ರತಿಭಟನೆಯಲ್ಲಿ ಕೊಡಗು ಜಿಲ್ಲೆ ಹಾಗೂ ಪಿರಿಯಾಪಟ್ಟಣ ಸುತ್ತಮುತ್ತಲಿನ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಘಟನೆಯನ್ನು ಖಂಡಿಸುವಂತೆ ಸಮಿತಿ ಮನವಿ ಮಾಡಿದೆ.

Read More

ದೇಶ ಮೊದಲು, ರಾಜಕೀಯ ಬಳಿಕ: ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ ಮಡಿಕೇರಿ: ದೇಶದ ವಿಚಾರದಲ್ಲಿ ರಾಜಕೀಯಕ್ಕೆ ಸ್ಥಾನವಿಲ್ಲ ಎಂಬ ಸಂದೇಶ ಸಾರುವ ಅಪರೂಪದ ಕ್ಷಣಕ್ಕೆ ಮಡಿಕೇರಿ ಸಾಕ್ಷಿಯಾಯಿತು. ಕೊಡಗು ಪತ್ರಕರ್ತರ ಸಂಘ ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಗೌಡ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವೀರ ಯೋಧರಿಗೆ ಗೌರವ ನಮನ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಟ್ಟಾಗಿ ಭಾಗವಹಿಸಿ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಮಂತರ್ ಗೌಡ, “ದೇಶ ಮೊದಲು, ಮಿಕ್ಕೆಲ್ಲವೂ ಬಳಿಕವಷ್ಟೇ. ದೇಶದ ಭದ್ರತೆ ಮತ್ತು ಗೌರವದ ವಿಚಾರ ಬಂದಾಗ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಅವಕಾಶವಿಲ್ಲ. ಎಲ್ಲರೂ ಒಂದಾಗಿ ದೇಶಕ್ಕಾಗಿ ನಿಲ್ಲಬೇಕು” ಎಂದು ಹೇಳಿದರು. ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ poಸೇರಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಹಲವು…

Read More

ಮಡಿಕೇರಿ ರೋಟರಿ ವುಡ್ಸ್ ನಿಂದ  ಯೋಧನಮನ  – ಸೈನಿಕ ದಂಪತಿಗೆ ಸನ್ಮಾನ ಸೈನಿಕರ ದೇಶಸೇವೆ ಗುರುತಿಸಿ ಗೌರವಿಸಲು ಸಂಘಸಂಸ್ಥೆಗಳು ಮುಂದಾಗಬೇಕು – ರವೀಂದ್ರ ಭಟ್ ಮಡಿಕೇರಿ ಜು 26 – ಭಾರತದ ರಕ್ಷಣೆಗೆ ಕಂಕಣಬದ್ದರಾಗಿರುವ ಸೈನಿಕರ ದೇಶಸೇವೆ ಗುರುತಿಸಿ ಗೌರವಿಸುವ  ನಿಟ್ಟಿನಲ್ಲಿ ರೋಟರಿ ಸೇರಿದಂತೆ  ಸಮಾಜದ ಎಲ್ಲಾ ಸಂಘಸಂಸ್ಥೆಗಳು ಒಟ್ಟಾಗಬೇಕೆಂದು ರೋಟರಿ   ಜಿಲ್ಲೆ 3181 ನ ಮಾಜಿ ಗವನ೯ರ್ ರವೀಂದ್ರ ಭಟ್ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ 5 ನೇ ವಷ೯ದ ಯೋಧ ನಮನ ಕಾಯ೯ಕ್ರಮ ಉದ್ಗಾಟಿಸಿ ರವೀಂದ್ರ ಭಟ್ ಮಾತನಾಡಿದರು.  ಓವ೯ ಪೊಲೀಸ್ 5 ಸಾವಿರ ಜನರನ್ನು ನಿಯಂತ್ರಿಸಬಲ್ಲ  ಸಾಮಥ್ಯ೯ ಹೊಂದಿದ್ದರೆ ಓವ೯ ಸೈನಿಕ 25 ಸಾವಿರ ಜನರನ್ನು ನಿಯಂತ್ರಿಸಬಲ್ಲ ಶಕ್ತಿ ಸಾಮಥ್ಯ೯ ಹೊಂದಿರುತ್ತಾನೆ. ದೇಶಸೇವೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟುಕೊಂಡ ಇಂಥ ಸೈನಿಕರನ್ನು  ವಷ೯ಕ್ಕೊಮ್ಮೆ ಮಾತ್ರವಲ್ಲದೇ ಪ್ರತೀ ನಿತ್ಯವೂ ಗೌರವಿಸುವ ಆರಾಧಿಸುವ ಕಾಯ೯ವಾಗಬೇಕೆಂದು ರವೀಂದ್ರ ಭಟ್ ಅಭಿಪ್ರಾಯಪಟ್ಟರು. ರೋಟರಿ ಜಿಲ್ಲೆ 3181…

Read More

ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ ಕುಶಾಲನಗರ: ಕಾವೇರಿ ನದಿ ಸ್ವಚ್ಛತಾ ಆಂದೋಲನದ ಆಶಯದಡಿ, ಕುಶಾಲನಗರ ಪುರಸಭೆಯ ಸಹಕಾರದೊಂದಿಗೆ ಕಾವೇರಿ ನದಿ ಗಡಿ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಶಾಲನಗರ–ಕೊಪ್ಪ ಗಡಿಭಾಗದ ಕಾವೇರಿ ನದಿ ಸೇತುವೆ ಸಮೀಪದ ನದಿ ತಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದ ವೀರ ಯೋಧರ ಸ್ಮರಣಾರ್ಥ 27 ಬಿದಿರು ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆ, ನದಿ ಸ್ವಚ್ಛತೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಮಹತ್ವವನ್ನು ಈ ಸಂದರ್ಭದಲ್ಲಿ ಪ್ರತಿಪಾದಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಕಾರ್ಗಿಲ್ ವೀರ ಯೋಧರ ತ್ಯಾಗವನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು. ಕಾವೇರಿ ನದಿಯ ಸ್ವಚ್ಛತೆ, ನದಿ ತಟದ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಪುರಸಭೆಯ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ…

Read More