Author: Kodagu-admin

Voice of Youth Kodagu ವಾಟ್ಸ್ಆಪ್‌ ಗುಂಪಿನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ ಮಡಿಕೇರಿ: Voice of Youth Kodagu ಎಂಬ ವಾಟ್ಸ್ಆಪ್‌ ಗುಂಪಿನಲ್ಲಿ ನಡೆಯುತ್ತಿರುವ ಕೆಲ ಚರ್ಚೆಗಳು ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆಗೆ ಪ್ರಚೋದನೆ ನೀಡುವಂತಿವದೆ ಎಂದು ಆರೋಪಿಸಿ, ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿಂದು ಮಣಿ ಅವರಿಗೆ ಮನವಿ ಸಲ್ಲಿಸಿದರು. ಗುಂಪಿನಲ್ಲಿ ನಡೆಯುತ್ತಿರುವ ಚರ್ಚೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ, ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ರೀತಿಯ ಅಕ್ರಮ ಪ್ರತಿಭಟನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ವಾಟ್ಸ್ಆಪ್‌ ಗುಂಪಿನ ಆಡ್ಮಿನ್‌ಗಳ ಪಾತ್ರವನ್ನು ತನಿಖೆಗೆ ಒಳಪಡಿಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವನ್ನೂ ಬಿಜೆಪಿ ನಾಯಕರು ವ್ಯಕ್ತಪಡಿಸಿದರು.…

Read More

NEET ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ ವಿರಾಜಪೇಟೆ, ಜು.24: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿರಾಜಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪಟ್ಟಣದ ಶಾಸಕರ ಕಚೇರಿ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ವಿವಿಧ ಪ್ರಮುಖ ರಸ್ತೆಗಳಲ್ಲಿ ಸಾಗಿದ ಬಳಿಕ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿರಾಜಪೇಟೆ ಶಾಸಕ  ಎ.ಎಸ್. ಪೊನ್ನಣ್ಣ “ಕೇಂದ್ರ ಸರ್ಕಾರ ಸಾರ್ವಜನಿಕರ ವಿಶ್ವಾಸ ಕಾಪಾಡುವಲ್ಲಿ ವಿಫಲವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ…

Read More

ಪೊನ್ನಂಪೇಟೆ: ಬಿಡದಿ ಸಮೀಪದ ಭೈರಮಂಗಲ ಚಲೋ ರೈತ ಹೋರಾಟದಲ್ಲಿ ಭಾಗವಹಿಸಲು ಬಸ್ ಮೂಲಕ ತೆರಳುತ್ತಿದ್ದ ಕೊಡಗು ಜಿಲ್ಲಾ ರೈತ ಸಂಘದ ಸದಸ್ಯರನ್ನು ತಿತಿಮತಿ ಬಳಿ ಪೊಲೀಸರು ತಡೆದ ಘಟನೆ ಶುಕ್ರವಾರ ನಡೆದಿದೆ. ಭೈರಮಂಗಲ ಚಲೋ ಹೋರಾಟಕ್ಕೆ ಕಾನೂನಾತ್ಮಕವಾಗಿ ತೆರಳುತ್ತಿದ್ದರೂ ಮಾರ್ಗ ಮಧ್ಯೆ ಬಸ್ ತಡೆದು ಮುಂದಕ್ಕೆ ಹೋಗಲು ಅವಕಾಶ ನೀಡಲಿಲ್ಲ ಎಂದು ರೈತರು ಆರೋಪಿಸಿದರು. ಇದರಿಂದ ಸ್ಥಳದಲ್ಲೇ ರೈತರು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಹಕ್ಕಿನಡಿ ನಡೆಯುವ ಹೋರಾಟದಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ರೈತರು ಒತ್ತಾಯಿಸಿದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ಮಳೆಯ ನಡುವೆಯೂ ರೈತರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಕೆಲಕಾಲ ಮಾತುಕತೆ ನಡೆಯಿತು. ತಿತಿಮತಿ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ರೈತರು ಸ್ಥಳದಲ್ಲೇ ಜಾಗೃತಿ ಮೂಡಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

Read More

ಕೊಡಗಿನಲ್ಲಿ ಶಾಂತಿ ಕದಡುವ ಸಂಚು? ತನಿಖೆಗೆ ಆಗ್ರಹಿಸಿದ ಬಿಜೆಪಿ ವಕ್ತಾರ ರವಿ ಕುಶಾಲಪ್ಪ ಮಡಿಕೇರಿ: ಕೊಡಗಿನಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಕೆಲವು ವಾಟ್ಸ್ಆ್ಯಪ್‌ ಸ್ಕ್ರೀನ್‌ಶಾಟ್‌ಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ರವಿ ಕುಶಾಲಪ್ಪ ಅವರು ಅವರ ಮುಖಪುಟದ ಮೂಲಕ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, “Voice of Youth Kodagu” ಎಂಬ ವಾಟ್ಸ್ಆ್ಯಪ್‌ ಗುಂಪಿನಲ್ಲಿ ಹೋರಾಟದ ಹೆಸರಿನಲ್ಲಿ ಆತಂಕಕಾರಿ ಸಂದೇಶಗಳು ವಿನಿಮಯವಾಗಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ. “ಟೂಲ್ಸ್ ತರೋದ”, “ಜೀವ ತೆಗೆಯಕ್ಕು ಗೊತ್ತು” ಎಂಬಂತಹ ಸಂದೇಶಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುವಂತಿದ್ದು, ಇವುಗಳ ಹಿನ್ನೆಲೆ ಹಾಗೂ ಉದ್ದೇಶವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ತಿಂಗಳ 25ರಂದು ನಡೆಯಲಿರುವ ಪ್ರತಿಭಟನೆಗೆ ಅನುಮತಿ ನೀಡುವ ಮುನ್ನ ಪೊಲೀಸ್ ಇಲಾಖೆ ಈ ವಿಚಾರವನ್ನು ಸಮಗ್ರವಾಗಿ ತನಿಖೆ ನಡೆಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು…

Read More

ಕೊಡಗು ಪತ್ರಕತ೯ರ ಸಂಘ, ರೋಟರಿ ಮಿಸ್ಟಿ ಹಿಲ್ಸ್ ನಿಂದ  ಆಯೋಜನೆ – ಯೋಧರಿಗೆ ಪುಪ್ಪನಮನ, ಗಾನ ನಮನ ಸಲ್ಲಿಕೆ. ಜುಲೈ 26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ – 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ ಮಡಿಕೇರಿ ಜು  23  –  ಕಾಗಿ೯ಲ್ ನಲ್ಲಿ 27 ವಷ೯ಗಳ ಹಿಂದೆ ಭಾರತೀಯ ಯೋಧರು ತೋರಿದ ತ್ಯಾಗ, ಬಲಿದಾನ, ಶೌಯ೯ದ ಸ್ಮರಣೆಯಾಗಿ ಇದೇ ಜುಲೈ 26 ರಂದು ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ  ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಾದ್ಯಂತಲಿನ 125 ಸಂಘಸಂಸ್ಥೆಗಳು ಈ ಕಾಯ೯ಕ್ರಮದಲ್ಲಿ  ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್ ಮಾಹಿತಿ ನೀಡಿದ್ದಾರೆ ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ಜುಲೈ 26 ರಂದು ಭಾನುವಾರ ಸಂಜೆ 5 ಗಂಟೆಯಿಂದ  ಆಯೋಜಿತ ಕಾಗಿ೯ಲ್ ವಿಜಯ್ ದಿವಸ್ – ಸೈನಿಕರೇ ನಾವೆಂದು…

Read More

ಕೊಡಗಿನಲ್ಲಿ ‘ಜೆನ್-ಜಿ’ ರಾಜಕೀಯ ಸಮರ: ನೀಟ್ ಪ್ರತಿಭಟನೆಗೆ ಮುನ್ನ ವಾಟ್ಸಪ್‌ನಲ್ಲಿ ಟಾಕ್ ವಾರ್ ಸುರೇಶ್ ಬಿಳಿಗೇರಿ ಮಡಿಕೇರಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ಶನಿವಾರ ನಡೆಯಲಿರುವ ಪ್ರತಿಭಟನೆಗೆ ಮುನ್ನ ಕೊಡಗು ಜಿಲ್ಲೆಯ ವಿದ್ಯಾರ್ಥಿ ರಾಜಕೀಯ ವಲಯದಲ್ಲಿ ವಾತಾವರಣ ಕಾವೇರಿದೆ. ಎಬಿವಿಪಿ (ABVP) ಹಾಗೂ ಎನ್‌ಎಸ್‌ಯುಐ (NSUI) ಕಾರ್ಯಕರ್ತರ ನಡುವೆ ‘ವಾಯ್ಸ್ ಆಫ್ ಯೂತ್ ಕೊಡಗು’ ಎಂಬ ವಾಟ್ಸಪ್ ಬಳಗದಲ್ಲಿ ನಡೆಯುತ್ತಿರುವ ವಾಕ್ಸಮರ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರತಿಭಟನೆಗೆ ಸಂಬಂಧಿಸಿದ ವಾಟ್ಸಪ್ ಗುಂಪಿನ ಜಾಯಿನ್ ಲಿಂಕ್ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದ್ದು, ಅದರ ಮೂಲಕ ಹಲವರು ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ಇದರಿಂದ ಚರ್ಚೆಗಳು ಮತ್ತಷ್ಟು ತೀವ್ರಗೊಂಡಿದ್ದು, ಪರ-ವಿರೋಧ ಅಭಿಪ್ರಾಯಗಳು ಹಾಗೂ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ. ಒಂದೆಡೆ, “ಪ್ರತಿ ವಿಷಯಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾಕೆ ಗುರಿಯಾಗಿಸುತ್ತೀರಿ?” ಎಂದು ಎಬಿವಿಪಿ ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ, “ಪಕ್ಷದ ಚೌಕಟ್ಟನ್ನು ಬಿಟ್ಟು ವಿದ್ಯಾರ್ಥಿಗಳ ಹಿತಕ್ಕಾಗಿ ಹೋರಾಟಕ್ಕೆ ಬನ್ನಿ” ಎಂದು ಎನ್‌ಎಸ್‌ಯುಐ ತಿರುಗೇಟು ನೀಡುತ್ತಿದೆ. ಈ…

Read More

ಅರಣ್ಯ ಇಲಾಖೆ ಮರ ಕಡಿಯುವ ವೇಳೆ ವಿದ್ಯುತ್ ಕಂಬಕ್ಕೆ ಹಾನಿ: ಬೀಳುವ ಸ್ಥಿತಿಯಲ್ಲಿರುವ ಕಂಬ, ಆತಂಕದಲ್ಲಿ ಗ್ರಾಮಸ್ಥರು.  ಮಡಿಕೇರಿ: ಮಡಿಕೇರಿ ತಾಲೂಕಿನ ಹಾಕತ್ತೂರು ಗ್ರಾಮದಲ್ಲಿ ಅರಣ್ಯ ಇಲಾಖೆ ರಸ್ತೆ ಬದಿಯ ಮರ ಕಡಿಯುವ ವೇಳೆ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಕಂಬ ಅಪಾಯಕಾರಿಯಾಗಿ ವಾಲಿದೆ. ಮರ ಕಡಿಯುವ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ಹಾನಿಯಾಗಿರುವ ಪರಿಣಾಮ ಕಂಬ ಯಾವುದೇ ಕ್ಷಣದಲ್ಲಿ ಕುಸಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕಂಬಕ್ಕೆ ಜೋಡಿಸಿರುವ ವಿದ್ಯುತ್ ತಂತಿಗಳೂ ಬಿಗಿಯಾಗಿ ಎಳೆಯಲ್ಪಟ್ಟಿರುವುದರಿಂದ ಅಪಾಯ ಮತ್ತಷ್ಟು ಹೆಚ್ಚಾಗಿದೆ. ಈ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ವಾಹನಗಳು ನಿತ್ಯ ಸಂಚರಿಸುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ವಿದ್ಯುತ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ದುರಸ್ತಿ ಕಾಮಗಾರಿ ಕೈಗೊಂಡು ಅಪಾಯ ನಿವಾರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಸಚಿವ ಖಾದರ್, ಶಾಸಕ ಮಂತರ್ ಭೇಟಿ: ಕುಶಾಲನಗರ, ಸೋಮವಾರಪೇಟೆ ಆಸ್ಪತ್ರೆಗಳ ಅಭಿವೃದ್ಧಿಗೆ ಒತ್ತು:  ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ಮಾಡಿ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಆಸ್ಪತ್ರೆಗಳ ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳನ್ನು ಮತ್ತಷ್ಟು ಉತ್ತಮಗೊಳಿಸಲು ಸರ್ಕಾರದಿಂದ ಅಗತ್ಯ ಸಹಕಾರ ನೀಡುವಂತೆ ಸಚಿವರಿಗೆ ಮನವಿ ಮಾಡಿದರು. ಈ ಕುರಿತು ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ತಿಳಿದುಬಂದಿದೆ.

Read More

ಬೇಗೂರಿನಲ್ಲಿ ಹುಲಿ ದಾಳಿ: ಹಸು ಬಲಿ ಪೊನ್ನಂಪೇಟೆ: ತಾಲ್ಲೂಕಿನ ಬೇಗೂರು ಗ್ರಾಮದ ಕೊಟ್ಟಂಗಡ ನಿವಾಸಿ ರಾಜ ಸುಬ್ಬಯ್ಯ ಅವರ ಗದ್ದೆಯಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಶುಕ್ರವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಕಳೆದ ಎರಡು ವರ್ಷಗಳಲ್ಲಿ ಇದೇ ಕುಟುಂಬದ ಮೂರನೇ ಹಸುವನ್ನು ಹುಲಿ ಬಲಿ ಪಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡುವುದರ ಜೊತೆಗೆ ಹುಲಿ ಹಾವಳಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More

ಶ್ರೀ ಸಿದ್ಧಿ ವಿನಾಯಕ ಯುವಕ ಮಿತ್ರ ಮಂಡಳಿ ವತಿಯಿಂದ 27ನೇ ವರ್ಷದ ಶ್ರೀ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಈ ಕೆಳಕಂಡ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಕಾರ್ಯಕಾರಿ ಸಮಿತಿ ಅಧ್ಯಕ್ಷರು: ಜಗದೀಶ್ (Jagadish V.M.) ಉಪಾಧ್ಯಕ್ಷರು: ಅನಂತ್ (Ananthu) ಖಜಾಂಚಿ: ನರೇಶ್ (Naresh) ಉಪ ಖಜಾಂಚಿ: ಪ್ರಮೋದ್ ಆಚಾರ್ಯ (Pramod Acharya) ಕಾರ್ಯದರ್ಶಿ: ಶಾನ್ (Shan) ಉಪ ಕಾರ್ಯದರ್ಶಿ: ಬಿ.ಟಿ. ಮೋಹಿತ್ (B.T. Mohith) ಮಂಡಳಿಯ ಎಲ್ಲಾ ಸದಸ್ಯರು ಹಾಗೂ ಚಾಮುಂಡೇಶ್ವರಿ ನಗರದ ಸಾರ್ವಜನಿಕರ ಸಹಕಾರದೊಂದಿಗೆ ಈ ಬಾರಿಯ 27ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ಆಚರಿಸಲು ನಿರ್ಧರಿಸಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Read More