Author: Kodagu-admin

*ಅಹಮದಾಬಾದ್ ವಿಮಾನ ದುರಂತ: ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ: ಪೊನ್ನಣ್ಣ* ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ನೂರಾರು ಜನರು ದುರಂತ ಸಾವಿಗೀಡಾದ ಸುದ್ದಿ ತೀವ್ರ ದುಃಖ ಉಂಟು ಮಾಡಿದೆ. ಭಾರತೀಯರು ಸೇರಿದಂತೆ ಹಲವು ವಿದೇಶಿ ಪ್ರಯಾಣಿಕರಿದ್ದ ಈ ವಿಮಾನದ ಪತನ ಅತ್ಯಂತ ದುರಾದೃಷ್ಟಕರ. ವಿಮಾನವು ಮೆಡಿಕಲ್ ಹಾಸ್ಟೆಲ್ ಮೇಲೆ ಪತನ ಆಗಿ ವಿದ್ಯಾರ್ಥಿಗಳೂ ಸಾವನ್ನಪ್ಪಿರುವ ಸುದ್ದಿ ಮತ್ತಷ್ಟು ಆಘಾತ ನೀಡಿದೆ. ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಮುಖ್ಯಮಂತ್ರಿಗಳ ಕಾನೂನು ಸಲೆಹಗಾರ ಹಾಗೂ ವಿರಾಜಪೇಟೆ ಶಾಸಕ ಪೊನ್ನಣ್ಣ ಮಾಧ್ಯಮ ಪ್ರಕಣೆಯ ಮೂಲಕ ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.

Read More

*ನಾಳೆ ವಿದ್ಯುತ್ ವ್ಯತ್ಯಯ* *KODAGU NEWS*. ಮೂರ್ನಾಡು 66 ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಳ್ಳಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪಕೇಂದ್ರದ 11ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಲಾಗುವುದು. ಆದ್ದರಿಂದ ಜೂನ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6-ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು,…

Read More

ಶಾಸಕ ಪೊನ್ನಣ್ಣ ನೇತೃತ್ವದಲ್ಲಿ ಬೆಂಗಳೂರು ಕೊಡವ ಸಮಾಜ ಪ್ರಮುಖರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡ ರ ಭೇಟಿ:ಅಭಿನಂದನೆ ಸಲ್ಲಿಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಇಂದು, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕೆ.ಟಿ ಪೆಮ್ಮಯ್ಯ, ಉಪಾಧ್ಯಕ್ಷರಾದ ಪಿ.ಎಮ್ ಕಮಲ, ಜಂಟಿ ಕಾರ್ಯದರ್ಶಿ ಮಹೇಶ್, ಜಂಟಿ ಖಜಾಂಜಿ ಪಿ.ಕೆ ಗಣಪತಿ,ಪಾಂಡಂಡ ಬೋಪಣ್ಣ, ಹಾಗೂ ಸಮಾಜದ ಮುಖಂಡರು, ಕಂದಾಯ ಸಚಿವರಾದ ಸನ್ಮಾನ್ಯ ಕೃಷ್ಣಬೈರೇಗೌಡ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಹಿಂದೆ ಶಾಸಕರ ನೇತೃತ್ವದಲ್ಲಿ ಕೊಡವ ಸಮಾಜದ ಪ್ರಮುಖರು, ತಮ್ಮ ಸಮಾಜದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬಳಕೆಗಾಗಿ ಸರಕಾರ ನೀಡಿರುವ ಜಮೀನಿಗೆ ನಿಗದಿಪಡಿಸಿದ್ದ ದರವನ್ನು ಪರಿಷ್ಕರಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದ ಮಾನ್ಯ ಕಂದಾಯ ಸಚಿವರು, ದರವನ್ನು ಪರಿಷ್ಕರಿಸಿ ಅನುಮೋದನೆ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಲಾಯಿತು. ಇದೇ ಭಾನುವಾರ 15-06-2025 ರಂದು, ಬೆಂಗಳೂರಿನ ವಸಂತನಗರದ ಕೊಡವ ಸಮಾಜದಲ್ಲಿ, ಈ ಪ್ರಯುಕ್ತ ಅಭಿನಂದನ…

Read More

*********************************** ಮಡಿಕೇರಿ :-ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪುರಸಭಾ ಕಚೇರಿ ಕಟ್ಟಡವನ್ನು ಪೌರಾಡಳಿತ ಸಚಿವರಾದ ರಹೀಮ್ ಖಾನ್ ಅವರು ಬುಧವಾರ ಲೋಕಾರ್ಪಣೆಗೊಳಿಸಿದರು. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಉದ್ಘಾಟಿಸಿ ನೂತನ ಸಭಾಂಗಣದಲ್ಲಿ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಗಳಿಗೆ 50 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರ ಪ್ರಯತ್ನದಿಂದ ಮುಖ್ಯಮಂತ್ರಿ ಅವರು ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಿದ್ದಾರೆ. ಪೌರಾಡಳಿತ ಇಲಾಖೆಯಿಂದ ಸಹ ಅಗತ್ಯ ಸಹಕಾರ ನೀಡಲಾಗುವುದು ಎಂದು ಸಚಿವರು ಹೇಳಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ಮೂರು ಇಂದಿರಾ ಕ್ಯಾಂಟಿನ್‍ಗಳನ್ನು ಆರಂಭಿಸಲಾಗಿದೆ. ಸದ್ಯ ಬೇಡಿಕೆ ಹೆಚ್ಚಿರುವುದರಿಂದ ಬೆಳಗಿನ ಉಪಾಹಾರ ಮತ್ತು ಊಟವನ್ನು 300 ರಿಂದ 500 ಜನರಿಗೆ ಒದಗಿಸಲು ಉದ್ದೇಶಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಶಾಸಕರಾದ ಡಾ.ಮಂತರ್…

Read More

ಕೆ.ಬಿ ಶಂಶುದ್ದೀನ್ ಕುಶಾಲನಗರ ಕುಶಾಲನಗರ: ಕುಶಾಲನಗರ ಜನತೆಯ 07 ವರ್ಷಗಳ ಕನಸನ್ನು ಡಾ.ಮಂತ್ ಗೌಡರವರು ನನಸು ಮಾಡಿದ್ದಾರೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಕುಶಾಲನಗರ ಪುರಸಭೆ ಕಟ್ಟಡದ ಉದ್ಘಾಟನೆಯನ್ನು ಕ್ಷೇತ್ರದ‌ ಶಾಸಕರಾದ ಡಾ.ಮಂತರ್ ಗೌಡರವರು ಇಂದು ನೆರವೇರಿಸಲಿದ್ದಾರೆ. ಐತಿಹಾಸಿಕ ಹಿನ್ನಲೆಯನ್ನು ಹೊಂದಿರುವ ಕುಶಾಲನಗರ ಪುರಸಭೆಯ ವಾಣಿಜ್ಯ ಸಂಕೀರ್ಣದ ಉದ್ಘಾಟನೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಪುರಭವನಕ್ಕೆ ಮುನ್ನಡಿ ಬರೆಯಲು ಆಡಳಿತ ಮಂಡಳಿ ಸಜ್ಜಾಗಿದೆ. ನಗರದ ಹೃದಯ ಭಾಗದಲ್ಲಿರುವ ಪುರಭವನವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕಟ್ಟಡದ ಉದ್ಘಾಟನಾ ಕಾಲ ಕೂಡಿ ಬಂದಿರುವುದು ಕುಶಾಲನಗರ ಜನತೆಯ ಸಂತೋಷಕ್ಕೆ ಕಾರಣವಾಗಿದೆ. ಈ ಹಿಂದೆ ಕುಶಾಲನಗರ ಪುರಸಭೆಯಾಗಿದ್ದಾಗ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಅವರು ಪುರಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಸ್ಮರಣೀಯ. ಹಳೆಯ ಕಟ್ಟಡವನ್ನು ೨೦೧೮ ಕೆಡವಿ ೨೦೩೦ರಲ್ಲಿ ಕಟ್ಟಡವನದನ್ನು ಉದ್ಘಾಟಿಸಬೇಕಾಗಿತ್ತು. ಅನುದಾನ ಹಾಗೂ ತಾಂತ್ರಿಕ ಕಾರಣಗಳಿಂದ ವಾಣಿಜ್ಯ ಸಂಕೀರ್ಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿತ್ತು. ಕೆಲವರ ನಿರಾಸಕ್ತಿಯಿಂದಾಗಿ ಕಾಮಗಾರಿ ಪೂರ್ಣಗೊಳ್ಳದೇ ನೆನೆಗುದಿಗೆ ಬಿದ್ದಿತ್ತು. ಶಾಸಕ…

Read More

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ ಗಾಂಧಿ ಭವನದ ಆವರಣದಲ್ಲಿ ಗಿಡ ನೆಟ್ಟು ಅರಿವು ಮೂಡಿಸಲಾಯಿತು. ಜೊತೆಗೆ ಯೋಗ ಶಿಕ್ಷಕರಾದ ಮಹೇಶ್ ಅವರ ನೇತೃತ್ವದಲ್ಲಿ ಯೋಗ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಆ ನಿಟ್ಟಿನಲ್ಲಿ ವಿವಿಧ ರೋಗಗಳಿಂದ ದೂರವಿರಲು ಪ್ರತೀ ನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವಂತಾಗಬೇಕು ಎಂದು ಸಲಹೆ ನೀಡಿದರು.…

Read More

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಟೀಷರ್ ದಿ ಟೆಕ್ನಿಕಲ್ ಸರ್ವೀಸ್ (Techser the technical service, Mysore), ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಅಪೋಲೋ ಫಾರ್ಮಸಿ, ಮೈಸೂರು, ತಾಜ್ ರೆಸಾಟ್ರ್ಸ್, ಮಡಿಕೇರಿ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ…

Read More

ಮಡಿಕೇರಿ : ಸೂರ್ಲಬ್ಬಿ ಗ್ರಾಮದಲ್ಲಿ ಯುವಕನಿಂದ ಹತ್ಯೆಗೀಡಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿಯ ಕುಟುಂಬಕ್ಕಾಗಿ ರೂ 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಮನೆಯನ್ನು, ಶಾಸಕ ಡಾ. ಮಂತರ್ ಗೌಡ ಹಸ್ತಾಂತರಿಸಿದರು. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ10ರಂದು ಪ್ರಕಟವಾದ ಕೆಲವೇ ಹೊತ್ತಿನಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿನಿ ಮೀನಾ(16) ಕುಟುಂಬಕ್ಕೆ ನೀಡಲು ಮನೆಯನ್ನು ನಿರ್ಮಿಸಲಾಗಿದೆ. ಸೂರ್ಲಬ್ಬಿ-ಕುಂಬಾರಗಡಿಗೆ ಗ್ರಾಮದ ಉದಿಯಂಡ ಸುಬ್ರಮಣಿ ಮತ್ತು ಜಾನಕಿ ದಂಪತಿ ಪುತ್ರಿ ಮೀನಾ ಜೊತೆ ಹಮ್ಮಿಯಾಲ ಗ್ರಾಮದ ಮೊಣ್ಣಂಡ ಓಂಕಾರಪ್ಪ ಅಲಿಯಾಸ್ ಪ್ರಕಾಶ್‌ ಜೊತೆ ಫಲಿತಾಂಶ ಬಂದ ದಿನ ಮದುವೆ ನಿಶ್ಚಿತಾರ್ಥ ಆಗಿತ್ತು. ಹೆಚ್ಚಿನ ಶಿಕ್ಷಣದ ಹಂಬಲವಿದ್ದ ಮೀನಾ ‘ಈಗಲೇ ಮದುವೆ ಬೇಡ’ ಎಂದು ಪೋಷಕರಲ್ಲಿ ಹೇಳಿದ ಬೆನ್ನಲ್ಲೇ ಪ್ರಕಾಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ. ನಂತರ ಪೊಲೀಸರು ಆತನನ್ನುಬಂಧಿಸಿದ್ದರು. ‌ಶಾಸಕ ಡಾ.ಮಂತರ್ ಗೌಡ ಮೀನಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭ, ಮನೆ ಜಾಗಕ್ಕೆ ಯಾವುದೇ ದಾಖಲೆಯಿಲ್ಲ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಹಿತೈಷಿಗಳ…

Read More

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತ್ತಿದ್ದು, ಹವಾಮಾನ ಇಲಾಖೆ ಜೂನ್ 12 ರಿಂದ 14 ವರೆಗೆ ರೆಡ್ ಅಲರ್ಟ್ ಘೋಷಿಸಿದೆ.  ಅಲ್ಲದೆ ಸಾರ್ವಜನಿಕರು ಆತಂಕ ಪಡದೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Read More

ಮಡಿಕೇರಿ : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‍ಡಬ್ಲ್ಯು), ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯು) ಹುದ್ದೆಗಳು ಖಾಲಿ ಇದ್ದು, ಬೌದ್ಧಿಕ ವಿಕಲತೆ (ಬುದ್ದಿಮಾಂದ್ಯತೆ) ಹಾಗೂ ಮಾನಸಿಕ ಅಸ್ವಸ್ಥತೆ ಇರುವ ವಿಕಲಚೇತನರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಜುಲೈ, 07 ರೊಳಗೆ ಅರ್ಜಿ ಸಲ್ಲಿಸಬಹುದು. ನಗರ ಪುನರ್ವಸತಿ ಕಾರ್ಯಕರ್ತರು, ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ ರೂ.9 ಸಾವಿರ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು ನಗರಸಭೆ ಮಡಿಕೇರಿ-3 ಹುದ್ದೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ ವಿಆರ್‍ಡಬ್ಲ್ಯು: ಮಡಿಕೇರಿ ತಾಲ್ಲೂಕು ಬಲ್ಲಮಾವಟಿ, ಹಾಕತ್ತೂರು, ಸೋಮವಾರಪೇಟೆ…

Read More