- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮಡಿಕೇರಿ : ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿದರು. ಈ ಬಾರಿ…
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ: ಧರ್ಮಜ ಉತ್ತಪ್ಪ ********************************************************* ಮಡಿಕೇರಿ:-ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಗುರುವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಬಡವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯು ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯ ಆಗಬಾರದು ಎಂದು ಧರ್ಮಜ ಉತ್ತಪ್ಪ ಅವರು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವು ಮಾಲೀಕರು ತಮ್ಮ ಕಾರ್ಮಿಕರ ಪಡಿತರ ಚೀಟಿಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಅದನ್ನು ಕೂಡಲೇ ಪಡಿತರ ಚೀಟಿದಾರರ ಕುಟುಂಬಕ್ಕೆ ಹಿಂತಿರುಗಿಸಬೇಕು. ಅಲ್ಲದೇ ಪಡಿತರಚೀಟಿ ಹೊಂದಿರುವವರೂ ಸಹ…
*ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (46)ಎಂಬವರು ನಾಪತ್ತೆ* ಗಿರೀಶ್ ಕುಶಾಲನಗರದ ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಉದ್ಯೋಗಿ ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆ ಕಾವೇರಿ ನದಿಗೆ ಹಾರಿ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ತೆಪ್ಪದಕಂಡಿ ಬಳಿ ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ ಕುಶಾಲನಗರ ಪಟ್ಟಣ ಠಾಣೆಯಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣ
#ವ್ಯಕ್ತಿ_ಮೇಲೆ_ಕರಡಿ_ದಾಳಿ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲೂಕು, ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ. ಅಳಮೇಂಗಡ ಬಿದ್ದಪ್ಪ ಎಂಬುವವರ ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿರುವ ಕಾಕು ಎಂಬುವರ ಪುತ್ರ ಕುಳ್ಳ ಎಂಬುವವರು ಕರಡಿ ದಾಳಿಗೆ ಒಳಗಾದವರಾಗಿದ್ದಾರೆ. ನೆನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಮನೆಯ ಹೊರಗಡೆ ಬಂದಿದ್ದ ಸಂದರ್ಭ ಕುಳ್ಳರವರ ಮೇಲೆ ಎರಗಿರುವ ಕರಡಿ ಮುಖದ ಭಾಗಕ್ಕೆ ಹೆಚ್ಚಿನ ಗಾಯಗೊಳಿಸಿದೆ. ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
*ನಿಷೇಧಿತ ಮಾದಕ ವಸ್ತು ಪೊನ್ನಂಪೇಟೆ ನಗರದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA & ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ.ಮಹೇಶ್ ಕುಮಾರ್, ಡಿಎಸ್‌ಪಿ, ವಿರಾಜಪೇಟೆ ಉಪವಿಭಾಗ, ಶ್ರೀ.ಶಿವರುದ್ರ.ಬಿ.ಎಸ್. ಸಿಪಿಐ, ಪ್ರಭಾರ ಗೋಣಿಕೊಪ್ಪ ವೃತ್ತ ಹಾಗೂ ಶ್ರೀ.ನವೀನ್.ಜಿ, ಪಿಎಸ್‌ಐ, ಪೊನ್ನಂಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 17-06-2025 ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಗೋಣಿಕೊಪ್ಪದ ನಿವಾಸಿ ಗುರುದತ್, 30 ವರ್ಷ ಎಂಬಾತನನ್ನು MDMA ಮಾದಕ ವಸ್ತು 4 ಗ್ರಾಂ ಹಾಗೂ 1 ಕೆಜಿ 79 ಗ್ರಾಂ ಗಾಂಜಾ…
ರಾಷ್ಟ್ರಮಟ್ಟದ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆಯ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ ಹಾಗೂ ಟ್ರೋಫಿಯನ್ನು ತನ್ನಾದಾಗಿಸಿಕೊಂಡಿದೆ. ಒರಿಸ್ಸಾ ರಾಜ್ಯದ ಭುವನೇಶ್ವರ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಫುಟ್ಬಾಲ್ ಪಂದ್ಯದಲ್ಲಿ ಕೂಡಿಗೆ ಸೈನಿಕ ಶಾಲೆಯ ಜೂನಿಯರ್ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಿಂದ ಮರಳಿದ ವಿಜೇತರನ್ನು ಕೂಡಿಗೆ ಅಂಜಲಾ ವಿದ್ಯಾನೀಕೆತನ ಶಾಲೆಯ ಮುಂಭಾಗದಿಂದ ಕೂಡಿಗೆಯ ಪ್ರಮುಖ ಬೀದಿಗಳಲ್ಲಿ ಹೂಗಳಿಂದ ಅಲಂಕಾರಗೊಂಡ ವಾಹನದ ಮೂಲಕ ವಿಜಯೋತ್ಸವದ ಮೆರವಣಿಗೆ ನಡೆಸಿ ಸೈನಿಕ ಶಾಲೆಗೆ ಕರೆತರಲಾಯಿತು. ವಿಜಯೋತ್ಸವದ ಮೆರವಣಿಗೆಗೆ ಚಾಲನೆಯನ್ನು ಕೊಡಗು ಸೈನಿಕ ಶಾಲೆ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಸೈನಿಕ ಶಾಲೆಯ ಜೂನಿಯರ್, ಸಬ್ ಜೂನಿಯರ್, ಮತ್ತು ಬಾಲಕಿಯರ ತಂಡಗಳಾಗಿ ಒಟ್ಟು 48 ವಿದ್ಯಾರ್ಥಿಗಳು 3 ತಂಡವಾಗಿ ಭಾಗವಹಿಸಿದ್ದರು. ಇದರಲ್ಲಿ ಬಾಲಕರ ಜೂನಿಯರ್…
ಶಾಸಕ ಎ. ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರ ಪಶ್ಚಿಮ ವಲಯ ಜಂಟಿ ಪೊಲೀಸ್ ಆಯುಕ್ತ ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ಸಿ. ವಂಶಿ ಕೃಷ್ಣರವರು, ವಿಧಾನಸೌಧದ ಕಚೇರಿಯಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರನ್ನು ಭೇಟಿ ಮಾಡಿದರು.
ಮಡಿಕೇರಿ : ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ.20 ಸಾವಿರ, ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30 ಸಾವಿರ ಮತ್ತು ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ. ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್‍ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು…
ಕುಶಾಲನಗರದ ಮುಳ್ಳುಸೋಗೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಇಂದು ಮಂಗಳವಾರ ಶಾಸಕರಾದ ಡಾ.ಮಂತರ್ ಗೌಡ ರವರು ಜನಸಂಪರ್ಕ ನಡೆಸಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಡೆಸಿದರು. ಕ್ಷೇತ್ರದ ಜನತೆಯ ಅಹವಾಲುಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಸಂಪರ್ಕ ಸಾಧಿಸಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಪರಿಹಾರ ಒದಗಿಸಲು ಸೂಚನೆ ನೀಡಿದರು.
ಕುಶಾಲನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಭವನ ನಿರ್ಮಾಣ ಕುರಿತು ಸಮಾಜದ ಮುಖಂಡರುಗಳೊಂದಿಗೆ ಸಭೆ – ಶಾಸಕರ ಕಛೇರಿ. ಕುಶಾಲನಗರ ಕುಶಾಲನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಭವನ ನಿರ್ಮಾಣ ಕುರಿತು ಮಂಗಳವಾರ ಶಾಸಕರಾದ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಮುಳ್ಳುಸೋಗೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಸಮಾಜದ ಮುಖಂಡರುಗಳೊಂದಿಗೆ ಸಭೆ ನಡೆಯಿತು. ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಹೆಸರಿನಲ್ಲಿ ಸುಸಜ್ಜಿತವಾದ ಭವನ ನಿರ್ಮಾಣಕ್ಕೆ ಸರ್ವರೂ ಕೈ ಜೋಡಿಸಬೇಕೆಂದು ಶಾಸಕರು ಸಭೆಯಲ್ಲಿ ತಿಳಿಸಿದರು. ಬಾ ಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರಿನಲ್ಲಿ ಪಕ್ಷಾತೀತವಾಗಿ, ರಾಜಕೀಯ ಮಾಡದೆ ಭವನ ನಿರ್ಮಾಣವಾಗಬೇಕೆಂಬುದು ನನ್ನ ಆಶಯವೆಂದು ಶಾಸಕರು ಸಭೆಗೆ ತಿಳಿಸಿದರು. ಸಮಾಜದ ಮುಖಂಡರುಗಳಿಂದ ಅಭಿಪ್ರಾಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ಪಡೆಯಲಾಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರುಗಳು, ಚುನಾಯಿತ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.
