- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮಡಿಕೇರಿ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವ ಸಂದರ್ಭ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವನಪ್ಪಿದ 11 ಜನ ಅಮಾಯಕರ ಸಾವಿಗೆ ರಾಜ್ಯ ಸರಕಾರ ನೇರ ಹೊಣೆ ಹಾಗು ತಮ್ಮ ಆಡಳಿತ ವೈಫಲ್ಯ ಮರೆಮಾಚಾಲು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ ಸರಕಾರದ ವಿರುದ್ಧ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾ ಅಧ್ಯಕ್ಷರಾದ ರವಿ ಕಾಳಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಕಿಲನ್ ಗಣಪತಿ,ಮಂಡಲ ಅಧ್ಯಕ್ಷರಾದ ಸುವಿನ್ ಗಣಪತಿ,ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ,ಮಾಜಿ ಪರಿಷತ್ ಸದಸ್ಯರಾದ ಗಣೇಶ್ ಕಾರ್ಣಿಕ್,ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜು ಗಣಪತಿ,ಮಂಡಲ ಉಪಾಧ್ಯಕ್ಷರಾದ ಕಬೀರ್ ದಾಸ್,ಪೊನ್ನಂಪೇಟೆ ಶಕ್ತಿ ಕೇಂದ್ರ ಪ್ರಮುಖರಾದ ನಿಲನ್ ಮಂದಣ್ಣ,ಮಂಡಲ ಇತರ ಶಕ್ತಿ ಕೇಂದ್ರ ಪ್ತಮುಖರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ : ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ವಿರೋಧಿಸಿ ಮತ್ತು ಸಿಎಂ, ಡಿಸಿಎಂ ರಾಜಿನಾಮೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಕಾಲ್ತುಳಿತ ಪ್ರಕರಣದ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ರಾಜ್ಯ ಸರ್ಕಾರ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ತರಾತುರಿಯಲ್ಲಿ ವಿಜಯೋತ್ಸವ ಆಚರಣೆಗೆ ಮುಂದಾಯಿತು. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಪೊಲೀಸರ ಸಲಹೆಯನ್ನು ನಿರ್ಲಕ್ಷ್ಯ ಮಾಡಿ, ಪೂರ್ವತಯಾರಿಯನ್ನು ಮಾಡದೇ ವಿಜಯೋತ್ಸವಕ್ಕೆ ಕರೆ ನೀಡಿ, ೧೧ ಯುವ ಜನತೆಯ ಸಾವಿಗೆ ಕಾರಣವಾಗಿದ್ದಾರೆ. ಅಂದು ಘಟನೆ ನಡೆಯಲು ಸರಕಾರದ ನಿರ್ಣಯವೇ ಕಾರಣ. ಆದರೆ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಬೇರೆ ಬೇರೆಯವರ ಮೇಲೆ ಈ ಸಾವಿನ ಹೊಣೆ ಹೊರಿಸುತ್ತಿರುವುದು ಖಂಡನೀಯ.…
ಮಡಿಕೇರಿ : ಕೊಡಗಿನ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಕಾವೇರಿ ನದಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ ಚಿತ್ರ ನೆಲ್ಯ ಹುದಿಕೇರಿ ಸೇತುವೆ ಬಳಿ ಕಾವೇರಿ ನೀರಿನ ಪ್ರಮಾಣ ಏರಿಕೆಯಾಗಿರುವ ದೃಶ್ಯ
#ಸ್ವಾತಂತ್ರ್ಯ_ದಿನಾಚರಣೆ_ಕಾರ್ಯಕ್ರಮದಲ್ಲಿ_ವಿಶೇಷ_ರಾಯಭಾರಿಯಗಿ_ಪಾಲ್ಗೊಳಲು_ಮೂರ್ನಾಡುವಿನ_ಯಶಸ್_ರೈ_ಆಯ್ಕೆ. ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ಮೂರ್ನಾಡು ಕೊಡಂಬೂರುವಿನ ಯಶಸ್ ರೈ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿವರೆಗಿನ ಈ ಅವಕಾಶದಲ್ಲಿ ಕರ್ನಾಟಕ ರಾಜ್ಯದಿಂದ ಈ ಬಾರಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಈ ಸ್ಥಾನವನ್ನು ಪಡೆದುಕೊಂಡಿದೆ. ನೆಹರು ಯುವಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ನೋಂದಣಿಗೊಂಡ ಯುವಕರಲ್ಲಿ ಇವರು ಆಯ್ಕೆಗೊಂಡಿರುತ್ತಾರೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ರಾಯಭಾರಿಗಳಾಗಿ ಕರ್ನಾಟಕದಿಂದ ಪಾಲ್ಗೊಳ್ಳಲಿದ್ದಾರೆ.
ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಇರುತ್ತದೆ. ಈ ಬಗ್ಗೆ ಕಂದಾಯ ಪರಿವೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ತಿಳಿಸಲಾಗಿದೆ.
ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೆರಬ್ರಲ್ ಪಾಲ್ಸಿ, ಸ್ನಾಯುಕ್ಷಯ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಅಟಿಸಮ್, ಬೌದ್ಧಿಕ ಮತ್ತು ಬಹು ಅಂಗವೈಕಲ್ಯ (ಶ್ರವಣ ಮತ್ತು ದೃಷ್ಟಿ ನ್ಯೂನತೆ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರರಿಗೆ ಮಾಹೆಯಾನ ರೂ.1 ಸಾವಿರ ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದ ಫಲಾನುಭವಿ ಹೊರತುಪಡಿಸಿ 2025-26ನೇ ಸಾಲಿಗೆ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ ಈ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್‍ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆ ಗಾಳಿ ಹಿನ್ನಲೆ ರಜೆ ಘೋಷಣೆ ಇಂದು (ಜೂನ್ 17) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಮಡಿಕೇರಿ : ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಸೇರಿದಂತೆ ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.೧೮ರಂದು ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ನಡೆಯಲಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಎನ್.ಯು.ನಾಚಪ್ಪ, ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ವಿಚಾರ ಸಂಕಿರಣದಲ್ಲಿ ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಅವರು ಉಪನ್ಯಾಸ ನೀಡಲಿದ್ದಾರೆ. ಇವರೊಂದಿಗೆ ವಿಕ್ರಮ್ ಹೆಗ್ಡೆ ಅವರ ಪತ್ನಿ ಪ್ರಖ್ಯಾತ ಕಾನೂನು ತಜ್ಞೆ ಹಿಮಾ ಲಾರೆನ್ಸ್ ಉಪಸ್ಥಿತರಿರಲಿದ್ದಾರೆ ಎಂದರು. ಪ್ರಾದೇಶಿಕ ಸ್ವಾಯತ್ತತೆಯ ಬೇಡಿಕೆಗಳ ಕುರಿತು ತಾವು ಹೊಂದಿರುವ ಪರಿಣತಿಯ ಆಧಾರದಲ್ಲಿ ವಿಕ್ರಮ್ ಹೆಗ್ಡೆ ಅವರು ಉಪನ್ಯಾಸ ನೀಡಲಿದ್ದಾರೆ. ಸಾಂವಿಧಾನಿಕ ಕಾನೂನಿನಲ್ಲಿ ಅವರ ಹಿನ್ನೆಲೆ ಮತ್ತು ಸಿಎನ್‌ಸಿ ಪರವಾಗಿ ಕೊಡವ ಬಂದೂಕು ವಿನಾಯಿತಿ ಪ್ರಕರಣದಲ್ಲಿ ಅವರ ಪಾಲ್ಗೊಳ್ಳುವಿಕೆಯಿಂದ ಅವರ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗಿದೆ. ಈ ವಿಚಾರ ಸಂಕಿರಣ ಮಾಹಿತಿಯುಕ್ತ ಮತ್ತು…
ಮಡಿಕೇರಿ : ನೆಲ್ಯಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸ್ಮಶಾನವೇ ಇಲ್ಲವಾಗಿದ್ದು, ಈ ಸಮಸ್ಯೆಯ ಪರಿಹಾರಕ್ಕೆ ಆಡಳಿತ ವ್ಯವಸ್ಥೆ ಮತ್ತು ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸ್ಮಶಾನ ಜಾಗ ಒದಗಿಸುವಂತೆ ಆಗ್ರಹಿಸಿ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮುಂಭಾಗ ಅಣಕು ಶವಯಾತ್ರೆ ಪ್ರತಿಭಟನೆ ಸೋಮವಾರ ನಡೆಸಿದರು . ಸ್ಮಶಾನ ಹೋರಾಟ ಸಮಿತಿ ಸಂಚಾಲಕ ಪಿ.ಆರ್. ಭರತ್ ಮಾತನಾಡಿ, ನೆಲ್ಯಹುದಿಕೇರಿಯಲ್ಲಿ ಬಡವರು ಮತ್ತು ಕೂಲಿಕಾರ್ಮಿಕರೇ ಹೆಚ್ಚಾಗಿ ವಾಸವಾಗಿದ್ದಾರೆ. ಆದರೆ ಇವರುಗಳಿಗೆ ಬಹಳಷ್ಟು ವರ್ಷಗಳಿಂದ ವ್ಯವಸ್ಥಿತವಾದ ಸ್ಮಶಾನ ಜಾಗವಿಲ್ಲದೆ ಪರದಾಡುವಂತಾಗಿದೆ. ಸ್ಮಶಾನ ಹೋರಾಟ ಸಮಿತಿಯ ಹೋರಾಟಗಳ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆ ತಹಶೀಲ್ದಾರರು ಸಭೆ ನಡೆಸಿ ಮೂರು ತಿಂಗಳ ಅವಧಿಯಲ್ಲಿ ಸ್ಮಶಾನ ಜಾಗ ಒದಗಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಏಳು ತಿಂಗಳು ಕಳೆದಿದ್ದರೂ ಸ್ಮಶಾನ ಜಾಗ ದೊರಕಿಲ್ಲ. ಹೀಗಿದ್ದೂ ಈ ಅವಧಿಯಲ್ಲಿ ತಹಶೀಲ್ದಾರರು ಬೆಟ್ಟದಕಾಡು ಮಾರ್ಗದ ಬಳಿಯ ಸರ್ವೇ ನಂ.೧೭೭ ರಲ್ಲಿ ೧.೦೨ ಎಕರೆ ಜಾಗವನ್ನು ಸ್ಮಶಾನಕ್ಕೆಂದು ಗುರುತಿಸಿದ್ದಾರೆ. ಆದರೆ, ಇದನ್ನು ಸ್ಮಶಾನಕ್ಕೆ…
#ರಾಜ್ಯ_ಸರ್ಕಾರದ_ವಿರುದ್ದ_ಸೋಮವಾರಪೇಟೆ_ಮಂಡಲ_ಬಿಜೆಪಿ_ಪ್ರತಿಭಟನೆ. ಸೋಮವಾರಪೇಟೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಇತ್ತೀಚಿಗೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಇಂದು ಸೋಮವಾರಪೇಟೆ ನಗರದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
