- ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆಟೋ ಚಾಲಕನ ಬಂಧನ
- ಕೊಡಗಿನ ಕಲಾವಿದ ಐಮಂಡ ರೂಪೇಶ್ ನಾಣಯ್ಯನವರ ಎರಡು ಕಲಾಕೃತಿಗಳು ಅಮೃತಸರದ ಅಖಿಲ ಭಾರತ ಕಲಾಪ್ರದರ್ಶನಕ್ಕೆ ಆಯ್ಕೆ
- 300 ರೂ. ಸಂಬಳದಿಂದ ಬದುಕು ಆರಂಭಿಸಿ ಸಮಾಜ ಸೇವಕರಾಗಿ ಬೆಳೆದ ಹರಪಳ್ಳಿ ರವೀಂದ್ರರ ಬದುಕಿನ ಕಥೆಗೆ ಅಕ್ಷರ ರೂಪ.
- ಯಾಕೂಬ್ ನಿವಾಸಕ್ಕೆ ನಾಪಂಡ ಮುತ್ತಪ್ಪ ಭೇಟಿ: ಕೊಡಗು ಕಾಂಗ್ರೆಸ್ನಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾದ ಮುಖಾಮುಖಿ
- ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.
- ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
- ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
- ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
Author: Kodagu-admin
ಮಡಿಕೇರಿ : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ : ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಶಾಲನಗರ ಹೋಬಳಿ 6ನೇ ಹೊಸಕೋಟೆ ಗ್ರಾಮದ ಹೆಚ್ ಜೆ ಶಾಂತರಾಜು ರವರ ವಾಸದ ಮನೆಯ ಗೋಡೆ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.
ಮಡಿಕೇರಿ : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಸ್ಥಳಾಂತರ ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಪ್ರವಾಹ ಪೀಡಿತ ಪ್ರದೇಶದ ಕುಟುಂಬಗಳಿಗೆ ಪ್ರತೀ ವರ್ಷ ನೋಟೀಸು ನೀಡುವುದು ಸರಿಯಲ್ಲ. ಆದ್ದರಿಂದ ಪ್ರವಾಹ ಪೀಡಿತ ಕುಟುಂಬಗಳಿಗೆ ಹತ್ತಿರದಲ್ಲಿ ನಿವೇಶನ ಒದಗಿಸಿ ಮನೆ ನಿರ್ಮಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳ ಪಟ್ಟಿ ಮಾಡುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಬಾರಿ ಮುಂಗಾರು ಮೇ ತಿಂಗಳಲ್ಲಿಯೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಆದ್ದರಿಂದ…
ಅಭಿನಂದನಾ ಸಮಾರಂಭಕ್ಕೆ ಆಹ್ವಾನ ಮಡಿಕೇರಿ-ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕøತರಾದ ಭಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಇದೇ ಜೂನ್ 2 ರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಮತ್ತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಅವರು ಶುಕ್ರವಾರ ನಗರದ ದೀಪಾ ಭಾಸ್ತಿ ಅವರ ನಿವಾಸಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ವತಿಯಿಂದ ಆಮಂತ್ರಣ ಪತ್ರ ನೀಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು. ಜೊತೆಗೆ ಕನ್ನಡ ಮತ್ತು ಸಂಸ್ಕøತಿ ಸಚಿವರ ಹಾಗೂ ಇಲಾಖೆಯ ನಿರ್ದೇಶಕರ ಪತ್ರವನ್ನು ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕøತರಾದ ದೀಪಾ ಭಾಸ್ತಿ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಚೆಟ್ಟಿರ ನಾಣಯ್ಯ ಹಾಗೂ ಸುಬೇದಾರ್ ಗೌಡಂಡ ತಿಮ್ಮಯ್ಯ ಇದ್ದರು.
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665. ಮಡಿಕೇರಿ ತಾಲ್ಲೂಕಿನ ಮಡಿಕೇರಿ, ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ಚೈತ್ರ 9449598603, ತಾಳತ್‍ಮನೆ ಹೇಮಂತ್ ರಾಜ್ 9449598604, ಮೂರ್ನಾಡು ಶಾಖೆಗೆ ತೇಜ…
ಮಡಿಕೇರಿ : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಜೂನ್ ಮತ್ತು ಜುಲೈ ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಜೂನ್ 17 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್, 12 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9740982585,…
ಗುರುವಾರ ಸುರಿದ ಗಾಳಿ ಮಳೆಗೆ ಅತ್ತೂರ್ ನಲ್ಲೂರು ಗ್ರಾಮದ ಕೆಂಪಮ್ಮಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ : ಜನವಿರೋಧಿ ಆಡಳಿತ ನಡೆಸುತ್ತಿರುವ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಬಡವರ ಆರೋಗ್ಯದ ಮೇಲೂ ಸವಾರಿ ಮಾಡುತ್ತಿದ್ದು, ದೇಶದ ಜನಪ್ರಿಯ ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಮುಚ್ಚುವಂತೆ ಆದೇಶ ಹೊರಡಿಸಿರುವುದು ಸಿದ್ದರಾಮಯ್ಯನವರ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿ.ಕೆ ಲೋಕೇಶ್ ಆರೋಪಿಸಿದ್ದಾರೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭ ಮಾತನಾಡಿದ ಅವರು, ರಾಜ್ಯದ ರಸ್ತೆಗಳೆಲ್ಲವೂ ಹದಗೆಟ್ಟಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹಳ್ಳ ಹಿಡಿದಿದೆ. ಈ ಸಂದರ್ಭ ಸಾಧನೆ ಸಮಾವೇಶ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿಲುವಿಗೆ ಧಿಕ್ಕಾರವಿದೆ ಎಂದು ಕಿಡಿಕಾರಿದರು. ಜನ ಸಾಮಾನ್ಯರ ಮೇಲೆ ಪದೇ ಪದೇ ಸವಾರಿ ಮಾಡುತ್ತಿರುವ ರಾಜ್ಯ ಸರ್ಕಾರ ಸೇಡಿನ ರಾಜಕೀಯ ಮಾಡುವ ದುರುದ್ದೇಶದಿಂದಾಗಿ, ಬಡವರಿಗೆ ಕಡಿಮೆ ದರಕ್ಕೆ ದೊರೆಯುತ್ತಿರುವ ಜನಔಷಧಿ ಕೇಂದ್ರ ಮುಚ್ಚುವ ನಿರ್ಧಾರಕ್ಕೆ ಬಂದಿದೆ. ರಾಜ್ಯದ ಪ್ರತಿಯೊಬ್ಬರು ಕೂಡಾ ಇದರ ವಿರುದ್ಧ ಧ್ವನಿ ಎತ್ತುತಿದ್ದಾರೆ. ಹಾಗಾಗಿ ಕೂಡಲೇ ಜನಔಷದಿ ಕೇಂದ್ರಗಳನ್ನು ಮುಚ್ಚುವಂತೆ ಹೊರಡಿಸಿರುವ ಆದೇಶವನ್ನು…
ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಶುಕ್ರವಾರ ನಡೆಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಕಾರ್ಯಕ್ರಮ ಉದ್ಘಾಟಿಸಿ, ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತ ಚಟುವಟಿಕೆಗಳಲ್ಲಿನ ಪ್ರದರ್ಶನದಲ್ಲಿ ಮಕ್ಕಳ ಏಕಾಗ್ರತೆ ತುಂಬಾ ಉತ್ತಮವಾಗಿದ್ದು, ತಮ್ಮ ಎಲ್ಲಾ ಕಲಿಕಾ ಚಟುವಟಿಕೆಗಳಲ್ಲಿ ಇದನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕøತರಾದ ರಾಣಿ ಮಾಚಯ್ಯ ಅವರು ಶಿಬಿರಾರ್ಥಿಗಳ ಯೋಗ, ನೃತ್ಯ ಪ್ರದರ್ಶನವನ್ನು ವೀಕ್ಷಿಸಿ ಮಕ್ಕಳು ವೇದಿಕೆಯನ್ನು ಉತ್ತಮವಾಗಿ ಸದುಪಯೋಗಪಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿಯೂ ಆಸಕ್ತಿಯನು ಅನುಪಾಲನೆ ಮಾಡುವಂತೆ ಸಲಹೆ ಮಾಡಿದರು. ನಗರ ಪ್ರಾಧಿಕಾರ ಯೋಜನೆಯ ಸದಸ್ಯರಾದ ಮಿನಾಜ್ ಪ್ರವೀಣ್ ಅವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
