Author: Kodagu-admin

ಮಡಿಕೇರಿ : ಸೋಮವಾರಪೇಟೆ ಹೋಬಳಿಯ ಕುಂಬೂರು ಹಾಗೂ ಜಂಬೂರು ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳನ್ನು  ಉಪವಿಭಾಗಾಧಿಕಾರಿವಿನಾಯಕ ನರ್ವಾಡೆ  ಪರಿಶೀಲನೆ ನಡೆಸಿದರು.

Read More

ಬೂಕರ್ ವಿಜೇತೆ ದೀಪಾ ಬಸ್ತಿ ಅವರನ್ನು ಭೇಟಿ ಮಡಿ ಅಭಿನಂದನೆ ಸಲ್ಲಿಸಿದ ಶಾಸಕ ಡಾ. ಮಂತರ್ ಗೌಡ ಅಂತರರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ವಿಜೇತೆ ಕೊಡುಗುಮೂಲದ ದೀಪಾ ಬಸ್ತಿ ಮನೆಗೆ ಭೇಟಿ ಮಾಡಿ ಶಾಸಕಮಂತರ್ ಅಭಿನಂದನೆ ಸಲ್ಲಿಸಿದರು ಬಾನು ಮುಷ್ತಾಕ್ ರವರ ಕನ್ನಡದ :ಎದೆಯ ಹಣತೆ’ ಎಂಬ ಕೃತಿಯನ್ನು ‘Heart Lamp’ ಎಂಬ ಹೆಸರಿನ ಮೂಲಕ ಇಂಗ್ಲಿಷ್ ಗೆ ಅನುವಾದಿಸಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕೊಡಗಿನ ಹೆಮ್ಮೆಯ ಸುಪುತ್ರಿ ದೀಪಾ ಬಸ್ತಿ ರವರನ್ನು ಮಡಿಕೇರಿಯ ನಿವಾಸದಲ್ಲಿ ಶಾಸಕ ಡಾ.ಮಂತರ್ ಗೌಡ ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಿದರು. ದೀಪಾ ಬಸ್ತಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಶಾಸಕ ಡಾ.ಮಂತರ್ ಗೌಡ ರವರು ಕೃತಿ ಬಗೆಗೆ ಮಾಹಿತಿಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದೀಪಾ ಭಾಸ್ತಿ ತಂದೆ ಪ್ರಕಾಶ್ ಭಾಸ್ತಿ, ತಾಯಿ ಸುಧಾ, ಪತಿ ನಾಣಯ್ಯ, ಕೊಡುಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್ ಟಿ ಉಪಸ್ಥಿತರಿದ್ದರು.

Read More

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ  ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 44.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.27 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 737.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 333.29 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 126.78 ಮಿ.ಮೀ. ಕಳೆದ ವರ್ಷ ಇದೇ ದಿನ 4.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1063.05 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 464.30 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 41.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 756.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 264 ಮಿ.ಮೀ. ಮಳೆಯಾಗಿತ್ತು. ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 685.04…

Read More

ಅನಾರೋಗ್ಯದಿಂದ ಬಳಲುತ್ತಿದ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹಳ್ಳಿಗಟ್ಟು ಗ್ರಾಮದ ಪ್ರಕೃತಿ ನಗರದಲ್ಲಿ ಇಂದು ಮುಂಜಾನೆ 2.30 ರಲ್ಲಿ ನಡೆದಿದೆ. ಇಲ್ಲಿನ ತೂಚಮಕೇರಿ ಗ್ರಾಮದ ಪೆಮ್ಮಂಡ ಕಾಶಿ 78 (ವರ್ಷ) ಎಂಬುವವರು ಇಂದು ಡೆತ್ ನೋಟ್ ಬರೆದು ತಮ್ಮ ಮನೆಯ ಮುಂಭಾಗದಲ್ಲಿರುವ ಗೋಡೌನ್ನ ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ ಕಾರಣ ಎರಡು ವರ್ಷದ ಹಿಂದೆಯೇ ಆತ್ಮಹತ್ಯೆ ಮಾಡಲು ತೆರೆದ ಬಾವಿಗೆ ಹಾರಿ ಪ್ರಯತ್ನ ಪಟ್ಟಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಬಳಿಕ ಮೃತದೇಹವನ್ನು ಗೋಣಿಕೊಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಕ್ರವಾರ ರಾತ್ರಿ ಸುರಿದ ಗಾಳಿ ಮಳೆಗೆ 33 ಕೆವಿ ವಿದ್ಯುತ್ ಕಂಬ ಬಿದ್ದ ಪರಿಣಾಮ ರಾತ್ರಿಯೇ ವಿದ್ಯುತ್ ಇಲಾಖೆ ಸಿಬ್ಬಂದಿಗಳೂ ಹಾಗೂ ಸ್ಥಳೀಯರ ಸಹಕಾರದಿಂದ ತಡರಾತ್ರಿಯೇ ಸರಿಪಡಿಸಲಾಯಿತು.

Read More

ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ..! ದೇವಜನ ಜಗದೀಶ್(56) ಮೃತ ದುರ್ಧೈವಿ ಮಡಿಕೇರಿ ಮಹಿಳಾ ಸಮಾಜದಲ್ಲಿ ನಡೆದ ಘಟನೆ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟ ಜಗದೀಶ್ ಆರ್ಥಿಕ, ಹಾಗೂ ಮೈಕ್ರೋ ಫೈನಾನ್ಸ್ ಕಿರಿಕಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಸ್ಥಳಕ್ಕೆ ಮಡಿಕೇರಿ ಪೊಲೀಸರ ಭೇಟಿ ಪರಿಶೀಲನೆ

Read More

ಪೊನ್ನಂಪೇಟೆ ಸಿಐಟಿ ಕಾಲೇಜಿನ ವಿದ್ಯಾರ್ಥಿ ಪ್ರಿಯಾಪಟ್ಟಣದ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಎರಡು ದಿನದ ಹಿಂದೆಯಷ್ಟೆ ರಾಯಚೂರು ಮೂಲದ ವಿದ್ಯಾರ್ಥಿನಿ ಇದೇ ಕಾಲೇಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.  ಪೊನ್ನಂಪೇಟಿಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ ಇ ಎ ಐ ಅಂಡ್ ಡಿ ಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್(20) ಎಂಬಾತನು ಇಂದು ರಾತ್ರಿ ಎಂಟುವರೆ ಗಂಟೆ ಸಮಯದಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಮೃತನ ಮನೆಗೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊನ್ನಂಪೇಟೆಯ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಮೊನ್ನೆ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ, ತನಗೆ ಮುಂದೆ ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಬೆನ್ನೆಲ್ಲೇ, ಇಂದು ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

ಮಡಿಕೇರಿ : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ : ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಶಾಲನಗರ ಹೋಬಳಿ 6ನೇ ಹೊಸಕೋಟೆ ಗ್ರಾಮದ ಹೆಚ್ ಜೆ ಶಾಂತರಾಜು ರವರ ವಾಸದ ಮನೆಯ ಗೋಡೆ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

Read More

ಮಡಿಕೇರಿ : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಸ್ಥಳಾಂತರ ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಪ್ರವಾಹ ಪೀಡಿತ ಪ್ರದೇಶದ ಕುಟುಂಬಗಳಿಗೆ ಪ್ರತೀ ವರ್ಷ ನೋಟೀಸು ನೀಡುವುದು ಸರಿಯಲ್ಲ. ಆದ್ದರಿಂದ ಪ್ರವಾಹ ಪೀಡಿತ ಕುಟುಂಬಗಳಿಗೆ ಹತ್ತಿರದಲ್ಲಿ ನಿವೇಶನ ಒದಗಿಸಿ ಮನೆ ನಿರ್ಮಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳ ಪಟ್ಟಿ ಮಾಡುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಬಾರಿ ಮುಂಗಾರು ಮೇ ತಿಂಗಳಲ್ಲಿಯೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಆದ್ದರಿಂದ…

Read More