- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮಡಿಕೇರಿ : ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ 33/11 ಕೆವಿ ವಿದ್ಯುತ್ ಉಪಕೇಂದ್ರ ಮೂರ್ನಾಡುವಿನಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು, ಮರಗೋಡು ಫೀಡರ್‍ಗಳ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ವಿರಾಜಪೇಟೆ 66/33 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ,…
ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು. ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ 31 ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ ಎರಡು ಪ್ಯಾಕೆಟ್ ಓಆರ್‍ಎಸ್ ಮತ್ತು ಒಂದು ಪ್ಯಾಕೆಟ್ ಜಿಂಕ್ ಮಾತ್ರೆಯನ್ನು ನೀಡಲಾಗುವುದು. ಭೇದಿ ಆದಲ್ಲಿ ಮಾತ್ರ ಜಿಂಕ್ ಮಾತ್ರೆಯನ್ನು 14 ದಿನಗಳವರೆಗೆ ಉಪಯೋಗಿಸುವುದು. ಈ ಮಾಹಿತಿಯು ಪ್ರತಿಯೊಬ್ಬ ಪೆÇೀಷಕರಿಗೂ ಈ ಬಗ್ಗೆ ಮಾಹಿತಿ ತಿಳಿದಿರಬೇಕು. ಗುಣಮುಖವಾಗದಿದ್ದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೋರಿಸಬೇಕು. ಅತಿಸಾರ ಬೇಧಿಯಿಂದ ಉಂಟಾಗುವ ಮರಣವನ್ನು ತಪ್ಪಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಮಡಿಕೇರಿ : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಈ ಕೋಶ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಅರಣ್ಯ ಹಕ್ಕುಪತ್ರವನ್ನು ಪಡೆದಿರುವ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಮತ್ತು ಸಂಗ್ರಹವಾಗಿರುವ ದತ್ತಾಂಶಗಳನ್ನು ಡಿಜಿಟಲೀಕರಣಗೊಳಿಸುವುದು ಅರಣ್ಯ ಹಕ್ಕು ಕೋಶದ ಪ್ರಮುಖ ಕಾರ್ಯವಾಗಿರುತ್ತದೆ ಎಂದು ಎಸ್.ಹೊನ್ನೇಗೌಡ ಅವರು ಮಾಹಿತಿ ನೀಡಿದರು. ಅರಣ್ಯ ಹಕ್ಕು ಪತ್ರ ಹೊಂದಿಲ್ಲದವರ ಮತ್ತು ಅರ್ಜಿ ಸಲ್ಲಿಸಿ ತಿರಸ್ಕøತಗೊಂಡಿರುವ ಕುಟುಂಬಗಳ ಕುರಿತು ಪುನರ್ ಪರಿಶೀಲನೆ ನಡೆಸಿ ಅರ್ಹ ಅರಣ್ಯವಾಸಿಗಳಿಗೆ ಅಗತ್ಯ ಸೌಕರ್ಯ…
ಮಡಿಕೇರಿ : ತನ್ನ ಕ್ಷೇತ್ರದ ಜನರ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಡಾ ಮಂತರ್ ಗೌಡ ರವರ ಕಾರ್ಯಕ್ಷಮತೆಗೆ ಪಶ್ಚಿಮ ಘಟ್ಟ ಮೂಲ ನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎರಡು ದಿನದ ಹಿಂದೆ ಮಡಿಕೇರಿಯಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ ಮಡಿಕೇರಿ ಕ್ಷೇತ್ರದ ಯುವ ಉತ್ಸಾಹಿ ಶಾಸಕರಾದ ಡಾ ಮಂತರ್ ಗೌಡ ರವರನ್ನು ಭೇಟಿ ಮಾಡಿದ ಸಾಮಾಜಿಕ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರವಿ ತಮ್ಮಯ್ಯ ನವರು ಭೇಟಿ ಮಾಡಿ ತಮ್ಮ ಗ್ರಾಮದ ಮೂಲಭೂತ ಸೌಕರ್ಯ ಕೊರತೆಯನ್ನು ನಿವಾರಿಸುವಂತೆ ವಿನಂತಿಸಿಕೊಂಡಿದ್ದರು. ಅದಕ್ಕೆ ತಕ್ಷಣವೇ ಸ್ಪಂದಿಸಿದ ಡಾ ಮಂತರ್ ಗೌಡ ರವರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸಿ ಸೂಕ್ತ ಕಾರ್ಯಕ್ರಮ ರೂಪಿಸುವಂತೆ ಇಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅಭಿಯಂತರಾದ ರಘು ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಹಾಗೂ ಇತರ ಸಿಬ್ಬಂದಿಗಳೊಂದಿಗೆ ತೆರಳಿ…
ಕೊಡಗು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕೋರಿಕೆ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಎ.ಎಸ್. ಪೊನ್ನಣ್ಣ ಸರ್ ರವರು ಇಂದು ಅತ್ತೂರು ಕೊಲ್ಲಿ ನೀಡಿ ಗಿರಿಜನ ನಿವಾಸಿಗಳಿಗೆ ಸರ್ಕಾರ ನಿಮ್ಮ ಪರವಾಗಿರುವುದಾಗಿ ತಿಳಿಸಿ, ಗಿರಿಜನರು ತಮ್ಮ ಹಕ್ಕುಗಳಿಗೆ ಶಾಂತಿಯುತ ಮಾರ್ಗ ಅನುಸರಿಸುವಂತೆಯೂ, ಇಲಾಖಾ ಅಧಿಕಾರಿಗಳು ತಮ್ಮ ಕಾನೂನಿನ ಚೌಕಟ್ಟಿನೊಳಗೆ ಯಾವುದೇ ಗಿರಿಜನರಿಗೂ ಅನ್ಯಾಯವಾಗದಂತೆ ಕಾರ್ಯನಿರ್ವಹಿಸುವಂತೆಯೂ ಸೂಚನೆ ನೀಡಿರುತ್ತಾರೆ.
ವಾಷಿಂಗ್ಟನ್ : ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಹಾತಿರುವು ಪಡೆದುಕೊಂಡಿದ್ದು, ಸಂಘರ್ಷಕ್ಕೆ ವಿಶ್ವದ ದೊಡ್ಣ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದು, ಏರ್ ಸ್ಟ್ರೈಕ್ ನಡೆಸಿದೆ. ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಘೋಷಣೆ ಮಾಡಿದ್ದಾರೆ. ಈ ಬೆಳವಣಿಗೆ ಅಣುಯುದ್ಧದ (Nuclear War) ಭೀತಿಯನ್ನು ಹೆಚ್ಚಾಗುವಂತೆ ಮಾಡಿದೆ. ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಹೇಳಿರುವ ಟ್ರಂಪ್ ಈ ಯಶಸ್ವಿ ದಾಳಿಯಲ್ಲಿ ಪಾಲ್ಗೊಂಡ ಅಮೇರಿಕನ್ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಕಾರ್ಯಾಚರಣೆ ಮಾಡಬಲ್ಲ ಮತ್ತೊಂದು ಮಿಲಿಟರಿ ಜಗತ್ತಿನಲ್ಲೇ…
ಮಡಿಕೇರಿ : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.23 ರಂದು ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನಾಚಪ್ಪ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದರು. ಈ ಮಾನವ ಸರಪಳಿ ಕಾರ್ಯಕ್ರಮವು ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಶಾಂತಿಯುತವಾಗಿ ನಡೆಯಲಿದ್ದು, ಪೊನ್ನಂಪೇಟೆ ಭಾಗದ ಕೊಡವ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.
ಮಡಿಕೇರಿ : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಜೂನ್, 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜೂನ್. 23 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲೆಯ ಡಿ.ಬಿ.ಕುಪ್ಪೆಯ ಬಟ್ಟೆಯಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಟ್ಟೆಯಲ್ಲಿ ಅರ್ಜುನ ಆನೆಯ ಸ್ಮಾರಕ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಡಿ.ಬಿ.ಕುಪ್ಪೆಯ ಬಳ್ಳೆಯಲ್ಲಿ ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.
ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್‍ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ ದೂರವಾಣಿ ಸಂಖ್ಯೆ 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ 9972799091 ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ನ್ನು ಸಂಪರ್ಕಿಸಬಹುದು…
