Author: Kodagu-admin

ಮಡಿಕೇರಿ  : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು. ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ…

Read More

ಮಡಿಕೇರಿ  : ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿರುವ ಸೂಚನೆಗಳ ಆಧಾರದಲ್ಲಿ ಶಾಲೆಗಳು ಪುನರರಾಂಭವಾಗಬೇಕಾಗಿದ್ದ ದಿನಾಂಕ 29.5.2025 ರಂದು ಮತ್ತು 30.05.2025 ರಂದು ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಎರಡು ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಬಂದನೆಗೆ ಒಳಪಟ್ಟು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ . ಆದರೆ sslc ಪರೀಕ್ಷೆ ಎರಡು ಈಗಾಗಲೇ ನಿಗಧಿಯಾಗಿರುವಂತೆ ನಡೆಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ

Read More

ಪೊನ್ನಂಪೇಟೆ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿತು. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್…

Read More

5 ಲಕ್ಷ ಪರಿಹಾರ ವಿತರಣೆ ಮರ ಬಿದ್ದು ಸಾವನ್ನಪ್ಪಿದ ಬಾಡಗ ಬಾಣಂಗಾಲ ಗ್ರಾಮದ ಶ್ರೀ ಪಿ ಸಿ ಬೆಳ್ಳಿಯಪ್ಪ ರವರಿಗೆ ಮಾನ್ಯ ಜಿಲ್ಲಾಧಿಕಾರಿಗಳು ರೂ. 05 ಲಕ್ಷ ಪರಿಹಾರದ ಆದೇಶ ಪ್ರತಿಯನ್ನು ನೀಡಿದರು.

Read More

ಮಡಿಕೇರಿ : ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು. ಮಳೆಯಿಂದ ಉಂಟಾಗುವ ಹಾನಿ ಸಂಬಂಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸ್ಆಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ವಾಯ್ಸ್ ರೆಕಾಡರ್್ ಸಹಿತ ಮಾಹಿತಿ…

Read More

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2840.55 ಅಡಿಗಳು. ಕಳೆದ ವರ್ಷ ಇದೇ ದಿನ 2824.12 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 40.40 ಮಿ.ಮೀ., ಇಂದಿನ ನೀರಿನ ಒಳಹರಿವು 3852 ಕ್ಯುಸೆಕ್, ಕಳೆದ ವರ್ಷ ಇದೇ ದಿನ 230 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

Read More

ಮಡಿಕೇರಿ : ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 62.67 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.83 ಮಿ.ಮೀ. , ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.30 ಮಿ.ಮೀ. ಮಳೆಯಾಗಿದೆ., ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.27 ಮಿ.ಮೀ. ಮಳೆಯಾಗಿದೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 121.45 ಮಿ.ಮೀ. ಮಳೆಯಾಗಿದೆ, ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.50 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 82, ನಾಪೋಕ್ಲು 66.80, ಸಂಪಾಜೆ 11, ಭಾಗಮಂಡಲ 103.50, ವಿರಾಜಪೇಟೆ 33.60, ಅಮ್ಮತ್ತಿ 35, ಹುದಿಕೇರಿ 66, ಶ್ರೀಮಂಗಲ 61, ಪೊನ್ನಂಪೇಟೆ 24, ಬಾಳೆಲೆ 18.07, ಸೋಮವಾರಪೇಟೆ 124, ಶನಿವಾರಸಂತೆ 124, ಶಾಂತಳ್ಳಿ 175, ಕೊಡ್ಲಿಪೇಟೆ 62.80, ಕುಶಾಲನಗರ 26, ಸುಂಟಿಕೊಪ್ಪ 73 ಮಿ.ಮೀ.ಮಳೆಯಾಗಿದೆ.

Read More

ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಾಕತೂರು, ಮೇಕೇರಿ ಹಾಗೂ ಹೊಸ್ಕೇರಿಯಲ್ಲಿ ನಡೆದ ಸರಣಿ ಕಳ್ಳತನದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸುವಲ್ಲಿ ಯಶಸ್ವುಯಾಗಿದ್ದು ಬಂಧಿತರನ್ನು ಸುಂಟಿಕೊಪ್ಪ ನಿವಾಸಿ ಮಹೇಶ್, ಮದೆ ಗ್ರಾಮದ ವಿನೋದ್ ಹಾಗೂ ಗಾಳಿಬೀಡು ಗ್ರಾಮದ ರಾಮಯ್ಯ ಗುರುತಿಸಲಾಗಿದ್ದು ಬಂಧಿತರಿಂದ ಅಂದಾಜು 31 ಚೀಲ ಕಾಫಿಯನ್ನು ವಶಪಡಿಸಿಕೊಳ್ಳಲಾಗಿದೆ.

Read More

ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶವಿಲ್ಲದೇ ಕೇವಲ ಮನೋರಂಜನೆಗಾಗಿ ಇಸ್ಪೀಟ್ ಆಡುವುದು ಕಾನೂನು ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

Read More

ಇವರನ್ನು ಕಂಡರೆ ದಯವಿಟ್ಟು ತಿಳಿಸಿ ಮಡಿಕೇರಿ ತಾಲೂಕಿನ ಮೂರ್ನಾಡು ಕೋಡಂಬೂರು ಗ್ರಾಮದ ಯೋಗೇಶ್ ಅವರ ಪುತ್ರ ಧನುಷ್ ಹಾಗೂ ಅದೇ ಗ್ರಾಮದ ಬಿಪಿನ್ ಎಂಬುವವರ ಮಗ ದೋರನ್ನ ಇಬ್ಬರು ಮಂಗಳವಾರ (ಇಂದು) ಮೂರು ಗಂಟೆಗೆ ಸ್ಥಳೀಯ ಬದ್ರಕಾಳಿ ದೇವಸ್ಥಾನಕ್ಕೆ ಹೋದವರು ಮರಳಿ ಬಂದಿರುವುದಿಲ್ಲ.. ಕಂಡವರು ದಯವಿಟ್ಟು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಿ.

Read More