- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
Author: Kodagu-admin
ಮನೆಗೆ ಹಾನಿ ಶನಿವಾರಸಂತೆ ಹೋಬಳಿ ದೊಡ್ಡಹಣಕೊಡು ಗ್ರಾಮದ ನಿವಾಸಿಯಾದ ಶ್ರೀ ಸುಬ್ಬಯ್ಯ ಬಿನ್ ಈರಯ್ಯ ಎಂಬುವವರ ಮನೆಯ ಮೇಲೆ ಭಾರಿ ಮಳೆ ಗಾಳಿಯಿಂದ ಶೇ50 ಮನೆ ಹಾನಿಯಾಗಿದ್ದು ಗ್ರಾಮಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ರೆಡ್ ಅಲರ್ಟ್ ಘೋಷಣೆ* ಹವಾಮಾನ ಇಲಾಖೆಯಿಂದ ಮೇ 30 ರ ಬೆಳಿಗ್ಗೆ 8:30 ರವರೆಗೂ ರೆಡ್ ಅಲರ್ಟ್ ಗೋಷಿಸಲಾಗಿದೆ.
ಮಡಿಕೇರಿ : ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ, ಐಟಿಡಿಪಿ, ಕೌಶಲ್ಯಾಭಿವೃದ್ಧಿ ಹೀಗೆ ವಿವಿಧ ಇಲಾಖೆಗಳಿಗೆ ನಿವೇಶನ ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿವೇಶನ ಹಂಚಿಕೆ ಬಗ್ಗೆ ಮಾಹಿತಿ ನೀಡಿದರು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಸಂಬಂಧ ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಅವರು ಮಾಹಿತಿ ನೀಡಿದರು. ಬಸವ, ಅಂಬೇಡ್ಕರ್ ಹಾಗೂ ಇಂದಿರಾ ವಸತಿ ಯೋಜನೆ ಪ್ರಗತಿ ಸಾಧಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು. ಕುಡಿಯ ಸೇರಿದಂತೆ ಲೈನ್‍ಮನೆಗಳಲ್ಲಿ ವಾಸಿಸುವ ಎಲ್ಲಾ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳು ಆದಿವಾಸಿ ಜನರಿಗೆ ತಲುಪುವಂತಾಗಬೇಕು ಎಂದು ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು. ಗಿರಿಜನ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅವರ ಜೊತೆ…
ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ, ಸ್ನೇಹ ಕ್ಲೀನಿಕ್ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲ್ಲೂಕಿನ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಇಂದು “ಋತು ಸ್ರಾವ ನೈರ್ಮಲ್ಯ ನಿರ್ವಹಣೆ ದಿನ” ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಸ್ನೇಹ ಕ್ಲಿನಿಕ್‍ನ ಆಪ್ತ ಸಮಲೋಚಕರಾದ ಪ್ರಮೀಳ ಅವರು ಮಕ್ಕಳಿಗೆ ಋತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು. ಋತು ಸ್ರಾವದ ಸಮಯದಲ್ಲಿ ಮಕ್ಕಳ ದೇಹದಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಪ್ರತಿ ಹೆಣ್ಣು ಮಗುವು ಹುಟ್ಟುವಾಗಲೇ ಅಂಡಾಶಯದಲ್ಲಿ ನಿರ್ದಿಷ್ಟ ಸಂಖ್ಯೆಯ ಮೂಲ ಜೀವ ಕೋಶಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಮೊದಲ ಋತುಕಾಲವು ಹನ್ನೆರಡು ಮತ್ತು ಹದಿನೈದು ವಯಸ್ಸಿನ ನಡುವೆ ಆರಂಭವಾಗುತ್ತದೆ ಎಂದರು. ನರವ್ಯೂಹದ ಮತ್ತು ಭಾವನಾತ್ಮಕ ಬದಲಾವಣೆಗಳು, ಹೃದಯ ಸಂಬಂಧಿ ಬದಲಾವಣೆಗಳು, ಮಕ್ಕಳು ಈ ಸಮಯದಲ್ಲಿ ಸ್ವಚ್ಚತೆಯಿಂದ ಇರಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಋತು ಸ್ರಾವದ ಸಮಯದಲ್ಲಿ ಸಮಸ್ಯೆಗಳಿದ್ದಲ್ಲಿ ಗೊಂದಲಗಳಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ…
ಮಡಿಕೇರಿ : ವಿಶ್ವ ಪರಿಸರ ದಿನಾಚರಣೆ-2025 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾಮಕ್ಕಳಿಗಾಗಿ ಮೇ, 31 ರಂದು ಬೆಳಗ್ಗೆ 9.30 ಗಂಟೆಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಕೊಡವ ಸಮಾಜದ ಅಂಗ ಸಂಸ್ಥೆ, ಮಡಿಕೇರಿ ಇಲ್ಲಿ ಏರ್ಪಡಿಸಲಾಗಿದೆ. (ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು). ಈ ವರ್ಷದ ಘೋಷ ವಾಕ್ಯವು “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” “Ending Plastic Pollution Globally”ಆಗಿರುತ್ತದೆ. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ, ಆಸ್ಟಿನ್ ಕೆ.ಎ.ಯೋಜನಾ ಸಹಾಯಕರನ್ನು 7760738447, ರೇವತಿ ಟಿ.ಸಿ. ಡಾಟ ಎಂಟ್ರಿ ಆಪರೇಟರ್ 9741318237, ಆರ್ವಿನ್ ಆರ್. ಕ್ಷೇತ್ರ ಸಹಾಯಕ 6361713238 (ಕಚೇರಿ 08272-221855) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ), ಸ್ಥಳೀಯ ಸಾರ್ವಜನಿಕ ಶಿಕ್ಷಣ…
ಮಡಿಕೇರಿ : ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳ ಸಂಶೋಧನ ಕೇಂದ್ರಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ 29 ರಿಂದ ಜೂನ್ 12 ರವರೆಗೆ ಹಮ್ಮಿಕೊಳ್ಳಲಾಗಿದೆ. ಮೇ, 29 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ.
ಮಡಿಕೇರಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು. ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿರುವ ಸೂಚನೆಗಳ ಆಧಾರದಲ್ಲಿ ಶಾಲೆಗಳು ಪುನರರಾಂಭವಾಗಬೇಕಾಗಿದ್ದ ದಿನಾಂಕ 29.5.2025 ರಂದು ಮತ್ತು 30.05.2025 ರಂದು ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಎರಡು ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಬಂದನೆಗೆ ಒಳಪಟ್ಟು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ . ಆದರೆ sslc ಪರೀಕ್ಷೆ ಎರಡು ಈಗಾಗಲೇ ನಿಗಧಿಯಾಗಿರುವಂತೆ ನಡೆಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ
ಪೊನ್ನಂಪೇಟೆ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿತು. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್…
5 ಲಕ್ಷ ಪರಿಹಾರ ವಿತರಣೆ ಮರ ಬಿದ್ದು ಸಾವನ್ನಪ್ಪಿದ ಬಾಡಗ ಬಾಣಂಗಾಲ ಗ್ರಾಮದ ಶ್ರೀ ಪಿ ಸಿ ಬೆಳ್ಳಿಯಪ್ಪ ರವರಿಗೆ ಮಾನ್ಯ ಜಿಲ್ಲಾಧಿಕಾರಿಗಳು ರೂ. 05 ಲಕ್ಷ ಪರಿಹಾರದ ಆದೇಶ ಪ್ರತಿಯನ್ನು ನೀಡಿದರು.
