Author: Kodagu-admin

ಮಡಿಕೇರಿ: ತಂತಿಯ ನೆಟ್ ಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಅರವಳಿಕೆ ನೀಡಿ ಅರಣ್ಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿರತೆ ರಕ್ಷಣೆ ತಂತಿಯ ನೆಟ್ ಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಅರವಳಿಕೆ ನೀಡಿ ಅರಣ್ಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಪೊನ್ನಂಪೇಟೆ ತಾಲೂಕು ಕೆದಮಳ್ಳೂರುವಿನಲ್ಲಿ ನಡೆದಿದೆ. ಕರ್ನಾಟಕ ಅರಣ್ಯ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಸ್ಥಳಕ್ಕೆ ಭೇಟಿನೀಡಿದರು.

Read More

ಮಡಿಕೇರಿ : ಭಾಗಮಂಡಲ ವ್ಯಾಪ್ತಿಯಲ್ಲಿ  ಮಳೆಯು ಹೆಚ್ಚಾಗಿದ್ದು ಬೇಂಗೂರು ಗ್ರಾಮ ಪಂಚಾಯಿತಿಯ ಬೆಂಗೂರು ಗ್ರಾಮದ ದೋಣಿಕಾಡು ಎಂಬಲ್ಲಿ ರಸ್ತೆಯ ಮೇಲೆ ನೀರು ಬಂದಿದ್ದು, ಜನರ ಓಡಾಟಕ್ಕೆ ದೋಣಿಯ ಸಿದ್ಧತೆ ಮಾಡಲಾಗಿದೆ.

Read More

ಮಡಿಕೇರಿ : ಭಾಗಮಂಡಲ ಹೋಬಳಿ ಪದಕಲ್ಲು ಗ್ರಾಮದ ಭಾಸ್ಕರ ರವರ ಮನೆಯ ಹಿಂಭಾಗದ ಗೋಡೆ ಮಳೆಯಿಂದ ಕುಸಿದು ತೀವ್ರ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಸ್ಥಳ ಪರಿಶೀಲಿಸಿದ್ದಾರೆ.

Read More

ನೆಹರು ಪುಣ್ಯಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮಡಿಕೇರಿ : ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ನೆಹರೂರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

Read More

ಮಡಿಕೇರಿ : ಕೊಡಗಿನಲ್ಲಿ ಅರಣ್ಯ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ತಾಂಡವವಡುತ್ತಿದ್ದು, ತನಿಖಾ ಸಮಿತಿ ರಚನೆ ಮಾಡುವಂತೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲವು ಅರಣಾಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ. ಪರಿಣಾಮ ಅರಣ್ಯ ಇಲಾಖೆಯಲ್ಲಿ ಮಹತ್ವದ ಯೋಜನೆಗಳು ನೆಲಕಚ್ಚುತ್ತಿದೆ. ಅಲ್ಲದೇ ಕೆಲವು ಯೋಜನೆಗಳು ಪ್ರಗತಿ ಸಾಧ್ಯವಾಗುತ್ತಿಲ್ಲ. ಜತೆಗೆ ೨೦-೨೫ ವರ್ಷಗಳಿಂದ ಜ್ವಲಂತ ಸಮಸ್ಯೆಗಳು ಪರಿಹಾರ ಕಾಣದೇ ಹಾಗೆ ಉಳಿದುಕೊಂಡಿದೆ. ಆದ್ದರಿಂದ ತನಿಖಾ ಸಮಿತಿ ರಚಿಸಿ ಭ್ರಷ್ಟಾಚಾರ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದರು. ಕಳೆದ ಎರೆಡು ವರ್ಷಗಳಿಂದ ಆನೆ ಕಂದಕ, ಸೋಲಾರ್ ಬೇಲಿ, ಅರಣ್ಯದೊಳಗೆ ಕೆರೆ ಅಭಿವೃದ್ಧಿ, ಗಿಡ ನೆಡುವ ಕಾರ್ಯಕ್ರಮ, ಬ್ಯಾರಿಕೇಡ್ ಹಾಕುವ ಮತ್ತು ದುರಸ್ತಿ ಮಾಡುವ ನೆಪದಲ್ಲಿ ಕೋಟ್ಯಾಂತರ ರೂ ಲೂಟಿಯಾಗಿದೆ. ಇಂತಹ ಹಲವು ಪ್ರಕರಣಗಳು ಇದೀಗ ಬೆಳಕಿಗೆ ಬರುತ್ತಿದೆ. ಆದ್ದರಿಂದ ಸೂಕ್ತ ತನಿಖಾ ಸಮಿತಿ ರಚಿಸಿ ಭ್ರಷ್ಟರ ಬಂಡವಾಳವನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿದರು. ಜಿಲ್ಲೆಗೆ ವರ್ಗಾವಣೆ ನೆಪದಲ್ಲಿ ಬರುವ ಕೆಲವು…

Read More

ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೇ ನೌಕರರು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿತ್ತು. ಈ ಕಾರಣದಿಂದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು. ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ, ಇದರಿಂದ ಬೇಸರಗೊಂಡಿರುವ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಇವರಿಗೆ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಹಿಂದೆ ಸರಿದಿದೆ. ಇವರುಗಳು ಕೆಲಸಕ್ಕೆ ಸೇರಿದ ನಂತರ ಇಂತಿಷ್ಟು ಸಮಯದ ಬಳಿಕ ವರ್ಗಾವಣೆಯನ್ನು ಮಾಡಬೇಕು. ವಯಸ್ಸಾದ ತಂದೆ, ತಾಯಂದಿರು, ಪತಿ-ಪತ್ನಿ ಬೇರೆ…

Read More

ಮಡಿಕೇರಿ: ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಲಕನೂರು ಹೊಸಳ್ಳಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದ ಕೃಷಿ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ ೨ ಯೋಜನೆಯಡಿ ಜಲಾನಯನ ಯಾತ್ರೆಗೆ ನೇರುಗಳಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ವಿನೋದ್ ಕುಮಾರ್ ಎಚ್.ಕೆ ಅವರು ಜಂಟಿ ಕೃಷಿ ನಿರ್ದೇಶಕರಾದ ಡಾ.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕರು ಡಾ.ಸೋಮಶೇಖರ್ ಚಾಲನೆ ನೀಡಿದರು. ನಂತರ ಮಣ್ಣು ಮತ್ತು ನೀರಿನ ಮಹತ್ವದ ಬಗ್ಗೆ ಕಲಾವಿದ ಈ.ರಾಜು ಮತ್ತು ತಂಡದಿAದ ಬೀದಿನಾಟಕ ಮೂಲಕ ರೈತರಲ್ಲಿ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸಲಾಯಿತು. ಮಹಿಳೆಯರಿಂದ ಕಳಸಹೊತ್ತು ಮುಖ್ಯ ಬೀದಿಯಲ್ಲಿ ಯಾತ್ರೆ ಸಾಗಿ ಸಭೆ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕ ಮಾತನಾಡಿದ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸೋಮಸುಂದರ್ ಅವರು ಜಲಾನಯನದ ಮಹತ್ವ ಮಣ್ಣು ನೀರು ಅರಣ್ಯ ಗಿಡಗಳ ರಕ್ಷಣೆ ಬಗ್ಗೆ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಚಂದ್ರಶೇಖರ್ ಅವರು ಜಲಾನಯನ ಇಲಾಖೆ ಕಡೆಯಿಂದ ನೀಡಲಾದ ಸೌಲಭ್ಯ ಬಗ್ಗೆ ಮಾಹಿತಿ…

Read More

ಮಡಿಕೇರಿ : ೨೦೧೮-೧೯ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ ೨೫೨ ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಕಾರ್ಯವು ನಗರದ ಜಿ.ಪಂ.ಸಭಾAಗಣದಲ್ಲಿ ಬುಧವಾರ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇನ್ಫೋಸಿಸ್ ಸಂಸ್ಥೆಯ ಸುನಿಲ್ ಕುಮಾರ್, ಸಂತೋಷ್ ಹಾಗೂ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಉಪಸ್ಥಿತಿಯಲ್ಲಿ ಲಾಟರಿ ಮೂಲಕ ‘ಮನೆ ಹಂಚಿಕೆ’ ಕಾರ್ಯವು ಪಾರದರ್ಶಕವಾಗಿ ನಡೆಯಿತು. ‘ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ ೨೦೦ ಮನೆಗಳು ಸೇರಿದಂತೆ ಜಂಬೂರಿನಲ್ಲಿ ಇಂಡಿಯನ್ ಹ್ಯಾಬಿಟೇಟ್ ಸಂಸ್ಥೆಯಿAದ ನಿರ್ಮಾಣವಾಗಿರುವ ೪ ಮನೆಗಳು, ಜೊತೆಗೆ ಮದೆನಾಡು ಬಳಿ ೪, ಕೆ.ನಿಡುಗಣೆ ಬಳಿ ೨, ಗಾಳಿಬೀಡು ಬಳಿ ೪೨ ಸೇರಿದಂತೆ ಒಟ್ಟು ೨೫೨ ಮನೆಗಳ ಹಂಚಿಕೆ ಕಾರ್ಯವು ಸಂತ್ರಸ್ತರ ಸಮ್ಮುಖದಲ್ಲಿ ಮನೆ ಹಂಚಿಕೆ ನಡೆಯಿತು. ಲಾಟರಿ ತೆಗೆಯುವ ಮೂಲಕ ಸಂತ್ರಸ್ತರೇ ತಮ್ಮ ಮನೆ ಸಂಖ್ಯೆ ಆಯ್ಕೆ ಮಾಡಿಕೊಂಡರು.’ ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ೨೦೧೮-೧೯ ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ…

Read More

ಮಡಿಕೇರಿ: ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೨೧ ನೆರೆ ಸಂತ್ರಸ್ತ ಕುಟುಂಬಸ್ಥರಿಗೆ ನೀಡಲಾದ ಜಾಗದಲ್ಲಿ ಹಾಕತ್ತೂರು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ನಮ್ಮ ವಿರೋಧವಿದೆ ಹೊರತು ಶಾಸಕರು ಭೂಮಿಪೂಜೆ ಮಾಡಿದ ಜಾಗದಲ್ಲಿ ಕಟ್ಟಡ ನಿರ್ಮಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಮೇಕೇರಿ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಳಿಗೇರಿ ಗ್ರಾಮದಲ್ಲಿ ೨೧ ನೆರೆ ಸಂತ್ರಸ್ತ ಕುಟುಂಬಗಳಿಗೆ ಮೀಸಲಿಟ್ಟಿರುವ ಜಾಗದಲ್ಲಿ ಹಾಕತ್ತೂರು ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡಲು ಹೊರಟಿದೆ ಎಂದು ಮೇಕೇರಿ ಗ್ರಾ.ಪಂ ಗ್ರಾಮ ಸಭೆಯಲ್ಲಿ ಬಿಳಿಗೇರಿ ಗ್ರಾಮದ ವಾರ್ಡ್ ನಂ.೨ರ ಸಾರ್ವಜನಿಕರು ಆರೋಪಿಸಿದ್ದಾರೆ. ಈ ಬಗ್ಗೆ ಮೇಕೇರಿ ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ೧ ಏಕರೆ ೮೮ ಸೆಂಟ್ ಹಾಗೂ ಹಾಕತ್ತೂರು ಪಂಚಾಯಿತಿ ಕಟ್ಟಡಕ್ಕೆಂದು ೨೦ ಸೆಂಟ್ ಜಾಗವನ್ನು ಹದ್ದುಬಸ್ತು ಸರ್ವೆ ಮಾಡಲಾಗಿದೆ. ೨೦ ಸೆಂಟು ಜಾಗದಲ್ಲಿ ಹಾಕತ್ತೂರು ಪಂಚಾಯಿತಿಯ ಕಟ್ಟಡ ನಿರ್ಮಿಸಲು ನಮ್ಮ ಅಭ್ಯಂತರವಿಲ್ಲ ಎಂದು ಸರ್ವ ಸದಸ್ಯರು ಒಪ್ಪಿಕೊಂಡಿದ್ದಾರೆ ಎಂದರು. ಹಾಕತ್ತೂರು ಗ್ರಾ.ಪಂ…

Read More

ಮಡಿಕೇರಿ: ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರದ ಪ್ರಗತಿಗೆ ಅಪಾರ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ೧೨ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಇಂದು ಲೇಖಕಿ ಮುಕ್ಕಾಟಿರ ಮೌನಿ ನಾಣಯ್ಯ ಅವರು ರಚಿಸಿರುವ “ಆ ಒರ್ ಬೈಟ್…?” ಎಂಬ ಕೊಡವ ಮಕ್ಕಡ ಕೂಟದ ೧೦೯ನೇ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಬಯವಂಡ ಮಹಾಬಲ ಪೂವಯ್ಯ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಮಾತನಾಡಿ, ಭಾಷೆಯ ಬೆಳೆವಣಿಗೆಗೆ ಸಾಹಿತ್ಯದ ಅಗತ್ಯವಿದೆ, ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಯುವ ಪೀಳಿಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಲೇಖಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಕೊಡವ ಮಕ್ಕಡ ಕೂಟ ಕೊಡವ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಸಾಹಿತ್ಯ ಬೆಳವಣಿಗೆಗೂ ಸಹಕಾರ ನೀಡುತ್ತಿರುವುದು ಶ್ಲಾಘನೀಯವೆಂದರು. ಆ ಒರ್ ಬೈಟ್…? ಪುಸ್ತಕದ ಲೇಖಕಿ ಮುಕ್ಕಾಟಿರ…

Read More