- ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಮಲ್ದಾರೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲುಗೈ
- ಏಕಾಂಗಿಯಾದರೂ ಎದೆಗುಂದದ ರವಿ ಕುಶಾಲಪ್ಪ: ಬಿಜೆಪಿ ಒಗ್ಗಟ್ಟಿನ ಮೇಲೆ ಮತ್ತೆ ಪ್ರಶ್ನಾರ್ಥಕ ಚಿಹ್ನೆ
- ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
Author: Kodagu-admin
ವಿರಾಜಪೇಟೆ ತಾಲೂಕಿನ ಒಂಟಿಅಂಗಡಿಯ ಕೊಡವ ಸಂಸ್ಥೆಯಲ್ಲಿ ನಡೆದ ಕೊಡವ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ‘ಪತ್ತಾಯ’ ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಡವ ಸಾಹಿತ್ಯ ಅಕಾಡೆಮಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು-ಬೆಳವಣಿಗೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ಸಮುದಾಯದಲ್ಲಿ ಸಂಸ್ಕೃತಿಯ ಮಹತ್ವದ ಅರಿವು ಮೂಡಿಸಲು ನೆರವಾಗುತ್ತವೆ ಎಂದರು. ಬಹು ಪುರಾತನವಾದ ಕೊಡವ ಸಂಸ್ಕೃತಿ, ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಅಕಾಡೆಮಿಯೊಂದರದ್ದೇ ಅಲ್ಲ, ಸಮುದಾಯದ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಹೇಳಿದರು. ಆಧುನಿಕ ಯುಗದಲ್ಲಿ ಯುವ ಪೀಳಿಗೆ ತಮ್ಮ ಭಾಷೆ ಮತ್ತು ಸಂಸ್ಕೃತಿಯಿಂದ ದೂರವಾಗುತ್ತಿರುವುದು ಆತಂಕದ ಸಂಗತಿಯಾಗಿದ್ದು, ಎಲ್ಲರೂ ಜಾಗೃತರಾಗಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ…
ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಕೊಡಗು ಜಿಲ್ಲೆಯ ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಶನಿವಾರ ಹೆಚ್ಚುವರಿ ನೀರನ್ನು ನದಿಗೆ ಹರಿಯಬಿಡಲಾಯಿತು. ಪ್ರಸ್ತುತ ಜಲಾಶಯಕ್ಕೆ 4 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆಗೂ ಮುನ್ನ ಹಾರಂಗಿ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಲಾಶಯದ ಇಇ ಮಹೇಶ್, ಎಇಇ ಪುಟ್ಟಸ್ವಾಮಿ, ಎಇ ಕಿರಣ್ ದೇವಯ್ಯ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ ಹಾರಂಗಿ: ಹಾರಂಗಿ ಜಲಾಶಯದ ಮುಂಭಾಗದ ಸೇತುವೆಯಲ್ಲಿ ಪ್ರವಾಸಿಗರು ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸೋಮವಾರಪೇಟೆ–ಕುಶಾಲನಗರ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸೇತುವೆ ಈಗಾಗಲೇ ಇಕ್ಕಟ್ಟಾದ ಹಾಗೂ ಅಪಾಯಕಾರಿಯಾದ ಪ್ರದೇಶವಾಗಿದ್ದು, ಅದರ ಮೇಲೆಯೇ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ಅಪಘಾತ ಸಂಭವಿಸುವ ಆತಂಕವೂ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು ವಾಹನಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದಾಗ ಕೆಲ ಪ್ರವಾಸಿಗರು ವಾಗ್ವಾದಕ್ಕೆ ಇಳಿಯುತ್ತಿರುವುದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಮೇಲೆ ವಾಹನ ನಿಲುಗಡೆಗೆ ನಿರ್ಬಂಧ ಹೇರಿ, ಸಂಚಾರ ಸುಗಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹಾರಂಗಿಯ ಸಜನ್ ಕಿಶೋರ್ ಬೊಳ್ತಂಡ ಆಗ್ರಹಿಸಿದ್ದಾರೆ.
ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ ನವದೆಹಲಿ: ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆಗಳ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳು ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಈ ಬೆಳವಣಿಗೆಗಳ ನಡುವೆ ಧರ್ಮೇಂದ್ರ ಪ್ರಧಾನ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ನೈತಿಕ ಹೊಣೆಗಾರಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯನ್ನು ನೀಟ್ ವಿವಾದ ಮತ್ತು ವಿದ್ಯಾರ್ಥಿಗಳ ಹೋರಾಟದ ಹಿನ್ನೆಲೆಯಲ್ಲಿ ನಡೆದ…
ಕುಶಾಲನಗರ, ಜು.25: ಬೈಚನಹಳ್ಳಿ ಗ್ರಾಮದ ಕಾವೇರಿ ಬಡಾವಣೆಯಲ್ಲಿರುವ ಪುರಸಭೆಯ ಅಮೂಲ್ಯ ಜಾಗ ದಟ್ಟ ಕಾಡಾಗಿ ಸಾರ್ವಜನಿಕರಿಗೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ. ಜಾಗದಲ್ಲಿನ ಕಳೆ-ಗಿಡಗಂಟೆಗಳನ್ನು ತೆರವುಗೊಳಿಸಿ, ಶಿಥಿಲಗೊಂಡ ಕಟ್ಟಡವನ್ನು ನೆಲಸಮಗೊಳಿಸಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಿಸುವಂತೆ ಕರವೇ ಒತ್ತಾಯಿಸಿದೆ. ಮನವಿಗೆ ಸ್ಪಂದಿಸಿದ ಮುಖ್ಯಾಧಿಕಾರಿ ಗಿರೀಶ್ ಅವರು 10 ದಿನಗಳೊಳಗೆ ಜಾಗವನ್ನು ಸ್ವಚ್ಛಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮುರುಗೇಶ್ ಸೇರಿದಂತೆ ಪದಾಧಿಕಾರಿಗಳು, ಜಾಗವನ್ನು ಅಭಿವೃದ್ಧಿಪಡಿಸಿ ಪುರಸಭೆಗೆ ಆದಾಯ ತರುವ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು. ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಸ್ವಾಭಿಮಾನಿ ಬಣ ಎಚ್ಚರಿಸಿದೆ.
ಜು. 25: ಭಾರತೀಯ ಜನತಾ ಪಾರ್ಟಿಯ ವತಿಯಿಂದ ಜುಲೈ 25 ಹಾಗೂ 26, 2026 ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದ ಅಂಗವಾಗಿ ಮನೆ-ಮನೆ ಭೇಟಿ ಕಾರ್ಯಕ್ರಮ ನಡೆಯಿತು. ಬೂತ್ ಸಂಖ್ಯೆ 221ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಭಾಗವಹಿಸಿ, ಅನೇಕ ಮನೆಗಳಿಗೆ ಭೇಟಿ ನೀಡಿ ಇದುವರೆಗೆ ನಡೆದಿರುವ ಎಸ್‌ಐಆರ್ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಜ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಎನ್ಯೂಮರೇಷನ್ (Enumeration) ಫಾರ್ಮ್ ಪಡೆಯದವರು ಕೂಡಲೇ ತಮ್ಮ ವ್ಯಾಪ್ತಿಯ ಬಿಎಲ್‌ಒಗಳಿಂದ ಫಾರ್ಮ್ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು. ನಂತರ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಬಿಎಲ್‌ಒ ಅವರೊಂದಿಗೆ ಎಸ್‌ಐಆರ್ ಅಭಿಯಾನದ ಪ್ರಗತಿ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೂತ್‌ನ ಬಿಎಲ್-2, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಎಂ. ರವಿ ಮೊಗೇರ,…
ಗೋಣಿಕೊಪ್ಪದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ಗೋಣಿಕೊಪ್ಪ, ಜು.25: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆಸಿದ ಕ್ರಮವನ್ನು ವಿರೋಧಿಸಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಮಾತನಾಡಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು. ವಿದ್ಯಾರ್ಥಿಗಳನ್ನು ಉಗ್ರಗಾಮಿಗಳಂತೆ ಬಿಂಬಿಸುವ ಪ್ರಯತ್ನ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ…
ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ ಮಡಿಕೇರಿ, ಜು. 25: ನೀಟ್ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳ ಆತಂಕ ಹಾಗೂ ಅಸಮಾಧಾನವನ್ನು ವ್ಯಕ್ತಪಡಿಸಿ ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಶನಿವಾರ ಶಾಂತಿಯುತ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಗೌರಿ, “ನಾವು ಯಾವುದೇ ರಾಜಕೀಯ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಇಲ್ಲ. ಪಕ್ಷಾತೀತವಾಗಿ ಸರ್ಕಾರವನ್ನು ಪ್ರಶ್ನಿಸಲು ಬಂದಿದ್ದೇವೆ. ನಮಗೆ ಯಾವುದೇ ರಾಜಕೀಯ ಪಕ್ಷದ ಬೆಂಬಲವಿಲ್ಲ. ಸಂವಿಧಾನಾತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ,” ಎಂದು ಹೇಳಿದರು. ಮತ್ತೋರ್ವ ವಿದ್ಯಾರ್ಥಿ ನಿತಿನ್ ಥಾಮೋಸ್ ಮಾತನಾಡಿ, “ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ವ್ಯವಸ್ಥೆಯ ಲೋಪಗಳಿಂದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಕ್ರಮಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹24 ಲಕ್ಷ ವೆಚ್ಚದ ಮೂರು ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಅನುದಾನದಿಂದ ನಿರ್ಮಿಸಲಾದ ಒಟ್ಟು ₹24 ಲಕ್ಷ ವೆಚ್ಚದ ಮೂರು ನೂತನ ಕಾಂಕ್ರೀಟ್ ರಸ್ತೆಗಳನ್ನು ಶಾಸಕ ಎ.ಎಸ್. ಪೊನ್ನಣ್ಣ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು. ಬೊಳ್ಳುಮಾಡುವಿನಿಂದ ಕಾಕೋಟುಪರಂಬುಗೆ ಸಂಪರ್ಕ ಕಲ್ಪಿಸುವ ರಸ್ತೆ, ಪಾಲಚಂಡ ಐನ್ ಮನೆಗೆ ತೆರಳುವ ರಸ್ತೆ ಹಾಗೂ ಮಂಡೆಪಂಡ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಶಾಸಕರು, ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಈ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ನಿರ್ಮಿಸಿರುವ ರಸ್ತೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಬಳಿಕ ಸ್ಥಳೀಯ ನಿವಾಸಿಗಳ ಮನವಿಯ ಮೇರೆಗೆ ಕಾಲೋನಿಗೆ ಭೇಟಿ ನೀಡಿದ ಶಾಸಕರು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ, ನಿವಾಸಿಗಳ ಅಹವಾಲುಗಳನ್ನು ಆಲಿಸಿದರು.…
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕುಶಾಲನಗರ, ಜು.24: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಗೆ ಕಾಂಗ್ರೆಸ್ ಮುಖಂಡ ವಿ.ಪಿ. ಶಶಿಧರ್ ನೇತೃತ್ವ ವಹಿಸಿದ್ದರು. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಧ್ವಜಗಳು ಹಾಗೂ ಬ್ಯಾನರ್‌ಗಳನ್ನು ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ, ನಟೇಶ್, ಕಲೀಮುಲ್ಲಾ ಆದಂ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಲಾಯಿತು. ಮೆರವಣಿಗೆಯು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆಯಿತು. ಕಾಂಗ್ರೆಸ್ ಮುಖಂಡರು ರಾಜ್ಯ ಹಾಗೂ ರಾಷ್ಟ್ರದ ವಿವಿಧ ವಿಚಾರಗಳಲ್ಲಿ ಬಿಜೆಪಿ ಸರ್ಕಾರವನ್ನು ಟೀಕಿಸಿ, ಜನಪರ ಆಡಳಿತ ನಡೆಸುವಂತೆ ಒತ್ತಾಯಿಸಿದರು. ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.
