- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
Author: Kodagu-admin
ಮಡಿಕೇರಿ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥ ನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್(ಬಿವಿಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್‍ಗಳ ಎಸ್‍ಇಪಿ ಪದ್ಧತಿ) ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‍ಲೈನ್(ಯುಯುಸಿಎಂಎಸ್) ಮೂಲಕ ಜೂನ್, 10 ರವರೆಗೆ ಅರ್ಜಿ ಸಲ್ಲಿಸಬಹುದು. ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸದ htts://uucms.karnataka.gov.in ಅಥವಾ hಣಣಠಿs://https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕಾರ್ಯಾಲಯದ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ನ್ನು ಸಂಪರ್ಕಿಸಬಹುದು ಎಂದು…
ಮಡಿಕೇರಿ : ಅಮ್ಮತ್ತಿ ಹೋಬಳಿ ಚೆನ್ನಯ್ಯನ ಕೋಟೆ ಗ್ರಾಮದ ಎಚ್ ಸಿ ಚಂದ್ರನವರ ವಾಸದ ಮನೆಯ ಹಿಂಬದಿಯ ಗೋಡೆ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಕುಸಿದು ಮನೆಗೆ ಭಾಗಶ ಹಾನಿಯಾಗಿರುತ್ತದೆ.
ಮಡಿಕೇರಿ : ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ. 1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ. ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ…
ಉಪ ವಿಭಾಗಾಧಿಕಾರಿಗಳು ಭಾಗಮಂಡಲ ಹೋಬಳಿಯ ಪ್ರವಾಹ ಬರುವ ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು ಹಾಗೂ ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಯನ್ನು ಪರಿಶೀಲಿಸಿದರು ಮತ್ತು ಮಳೆಗಾಲದಲ್ಲಿ ಮುಂಜಾಗುರುತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಗ್ರಾಮದ ಬಾಲಕರ ಭವನ ಭಾಗಮಂಡಲ ಗ್ರಾಮದ ಐಟಿಐ ಕಾಲೇಜು ಹಾಗೂ ಭಾಗಮಂಡಲ ಗ್ರಾಮದ ಕಾಶಿ ಮಠ ದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಹಾಜರಿದ್ದರು. *ಕೊಡಗು ನ್ಯೂಸ್*
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಭಾಗಮಂಡಲ ಹೋಬಳಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ : ಉಪ ವಿಭಾಗಾಧಿಕಾರಿಗಳು ಭಾಗಮಂಡಲ ಹೋಬಳಿಯ ಪ್ರವಾಹ ಬರುವ ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು ಹಾಗೂ ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಯನ್ನು ಪರಿಶೀಲಿಸಿದರು ಮತ್ತು ಮಳೆಗಾಲದಲ್ಲಿ ಮುಂಜಾಗುರುತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಗ್ರಾಮದ ಬಾಲಕರ ಭವನ ಭಾಗಮಂಡಲ ಗ್ರಾಮದ ಐಟಿಐ ಕಾಲೇಜು ಹಾಗೂ ಭಾಗಮಂಡಲ ಗ್ರಾಮದ ಕಾಶಿ ಮಠ ದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಹಾಜರಿದ್ದರು.
ಮಡಿಕೇರಿ : ಕುಶಾಲನಗರ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ನಿವಾಸಿಯಾದ ಲೀಲಾವತಿ ಕೋಂ ರಾಜನ್ ರವರ ಮನೆ ಮಳೆಯಿಂದ ಹಾನಿಯಾಗಿದ್ದು ಮಾನ್ಯ ಕುಶಾಲನಗರ ತಹಸೀಲ್ದಾರ್ ರವರು ಫುಡ್ ಕಿಟ್ ವಿತರಣೆ ಮಾಡಿರುತ್ತಾರೆ. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹೋಬಳಿ ದೊಡ್ಡಹನಕೋಡು ಗ್ರಾಮದ ನಿವಾಸಿಯಾದ ಪಾರ್ವತಿ ಕೊಂ ರುದ್ರಯ್ಯ ರವರ ಮನೆ ಮಳೆಯಿಂದ ಹಾನಿಯಾಗಿದ್ದು ಮಾನ್ಯ ಸೋಮವಾರಪೇಟೆ ತಹಸೀಲ್ದಾರ್ ರವರು ಫುಡ್ ಕಿಟ್ ವಿತರಣೆ ಮಾಡಿರುತ್ತಾರೆ.
ಮಡಿಕೇರಿ : ದುಬಾರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಮಾಡಿದ್ದಾರೆ. ದುಬಾರೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಸಾಕಾನೆ ಶಿಬಿರಕ್ಕೆ ಪ್ರವಾಸಿಗರನ್ನು ದೋಣಿ ಮುಖಾಂತರ ಕರೆದೊಯ್ಯುವುದು ಅಪಾಯಕಾರಿ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಡಿಕೇರಿ : ಕೊಡಗಿನಲ್ಲಿ ಮುಂದುವರೆದ ಧಾರಾಕಾರ ಮಳೆ ನದಿ ತೊರೆಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಜಲಪಾತಗಳು ಹಾಲ್ನೊರೆಯಂತೆ ಧುಮುಕುತ್ತಿದ್ದು ನೋಡುಗರ ಮನಸೆಳೆಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.94 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 75.58 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 50.05 ಮಿ.ಮೀ ಮಳೆಯಾಗಿದೆ. ಪೊನ್ನಂಪೇಟೆ ತಾಲ್ಲೂಕಿನಲ್ಲಿ 46.07 ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ 56.50 ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ 41.50 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 88.50, ನಾಪೋಕ್ಲು 79.20, ಸಂಪಾಜೆ 4, ಭಾಗಮಂಡಲ 130.60, ವಿರಾಜಪೇಟೆ 49.60, ಅಮ್ಮತ್ತಿ 50.50, ಹುದಿಕೇರಿ 49.30, ಶ್ರೀಮಂಗಲ 76, ಪೊನ್ನಂಪೇಟೆ 40, ಬಾಳೆಲೆ 19, ಸೋಮವಾರಪೇಟೆ 68, ಶನಿವಾರಸಂತೆ 50, ಶಾಂತಳ್ಳಿ 84, ಕೊಡ್ಲಿಪೇಟೆ 24, ಕುಶಾಲನಗರ 24, ಸುಂಟಿಕೊಪ್ಪ 59 ಮಿ.ಮೀ.ಮಳೆಯಾಗಿದೆ. ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ ******************************************* ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ…
*ಕಾಡಾನೆ ದಾಳಿಗೆ ಬಲಿಯಾಗಿದ್ದ ಅಣ್ಣಯ್ಯ ಕುಟುಂಬಸ್ಥರಿಗೆ ಐದು ಲಕ್ಷ ರೂ ಪರಿಹಾರ ಚೆಕ್ ಹಸ್ತಾಂತರ* ಇದೇ ತಿಂಗಳು 21ರಂದು ದೇವರಪುರ ಸಮೀಪದ ಆನೆತುಳಿತಗೊಳಕ್ಕಾಗಿ ಸಾವನ್ನಪ್ಪಿದ ಕೂಲಿ ಕಾರ್ಮಿಕ ಅಣ್ಣಯ್ಯ ಪರಿಹಾರದ ಚೆಕ್ ವಿತರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ,ಎ.ಸಿ.ಎಫ್ ಗೋಪಾಲ್ ಹಾಗೂ ಅರಣ್ಯ ಇಲಾಖಾಧಿಕಾರಿಗಳು, ಬಾನಂಡ ಪೃಥ್ವಿ ಭಾಗಿ. ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಮೃತ ಅಣ್ಣಯ್ಯ ಮನೆಗೆ ಭೇಟಿ ನೀಡಿ ಶೀಘ್ರದಲ್ಲಿ ಎರಡನೇ ಹಂತದ 15 ಲಕ್ಷದ ಚೆಕ್ ಹಸ್ತಾಂತರಿಸಲಿದ್ದಾರೆ.
