Author: Kodagu-admin

*ಪ್ರಾಮಾಣಿಕತೆ ಮೆರೆದ ಆಟೋ ಚಾಲಕ* ಮಡಿಕೇರಿ -ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ ರೂ. 40 ಪವಾತಿಸಬೇಕಾದವರು ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ ರೂ. 34 ಸಾವಿರ ಹಣವನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ. ದಿನಾಂಕ 11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬುವವರು ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿದ್ದು ಸಬ್ ರಿಜಿಸ್ಟ್ರಾರ್ ಕಛೇರಿ ಬಳಿ ಇಳಿದಿದ್ದಾರೆ. ಅವರು ಆಟೋ ಬಾಡಿಗೆಯ ಹಣ ರೂ. 40 ನೀಡಬೇಕಿತ್ತು. ಆದರೆ ಅವರ ಕೈಯಲ್ಲಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ ರೂ. 500 ಗೂಗಲ್ ಪೇ ಮಾಡುವುದಾಗಿ ಹೇಳಿ ಬಾಡಿಗೆ ಹಣ ಕಳೆದು ಉಳಿದ 460 ರೂಪಾಯಿ ಕ್ಯಾಶ್ ನೀಡುವಂತೆ ಕೇಳಿಕೊಂಡಿದ್ದಾರೆ. ತನ್ನ ಬಳಿ ಅಷ್ಟು ಹಣ ಇಲ್ಲದಿರುವುದರಿಂದ ರೂ. 340 ಗೂಗಲ್ ಪೇ ಮಾಡುವಂತೆ ಹೇಳಿದ ಚಾಲಕ ಸತೀಶ್,…

Read More

ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ ಪರವಾನಗಿ ನವೀಕರಣ ಹಾಗೂ ಫಿಟ್‍ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಿ ಮಡಿಕೇರಿ :-ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್‍ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಹಾರಂಗಿ ಜಲಾಶಯದ ಬಳಿಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಿವರ್ ರ್ಯಾಪ್ಟಿಂಗ್ ಸ್ಥಳದ ಟಿಕೆಟ್ ಕೌಂಟರ್ ಪ್ರದೇಶದಲ್ಲಿ ಸೆಲ್ಟರ್ ಅಳವಡಿಕೆ, ಪ್ರವಾಸಿಗರ ಸುರಕ್ಷತೆಗೆ ಸೋಪಾನ್ ಕಟ್ಟೆ ರೈಲಿಂಗ್ಸ್ ಅಳವಡಿಕೆ, ಗೈಡ್‍ಗಳ ಬಟ್ಟೆ ಬದಲಿಸುವ ಕೊಠಡಿ, ಬೆಂಚ್‍ಗಳ ಅಳವಡಿಕೆ, ಕುಡಿಯುವ ನೀರು, ಮಾಹಿತಿ ಫಲಕ, ಶೌಚಾಲಯ ನಿರ್ಮಾಣ ಜೊತೆಗೆ ಸಿಸಿಟಿವಿ ಅಳವಡಿಕೆಗೆ ಸಭೆಯಲ್ಲಿ ಅನುಮೋದಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ…

Read More

ಮಡಿಕೇರಿ  : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಜುಲೈ 4 ಕೊನೆ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ…

Read More

ಮಡಿಕೇರಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಮತ್ತಿತರ ಕಲಾಪ್ರಕಾರಗಳಲ್ಲಿ 2024ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2024ರಿಂದ 31.12.2024ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ/ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ.25 ಸಾವಿರಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ಕ್ಷೇತ್ರದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ 2025ರ ಜುಲೈ 10 ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು…

Read More

ಮಡಿಕೇರಿ : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 01-01-2024 ರಿಂದ 31-12-2024ರ ವರೆಗೆ ಪ್ರಥಮ ಅವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 01 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂನ್, 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ. ಈಗಾಗಲೇ ಪುಸ್ತಕ ಬಹುಮಾನ…

Read More

ಮಡಿಕೇರಿ :  ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 778 NPCI Failure/ E-KYC Failure ಫಲಾನುಭವಿಗಳು ಇದ್ದು ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್‍ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್‍ಪುಸ್ತಕ ಒಂದು ಅಥವಾ ಇತರೆ ಪಾಸ್‍ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ…

Read More

ಜೂ.16 ರಂದು ನವೋದಯ ಶಾಲೆ; ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಮಡಿಕೇರಿ : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಜಿಟಿ(ಕಂಪ್ಯೂಟರ್ ಸೈನ್ಸ್/ಐಟಿ) 1, ಪಿಜಿಟಿ(ಗಣಿತ) 1, ಟಿಜಿಟಿ ಕನ್ನಡ 1, ಕೌನ್ಸ್‍ಲರ್(ಮಹಿಳೆ) 1, ಜೆಆರ್. ಕ್ಲಕ್ರ್ಸ್ 2, ವಾಹನ ಚಾಲಕರು 1, ಮೆಟ್ರಾನ್ 1, ಆಫೀಸ್ ಅಸಿಸ್ಟೆಂಟ್ 2, ಎಂಟಿಎಸ್ 2 ಮತ್ತು ಸೆಕ್ಯುರಿಟಿ ಗಾರ್ಡ್ 6 ಹುದ್ದೆಗಳಿಗೆ ಜೂನ್, 16 ರಂದು ಬೆಳಗ್ಗೆ 10.30 ಗಂಟೆಗೆ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9447136164 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ : ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್‍ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಹಾರಂಗಿ ಜಲಾಶಯದ ಬಳಿಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಿವರ್ ರ್ಯಾಪ್ಟಿಂಗ್ ಸ್ಥಳದ ಟಿಕೆಟ್ ಕೌಂಟರ್ ಪ್ರದೇಶದಲ್ಲಿ ಸೆಲ್ಟರ್ ಅಳವಡಿಕೆ, ಪ್ರವಾಸಿಗರ ಸುರಕ್ಷತೆಗೆ ಸೋಪಾನ್ ಕಟ್ಟೆ ರೈಲಿಂಗ್ಸ್ ಅಳವಡಿಕೆ, ಗೈಡ್‍ಗಳ ಬಟ್ಟೆ ಬದಲಿಸುವ ಕೊಠಡಿ, ಬೆಂಚ್‍ಗಳ ಅಳವಡಿಕೆ, ಕುಡಿಯುವ ನೀರು, ಮಾಹಿತಿ ಫಲಕ, ಶೌಚಾಲಯ ನಿರ್ಮಾಣ ಜೊತೆಗೆ ಸಿಸಿಟಿವಿ ಅಳವಡಿಕೆಗೆ ಸಭೆಯಲ್ಲಿ ಅನುಮೋದಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ರಿವರ್ ರ್ಯಾಪ್ಟಿಂಗ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸುರಕ್ಷತೆ ಮತ್ತು ಜೀವರಕ್ಷಣೆ…

Read More

ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 13) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

Read More