Author: Kodagu-admin

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತ್ತಿದ್ದು, ಹವಾಮಾನ ಇಲಾಖೆ ಜೂನ್ 12 ರಿಂದ 14 ವರೆಗೆ ರೆಡ್ ಅಲರ್ಟ್ ಘೋಷಿಸಿದೆ.  ಅಲ್ಲದೆ ಸಾರ್ವಜನಿಕರು ಆತಂಕ ಪಡದೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Read More

ಮಡಿಕೇರಿ : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‍ಡಬ್ಲ್ಯು), ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯು) ಹುದ್ದೆಗಳು ಖಾಲಿ ಇದ್ದು, ಬೌದ್ಧಿಕ ವಿಕಲತೆ (ಬುದ್ದಿಮಾಂದ್ಯತೆ) ಹಾಗೂ ಮಾನಸಿಕ ಅಸ್ವಸ್ಥತೆ ಇರುವ ವಿಕಲಚೇತನರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಜುಲೈ, 07 ರೊಳಗೆ ಅರ್ಜಿ ಸಲ್ಲಿಸಬಹುದು. ನಗರ ಪುನರ್ವಸತಿ ಕಾರ್ಯಕರ್ತರು, ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ ರೂ.9 ಸಾವಿರ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು ನಗರಸಭೆ ಮಡಿಕೇರಿ-3 ಹುದ್ದೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ ವಿಆರ್‍ಡಬ್ಲ್ಯು: ಮಡಿಕೇರಿ ತಾಲ್ಲೂಕು ಬಲ್ಲಮಾವಟಿ, ಹಾಕತ್ತೂರು, ಸೋಮವಾರಪೇಟೆ…

Read More

ಮಡಿಕೇರಿ : ಗ್ರಾಮೋತ್ಥಾನ ಭಾರತ ಪ್ರಕಾಶನ, ಕೊಡಗು ವತಿಯಿಂದ ಭಾರತ ಸಿಂಧೂರ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ಜೂನ್, 10 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಶಕ್ತಿ ಕುಟುಂಬದ ರಾಜಲಕ್ಷ್ಮಿ ಗೋಪಾಲಕೃಷ್ಣ, ಬೆಂಗಳೂರು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚೊಟ್ಟಕೊರಿಯಂಡ ಕೆ.ಬಾಲಕೃಷ್ಣ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಕೃತಿಕಾರರಾದ ಚಿ.ನಾ.ಸೋಮೇಶ್, ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಪ್ರಧಾನ ಅರ್ಚಕರು ನಿವೃತ್ತ ಯೋಧ ಜಿ.ಎ.ಉಮೇಶ್, ಬೆಂಗಳೂರು ನಿವೃತ್ತ ಹೈಕೋರ್ಟ್ ಉದ್ಯೋಗಿ ಸುಧೀಂದ್ರ ಡಿ.ತಿಳಗುಳ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ. ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಜೂ.11 ರಂದು ಕುಶಾಲನಗರ ಪುರಸಭಾ ಕಚೇರಿ ಕಟ್ಟಡ ಉದ್ಘಾಟನೆ    ಮಡಿಕೇರಿ : ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪುರಸಭಾ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭವು ಜೂನ್, 11 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ನಗರಾಭಿವೃದ್ಧಿ ಸಚಿವರು ಹಾಗೂ ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ ಚಂದ್ರು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ತ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ್ ಸರ್ಜಿ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವು ಜೂನ್, 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ…

Read More

ಮಡಿಕೇರಿ : ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂನ್, 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6 ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದ್ದು, ಜೂನ್, 10 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು, ಅಂದಗೋವೆ, ಕೊಡಗರಹಳ್ಳಿ,…

Read More

ಮಡಿಕೇರಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ  ಉದ್ಘಾಟಿಸಿದರು. ಅಂಗನವಾಡಿ ಕೇಂದ್ರಗಳು ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣ ಒದಗಿಸುವ ಒಂದು ಪ್ರಮುಖ ಕೇಂದ್ರಗಳಾಗಿದ್ದು, ಮಕ್ಕಳ ದೈಹಿಕ ಹಾಗೂ ಬೌದ್ದಿಕ ಬೆಳವಳಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಬಹಳ ಮುತುವರ್ಜಿವಹಿಸಿ ಮಕ್ಕಳನ್ನು ಸಲಹುವ ಜವಾಬ್ದಾರಿಯು ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕಿಯರದ್ದಾಗಿರುತ್ತದೆ ಎಂದರು. ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಕೇಂದ್ರಗಳಾಗಿದ್ದು ಮಕ್ಕಳನ್ನು ಹೆಚ್ವಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೇರಿಸಿ ಎಂದು ಸಾರ್ವಜನಿಕರಿಗೆ ಸಂದೇಶ ನೀಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯು ಗ್ರಾಮಗಳ ಹಲವು ಅಭಿವೃದ್ದಿ ಕಾರ್ಯಗಳಿಗೆ ಸಹಕಾರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು ಶಿಶು ಅಭಿವೃದ್ದಿ ಇಲಾಖೆಯ ಒಗ್ಗೂಡಿಸುವಿಕೆಯಿಂದ ವ್ಯವಸ್ಥಿತವಾದ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ…

Read More

ಮಡಿಕೇರಿ  : ಯೋಗಭ್ಯಾಸದೊಂದಿಗೆ ಶ್ರಮದಾನ ಮತ್ತು ಸ್ವಚ್ಛತಾ ಅಭಿಯಾನ ಹಾಗೂ ಸಸ್ಯಗಳನ್ನು ನೆಡುವ ಕಾರ್ಯಕ್ರಮವು (ಜೂನ್, 10 ರಂದು) ನಾಳೆ ಬೆಳಗ್ಗೆ 8.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಸ್ವಚ್ಛತಾ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಕಚೇರಿಯ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ :  NDRF ತಂಡ ಹಾರಂಗಿ ಆಣೆಕಟ್ಟು, ಹಾಗೂ ಕುಶಾಲನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್. ಎಂ. ಅನನ್ಯ ವಾಸುದೇವ್ ಮಾಹಿತಿ ನೀಡಿದರು. NDRF ತಂಡದ ಮುಖ್ಯಸ್ಥರಾದ ಇನ್ಸ್ಪೆಕ್ಟರ್ ಅಜಯ್ ಕುಮಾರ್, ಹಾರಾಂಗಿ ಸಹಾಯಕ ಅಭಿಯಂತರರಾದ ಸೌಮ್ಯ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಕುಂಜಲಗೇರಿ ಗ್ರಾಮದಲ್ಲಿ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಭಾಗವಹಿಸಿದರು. ಕಾರ್ಯಕ್ರಮಕ್ಕೂ ಮೊದಲು ಸ್ಥಳೀಯ ಭಗವತಿ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸಭೆಗೆ ಆಗಮಿಸಿದರು. ಮೊದಲಿಗೆ ಸ್ಥಳೀಯ ಮುಖಂಡರು ತಮ್ಮ ಬೇಡಿಕೆಗಳ ಮನವಿಯನ್ನು ಮಾನ್ಯ ಶಾಸಕರಿಗೆ ಸಲ್ಲಿಸಿದರು. ಇದರಲ್ಲಿ ಪ್ರಮುಖವಾಗಿ ನಾಲ್ಕು ರಸ್ತೆಗಳ ಉನ್ನತಿಕರಣದ ಬೇಡಿಕೆ ಇರುವುದನ್ನು ಪರಿಗಣಿಸಿದ ಮಾನ್ಯ ಶಾಸಕರು, ಎರಡು ರಸ್ತೆಗೆ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಹೇಳಿ, ಉಳಿದ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಿಕೊಡುವುದಾಗಿ ತಿಳಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರು, ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲೂ ವಿಶೇಷವಾಗಿ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ ರಾಜ್ಯಾದ್ಯಂತ ಆಗಿದ್ದು, ಇದರ ಪ್ರಚಾರ ಮಾಡಿ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಯಕರ್ತರ…

Read More