Author: Kodagu-admin

ಮಡಿಕೇರಿ : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ, ಭಾರತ ಸರ್ಕಾರ) ಬೆಂಗಳೂರು, ಇವರು ವಿವಿಧ ನಾನ್ ಗೆಜೆಟೆಡ್ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ 14,582 ಹುದ್ದೆಗಳ ನೇಮಕಾತಿಗಾಗಿ ಸಂಯೋಜಿತ ಪದವಿ ಮಟ್ಟದ ಪರೀಕ್ಷೆ (ಅಉಐಇ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ, ನಿರ್ದಿಷ್ಟ ಹುದ್ದೆಗಳ ಅಪೇಕ್ಷಣೀಯ ಅರ್ಹತೆಯ ವಿವರಗಳಿಗೆ ಎಸ್‍ಎಸ್‍ಸಿ ಅಧಿಸೂಚನೆಯ ಪ್ಯಾರಾ-8 ಅನ್ನು ಪರಿಶೀಲಿಸಬಹುದು. 18 ರಿಂದ 32 ವರ್ಷದೊಳಗಿರಬೇಕು. ನಿರ್ದಿಷ್ಟ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅಧಿಸೂಚನೆಯ ಪ್ಯಾರಾ-5 ಅನ್ನು ಪರಿಶೀಲಿಸಬಹುದು. ಪರೀಕ್ಷೆಯ ಸಂಭವನೀಯ ದಿನಾಂಕ 2025 ರ ಆಗಸ್ಟ್, 13 ರಿಂದ 30 ರವರೆಗೆ, ಶುಲ್ಕ ರೂ.100, (ಎಸ್ಸಿ/ಎಸ್ಟಿ/ಮಹಿಳೆ/ದಿವ್ಯಾಂಗರು/ಮಾಜಿ ಸೈನಿಕರಿಗೆ ಶುಲ್ಕವಿಲ್ಲ). ಅರ್ಜಿ ಸಲ್ಲಿಸಲು ಜುಲೈ, 04 ರ ಮಧ್ಯಾಹ್ನ 11 ಗಂಟೆಗೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಹಾಗೂ…

Read More

ಮಡಿಕೇರಿ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಜೊತೆಗೆ ಮಾನಸಿಕವಾಗಿಯೂ ಸಹ ಸದೃಢರಾಗಿರಬಹುದು ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು. ಯೋಗವು ಇಡೀ ವಿಶ್ವ ಮೆಚ್ಚುಗೆ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ, ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ದಿನನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ…

Read More

ಮಡಿಕೇರಿ : ವಾಣಿಜ್ಯ ಹಾಗೂ ಸಹಕಾರ ಬ್ಯಾಂಕುಗಳು ತಮ್ಮ ಲಾಭಾಂಶದ ಗುರಿ ಜೊತೆಗೆ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಯಾಂಕುಗಳು, ಕೃಷಿಕರು, ಉದ್ಯಮಿಗಳು, ಸಣ್ಣ ಉದ್ಯಮಿಗಳು, ವ್ಯಾಪಾರಸ್ಥರು, ಗುಡಿ ಕೈಗಾರಿಕೆ… ಹೀಗೆ ಪ್ರತಿಯೊಬ್ಬರಿಗೂ ಸಾಲ ನೀಡುವುದರ ಜೊತೆಗೆ ಬ್ಯಾಂಕುಗಳ ಗುರಿ ಮತ್ತು ಪ್ರಗತಿ ಸಾಧಿಸುವಂತಾಗಬೇಕು. ಹಾಗೆಯೇ ಎಲ್ಲರನ್ನು ಒಳಗೊಂಡ ಸಾಧನೆ ಅತೀ ಮುಖ್ಯ ಎಂದು ಸಂಸದರು ಪ್ರತಿಪಾದಿಸಿದರು. ಬ್ಯಾಂಕುಗಳು ಕೇಂದ್ರ ಸರ್ಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬ್ಯಾಂಕುಗಳ ವಾಣಿಜ್ಯ, ವ್ಯಾಪಾರ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಹೀಗೆ ಆದ್ಯತಾ ವಲಯಕ್ಕೂ ಹೆಚ್ಚಿನ ಅವಕಾಶ ಮಾಡಬೇಕು ಎಂದು ಸಂಸದರು ನುಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವಲ್ಲಿ ಬ್ಯಾಂಕುಗಳು ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಬೇಕು.…

Read More

ಮಡಿಕೇರಿ : ಸಮಾಜದ ಪ್ರಮುಖ ಶಕ್ತಿಯಾಗಿರುವ ಯುವ ಸಮೂಹವೇ ದೇಶದ ಶಕ್ತಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಅಭಿಪ್ರಾಯ ಪಟ್ಟಿದ್ದಾರೆ. ಮಡಿಕೇರಿಯ ಸುದರ್ಶನ್ ವೃತ್ತದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆಯೋಜನೆಗೊಂಡಿದ್ದ ಯುವ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಇಂದಿನಿಂದಲೂ ಯುವ ಕಾಂಗ್ರೆಸ್ ಕೊಡುಗೆ ಬಹು ದೊಡ್ಡದಾಗಿದೆ. ಯುವಕರಿಗೆ ರಾಜಕೀಯ ಅನುಭವ ಹಾಗೂ ಸಂಘಟನೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ನಿಟ್ಟಿನಲ್ಲಿ ಬಲಾಢ್ಯರಾಗಲು ಯುವ ಕಾಂಗ್ರೆಸ್ ಒಂದು ಮಹತ್ವದ ಘಟಕವಾಗಿದೆ. ಇಂದಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದರ ಸದುಪಯೋಗವನ್ನು ಪಡೆಸಿಕೊಂಡು ತಮ್ಮ ರಾಜಕೀಯ ಭವಿಷ್ಯ ರೂಪಿಸುವುದರೊಂದಿಗೆ ಜನರ ಸೇವೆ ಮಾಡುವುದರಲ್ಲಿ ನಿರತರಾಗಬೇಕೆಂದು ಕರೆ ನೀಡಿದರು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಹಿಮಾಚಲ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರು…

Read More

ಮಡಿಕೇರಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಚಾರ ಆರೋಪಗಳು ಸಭೀತಾಗುತ್ತಿರುವ ಹಿನ್ನೆಲೆ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ , ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರಿಗೆ ದೂರವಾಣಿ ಕರೆ ಮಾಡಿ, ಹಣ ನೀಡಿದವರಿಗೆ ಮಾತ್ರ ವಸತಿ ನೀಡಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ಸಾಬೀತಾಗಿದೆ. ಬಂಡ ಸರ್ಕಾರವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಸವಾಲೆಸೆದ ರವಿ ಕಾಳಪ್ಪ ಚುನಾವಣೆ ನಡೆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮೂಡ ಹಗರಣ, ವಾಲ್ಮಿಕಿ ಹಗರಣ ಸೇರಿದಂತೆ ಇತರ ಆರೋಪಗಳು ಸಾಭಿತಾದರೂ ಕೂಡ ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತಾ ಸಾಗುತ್ತಿದೆ. ಇದು ನಮ್ಮ ದುರಾದೃಷ್ಟಕರ…

Read More

ಯೋಗದಿಂದ ಆಯುಷ್ಯಾರೋಗ್ಯ ಭಾಗ್ಯ: ಶಾಸಕ ಪೊನ್ನಣ್ಣ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಆಯೋಜನೆಗೊಂಡ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ಅವರು ಭಾಗವಹಿಸಿದರು. ಬಳಿಕಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಯೋಗವು ಜೀವನ ಪಾಠ ಹೇಳಿಕೊಡುವುದರೊಂದಿಗೆ ವ್ಯಕ್ತಿಯ ಸದೃಢ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಯೋಗದಿಂದ ಏಕಾಗ್ರತೆ ವೃದ್ಧಿಯಾಗುವುದರೊಂದಿಗೆ ಮಕ್ಕಳ ಜ್ಞಾನ ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ. ಭಾರತದ ಪುರಾತನ ಪದ್ಧತಿಗಳಲ್ಲಿ ಯೋಗಾಸನ ಅಭ್ಯಾಸವು ಒಂದಾಗಿದೆ. ಯೋಗ ಕಾರ್ಯಕ್ರಮವು ಕೇವಲ ಯೋಗ ದಿನಾಚರಣೆಗೆ ಮಾತ್ರ ಸೀಮಿತವಾಗದೆ, ದಿನನಿತ್ಯದ ಬದುಕಿನಲ್ಲಿ ಎಲ್ಲರೂ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಶಾರದ ಆಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಪರಹಿತನಂದಾ ಸ್ವಾಮಿ, ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಕರು ಉಪಸ್ಥಿತರಿದ್ದರು.

Read More

ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಯೋಗದೊಂದಿಗೆ ದಿನಾಚರಣೆಯಲ್ಲಿ ಪಾಲ್ಗೊಂಡ ಡಾ. ಮಂತರ್ ಗೌಡ.. ಎಸ್ ಪಿ ಕೆ. ರಾಮರಾಜನ್ ಜಿಲ್ಲಾಡಾಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆಯ ಸಹಯೋಗದಲ್ಲಿ ಯೋಗ ದಿನಾಚರಣೆ ಪತಂಜಲಿ, ಯೋಗ ಭಾರತಿ ಇತರ ಯೋಗ ಸಂಘಟನೆಗಳ ಯೋಗ ಪಟುಗಳು ಭಾಗಿ ಎಲ್ಲರೂ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಿ :ಡಾ. ಮಂತರ್ ಯೋಗ ಗುರು ಕೆ ಕೆ ಮಹೇಶ್ ಕುಮಾರ್ ನೇತೃತ್ವದಲ್ಲಿ ಯೋಗ ದಿನಾಚರಣೆ ಆಯುಷ್ ಇಲಾಖೆಯ ಡಾ. ಶೈಲಜಾ, ಡಾ. ಅರುಣ್, ನಗರಸಭಾ ಅಧ್ಯಕ್ಷೆ ಕಲಾವತಿ , ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಎಲ್ಲಪ್ಪ ಮತ್ತಿತರರು ಭಾಗಿ

Read More

ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (46) ಮೃತದೇಹ ಪತ್ತೆ 3ನೇ ದಿನದ ಕಾರ್ಯಾಚರಣೆ ನಡೆಸಿ ದೇಹ ಪತ್ತೆ ಮಾಡಿದ ರಕ್ಷಣಾ ತಂಡ ನಿಸರ್ಗಧಾಮ ಬಳಿಯ ಕಾವೇರಿ ನದಿಯಲ್ಲಿ ತೇಲಿ ಬಂದಿದ್ದ ಮೃತದೇಹ ಮಾಹಿತಿ ಅರಿತು ಕೊಪ್ಪ ಸೇತುವೆ ಕಾವೇರಿ ನದಿಯಲ್ಲಿ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡ ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ದುಬಾರೆ ಸಿಬ್ಬಂದಿಗಳಿಂದ ಕಾರ್ಯಾಚರಣೆ

Read More

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಇಂದು ಗೋಣಿಕೊಪ್ಪಲುವಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಗೋಣಿಕೊಪ್ಪಲುವಿನಲ್ಲಿರುವ ಅಮ್ಮ ಕೊಡವ ಸಮಾಜದ ಸಭಾಂಗಣಕ್ಕೆ, ₹ 2 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಸಮಾಜದ ಪ್ರಮುಖರೊಂದಿಗೆ ಮಾತನಾಡಿದ ಮಾನ್ಯ ಶಾಸಕರು, ಸಮಾಜದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 20 ಲಕ್ಷಗಳ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಹಿಂದೆ ಅಮ್ಮ ಕೊಡವ ಸಮಾಜದ ಪ್ರಮುಖರು ಮಾನ್ಯ ಶಾಸಕರನ್ನು ಭೇಟಿಯಾಗಿ ತಮ್ಮ ಸಮಾಜದ ಸಭಾಂಗಣಕ್ಕೆ ತಡೆಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಇವರ ಮನವಿಗೆ ಸ್ಪಂದಿಸಿದ್ದ ಮಾನ್ಯ ಶಾಸಕರು ಶೀಘ್ರದಲ್ಲೇ ತಡೆಗೋಡೆಗೆ ಅನುದಾನ ಒದಗಿಸುವುದಾಗಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ…

Read More

ಮಡಿಕೇರಿ : ಎಪಿಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಜೂನ್, 23 ರಂದು ಅಳವಡಿಸುತ್ತಿರುವ ಕಾರಣ ನಗರದ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಅದರ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಖಾ ಅಂಚೆ ಕಚೇರಿಗಳಲ್ಲಿ ಜೂನ್, 21 ರಂದು ಯಾವುದೇ ರೀತಿಯ ಅಂಚೆ ವಹಿವಾಟು ಇರುವುದಿಲ್ಲ. ಮಡಿಕೇರಿ ಪ್ರಧಾನ ಅಂಚೆ ಕಚೇರಿ ಹಾಗೂ ಉಪ ಅಂಚೆ ಕಚೇರಿಗಳಾದ ಮಡಿಕೇರಿ(ಡಿಒಸಿ), ವಿದ್ಯಾನಗರ, ಅಮ್ಮತ್ತಿ, ಭಾಗಮಂಡಲ, ಬಾಳೆಲೆ, ಚೆಟ್ಟಳ್ಳಿ, ಚೆಯ್ಯಂಡಾಣೆ, ಗೋಣಿಕೊಪ್ಪಲು, ಹುದಿಕೇರಿ, ಕೊಡ್ಲಿಪೇಟೆ, ಕೂಡಿಗೆ ಕುಶಾಲನಗರ, ಕುಟ್ಟ, ಮಾದಾಪುರ, ಮೂರ್ನಾಡು, ನಾಪೋಕ್ಲು, ಪಾಲಿಬೆಟ್ಟ, ಪೊನ್ನಂಪೇಟೆ, ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಶ್ರೀಮಂಗಲ, ಸುಂಟಿಕೊಪ್ಪ, ತಿತಿಮತಿ, ವಿರಾಜಪೇಟೆ, ಅಂಚೆ ಕಚೇರಿಗಳು ಜೂನ್, 21 ರಂದು ಯಾವುದೇ ಅಂಚೆ ವಹಿವಾಟು ನಡೆಸುವುದಿಲ್ಲ ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More