- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
Author: Kodagu-admin
ಕೊಡಗು ಪತ್ರಕತ೯ರ ಸಂಘದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯೊಂದಿಗೆ ಸಂವಾದ – ಅಭಿನಂದನಾ ಕಾಯ೯ಕ್ರಮ ಪದಗಳ ತಜು೯ಮೆಗಿಂತ ಭಾವನೆಗಳನ್ನು ಬಿಂಬಿಸುವ ಭಾವಾನುವಾದಕ್ಕೇ ಮಹತ್ವ – ದೀಪಾಭಾಸ್ತಿ. ಮಡಿಕೇರಿ ಜೂನ್ 8 – ಪದಗಳ ತಜು೯ಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು, ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ ಎಂದು ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕತ೯ರ ಸಂಘದ ವತಿಯಿಂದ ನಗರದ ಲಾಲಿ ಪೆಟಲ್ ಸಭಾಂಗಣದಲ್ಲಿ ಆಯೋಜಿತ ಪತ್ರಕತೆ೯ ದೀಪಾಭಾಸ್ತಿಗೆ ಅಭಿನಂದನಾ ಸಮಾರಂಭ ಮತ್ತು ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ದೀಪಾಭಾಸ್ತಿ ಮಾತನಾಡಿದರು. ಬಾನುಮುಷ್ತಾಕ್ ಅವರ ಎದೆಯ ಹಣತೆ ಕೖತಿ ಸೇರಿದಂತೆ 6 ಕಥಾಸಂಕಲನಗಳಲ್ಲಿನ 12 ಕಥೆಗಳನ್ನು ಆಯ್ಕೆ ಮಾಡಿ ಇಂಗ್ಲೀಷ್ ನಲ್ಲಿ ಬರೆದ ಹಾಟ್೯ ಲ್ಯಾಂಪ್ ಕೖತಿ ಸಂಬಂಧಿತ ಮಾಹಿತಿ ನೀಡಿದ ದೀಪಾಭಾಸ್ತಿ, ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತಜು೯ಮೆ ಮಾಡಬಾರದು. ಇದರ ಬದಲಿಗೆ ಮೂಲಕೖತಿಯಲ್ಲಿನ ಪದಗಳ ಭಾವವನ್ನು ಅಥೈ೯ಸಿಕೊಂಡು ತನ್ನದೇ ಶೈಲಿಯಲ್ಲಿ…
ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ದೈವಜ್ಞ ಸಮಾಜದ ಕಟ್ಟಡದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಪಾಲ್ಗೊಂಡರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ದೈವಜ್ಞ ಸಮಾಜದವರ ಕೊಡುಗೆ ಈ ನಾಡಿಗೆ ಅಪಾರವಾದದ್ದು. ನಾಡಿನ ಎಲ್ಲಾ ಪ್ರಮುಖ ಕಾರ್ಯಗಳಲ್ಲಿ ದೈವಜ್ಞ ಸಮಾಜದ ಕೊಡುಗೆ ಅತ್ಯಂತ ಮಹತ್ವದ್ದಾಗಿದ್ದು, ಈ ಸಮಾಜದ ಏಳಿಗೆಗಾಗಿ ತನ್ನ ಕೈಲಾದ ಎಲ್ಲಾ ಸಹಾಯ ಮಾಡಲು ತಾನು ಸಿದ್ಧ ಇರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅರುಣ್ ಮಾಚಯ್ಯ, ದೈವಜ್ಞ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ : ಬಲಿಜ ಸಮಾಜದ ಏಳಿಗೆಗಾಗಿ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘ ಅಸ್ಥಿತ್ವಕ್ಕೆ ತರಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಲಿಜ ಸಮಾಜ ಸುಮಾರು ೩೦-೩೫ ಸಾವಿರ ಜನಸಂಖ್ಯೆಯನ್ನು ಹೊಂದಿದೆ. ಪ್ರಸ್ತುತ ಸಂಘದಲ್ಲಿ ೪೦ ಮಂದಿ ಸದಸ್ಯತ್ವ ಪಡೆದುಕೊಂಡಿದ್ದು, ಮುಂದಿನ ಒಂದು ವರ್ಷದಲ್ಲಿ ೧೦೦೦ ಸದಸ್ಯತ್ವ ನೋಂದಾಣಿ ಮಾಡುವ ಗುರಿಯಿದೆ. ಸಮಾಜಬಾಂಧವರು ದೂ.ಸಂ: 9591756257 ಸಂಖ್ಯೆಯನ್ನು ಸಂಪರ್ಕಿಸಿ ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಸದಸ್ಯರ ಶಿಕ್ಷಣ ಅಭಿವೃದ್ಧಿ ಮಾಡುವುದು. ಸದಸ್ಯರ ಆರ್ಥಿಕ ಅಭಿವೃದ್ಧಿಗೆ ಸಹಕರಿಸುವುದು. ಜನಾಂಗಬಾಂಧವರ ಪ್ರತಿಭೆ ವ್ಯಕ್ತಪಡಿಸಲು ಸೂಕ್ತ ವೇದಿಕೆ ಕಲ್ಪಿಸುವುದು ಸೇರಿದಂತೆ ಇನ್ನಿತರೆ ಉದ್ದೇಶದಿಂದ ಸಂಘವನ್ನು ಅಸ್ಥಿತಕ್ಕೆ ತರಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡಲಾಗುವುದು. ಮಹಿಳಾ ಸಂಘಟನೆ ರಚನೆ ಮಾಡುವುದು ಮತ್ತು ಮಧು ವರರ ಸಮಾವೇಶ ಏರ್ಪಡಿಸಲಾಗುವುದು ಎಂದ ಅವರು,…
ಪೊನ್ನಂಪೇಟೆ ತಾಲೂಕು ಬೆಳ್ಳೂರು ಗ್ರಾಮದಲ್ಲಿರುವ ಮಲ್ಲಂಗಡ ಕುಟುಂಬಸ್ಥರ ಐನ್ ಮನೆಗೆ, ಇಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು. ಐನ್ ಮನೆ ಹಿರಿಯರು ಹಾಗೂ ಪ್ರಮುಖದೊಂದಿಗೆ ಮಾತನಾಡಿದ ಮಾನ್ಯ ಶಾಸಕರು ಮಲ್ಲಂಗಡ ಐನ್ ಮನೆಯ ಇತಿಹಾಸದ ಬಗ್ಗೆ ತಿಳಿದುಕೊಂಡು ಐಎನ್ ಮನೆಗಳನ್ನು ಉಳಿಸಿವುದು ನಮ್ಮ ಜವಾಬ್ದಾರಿಯಾಗಿದ್ದು ಅವುಗಳ ಅಭಿವೃದ್ಧಿಗೆ ತನ್ನ ಕೈಲಾದ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್,ಮಲ್ಲಂಗಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮೃತ ಕುಕ್ಕನೂರು ಪುರುಷೋತ್ತಮ ಅವರ ಅಂತಿಮ ದರ್ಶನ ಪಡೆದ ಪೊನ್ನಣ್ಣ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ಆನೆ ತುಳಿತಕ್ಕೆ ಒಳಗಾಗಿ ದುರಂತ ಸಾವಿಗೀಡಾದ ರೈತರಾದ ಕುಕ್ಕುನೂರು ಪುರುಷೋತ್ತಮ್ ರವರ ಮನೆಗೆ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಬಳಿಕ ಕುಟುಂಬಸ್ಥರಿಗೆ ಸಾಂತ್ವನ ನುಡಿದರು. ಆನೆ ಮಾನವ ಸಂಘರ್ಷ ಇತ್ತೀಚೆಗೆ ಅತಿಯಾಗಿದ್ದು ಶಾಶ್ವತ ಪರಿಹಾರದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ ಉಪಸ್ಥಿತರಿದ್ದರು.
ಪಾಲಿಬೆಟ್ಟದಲ್ಲಿ, ಸುಮಾರು ₹ 2.97 ಕೋಟಿ ರೂಪಾಯಿಗಳಲ್ಲಿ ನಿರ್ಮಾಣವಾದ ಡಾ|| ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಅಜ್ಜಿಕುಟ್ಟಿರ ಎಸ್ ಪೊನ್ನಣ ಶನಿವಾರ ಉದ್ಘಾಟನೆಗೊಳಿಸಿದರು. ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲೂಕಿನ ಈ ಭಾಗದಲ್ಲಿ ನಿರ್ಮಾಣಗೊಂಡ ಈ ವಿದ್ಯಾರ್ಥಿ ನಿಲಯವು, ಸುತ್ತಮುತ್ತಲಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂಥ ವಾತಾವರಣ ನಿರ್ಮಿಸಲಿದೆ ಎಂದು ಅಭಿಪ್ರಾಯಿಸಿದರು. ಬಳಿಕ ಇಲಾಖೆಯ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣ ಇಲ್ಲಿ ವಿದ್ಯಾರ್ಥಿನಿಯರಿಗೆ ಬೇಕಾದಂತಹ ಎಲ್ಲಾ ಮೂಲಭೂತ ಸೌಕರ್ಯವೂ ಸದಾ ವದವು ಗುರುವಂತೆ ನೋಡಿಕೊಳ್ಳುವುದು ಪ್ರಥಮ ಆದ್ಯತೆ ಆಗಿರಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರಿಗೆ ಸುರಕ್ಷೆ ಹಾಗೂ ಉತ್ತಮ ವಾತಾವರಣ ಇರುವಂತೆ ನೋಡಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಪೊನ್ನಣ್ಣ ಹೇಳಿದರು. ವೇದಿಕೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ತಾಲೂಕು ಗ್ಯಾರಂಟಿ…
*ಕೊಡಗಿನಲ್ಲಿ ಮುಂದುವರಿದ ಕಾಡನೆ ದಾಳಿ* *KODAGUNEWS* *ಸಿದ್ದಾಪುರ ಕರಡಿಗೋಡು ಬಳಿ ಆನೆ ತುಳಿತಕ್ಕೆ ಓರ್ವ ಬಲಿ*… ಕೊಡಗು ಜಿಲ್ಲೆಯ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದಲ್ಲಿ ಇಂದು ಸಂಜೆ 6:30 ಗಂಟೆಗೆ ತಮ್ಮ ಮನೆಯ ಸಮೀಪ ತೋಟಕ್ಕೆ ಕೂಕನೂರು ಪುರುಷೋತ್ತಮ್ (72 ) ಎಂಬುವರು ಹೋದ ಸಂದರ್ಭ ಕಾಡಾನೆ ಅವರ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯ ನವರು ಭೇಟಿ ನೀಡಿದ್ದಾರೆ. ವಲಯ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಸಿದ್ದಾಪುರ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿದ್ದಪುರ ಕಾಂಗ್ರೆಸ್ ಪಕ್ಷದ ಮುಖಂಡರಾದ ರತೀಶ್, ವಿರಾಜಪೇಟೆ ವಲಯದ ಮುಖಂಡರಾದ ನರೇಂದ್ರ ಕಾಮತ್, ಮತ್ತಿತರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದರೆ.
ಜೂ.09 ರಂದು ಪಿಂಚಣಿ ಅದಾಲತ್ ಸಭೆ ಅದಾಲತ್‍ನ ಮುಂದಿನ ಸಭೆಯು ಜೂನ್, 09 ರಂದು ಮಧ್ಯಾಹ್ನ 12 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬಂಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಅಹವಾಲುಗಳಿದ್ದಲ್ಲಿ ‘ಪಿಂಚಣಿ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಜೂನ್, 06 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಜೂನ್, 09 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷ 2026-27 ಕ್ಕಾಗಿ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರ ಮುಖಾಂತರ ತಮ್ಮ ಹೆಸರನ್ನು ನೋಂದಾಯಿಸಲು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅಭ್ಯರ್ಥಿ ಮತ್ತು ಆತನ/ಅವಳ ಪೋಷಕರು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅರೆಸರ್ಕಾರಿ ಶಾಲೆಗಳಲ್ಲಿ 3 ಮತ್ತು 4ನೇ ತರಗತಿ ಓದಿ ಪಾಸಾಗಿರಬೇಕು. ಈಗ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿ 01/05/2014 ರಿಂದ 31/07/2016 ರೊಳಗೆ ಜನಿಸಿದವರಾಗಿರಬೇಕು. ಆನ್‍ಲೈನ್ ಅರ್ಜಿ ಸಲ್ಲಿಸಲು ಜುಲೈ, 29 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2025 ರ ಡಿಸೆಂಬರ್, 13 ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಮತ್ತು ಇನ್ನಿತರ ಮಾಹಿತಿಯನ್ನು https://navodaya.gov.in ಲಿಂಕ್‍ನಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಯನ್…
ಮಡಿಕೇರಿ : ದ್ವಿತೀಯ ಪಿಯುಸಿ ಪರೀಕ್ಷೆ-3 ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರೀಕ್ಷೆ-2 ನಡೆಸಿದಂತೆ ಪರೀಕ್ಷೆ-3 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್, 09 ರಿಂದ 20 ರವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ನಡೆಯಲಿದ್ದು, ಒಟ್ಟು 605 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು. ಒಟ್ಟು ಕಾಲೇಜುಗಳ ಸಂಖ್ಯೆ 65, ಪರೀಕ್ಷೆಗೆ ಹಾಜರಾಗುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 605(ಎನ್‍ಸಿ, ಪ್ರೈವೇಟ್, ರಿಪೀಟರ್ಸ್ ಮತ್ತು ಇಂಪ್ರೂವೆಮೆಂಟ್), ಒಟ್ಟು ಪರೀಕ್ಷಾ…
