- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
Author: Kodagu-admin
ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್‍ಪೋರ್ಸ್ ಸಮಿತಿ ಸಭೆ ***************************************************************** ಮಡಿಕೇರಿ :-ಈಗಾಗಲೇ ಮುಂಗಾರು ಆರಂಭವಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದ್ದಾರೆ. ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ಸೋಮವಾರ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆಚ್ಚಿನ ಮಳೆಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಉದಾರವಾಗಿ ವರದಿ ನೀಡಿ ಮನೆ ಪರಿಹಾರ ಹಣ ಬಿಡುಗಡೆಗೆ ಕ್ರಮವಹಿಸುವಂತೆ ಕಂದಾಯ, ಪಂಚಾಯತ್ ರಾಜ್, ಲೋಕೋಪಯೋಗಿ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು. ಸಂಪೂರ್ಣ ಮನೆ ಹಾನಿಯಾದ ಕುಟುಂಬಗಳಿಗೆ ಸರ್ಕಾರ ನೀಡುವುದು ರೂ.1.20 ಲಕ್ಷ ರೂ. ಮಾತ್ರ. ಆದ್ದರಿಂದ ಮನೆ ಹಾನಿ ವರದಿ ನೀಡುವಾಗ ಅಧಿಕಾರಿಗಳು ಉದಾರತೆ ತೋರಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಹಾಗೂ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.…
********************* ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ”ಯು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದು, ಅವರನ್ನು ಈ ವ್ಯಸನದಿಂದ ಮುಕ್ತರಾಗಲು ಸಮಾಜ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಸಲಹೆ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಬಿ.ಎಲ್. ಅವರು ವಿಶ್ವ ತಂಬಾಕು ರಹಿತ ದಿನಾಚರಣೆಯ ವಿಶೇಷತೆಯ ಮತ್ತು ರಾಷ್ಟ್ರೀಯ…
ಶಾಸಕರ ಮನೆಯಲ್ಲಿ ವಿರಾಜಪೇಟೆ ಪೌರಕಾರ್ಮಿಕರಿಗೆ ಔತಣ ಕೂಟ – ಖುದ್ದು ಶಾಸಕರೇ ಪೌರಕಾರ್ಮಿಕರಿಗೆ ಆಹಾರ ಬಡಿಸಿದ್ದು ಶಾಸಕರ ಸೌಜನ್ಯಕ್ಕೆ ಸಾಕ್ಷಿಯಂತಿತ್ತು ವಿರಾಜಪೇಟೆಯ ಶಾಸಕ ಪೊನ್ನನ್ನ ಮನೆಯಲ್ಲಿ, ವಿರಾಜಪೇಟೆ ಪುರಸಭೆಯ ಪೌರಕಾರ್ಮಿಕರಿಗಾಗಿ ಏರ್ಪಡಿಸಿದ ವಿಶೇಷ ಔತಣಕೂಟದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಆತಿಥ್ಯವಹಿಸಿ ಭಾಗವಹಿಸಿದರು. ಪೌರ ಕಾರ್ಮಿಕರ ಕಷ್ಟ ಸುಖಗಳನ್ನು ವಿಚಾರಿಸುತ್ತ ಅವರ ಅವಾಲುಗಳನ್ನು ಆಲಿಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಪುರಸಭೆ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಆರೋಗ್ಯದಿಂದಿರಲು ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪ್ರದೇಶಗಳು ಸ್ವಚ್ಛತೆಯಿಂದ ಇರಲು ಈ ಪೌರಕಾರ್ಮಿಕರ ಕೊಡುಗೆ ಬಹುದೊಡ್ಡದಾಗಿದೆ. ಅವರುಗಳ ಕೊಡುಗೆಯನ್ನು ಸದಾ ಸ್ಮರಿಸುತ್ತಾ, ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಪುರಸಭೆ ವ್ಯಾಪ್ತಿಯ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಕೆಲಸವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮಾನ್ಯ ಶಾಸಕರು, ಪೌರಕಾರ್ಮಿಕರ ಹಿತದೃಷ್ಟಿಯಿಂದ ತಾನು ಸರ್ಕಾರದೊಂದಿಗೆ ಚರ್ಚಿಸಿ ಹಲವಾರು ಕಾರ್ಯಕ್ರಮಗಳನ್ನು ತರಲು ಬದ್ಧನಾಗಿದ್ದು, ಪೌರ ಕಾರ್ಮಿಕರು ಸಹ ಅನಾವಶ್ಯಕ ಮಾತುಗಳಿಗೆ ಕಿವಿಗೊಡದೆ, ಪುರಸಭೆ…
*ಇಂದಿನಿಂದ ಶಾಲೆಗಳು ಆರಂಭ* *ಹೂಹು ಚಾಕ್ಲೆಟ್ ನೀಡಿ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು* ಎರಡು ತಿಂಗಳ ಬರ್ಜರಿ ರಜೆಯ ನಂತರ ಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕರು ಹೂಹು ಹಾಗೂ ಮಿಠಾಯಿ ನೀಡಿ ಸ್ವಾಗತಿಸಿದರು. ಮಡಿಕೇರಿಯ ಬ್ಲಾಸಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೊದಲ ದಿನವೇ ಉತ್ಸಾಹದಿಂದ ಬಂದ ವಿದ್ಯಾರ್ಥಿಗಳನ್ನು ದ್ವಾರದ ಬಳಿಯೇ ನಿಂತು ಎಲ್ಲಾ ವಿದ್ಯಾರ್ಥಿಗಳಿಗೂ ಚಾಕ್ಲೆಟ್ ಹಾಗೂ ಹೂಹೂ ನೀಡಿ ಮುಖ್ಯ ಶಿಕ್ಷಕಿ ಅನುಸೂಯ ಸ್ವಾಗತಿಸಿದರು.
ಇಂದಿನಿಂದ ಶಾಲೆಗಳು ಆರಂಭ ಹೂಹು ಚಾಕ್ಲೆಟ್ ನೀಡಿ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು ಎರಡು ತಿಂಗಳ ಬರ್ಜರಿ ರಜೆಯ ನಂತರ ಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕರು ಹೂಹು ಹಾಗೂ ಮಿಠಾಯಿ ನೀಡಿ ಸ್ವಾಗತಿಸಿದರು. ಮಡಿಕೇರಿಯ ಬ್ಲಾಸಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೊದಲ ದಿನವೇ ಉತ್ಸಾಹದಿಂದ ಬಂದ ವಿದ್ಯಾರ್ಥಿಗಳನ್ನು ದ್ವಾರದ ಬಳಿಯೇ ನಿಂತು ಎಲ್ಲಾ ವಿದ್ಯಾರ್ಥಿಗಳಿಗೂ ಚಾಕ್ಲೆಟ್ ಹಾಗೂ ಹೂಹೂ ನೀಡಿ ಮುಖ್ಯ ಶಿಕ್ಷಕಿ ಅನುಸೂಯ ಸ್ವಾಗತಿಸಿದರು. IMG_2397
ಮಡಿಕೇರಿ: ಜಿಲ್ಲೆಯಲ್ಲಿ ಅವಧಿಗೂ ಮೊದಲೇ ಮುಂಗಾರು ಪ್ರವೇಶಿಸಿದ್ದು,ಮಳೆಗಾಲದಲ್ಲಿ ಗ್ರಾಮದ ಜನರ ಸಂರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ ಕರೆ ನೀಡಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದವಾಡ ಬೊಳಿಬಾಣೆ,ಕೊಟ್ಟಮುಡಿ, ವಾಟೆಕಾಡು,ಬಲಮುರಿ ಗ್ರಾಮದಲ್ಲಿ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗುವುದಿರಂದ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲು ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಪತ್ತು ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ತುರ್ತು ಸಂದರ್ಭಗಳಲ್ಲಿ ಪಂಚಾಯಿತಿ ಸದಸ್ಯನ್ನೊಳಗೊಂಡು ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಿ,ಸಮಿತಿಗಳು ಕಾರ್ಯಪ್ರವೃತರಾಗಿ ತುರ್ತು ಸಂದರ್ಭಗಳಲ್ಲಿ ಆಯಾ ವಾರ್ಡ್ ಮಟ್ಟದಲ್ಲಿ ಬೇಕಾದ ಕೆಲಸಗಳನ್ನು ಪರಿಹಾರ, ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪಂಚಾಯಿತಿ ವ್ಯಾಪ್ತಿಯ ಜನರ ಸಂರಕ್ಷಣೆ ಹಾಗೂ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ತೀವ್ರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಪರಿಹಾರೋಪಾಯಗಳನ್ನು ನೀಡಲು ಮಡಿಕೇರಿ ಕ್ಷೇತ್ರದ ಶಾಸಕಾರದ ಡಾ ಮಂತರ್ ಗೌಡ ಹಾಗೂ ಜಿಲ್ಲಾ ಉಸ್ತುವಾರಿ…
ವಿರಾಜಪೇಟೆ : ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ (ರಿ) ವತಿಯಿಂದ, ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರದ ಭಾಗವಾಗಿ, ವಿರಾಜಪೇಟೆಯ ಪೌರ ಸೇವಾ ನೌಕರರು, ವಿರಾಜಪೇಟೆಯ ಪುರಾಸಭೆ ಆವರಣದಲ್ಲಿ ಮುಷ್ಕರದಲ್ಲಿ ತೊಡಗಿದರು. ಪೌರ ಸೇವಾ ನೌಕರರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ. ವಿರಾಜಪೇಟೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮಾನ್ಯ ಶಾಸಕರು, ಪುರಸಭೆ ನೌಕರರನ್ನು ಮಾತನಾಡಿಸಿ ಅವರ ಬೇಡಿಕೆಗಳನ್ನು ಆಲಿಸಿದರು. ಬಳಿಕ ವಿರಾಜಪೇಟೆಯಲ್ಲಿ ತಾವು ಪುರಸಭೆ ನೌಕರರ ಬೇಡಿಕೆಗಳಿಗೆ ಈ ಹಿಂದೆ ಸ್ಪಂದಿಸಿರುವುದನ್ನು ನೆನಪಿಸಿದ ಮಾನ್ಯ ಶಾಸಕರು, ಪ್ರತಿಭಟನೆಯನ್ನು ಕೈ ಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಮೊದಲಿಗೆ ಪುರಸಭೆ ನೌಕರರ ಸಂಘದ ಪದಾಧಿಕಾರಿಯೊಬ್ಬರು ಇದಕ್ಕೆ ಒಪ್ಪದಿದ್ದಾಗ, ಮಾನ್ಯ ಶಾಸಕರು ನೈರ್ಮಲ್ಯ ವಿಷಯದಲ್ಲಿ ಯಾವುದೇ ರಾಜಿ ಮಾಡಲು ಸಾಧ್ಯ ಇಲ್ಲದಿರುವುದರಿಂದ ತಾವೇ ಖುದ್ದಾಗಿ ಸ್ವಚ್ಛತಾ ಕಾರ್ಯ ಮಾಡುವುದಾಗಿ ತಿಳಿಸಿ, ಸ್ವತ ಸ್ವಚ್ಛತ ವಾಹನದ ಚಾಲಕ ಸ್ಥಾನದಲ್ಲಿ ಕುಳಿತುಕೊಂಡರು. ಶಾಸಕರ ಕಾರ್ಯ…
ಗೋಣಿಕೊಪ್ಪಲಿನ ಅತ್ತೂರಿನ ಮೂಲದವರಾದ ಪ್ರಸ್ತುತ ಮೈಸೂರಿನ ವಿಜಯನಗರದಲ್ಲಿ ವಾಸಿಸುವ ಕಡಿಯಮಾಡ ಅರುಣ್ ಅಚ್ಚಯ್ಯ ಮತ್ತು ಪ್ರಿಯಾ ದಂಪತಿಯ ಪುತ್ರಿ ಸಬ್ ಲೆಫ್ಟಿನೆಂಟ್ ಕಡಿಯಮಾಡ ರಿಯಾ ಅಚ್ಚಯ್ಯ, ಅವರು ಮೇ 31, 2025 ರಂದು ಭಾರತೀಯ ನೌಕಾಪಡೆಗೆ ಸಬ್ ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡರು.
ಕಳಪೆ ತಡೆಗೋಡೆ ವೀಕ್ಷಿಸಿದ ಶಾಸಕ ಪೊನ್ನಣ್ಣ: ತನಿಕೆಗೆ ಆದೇಶ ವಿರಾಜಪೇಟೆಯ ಅಂಬೇಡ್ಕರ್ ಭವನ ಆವರಣಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ಮಾಡಿ ಪರಿಶೀಲಿಸಿದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಂಬೇಡ್ಕರ್ ಭವನದ ಬಳಿಯಲ್ಲೇ ಇರುವ ತಡೆಗೋಡೆಯು ಕುಸಿದು ಬಿದ್ದಿತ್ತು. ಈ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳನ್ನು ಕರೆಯಿಸಿ ಈ ಕಾಮಗಾರಿಯ ಬಗ್ಗೆ ವಿವರಣೆಯನ್ನು ಕೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ದೊರಕದಿದ್ದರಿಂದ ಈ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದರಲ್ಲದೆ, ಈ ತಡೆಗೋಡೆ ಕಾಮಗಾರಿಯ ಸಂಪೂರ್ಣ ವಿವರದ ವರದಿಯನ್ನು ಕೂಡಲೇ ತನಗೆ ನೀಡಬೇಕೆಂದು ಸೂಚಿಸಿದ ಮಾನ್ಯ ಶಾಸಕರು, ಇದರ ದುರಸ್ತಿ ಕಾರ್ಯವನ್ನು ಗುತ್ತಿಗೆದಾರ ಕೂಡಲೇ ಮುಗಿಸಿ ತನಗೆ ತಿಳಿಸಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಪುರಸಭೆ ಅಧ್ಯಕ್ಷರು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
ಮಳೆಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ಪೊನ್ನನ್ನ. ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಇತ್ತೀಚೆಗೆ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಮರ ಬಿದ್ದು ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಪರಿಹಾರ ವಿತರಿಸಿದರು. ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತನ್ನ ಮನೆಯ ಎದುರು ಕೆಲಸ ಮಾಡುತ್ತಿದ್ದ ಸಂದರ್ಭ, ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿತ್ತು. ಪರಿಹಾರ ವಿತರಿಸಿ ಮನೆಯವರಿಗೆ ಸಾಂತ್ವನ ಹೇಳಿದರು. ಮೃತ ಗೌರಿಯವರು ಇಬ್ಬರು ಮಕ್ಕಳು ಅಗಲಿದ್ದು, ಶಾಸಕರ ಶಿಫಾರಸ್ಸಿನ ಮೇರೆಗೆ, ಮೃತರ ವಾರಿಸುದಾರರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ ಮಂಜೂರಾದ ₹ 5 ಲಕ್ಷದ ಹಕ್ಕು ಪತ್ರವನ್ನು ಶಾಸಕ ಪೊನ್ನಣ್ಣ ನೀಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ತಾಲೂಕು ದಂಡಾಧಿಕಾರಿಗಳು, ಆರ್ ಜಿ ಗ್ರಾಮ ಪಂಚಾಯತ್ ಅಧ್ಯಕ್ಷರ ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮತ್ತು ಕಾಂಗ್ರೆಸ್ ಮುಖಂಡರು…
