Author: Kodagu-admin

ಭಾರತಿಯಲ್ಲಿಲ್ಲ ಇನ್ನು ಮುಂದೆ ಸರಸ್ವತಿ ವಿಶೇಷ ವರದಿ: ಅಂಚೆಮನೆ ಸುಧಿ ಸುಮಾರು 62 ವರ್ಷಗಳ ಇತಿಹಾಸ ಹೊಂದಿರುವ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆ ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಈಗಾಗಲೇ ಪ್ರೌಢ ಶಾಲೆಗೆ ಬೀಗ ಹಾಕಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಕಾಲೇಜ್ ಕೂಡ ಬಂದ್ ಆಗಲಿದೆ. ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿರುವ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆ 1963 ಜುಲೈನಲ್ಲಿ ಸ್ಥಾಪನೆಗೊಂಡಿತು. ಈ ಅನುದಾನಿತ ವಿದ್ಯಾಸಂಸ್ಥೆ ಇಲ್ಲಿಯವರೆಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಾ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದ ವಿದ್ಯಾಸಂಸ್ಥೆ ಇಂದು ಇತಿಹಾಸದ ಪುಟಗಳಲ್ಲಿ ಸೇರಿ ಹೋಗುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪ್ರತಿಯೊಂದು ಸರ್ಕಾರ ಕನ್ನಡ ಶಾಲೆಗಳು ಉಳಿಯಬೇಕೆನ್ನುವ ಅಭಿಲಾಷೆಯನ್ನು ವ್ಯಕ್ತಪಡಿಸುತ್ತವೆ. ಇದರ ಜೊತೆಯಲ್ಲೇ ಕನ್ನಡ ಶಾಲೆಗಳಿಗೆ ಪೈಪೋಟಿ ನೀಡಲು ಆಂಗ್ಲ ಮಾಧ್ಯಮದ ಶಾಲೆಗಳಿಗೆ ಅನುಮತಿಯನ್ನೂ ನೀಡುತ್ತವೆ. ಸರ್ಕಾರದ ಈ ದ್ವಂದ್ವ ನಿಲುವುಗಳಿಂದ ರಾಜ್ಯದ ಸಾವಿರಾರು ಕನ್ನಡ ಶಾಲೆಗಳು ಮುಚ್ಚಿ ಹೋಗಿದ್ದು, ಇವುಗಳ ಸಾಲಿಗೆ ಮರಗೋಡು…

Read More

ಶನಿವಾರಸಂತೆ :-‘ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಕ್ರಮದಿಂದ ವ್ಯಕ್ತಿಯ ಅಂಗಾಲಿನಿAದ ಹೃದಯದ ವರೆಗೂ ರಕ್ತ ಸಂಚಾರ ಮಾಡುವ ಮೂಲಕ ಖಾಯಿಲೆಗಳನ್ನು ದೂರ ಮಾಡುತ್ತದೆ’ ಎಂದು ಕಂಪಾನಿಯೋ ಸಂಸ್ಥೆಯ ಥೆರಪಿಯನ್ ಶಶಿಕಾಂತ್ ಪೂಜಾರಿ ಹೇಳಿದರು. ಅವರು ಕೊಡಗು ಪತ್ರಕರ್ತರ ಸಂಘ ಸೋಮವಾರಪೇಟೆ ತಾಲೋಕು ಘಟಕ ಹಾಗೂ ಕಾಂಪಾನಿಯೋ ಸಂಸ್ಥೆ ಇವರ ವತಿಯಿಂದ ಶನಿವಾರಸಂತೆ ಪತ್ರಿಕಾ ಭವನದಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದರು.-ಫೂಟ್ ಪಲ್ಸ್ ಥೆರಪಿ ಯಂತ್ರದಲ್ಲಿ ಚಿಕಿತ್ಸೆ ಪಡೆಯುವ ವ್ಯಕ್ತಿಗೆ ಅರ್ಧ ಗಂಟೆಯಲ್ಲಿ ಐದು ಕಿ.ಮೀ.ದೂರದ ವರೆಗೆ ಓಟಕ್ಕೆ ಸಮನಾಗಿರುತ್ತದೆ ಈ ಮೂಲಕ ದೇಹದ ನರ ನಾಡಿಗಳಲ್ಲಿ ರಕ್ತ ಸಂಚಾರವಾಗುತ್ತದೆ ದೇಹದಲ್ಲಿರುವ ಅಶುದ್ದ ರಕ್ತ ಶುದ್ದಗೊಳ್ಳುತ್ತದೆ ಹೃದಯ ಸಂಬAಧಿ ಕಾಯಿಲೆ ಸೇರಿದಂತೆ ಸೊಂಟ ನೋವು, ಹಿಂಬAದಿ ಬೆನ್ನು ನೋವು ಮುಂತಾದ ನರ ದೌರ್ಬಲ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ ಎಂದರು. ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಕ್ರಮವನ್ನು ಭಾರತದಲ್ಲಿ ೨೦೧೪ ರಿಂದ ಸ್ಥಾಪನೆಯಾಗಿದ್ದು ಯಂತ್ರವನ್ನು…

Read More

ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣ ಬಗ್ಗೆ ಗಮನಹರಿಸಿ; ಜಿಲ್ಲಾಧಿಕಾರಿ ಮಡಿಕೇರಿ :-ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳು ಕಂಡು ಬರದಂತೆ ಗಮನಹರಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು. ಇಂತಹ ಪ್ರಕರಣಗಳು ಕಂಡು ಬರದಂತೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಸತಿ ಶಾಲೆಗಳು ಸೇರಿದಂತೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಆಹಾರ ಗುಣಮಟ್ಟವನ್ನು ಪ್ರತೀನಿತ್ಯ ಕಾಯ್ದುಕೊಳ್ಳಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಬೆಡ್‍ಶೀಟ್…

Read More

ಜಮ್ಮು ಕಾಶ್ಮೀರ : ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು. ದ ಸೇತುವೆಯುದ್ದಕ್ಕೂ ಭಾರತದ ಬಾವುಟವನ್ನು ಬೀಸುತ್ತಾ ಮೋದಿ ಓಡಾಡಿದರು. ಈ ಸೇತುವೆ ನದಿಮಟ್ಟದಿಂದ 359 ಮೀಟರ್‌ ಎತ್ತರವಿದ್ದು, 1,315 ಮೀಟರ್‌ ಉದ್ದವಿದೆ. ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ. ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ, ಚೆನಾಬ್‌ ನದಿ ಮೇಲೆ ಈ ಸೇತುವೆಯನ್ನು ನಿರ್ಮಿಸಲಾಗಿದೆ. ಇದು ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿದೆ. ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟನೆ ಬಳಿಕ ಮೋದಿ ಅವರು, ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯನ್ನೂ ಉದ್ಘಾಟಿಸಿದರು. ಈ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಹಾಜರಿದ್ದರು.

Read More

ಮಾಜಿ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳ ಹರಿಕಾರ, ಮೌನಕ್ರಾಂತಿಯ ರುವಾರಿಯಾದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ, ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾನ್ಯಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಿಗೆ, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಗ್ಯಾರೆಂಟಿ ಅನುಷ್ಠಾನ ಅಧಿಕಾರದ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ, ಸಹ ಮಲಾರ್ಪಣೆಯನ್ನು ಮಾಡಿ ಗೌರವ ಸಲ್ಲಿಸಿದರು.

Read More

ಮಡಿಕೇರಿ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಆರ್‌ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಇವರುಗಳ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿದೆ.

Read More

ಮಡಿಕೇರಿ :  ಆರ್‌ಸಿಬಿಯ ಗೆಲುವಿನ ವಿಜಯೋತ್ಸವ ಸಂದರ್ಭ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಕರ್ನಾಟಕದ ಜನತೆ ರಾಜ್ಯ ಮತ್ತು ಕನ್ನಡ ಭಾಷೆಯ ಅಭಿಮಾನದಿಂದ ಆರ್‌ಸಿಬಿ ಗೆಲುವಿಗಾಗಿ ದೇವಾಲಯಗಳಲ್ಲಿ ಪೂಜೆಯನ್ನು ಸಲ್ಲಿಸಿದ್ದಾರೆ. ಆರ್‌ಸಿಬಿ ತಂಡ ಬರೋಬ್ಬರಿ ೧೮ ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದಿದೆ. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಕನಸನ್ನು ನನಸು ಮಾಡಿದೆ. ಇಂತಹ ಸಂದರ್ಭ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ ರಾಜ್ಯ ಸರ್ಕಾರ ಏಕಾಏಕಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಿದೆ. ಪರಿಣಾಮ ೧೧ ಅಮಾಯಕ ಜೀವಗಳು ಬಲಿಯಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಿದೆ. ಆದ್ದರಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗ್ರಹಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇಂದು ರಾಜ್ಯ ಸರ್ಕಾರ ಯಾವುದೇ ಯೋಜನೆ, ಕಾರ್ಯಕ್ರಮವನ್ನು ಕ್ರಮಬದ್ಧವಾಗಿ ಮಾಡುತ್ತಿಲ್ಲ. ಏಕಾಏಕಿ ನಿರ್ಧಾರ ಮಾಡಿ ಇಂತಹ ಘಟನೆಗಳಿಗೆ…

Read More

*ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ* ಕೊಡಗುನ್ಯೂಸ್ – 2025-26) ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು ಹಾಗೂ ಪಾಲಿಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ 02 ಬಾಲಕರ ಹಾಗೂ 02 ಬಾಲಕಿಯರ ವಿದ್ಯಾರ್ಥಿ ನಿಲಯಗಳು ಹಾಗೂ ಪೊನ್ನಂಪೇಟೆ ಪಟ್ಟಣ ಹಾಗೂ ಬಾಳೆಲೆಯಲ್ಲಿರುವ 02 ಬಾಲಕರ ಹಾಗೂ 01 ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಂದ ನಿಲಯಕ್ಕೆ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swdhmis.karnataka.gov.in/ ಮೂಲಕ ಆಗಸ್ಟ್, 31 ರೊಳಗೆ ಅರ್ಜಿ ಸಲ್ಲಿಸಿ ನಂತರ ಆನ್‍ಲೈನ್ ಪ್ರತಿಯೊಂದಿಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಹಿಂದಿನ ವರ್ಷದ ಅಂಕಪಟ್ಟಿಯ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ನಿಲಯಗಳ ವಾರ್ಡನ್‍ರವರಿಗೆ ಸಲ್ಲಿಸುವಂತೆ ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು…

Read More

­ಬೆಂಗಳೂರು ಕಾಲ್ತುಳಿಕ್ಕೆ ಕೊಡಗು ಮೂಲದ ಯುವತಿಯೂ ಸಾವು. ಬುಧವಾರ ಬೆಂಗಳೂರು ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ RCB ವಿಜಯೋತ್ಸವ ಸಂದರ್ಭ ಉಂಟಾದ ಕಾಲ್ತುಳಿತದಲ್ಲಿ ಕೊಡಗು ಜಿಲ್ಲೆಯ ಯುವತಿ ಬಲಿಯಾಗಿದ್ದಾರೆ. ಮೃತ ಯುವತಿ ಮೂಲತಃ ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿ ಆಗಿರುವ ಕರುಣಾಕರ ಶೆಟ್ಟಿರವರ ಪುತ್ರಿ ಚಿನ್ಮಯಿ ಶೆಟ್ಟಿ (19) ಮೃತ ದುರ್ದೈವಿ. RCB ತಂಡದ ಅಭಿಮಾನಿ ಆಗಿದ್ದ ಈಕೆ ತನ್ನ ಗೆಳತಿಯರೊಂದಿಗೆ ವಿಜಯೋತ್ಸವದಲ್ಲಿ ಸಂಭ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಆದರೆ ನೂಕು ನುಗ್ಗಲಿನಿಂದಾಗಿ ಜೊತೆಗಿದ್ದ ಗೆಳತಿಯರಿಂದ ಪ್ರತ್ಯೇಕಗೊಂಡು ಕಾಲ್ತುಳಿತಕ್ಕೆ ಸಿಲುಕಿ ಚಿಂತಾಜನಕರಾಗಿದ್ದರು. ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಮಾರ್ಗಮಧ್ಯದಲ್ಲಿಯೇ ಚಿನ್ಮಯಿ ಶೆಟ್ಟಿ ಚಿರನಿದ್ದೆಗೆ ಜಾರಿದ್ದರು. ನಂತರ ಪೋಷಕರಿಗೆ ಮಾಹಿತಿ ನೀಡಿ ಗುರುವಾರ ಮೃತದೇಹವನ್ನು ಹಸ್ತಾಂತರಿಸಲಾಯಿತು. ಚಿನ್ಮಯಿ ಶೆಟ್ಟಿ ಪ್ರತಿಭಾವಂತೆ ಹಾಗೂ ಯಕ್ಷಗಾನದಲ್ಲಿ ಅತೀವ ಆಸಕ್ತಿ ಹೊಂದಿದ್ದರು.

Read More

ವಿಶ್ವ ಪರಿಸರ ದಿನದ ಅಂಗವಾಗಿ ಮಡಿಕೇರಿಯ ಸಂತ ಜೋಸಫರ ಶಾಲೆಯಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಸಿರು ಹೂಗುಚವನ್ನು ತಂದು ನಡುವ ಮೂಲಕ ಪರಿಸರ ಕಾಳಜಿಯನ್ನು ತೋರಿದರು.

Read More