- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
Author: Kodagu-admin
ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಲೂಸ್ ಮಾದ ಖ್ಯಾತಿಯ ಯೋಗಿ ಅಭಿನಯದ, ವಿಜಯಪ್ರಸಾದ್ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರೀ-ರಿಲೀಸ್ ಇವೆಂಟ್ ಭಾನುವಾರ ನಗರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ನಟ ಮತ್ತು ನಿರ್ದೇಶಕ ‘ದುನಿಯಾ’ ವಿಜಯ್ ಬಂದು ಚಿತ್ರದ ‘ಚುರುಮುರಿ’ ಎಂಬ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಅರಸು ಆಂತಾರೆ ಸಾಹಿತ್ಯ ಬರೆದಿದ್ದು, ಗೀತ ಸಂಯೋಜನೆಯನ್ನು ಅನೂಪ್ ಸೀಲಿನ್ ಅವರು ನಿರ್ವಹಿಸಿದ್ದಾರೆ. ಚಿನ್ಮಯಿ ಶ್ರೀಪಾದ ಅವರ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದುನಿಯಾ ವಿಜಯ್ ಅವರು, ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ…
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಮಾರು 1500 ಕೆ.ಜಿ. ಭಾರದ ಹಾಗೂ ಐದು ಅಡಿ ಎತ್ತರದ ಕಂಚಿನ ಗಂಟೆ ಸ್ಥಾಪನೆಯಾಗಲಿದೆ. ದೇಶದಲ್ಲೇ ದ್ವಿತೀಯ ಅತ್ಯಂತ ದೊಡ್ಡ ಗಂಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯ ಅಯೋದ್ಯೆ ಶ್ರೀರಾಮ ಮಂದಿರದಲ್ಲಿ ಇರುವ 2200 ಕೆ.ಜಿ. ಗಂಟೆ ದೇಶದಲ್ಲೇ ಅತ್ಯಂತ ದೊಡ್ಡ ಗಂಟೆಯಾಗಿದೆ. ಕಾಪುವಿನಲ್ಲಿ ಸ್ಥಾಪಿಸಲಾಗುವ ಈ ಗಂಟೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ದೊಡ್ಡ ಗಂಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಫೆಬ್ರವರಿ 9ರಂದು ನಡೆಯಲಿರುವ ಕಾಪು ಹೊಸ ಮಾರಿಗುಡಿಯ ನೂತನ ಸ್ವರ್ಣ ಗದ್ದುಗೆ, ಬೆಳ್ಳಿರಥ ಮತ್ತಿತರ ಕೊಡುಗೆಗಳನ್ನು ಬರಮಾಡಿಕೊಳ್ಳಲು ವೈಭವದ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಆ ಸಂದರ್ಭದಲ್ಲಿ ಈ ಗಂಟೆಯನ್ನು ಅದ್ದೂರಿ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಗುವುದು. ಮುಂಬೈಯ ಮಿರಾರೋಡ್ ನಲ್ಲಿ ಅಲಯನ್ಸ್ ಇನ್ಫ್ರಾಸ್ಟ್ರಕ್ಟರ್ ಆಂಡ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಉದ್ಯಮ ಸಂಸ್ಥೆ ಹೊಂದಿರುವ ಅರವಿಂದ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಮಾರಿಯಮ್ಮನ ನೂತನ ದೇಗುಲಕ್ಕೆ ಇದನ್ನು ಕೊಡುಗೆಯಾಗಿ ನೀಡಲಿದ್ದಾರೆ. ಆಂಧ್ರಪ್ರದೇಶದ ಬಿ.ಎಸ್.ಎಂ…
ಪುಣೆ ಬಂಟ್ಸ್ ಅಸೋಸಿಯೇಷನ್ ನ 12ನೇ ವಾರ್ಷಿಕೋತ್ಸವ ಸಮಾರಂಭವು ಫೆಬ್ರವರಿ 8ರ ಶನಿವಾರದಂದು ಬಂಟರ ಭವನ, ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಭವನ, ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಅಪರಾಹ್ನ ಗಂಟೆ 2:30 ರಿಂದ ವಿವಿಧ ಸಾಂಸ್ಕೃತಿಕ ನೃತ್ಯ ವೈಭವ, ‘ಬಲೆ ತೆಲಿಪುಲೆ’ ಹಾಸ್ಯ ಪ್ರದರ್ಶನ, ಸಭಾ ಕಾರ್ಯಕ್ರಮ ಸಾಧಕರಿಗೆ ಸತ್ಕಾರಗಳೊಂದಿಗೆ ಜರಗಲಿದೆ. ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಅಧ್ಯಕ್ಷತೆಯಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಂಭ್ರಮದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭವಾನಿ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಮುಂಬೈಯ ಕಾರ್ಯಾಧ್ಯಕ್ಷ ಕೆ.ಡಿ. ಶೆಟ್ಟಿ, ಗೌರವ ಅತಿಥಿಗಳಾಗಿ ಕರ್ನಾಟಕ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬಾಲಿವುಡ್ ನ ಹೆಸರಾಂತ ನಟಿ ಅಮೃತಾ ರಾವ್ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಸಾಧಕರಿಗೆ ಸತ್ಕಾರ ನಡೆಯಲಿದೆ. ಬಂಟ್ಸ್ ಅಸೋಸಿಯೇಷನ್ ನ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಅಪರಾಹ್ನ ಗಂಟೆ 2:30 ರಿಂದ ಆರಂಭಗೊಳ್ಳಲಿದ್ದು, ಸಾಂಸ್ಕೃತಿಕ…
ಧರ್ಮ ಶಿಕ್ಷಣ ಸಿಗುವ ಜಾಗದಲ್ಲಿ ಜಾತ್ರೆಗೆ ಮಾರ್ಗದರ್ಶನ ಸಿಗಬೇಕು. ಜಾತ್ರೆಯಲ್ಲಿ ಸಾಗುವ ರಥ ಜೀವನ ಪಯಣಕ್ಕೆ ಸ್ಪೂರ್ತಿ ನೀಡಬೇಕು. ಸಂಪತ್ತಿನ ಸದ್ಬಳಕೆಯಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು. ಸಮಾಜದಲ್ಲಿ ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕದ ಸಂಗತಿ. ಸಂಸ್ಕಾರಭರಿತ ಶಿಕ್ಷಣ ಕೊಡುವ ವ್ಯವಸ್ಥೆ ಆಗಬೇಕು. ಸಾಮಾಜಿಕ ಸಮತೋಲಕ್ಕೆ ಆಧ್ಯಾತ್ಮಕ ಹಾದಿಯೇ ಸೂಕ್ತ ಎಂದರು. ದಿವ್ಯ ಸಾನಿದ್ಯ ವಹಿಸಿದ್ದ ಶ್ರೀ ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡಿ, “ಗುರುಗಳ ಕೃಪೆಯಿಂದ ಎಲ್ಲವೂ ಸಾಧ್ಯ. ಗುರುಗಳ ಸಾನಿಧ್ಯದಲ್ಲಿ ಆಧ್ಯಾತ್ಮಿಕ ಚಿತ್ತಹರಿಸಿ ಆನಂದ ಹೊಂದೋಣ. ಒತ್ತಡ ರಹಿತ ಸಂತೃಪ್ತ ಜೀವನ ಸಾಗಿಸೋಣ” ಎಂದರು. ನಾನಾ ಕ್ಷೇತ್ರಗಳ ಗಣ್ಯರಾದ ವೀರೇಂದ್ರ ಮೋಹನ್ ಜೋಶಿ, ಡಾ. ಅವಿನ್ ಆಳ್ವ, ಮಲ್ಲಿಕಾ ಪ್ರಶಾಂತ ಪಕ್ಕಳ, ತಮನ್ನಾ ಪ್ರಭಾಕರ ಶೆಟ್ಟಿ, ಶ್ವೇತಾ ಸಿ. ರೈ, ಪಿ.…
ಕಾವಡಿ ಶ್ರೀವಾಣಿ ಯಕ್ಷಗಾನ ಕಲಾಮಂಡಳಿಯ ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಚಂದ್ರ ಶೆಟ್ಟಿಯವರು ಇತ್ತೀಚಿಗೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳ್ಳಾರಿಯ ಉದ್ಯಮಿ, ಸಮಾಜಸೇವಕ ರೇಣುಕಾ ಬೇಕರಿ ಮಾಲೀಕ ವಸಂತ ಶೆಟ್ಟಿ, ಕಲಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂತರ ಮಾತನಾಡಿದ ವಸಂತ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಒಂದು ಅದ್ಭುತವಾದ ಕಲೆ, ಯಕ್ಷಗಾನವನ್ನು ಉಳಿಸಿ ಬೆಳೆಸೋಣ ಎಂದು ನೂತನ ಸಂಸ್ಥೆಗೆ ಶುಭ ಹಾರೈಸಿದರು.
ಆಹ್ವಾನ ಪತ್ರ (ಇನ್ವಿಟೇಶನ್ ಕಾರ್ಡ್) ಮದುವೆಗೆಂದು ಆಹ್ವಾನಿಸಲು ನೀಡುವ ಪತ್ರಕ್ಕೆಂದೇ ಸಾವಿರಾರು ರೂಪಾಯಿಗಳ ಖರ್ಚು ಮಾಡಿ ಕೊಡುವ ಕಾರ್ಡ್ ಗಳನ್ನು ಬಹುತೇಕರು ತೆರೆದು ಕೂಡಾ ನೋಡುವುದಿಲ್ಲ. ಇಲ್ಲಿಂದ ಶುರುವಾಗುವ ಈ ದುಂದು ವೆಚ್ಚ ಹೇಗಿರುತ್ತದೆ ನೀವೇ ನೋಡಿ. ಸಾವಿರಾರು ಜನರನ್ನು ಮದುವೆಗೆ ಕರೆಯುವುದು (ಕರೆದವರಿಗೆ ಯಾರು ಬಂದಿದ್ದಾರೆ ಎಂದು ಗಮನಿಸಲೂ ಸಮಯವಿಲ್ಲ. ಹಾಜರಾದವರಿಗೆ 6 ತಿಂಗಳ ನಂತರ ಯಾವ/ಯಾರ ಮದುವೆಗೆ ಹೋಗಿರುವುದು ಸಹ ನೆನಪಿರುವುದಿಲ್ಲ) ನಿಶ್ಚಿತಾರ್ಥದ ಹೆಸರಿನಲ್ಲಿ ವಿವಾಹವಾಗುವ ಮೊದಲೇ ಭವಿಷ್ಯದ ವಧು ವರರನ್ನು ಅಕ್ಕ ಪಕ್ಕ ಕೂರಿಸಿ ಇನ್ನಿಲ್ಲದ ಆರ್ಭಾಟ ಮಾಡುವುದು, ಮದುವೆಯ ಮೊದಲು ನಡೆಸುವ ಪ್ರೀ ವೆಡ್ ಫೋಟೋ ಶೂಟ್ ಒಂದು ಚಲನಚಿತ್ರ ಮಟ್ಟದಲ್ಲಿದ್ದು, ವಧು ಮತ್ತು ವರರು ವಿಚಿತ್ರ ಮತ್ತು ಪ್ರಜ್ಞಾಹೀನ ಭಂಗಿಗಳಲ್ಲಿ ಫೋಟೋಗಳಿಗೆ ಪೋಸ್ ನೀಡುತ್ತಾರೆ. ಅಲ್ಲದೆ, ಆ ಫೋಟೋಗಳನ್ನು (ಕೆಲವು ನಿಕಟವಾದವುಗಳು) ಮದುವೆ ಸಮಾರಂಭದಲ್ಲಿ ದೊಡ್ಡ ಟಿವಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಮದುವೆಗೆ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿದ ಹೂವಿನ ಅಲಂಕಾರ, ಬಗೆ…
ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 15ರವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ನೇತೃತ್ವದಲ್ಲಿ ನವೋದಯ ಸ್ವಸಹಾಯ ಸಂಘ ಮತ್ತು ಊರ ಸಮಸ್ತರಿಂದ 17ನೇ ವರ್ಷದ ಹೊರೆ ಕಾಣಿಕೆ ಸಮರ್ಪಣೆ ಭಾನುವಾರ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ, ಮೊಕ್ತೇಸರ ಶ್ರೀನಿವಾಸ ಶೆಟ್ಟಿ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ ಶೆಟ್ಟಿ, ನವೋದಯ ಸ್ವಸಹಾಯ ಸಂಘದ ಜಿಲ್ಲಾ ಮೇಲ್ವಿಚಾರಕ ಹರಿನಾಥ, ತಾಲೂಕು ಮೇಲ್ವಿಚಾರಕ ಕೃಷ್ಣ, ಮಂದಾರ್ತಿ ವಲಯ ಪ್ರೇರಕಿ ಶೋಭ ಭಾಗವಹಿಸಿದ್ದರು.
ತುಳುನಾಡಿನಲ್ಲಿ ಧಾರ್ಮಿಕ, ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಭಾಷೆಯ ಜಾಗೃತಿ ಮೂಡಿಸಲಾಗುತ್ತದೆ. ನಾಲ್ಕು ಕಾಲ ಬದುಕುವ, ಉಳಿಯುವಂತಹ ಸಾಹಿತ್ಯ ರಚನೆಯಾಗಬೇಕು. ನೆಲ ಮೂಲದ ಗ್ರಾಮ ಸಂಸ್ಕೃತಿಯತ್ತ ಬರಹಗಾರರು ಗಮನಿಸಬೇಕು. ತುಳುವರನ್ನು ಓದಿನೆಡೆಗೆ ಆಕರ್ಷಿಸುವಂತಹ ರಚನಾತ್ಮಕ ಕೆಲಸಗಳು ಸಾಹಿತ್ಯದಲ್ಲಿ ನಡೆಯಬೇಕು ಎಂದು ತುಳು ಕನ್ನಡ ಸಾಹಿತಿ, ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕರೆ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ರಥೋತ್ಸವ ಹಾಗೂ ತುಳುನಾಡು ಜಾತ್ರೆಯ ಸಂದರ್ಭದಲ್ಲಿ ‘25ನೇ ತುಳು ಸಾಹಿತ್ಯ ಸಮ್ಮೇಳನ’ ದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಂಗಾರದ ಬಟ್ಟಲಾಗಿದ್ದ ತುಳುನಾಡು ಈಗ ಬರಡು ನೆಲವಾಗುತ್ತಿದೆ. ಯುವಕರು ಕೃಷಿ ತ್ಯಜಿಸಿ ಪೇಟೆ ಕಡೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ವಿಚಾರ. ಇಂದು ತುಳು ಸಾಹಿತ್ಯ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಆಗುತ್ತಿದ್ದು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ತುಳು ಭಾಷೆಗೆ ಮಾನ್ಯತೆ ಸಿಗುತ್ತಿಲ್ಲ ಎಂದವರು ವಿಷಾದಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ…
ವ್ಯಕ್ತಿತ್ವ ವಿಕಸನ ಹಾಗೂ ತರಬೇತಿಗಾಗಿಯೇ ಇರುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗ್ಯೇಶ್ ರೈಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಪುತ್ತೂರಿನ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಇಲ್ಲಿ ಚಾಲನೆಯನ್ನು ನೀಡಲಾಯಿತು. ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದ ಅವರು ಜೆಸಿಐ ಪುತ್ತೂರಿನ ವಿಭಿನ್ನ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್. ಆರ್, ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ಪುತ್ತೂರು ನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರು ಮಾದಕ…
