Author: Kodagu-admin

ಗೋಣಿಕೊಪ್ಪಲಿನ ಅತ್ತೂರಿನ ಮೂಲದವರಾದ ಪ್ರಸ್ತುತ ಮೈಸೂರಿನ ವಿಜಯನಗರದಲ್ಲಿ ವಾಸಿಸುವ ಕಡಿಯಮಾಡ ಅರುಣ್ ಅಚ್ಚಯ್ಯ ಮತ್ತು ಪ್ರಿಯಾ ದಂಪತಿಯ ಪುತ್ರಿ ಸಬ್ ಲೆಫ್ಟಿನೆಂಟ್ ಕಡಿಯಮಾಡ ರಿಯಾ ಅಚ್ಚಯ್ಯ, ಅವರು ಮೇ 31, 2025 ರಂದು ಭಾರತೀಯ ನೌಕಾಪಡೆಗೆ ಸಬ್ ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡರು.

Read More

ಕಳಪೆ ತಡೆಗೋಡೆ ವೀಕ್ಷಿಸಿದ ಶಾಸಕ ಪೊನ್ನಣ್ಣ: ತನಿಕೆಗೆ ಆದೇಶ ವಿರಾಜಪೇಟೆಯ ಅಂಬೇಡ್ಕರ್ ಭವನ ಆವರಣಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ  ಭೇಟಿ ಮಾಡಿ ಪರಿಶೀಲಿಸಿದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಂಬೇಡ್ಕರ್ ಭವನದ ಬಳಿಯಲ್ಲೇ ಇರುವ ತಡೆಗೋಡೆಯು ಕುಸಿದು ಬಿದ್ದಿತ್ತು. ಈ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳನ್ನು ಕರೆಯಿಸಿ ಈ ಕಾಮಗಾರಿಯ ಬಗ್ಗೆ ವಿವರಣೆಯನ್ನು ಕೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ದೊರಕದಿದ್ದರಿಂದ ಈ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದರಲ್ಲದೆ, ಈ ತಡೆಗೋಡೆ ಕಾಮಗಾರಿಯ ಸಂಪೂರ್ಣ ವಿವರದ ವರದಿಯನ್ನು ಕೂಡಲೇ ತನಗೆ ನೀಡಬೇಕೆಂದು ಸೂಚಿಸಿದ ಮಾನ್ಯ ಶಾಸಕರು, ಇದರ ದುರಸ್ತಿ ಕಾರ್ಯವನ್ನು ಗುತ್ತಿಗೆದಾರ ಕೂಡಲೇ ಮುಗಿಸಿ ತನಗೆ ತಿಳಿಸಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಪುರಸಭೆ ಅಧ್ಯಕ್ಷರು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Read More

ಮಳೆಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ಪೊನ್ನನ್ನ. ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಇತ್ತೀಚೆಗೆ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಮರ ಬಿದ್ದು ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಪರಿಹಾರ ವಿತರಿಸಿದರು. ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತನ್ನ ಮನೆಯ ಎದುರು ಕೆಲಸ ಮಾಡುತ್ತಿದ್ದ ಸಂದರ್ಭ, ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿತ್ತು. ಪರಿಹಾರ ವಿತರಿಸಿ ಮನೆಯವರಿಗೆ ಸಾಂತ್ವನ ಹೇಳಿದರು. ಮೃತ ಗೌರಿಯವರು ಇಬ್ಬರು ಮಕ್ಕಳು ಅಗಲಿದ್ದು, ಶಾಸಕರ ಶಿಫಾರಸ್ಸಿನ ಮೇರೆಗೆ, ಮೃತರ ವಾರಿಸುದಾರರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ ಮಂಜೂರಾದ ₹ 5 ಲಕ್ಷದ ಹಕ್ಕು ಪತ್ರವನ್ನು ಶಾಸಕ ಪೊನ್ನಣ್ಣ ನೀಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ತಾಲೂಕು ದಂಡಾಧಿಕಾರಿಗಳು, ಆರ್ ಜಿ ಗ್ರಾಮ ಪಂಚಾಯತ್ ಅಧ್ಯಕ್ಷರ ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮತ್ತು ಕಾಂಗ್ರೆಸ್ ಮುಖಂಡರು…

Read More

ಮಡಿಕೇರಿಯಲ್ಲಿ_ಪೌರ_ಕಾರ್ಮಿಕರ_ಮುಷ್ಕರ ಜ್ಯ ಸರ್ಕಾರ ಮಾತು ಕೊಟ್ಟು ತಪ್ಪಿದೆ ಎಂದು ಪುರಸಭೆ ಕಛೇರಿಗೆ ಬೀಗ ಹಾಕಿ ಪೌರ ಕಾರ್ಮಿಕರ ಮುಷ್ಕರ, ರಸ್ತೆಗಿಳಿಯದ ಕಸ ವಿಲೇವಾರಿ ಮಾಡುವ ವಾಹನಗಳು. ಬೇಡಿಕೆ ಈಡೇರದೆ ಇದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸರಬರಾಜು ನಿಲ್ಲಿಸುತ್ತೇವೆ ಎಂದ ಕಾರ್ಮಿಕರು.

Read More

ಜಿಲ್ಲಾ ಪೊಲೀಸ್ ಘಟಕದಲ್ಲಿ‌ ದೀರ್ಘ ಕಾಲ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಎಎಸ್‌ಐರವರುಗಳಾದ ಶ್ರೀ ಡಬ್ಲ್ಯು.ಬಿ. ಗೋಪಾಲ ಕೃಷ್ಣ ಮತ್ತು ಶ್ರೀ ಬಿ.ಟಿ.ಪೊನ್ನಪ್ಪ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

Read More

ಜಿಲ್ಲಾ ಪೊಲೀಸ್ ಘಟಕದಲ್ಲಿ‌ ದೀರ್ಘ ಕಾಲ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಎಎಸ್‌ಐರವರುಗಳಾದ ಶ್ರೀ ಡಬ್ಲ್ಯು.ಬಿ. ಗೋಪಾಲ ಕೃಷ್ಣ ಮತ್ತು ಶ್ರೀ ಬಿ.ಟಿ.ಪೊನ್ನಪ್ಪ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

Read More

ಮಡಿಕೇರಿ :  ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಕೋಂ ತೋರೇರ ದೇವಯ್ಯ ಇವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿರುತ್ತದೆ ಯಾವುದೇ ಪ್ರಾಣ ಹಾನಿ ಆಗಿಲ್ಲ.

Read More

ಮಡಿಕೇರಿ : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅವರನ್ನು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಂಘದ ಪದಾಧಿಕಾರಿಗಳು ದೀಪಾಭಾಸ್ತಿ ಹಾಗೂ ಅವರ ಪತಿ ಚೆಟ್ಟರ ನಾಣಯ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು.

Read More

ಮಡಿಕೇರಿ: ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನಿರ್ದೇಶನದಂತೆ ನಗರದ ಪೌರ ಕಾರ್ಮಿಕರು ದಿಢೀರನೆ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ನೀರು ಸರಬರಾಜು ಹೊರತುಪಡಿಸಿ ಉಳಿದೆಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೂ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Read More

ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಆಗಿರುತ್ತದೆ. ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಅನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ…

Read More