- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
Author: Kodagu-admin
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665. ಮಡಿಕೇರಿ ತಾಲ್ಲೂಕಿನ ಮಡಿಕೇರಿ, ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ಚೈತ್ರ 9449598603, ತಾಳತ್‍ಮನೆ ಹೇಮಂತ್ ರಾಜ್ 9449598604, ಮೂರ್ನಾಡು ಶಾಖೆಗೆ ತೇಜ…
ಮಡಿಕೇರಿ : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಜೂನ್ ಮತ್ತು ಜುಲೈ ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಜೂನ್ 17 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್, 12 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9740982585,…
ಗುರುವಾರ ಸುರಿದ ಗಾಳಿ ಮಳೆಗೆ ಅತ್ತೂರ್ ನಲ್ಲೂರು ಗ್ರಾಮದ ಕೆಂಪಮ್ಮಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ : ಜನವಿರೋಧಿ ಆಡಳಿತ ನಡೆಸುತ್ತಿರುವ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಬಡವರ ಆರೋಗ್ಯದ ಮೇಲೂ ಸವಾರಿ ಮಾಡುತ್ತಿದ್ದು, ದೇಶದ ಜನಪ್ರಿಯ ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಮುಚ್ಚುವಂತೆ ಆದೇಶ ಹೊರಡಿಸಿರುವುದು ಸಿದ್ದರಾಮಯ್ಯನವರ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿ.ಕೆ ಲೋಕೇಶ್ ಆರೋಪಿಸಿದ್ದಾರೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭ ಮಾತನಾಡಿದ ಅವರು, ರಾಜ್ಯದ ರಸ್ತೆಗಳೆಲ್ಲವೂ ಹದಗೆಟ್ಟಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹಳ್ಳ ಹಿಡಿದಿದೆ. ಈ ಸಂದರ್ಭ ಸಾಧನೆ ಸಮಾವೇಶ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿಲುವಿಗೆ ಧಿಕ್ಕಾರವಿದೆ ಎಂದು ಕಿಡಿಕಾರಿದರು. ಜನ ಸಾಮಾನ್ಯರ ಮೇಲೆ ಪದೇ ಪದೇ ಸವಾರಿ ಮಾಡುತ್ತಿರುವ ರಾಜ್ಯ ಸರ್ಕಾರ ಸೇಡಿನ ರಾಜಕೀಯ ಮಾಡುವ ದುರುದ್ದೇಶದಿಂದಾಗಿ, ಬಡವರಿಗೆ ಕಡಿಮೆ ದರಕ್ಕೆ ದೊರೆಯುತ್ತಿರುವ ಜನಔಷಧಿ ಕೇಂದ್ರ ಮುಚ್ಚುವ ನಿರ್ಧಾರಕ್ಕೆ ಬಂದಿದೆ. ರಾಜ್ಯದ ಪ್ರತಿಯೊಬ್ಬರು ಕೂಡಾ ಇದರ ವಿರುದ್ಧ ಧ್ವನಿ ಎತ್ತುತಿದ್ದಾರೆ. ಹಾಗಾಗಿ ಕೂಡಲೇ ಜನಔಷದಿ ಕೇಂದ್ರಗಳನ್ನು ಮುಚ್ಚುವಂತೆ ಹೊರಡಿಸಿರುವ ಆದೇಶವನ್ನು…
ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಶುಕ್ರವಾರ ನಡೆಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಕಾರ್ಯಕ್ರಮ ಉದ್ಘಾಟಿಸಿ, ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಚಟುವಟಿಕೆಗಳಲ್ಲಿನ ಪ್ರದರ್ಶನದಲ್ಲಿ ಮಕ್ಕಳ ಏಕಾಗ್ರತೆ ತುಂಬಾ ಉತ್ತಮವಾಗಿದ್ದು, ತಮ್ಮ ಎಲ್ಲಾ ಕಲಿಕಾ ಚಟುವಟಿಕೆಗಳಲ್ಲಿ ಇದನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕøತರಾದ ರಾಣಿ ಮಾಚಯ್ಯ ಅವರು ಶಿಬಿರಾರ್ಥಿಗಳ ಯೋಗ, ನೃತ್ಯ ಪ್ರದರ್ಶನವನ್ನು ವೀಕ್ಷಿಸಿ ಮಕ್ಕಳು ವೇದಿಕೆಯನ್ನು ಉತ್ತಮವಾಗಿ ಸದುಪಯೋಗಪಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿಯೂ ಆಸಕ್ತಿಯನು ಅನುಪಾಲನೆ ಮಾಡುವಂತೆ ಸಲಹೆ ಮಾಡಿದರು. ನಗರ ಪ್ರಾಧಿಕಾರ ಯೋಜನೆಯ ಸದಸ್ಯರಾದ ಮಿನಾಜ್ ಪ್ರವೀಣ್ ಅವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮಡಿಕೇರಿ: ವಿದ್ಯುತ್ ಕಂಬ ಬಿದ್ದು ಹಸುವೊಂದು ಸಾವನ್ನಪ್ಪಿದ ಧಾರುಣ ಘಟನೆ ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಎಂ ಟಿ ರಘು ತಮ್ಮಯ್ಯ ರವರಿಗೆ ಸೇರಿದ ಹಸು ಇದಾಗಿದ್ದು , ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಭಾರೀ ಗಾಳಿ ಮಳೆಯಿಂದ ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಶ್ರೀಮತಿ ಗೌರಮ್ಮ ಎಂಬುವವರ ವಾಸದ ಮನೆಯ ಗೋಡೆ ಕುಸಿದಿರುವುದು.
ಮಡಿಕೇರಿ : ಐಪಿಎಲ್ 2025ರ ಕ್ವಾಲಿಫೈಯರ್ 1ರಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲು ಅದ್ಭುತ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್ಗಳ ಸುಲಭ ಜಯ ಸಾಧಿಸಿದೆ. ಈ ಜಯದ ಮೂಲಕ 8 ವರ್ಷಗಳ ಬಳಿಕ ಐಪಿಎಲ್ನಲ್ಲಿ ಫೈನಲ್ ಪ್ರವೇಶಿಸಿದೆ. ಮೊದಲು ಪ್ರಚಂಡ ಬೌಲಿಂಗ್ ದಾಳಿ ನಡೆಸಿ ಪಂಜಾಬ್ ಕಿಂಗ್ಸ್ ತಂಡವನ್ನ ಕೇವಲ 101ಕ್ಕೆ ಆಲೌಟ್ ಮಾಡಿದ ಆರ್ಸಿಬಿ, 102 ರನ್ಗಳ ಸುಲಭದ ಗುರಿಯನ್ನ ಕೇವಲ 10 ಓವರ್ಗಳಲ್ಲಿ ತಲುಪುವ ಮೂಲಕ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಮಡಿಕೇರಿ : ಕರಿಕೆ ಗ್ರಾಮದ ಕರಿಂಬಳಪು ಹೊಳೆಯ ತೂಗು ಸೇತುವೆ ಮುರಿದು ಹೋಗಿದ್ದು, ಜನಸಾಮಾನ್ಯರು ಸಂಪರ್ಕ ಸೇತುವೆ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ . ಮಾಹಿತಿ ಇದ್ದರೂ ಇಲ್ಲಿಯ ತನಕ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸ್ಪಂದಿಸಲಿಲ್ಲ ಎಂದು ಆರೋಪಿಸಿರುವ ಸ್ಥಳೀಯ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಲ್ಲೇ ಸೇತುವೆಯನ್ನು ನಿರ್ಮಿಸಿದ್ದಾರೆ. ಇನ್ನೇನೂ ಕೆಲವೇ ದಿನಗಳಲ್ಲಿ ಶಾಲೆ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ತಾತ್ಕಾಲಿಕ ತೂಗು ಸೇತುವೆಯನ್ನು ನಿರ್ಮಿಸಿದ್ದು, ಇನ್ನಾದರೂ ಇತ್ತ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಸ್ವತವಾಗಿ ವಾಹನಗಳು ಓಡಾಡುವಂತಹ, ಸಾರ್ವಜನಿಕರಿಗೆ ಅನುಕೂಲವಾಗುವಂತಹ ಸೇತುವೆ ನಿರ್ಮಿಸಿಕೊಡಬೇಕೆಂಬುದು ಇಲ್ಲಿನ ನಾಗರಿಕರ ಆಗ್ರಹವಾಗಿದೆ.
