Author: Kodagu-admin

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ *************************************** ಮಡಿಕೇರಿ :-ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೇಟಿ ಬಚಾವೋ- ಭೇಟಿ ಪಡಾವೋ ಯೋಜನೆ ಅಡಿ ಗಿಡ ನೀಡುವ ಕಾರ್ಯಕ್ರಮವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಗಿಡ ನೆಡುವ ಮೂಲಕ ಹಸಿರು ಬೆಳೆಸಿ-ಹಸಿರು ಉಳಿಸಿ ಎಂಬುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಸಬಲೀಕರಣದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ವಿಶ್ವ ಪರಿಸರ ದಿನಾಚರಣೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಿ: ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ******************************************************** ಮಡಿಕೇರಿ , ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಸಂಘಟನೆಯ ಇಕೋ ಕ್ಲಬ್‍ಗಳು, ಅರಣ್ಯ ಇಲಾಖೆ, ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಮಡಿಕೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಾಭಿವೃದ್ಧಿ ಕೋಶ, ಭಾರತ್ ಸ್ಕೌಟ್ಸ್, ಗೈಡ್ಸ್‍ನ ಜಿಲ್ಲಾ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ’ ಎಂಬ ಧ್ಯೇಯ ವಾಕ್ಯದಡಿ ಗುರುವಾರ ನಗರದ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಗಾಂಧಿ ಭವನದ ಆವರಣದಲ್ಲಿ ಗಿಡ ನೆಟ್ಟು ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಪ್ರಭಾರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಬಿ.ಪರಮೇಶ್ವರ ಪ್ರಸನ್ನ ಅವರು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ…

Read More

ಪರಿಸರ ದಿನದ ಅಂಗವಾಗಿ ಕುಶಾಲನಗರದ ಅತ್ತೂರಿನಲ್ಲಿರುವ ಜ್ಞಾನಗಂಗಾ ರೆಸಿಡೆನ್ಸಿಯಲ್ ಸ್ಕೂಲ್ ನಲ್ಲಿ ಪುಟಾಣಿಗಳ ಹಸಿರು ಗುಚ್ಛ ಹಿಡಿದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. i

Read More

ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ ಹೋದ ಪರಿಣಾಮ ಶಿಶು ನಾಯಿಗಳ ಪಾಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ನಾಯಿಗಳನ್ನು ಓಡಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Read More

ಸುಂಟಿಕೊಪ್ಪ ಆರಕ್ಷಕ ಉಪ ನಿರೀಕ್ಷಕರಾಗಿ ಮೋಹನ್ ರಾಜ್ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ.ಮೋಹನ್ ರಾಜ್ ಅವರು ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಆರಕ್ಷಕ ಉಪ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಡಿದ್ದಾರೆ.

Read More

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಂತಿ ಸಭೆಯನ್ನು ಕರೆದು ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸಿಸುವ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

Read More

ಮಡಿಕೇರಿ : ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆ ವಿಜಯ ಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ ಆದ ಸಾಹಿತಿ, ಲೇಖಕ ಡಾ.ಜೆ .ಸೋಮಣ್ಣ ಹಾಗೂ ಹುಣಸೂರು ತಾಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025 ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಬುಧವಾರ( ಜೂನ್ 4 ರಂದು ) ಮೈಸೂರಿನ ಕಲಾಮಂದಿರದಲ್ಲಿ ಕನ್ನಡ ಮತ್ತು.ಸಂಸ್ಕೃತಿ ಇಲಾಖೆ ಮೂಲಕ ಆಯೋಜಿಸಿದ್ದ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ .ಡಾ ಎಚ್ .ಸಿ.ಮಹಾದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗಾಗಿ ಡಾ ಜೆ.ಸೋಮಣ್ಣ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಕೊಡಗಿನ ಡಾ ಜೆ.ಸೋಮಣ್ಣ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಹುಣಸೂರಿನ ಗಿರಿಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದ ದಿವಂಗತ ಎಂ.ಬಿ.ಪ್ರಭು ಅವರ ಪತ್ನಿ ಪಿ.ಬಿ.ವೀಣಾ ಅವರಿಗೆ ಸಮಾಜ…

Read More

‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ ************************************* ಮಡಿಕೇರಿ : -ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಸೇನಾ ಕ್ಷೇತ್ರ ಹಾಗೂ ಕ್ರೀಡಾ ಪರಂಪರೆಗೆ ಹೆಸರಾಗಿದೆ.…

Read More

18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯಸ್ ಟ್ರೋಫಿಯನ್ನು ಗೆದ್ದ ಬೆಂಗಳೂರು ತಂಡಕ್ಕೆ ದೇಶದಾದ್ಯಂತ ಅಭಿಮಾನಿಗಳು ಶುಭಕೋರುತ್ತಾ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ವಾಟ್ಸಪ್, ಫೇಸ್ ಬುಕ್, ಇನ್ಸ್ಟಾ, ಯೂಟ್ಯೂಬ್ ಎಲ್ಲದರಲ್ಲೂ ಸಂಭ್ರಮವೋ ಸಂಭ್ರಮ. ಮಡಿಕೇರಿ ತಾಲೂಕಿನ ಹಾಕತ್ತೂರು ಪಂಚಾಯಿತಿಯ ಆರ್ಸಿಬಿ ಅಭಿಮಾನಿಗಳು ರಾತ್ರಿ ಸಂಭ್ರಮಿಸಿದಲ್ಲದೆ ಇಂದು ಹಾಕತ್ತೂರು ಪಂಚಾಯಿತಿಯ ಹಾಕತ್ತೂರು, ಬಿಳಿಗೇರಿ, ತೊಂಬತ್ತುಮನೆ, ಮೇಕೇರಿ ಹಾಗೂ ಕಗ್ಗೊಡ್ಲುವಿನ ಸರಕಾರಿ ಶಾಲೆಗಳಿಗೆ ತೆರಳಿ ಪ್ರಸಾದ್ ಪೂಜಾರಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮೈಸೂರು ಪಾಕ ವಿತರಿಸಿದರು. ಕಿರಣ್, ದಯಾ, ಪ್ರವೀಣ್, ಖಾದರ್, ಕರೀಂ, ಸುನೀಲ್, ಕೌಶಿಕ್ ಮುಂತಾದವರು ಇದ್ದರು.

Read More