Author: Kodagu-admin

ಮಡಿಕೇರಿ : ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ 1098 ಗೆ ಮಾಹಿತಿ ನೀಡುವಂತಾಗಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ…

Read More

ಅಸ್ಸಾಂ ಮೂಲದ ಕಾರ್ಮಿಕನಿಂದ ಲೈಂಗಿಕ ಕಿರುಕುಳ: ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು. ಸೋಸೋಮವಾರಪೇಟೆಯಲ್ಲಿ ನಡೆದ ಘಟನೆ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಪರಾರಿ ಆಗುತ್ತಿದ್ದ ಈತನನ್ನು ಗ್ರಾಮಸ್ಥರೆ ಅಟ್ಟಾಡಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರಪೇಟೆ ಸಮೀಪದ ಕಾರೆಕೊಪ್ಪದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ 8.30 ರ ಸಮಯದಲ್ಲಿ ಕಾರೆಕೊಪ್ಪದ ಮಹಿಳೆಯೊಬ್ಬರು ತೋಟದಲ್ಲಿ ಕೆಲಸಕ್ಕೆಂದು ಹೊರಟುಬಂದವರು ಇತರೆ ಕಾರ್ಮಿಕರ ಬರುವಿಕೆಯನ್ನು ನಿರೀಕ್ಷಿಸುತ್ತಾ ರಸ್ತೆ ಬದಿಯಲ್ಲಿ ನಿಂತಿದ್ದರು. ಈ ಸಂದರ್ಭ ಅಪರಿಚಿತ ಪುರುಷನೋರ್ವ ಒಂಟಿಯಾಗಿದ್ದ ಈ ಮಹಿಳೆಯ ಮೇಲೆ ಎರಗಿ ಬಾಯಿಗೆ ಬಟ್ಟೆ ತುರುಕಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಮಹಿಳೆ ಜೋರಾಗಿ ಬೊಬ್ಬಿಡುತ್ತಿದ್ದಾಗ ಸುತ್ತಮುತ್ತಲಿನವರು ಮಹಿಳೆಯ ರಕ್ಷಣೆಗೆ ಧಾವಿಸಿ ಬಂದಿದ್ದಾರೆ. ಇದರಿಂದ ಮಹಿಳೆಯನ್ನು ಬಿಟ್ಟು ಓಡತೊಡಗಿದ ಆರೋಪಿಯನ್ನು ಬೆನ್ನಟ್ಟಿ ಹಿಡಿದು ಸೋಮವಾರಪೇಟೆ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ.…

Read More

*ಅಹಮದಾಬಾದ್ ವಿಮಾನ ದುರಂತ: ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ: ಪೊನ್ನಣ್ಣ* ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ನೂರಾರು ಜನರು ದುರಂತ ಸಾವಿಗೀಡಾದ ಸುದ್ದಿ ತೀವ್ರ ದುಃಖ ಉಂಟು ಮಾಡಿದೆ. ಭಾರತೀಯರು ಸೇರಿದಂತೆ ಹಲವು ವಿದೇಶಿ ಪ್ರಯಾಣಿಕರಿದ್ದ ಈ ವಿಮಾನದ ಪತನ ಅತ್ಯಂತ ದುರಾದೃಷ್ಟಕರ. ವಿಮಾನವು ಮೆಡಿಕಲ್ ಹಾಸ್ಟೆಲ್ ಮೇಲೆ ಪತನ ಆಗಿ ವಿದ್ಯಾರ್ಥಿಗಳೂ ಸಾವನ್ನಪ್ಪಿರುವ ಸುದ್ದಿ ಮತ್ತಷ್ಟು ಆಘಾತ ನೀಡಿದೆ. ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಮುಖ್ಯಮಂತ್ರಿಗಳ ಕಾನೂನು ಸಲೆಹಗಾರ ಹಾಗೂ ವಿರಾಜಪೇಟೆ ಶಾಸಕ ಪೊನ್ನಣ್ಣ ಮಾಧ್ಯಮ ಪ್ರಕಣೆಯ ಮೂಲಕ ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.

Read More

*ನಾಳೆ ವಿದ್ಯುತ್ ವ್ಯತ್ಯಯ* *KODAGU NEWS*. ಮೂರ್ನಾಡು 66 ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಳ್ಳಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪಕೇಂದ್ರದ 11ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಲಾಗುವುದು. ಆದ್ದರಿಂದ ಜೂನ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6-ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು,…

Read More

ಶಾಸಕ ಪೊನ್ನಣ್ಣ ನೇತೃತ್ವದಲ್ಲಿ ಬೆಂಗಳೂರು ಕೊಡವ ಸಮಾಜ ಪ್ರಮುಖರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡ ರ ಭೇಟಿ:ಅಭಿನಂದನೆ ಸಲ್ಲಿಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಇಂದು, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕೆ.ಟಿ ಪೆಮ್ಮಯ್ಯ, ಉಪಾಧ್ಯಕ್ಷರಾದ ಪಿ.ಎಮ್ ಕಮಲ, ಜಂಟಿ ಕಾರ್ಯದರ್ಶಿ ಮಹೇಶ್, ಜಂಟಿ ಖಜಾಂಜಿ ಪಿ.ಕೆ ಗಣಪತಿ,ಪಾಂಡಂಡ ಬೋಪಣ್ಣ, ಹಾಗೂ ಸಮಾಜದ ಮುಖಂಡರು, ಕಂದಾಯ ಸಚಿವರಾದ ಸನ್ಮಾನ್ಯ ಕೃಷ್ಣಬೈರೇಗೌಡ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಹಿಂದೆ ಶಾಸಕರ ನೇತೃತ್ವದಲ್ಲಿ ಕೊಡವ ಸಮಾಜದ ಪ್ರಮುಖರು, ತಮ್ಮ ಸಮಾಜದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬಳಕೆಗಾಗಿ ಸರಕಾರ ನೀಡಿರುವ ಜಮೀನಿಗೆ ನಿಗದಿಪಡಿಸಿದ್ದ ದರವನ್ನು ಪರಿಷ್ಕರಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದ ಮಾನ್ಯ ಕಂದಾಯ ಸಚಿವರು, ದರವನ್ನು ಪರಿಷ್ಕರಿಸಿ ಅನುಮೋದನೆ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಲಾಯಿತು. ಇದೇ ಭಾನುವಾರ 15-06-2025 ರಂದು, ಬೆಂಗಳೂರಿನ ವಸಂತನಗರದ ಕೊಡವ ಸಮಾಜದಲ್ಲಿ, ಈ ಪ್ರಯುಕ್ತ ಅಭಿನಂದನ…

Read More

*********************************** ಮಡಿಕೇರಿ :-ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪುರಸಭಾ ಕಚೇರಿ ಕಟ್ಟಡವನ್ನು ಪೌರಾಡಳಿತ ಸಚಿವರಾದ ರಹೀಮ್ ಖಾನ್ ಅವರು ಬುಧವಾರ ಲೋಕಾರ್ಪಣೆಗೊಳಿಸಿದರು. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಉದ್ಘಾಟಿಸಿ ನೂತನ ಸಭಾಂಗಣದಲ್ಲಿ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಗಳಿಗೆ 50 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರ ಪ್ರಯತ್ನದಿಂದ ಮುಖ್ಯಮಂತ್ರಿ ಅವರು ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಿದ್ದಾರೆ. ಪೌರಾಡಳಿತ ಇಲಾಖೆಯಿಂದ ಸಹ ಅಗತ್ಯ ಸಹಕಾರ ನೀಡಲಾಗುವುದು ಎಂದು ಸಚಿವರು ಹೇಳಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ಮೂರು ಇಂದಿರಾ ಕ್ಯಾಂಟಿನ್‍ಗಳನ್ನು ಆರಂಭಿಸಲಾಗಿದೆ. ಸದ್ಯ ಬೇಡಿಕೆ ಹೆಚ್ಚಿರುವುದರಿಂದ ಬೆಳಗಿನ ಉಪಾಹಾರ ಮತ್ತು ಊಟವನ್ನು 300 ರಿಂದ 500 ಜನರಿಗೆ ಒದಗಿಸಲು ಉದ್ದೇಶಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಶಾಸಕರಾದ ಡಾ.ಮಂತರ್…

Read More

ಕೆ.ಬಿ ಶಂಶುದ್ದೀನ್ ಕುಶಾಲನಗರ ಕುಶಾಲನಗರ: ಕುಶಾಲನಗರ ಜನತೆಯ 07 ವರ್ಷಗಳ ಕನಸನ್ನು ಡಾ.ಮಂತ್ ಗೌಡರವರು ನನಸು ಮಾಡಿದ್ದಾರೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಕುಶಾಲನಗರ ಪುರಸಭೆ ಕಟ್ಟಡದ ಉದ್ಘಾಟನೆಯನ್ನು ಕ್ಷೇತ್ರದ‌ ಶಾಸಕರಾದ ಡಾ.ಮಂತರ್ ಗೌಡರವರು ಇಂದು ನೆರವೇರಿಸಲಿದ್ದಾರೆ. ಐತಿಹಾಸಿಕ ಹಿನ್ನಲೆಯನ್ನು ಹೊಂದಿರುವ ಕುಶಾಲನಗರ ಪುರಸಭೆಯ ವಾಣಿಜ್ಯ ಸಂಕೀರ್ಣದ ಉದ್ಘಾಟನೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಪುರಭವನಕ್ಕೆ ಮುನ್ನಡಿ ಬರೆಯಲು ಆಡಳಿತ ಮಂಡಳಿ ಸಜ್ಜಾಗಿದೆ. ನಗರದ ಹೃದಯ ಭಾಗದಲ್ಲಿರುವ ಪುರಭವನವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕಟ್ಟಡದ ಉದ್ಘಾಟನಾ ಕಾಲ ಕೂಡಿ ಬಂದಿರುವುದು ಕುಶಾಲನಗರ ಜನತೆಯ ಸಂತೋಷಕ್ಕೆ ಕಾರಣವಾಗಿದೆ. ಈ ಹಿಂದೆ ಕುಶಾಲನಗರ ಪುರಸಭೆಯಾಗಿದ್ದಾಗ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಅವರು ಪುರಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಸ್ಮರಣೀಯ. ಹಳೆಯ ಕಟ್ಟಡವನ್ನು ೨೦೧೮ ಕೆಡವಿ ೨೦೩೦ರಲ್ಲಿ ಕಟ್ಟಡವನದನ್ನು ಉದ್ಘಾಟಿಸಬೇಕಾಗಿತ್ತು. ಅನುದಾನ ಹಾಗೂ ತಾಂತ್ರಿಕ ಕಾರಣಗಳಿಂದ ವಾಣಿಜ್ಯ ಸಂಕೀರ್ಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿತ್ತು. ಕೆಲವರ ನಿರಾಸಕ್ತಿಯಿಂದಾಗಿ ಕಾಮಗಾರಿ ಪೂರ್ಣಗೊಳ್ಳದೇ ನೆನೆಗುದಿಗೆ ಬಿದ್ದಿತ್ತು. ಶಾಸಕ…

Read More

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ ಗಾಂಧಿ ಭವನದ ಆವರಣದಲ್ಲಿ ಗಿಡ ನೆಟ್ಟು ಅರಿವು ಮೂಡಿಸಲಾಯಿತು. ಜೊತೆಗೆ ಯೋಗ ಶಿಕ್ಷಕರಾದ ಮಹೇಶ್ ಅವರ ನೇತೃತ್ವದಲ್ಲಿ ಯೋಗ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಆ ನಿಟ್ಟಿನಲ್ಲಿ ವಿವಿಧ ರೋಗಗಳಿಂದ ದೂರವಿರಲು ಪ್ರತೀ ನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವಂತಾಗಬೇಕು ಎಂದು ಸಲಹೆ ನೀಡಿದರು.…

Read More

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಟೀಷರ್ ದಿ ಟೆಕ್ನಿಕಲ್ ಸರ್ವೀಸ್ (Techser the technical service, Mysore), ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಅಪೋಲೋ ಫಾರ್ಮಸಿ, ಮೈಸೂರು, ತಾಜ್ ರೆಸಾಟ್ರ್ಸ್, ಮಡಿಕೇರಿ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ…

Read More

ಮಡಿಕೇರಿ : ಸೂರ್ಲಬ್ಬಿ ಗ್ರಾಮದಲ್ಲಿ ಯುವಕನಿಂದ ಹತ್ಯೆಗೀಡಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿಯ ಕುಟುಂಬಕ್ಕಾಗಿ ರೂ 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಮನೆಯನ್ನು, ಶಾಸಕ ಡಾ. ಮಂತರ್ ಗೌಡ ಹಸ್ತಾಂತರಿಸಿದರು. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ10ರಂದು ಪ್ರಕಟವಾದ ಕೆಲವೇ ಹೊತ್ತಿನಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿನಿ ಮೀನಾ(16) ಕುಟುಂಬಕ್ಕೆ ನೀಡಲು ಮನೆಯನ್ನು ನಿರ್ಮಿಸಲಾಗಿದೆ. ಸೂರ್ಲಬ್ಬಿ-ಕುಂಬಾರಗಡಿಗೆ ಗ್ರಾಮದ ಉದಿಯಂಡ ಸುಬ್ರಮಣಿ ಮತ್ತು ಜಾನಕಿ ದಂಪತಿ ಪುತ್ರಿ ಮೀನಾ ಜೊತೆ ಹಮ್ಮಿಯಾಲ ಗ್ರಾಮದ ಮೊಣ್ಣಂಡ ಓಂಕಾರಪ್ಪ ಅಲಿಯಾಸ್ ಪ್ರಕಾಶ್‌ ಜೊತೆ ಫಲಿತಾಂಶ ಬಂದ ದಿನ ಮದುವೆ ನಿಶ್ಚಿತಾರ್ಥ ಆಗಿತ್ತು. ಹೆಚ್ಚಿನ ಶಿಕ್ಷಣದ ಹಂಬಲವಿದ್ದ ಮೀನಾ ‘ಈಗಲೇ ಮದುವೆ ಬೇಡ’ ಎಂದು ಪೋಷಕರಲ್ಲಿ ಹೇಳಿದ ಬೆನ್ನಲ್ಲೇ ಪ್ರಕಾಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ. ನಂತರ ಪೊಲೀಸರು ಆತನನ್ನುಬಂಧಿಸಿದ್ದರು. ‌ಶಾಸಕ ಡಾ.ಮಂತರ್ ಗೌಡ ಮೀನಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭ, ಮನೆ ಜಾಗಕ್ಕೆ ಯಾವುದೇ ದಾಖಲೆಯಿಲ್ಲ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಹಿತೈಷಿಗಳ…

Read More