Author: Kodagu-admin

ಭಾಗಮಂಡಲ ಹೋಬಳಿ ಪದಕಲ್ಲು ಗ್ರಾಮದ ಭಾಸ್ಕರ ರವರ ಮನೆಯ ಹಿಂಭಾಗದ ಗೋಡೆ ಮಳೆಯಿಂದ ಕುಸಿದು ತೀವ್ರ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಸ್ಥಳ ಪರಿಶೀಲಿಸಿದ್ದಾರೆ.

Read More

ಕಾಫಿ ಕಳ್ಳತನ: ಮೂವರು ಆರೋಪಿಗಳ ಬಂಧನ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಾಕತೂರು, ಮೇಕೇರಿ ಹಾಗೂ ಹೊಸ್ಕೇರಿಯಲ್ಲಿ ನಡೆದ ಸರಣಿ ಕಳ್ಳತನದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸುವಲ್ಲಿ ಯಶಸ್ವುಯಾಗಿದ್ದು ಬಂಧಿತರನ್ನು *ಸುಂಟಿಕೊಪ್ಪ ನಿವಾಸಿ ಮಹೇಶ್*, *ಮದೆ ಗ್ರಾಮದ ವಿನೋದ್ ಹಾಗೂ ಗಾಳಿಬೀಡು ಗ್ರಾಮದ ರಾಮಯ್ಯ* ಗುರುತಿಸಲಾಗಿದ್ದು ಬಂಧಿತರಿಂದ ಅಂದಾಜು 31 ಚೀಲ ಕಾಫಿಯನ್ನು ವಶಪಡಿಸಿಕೊಳ್ಳಲಾಗಿದೆ.

Read More

ಮಡಿಕೇರಿ : ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಕ್ಕೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಕರಾವಳಿ, ಮಲೆನಡು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಹಲ್ವು ಪ್ರವಾಸಿ ತಾಣಗಳಿಗೆ, ಫಾಲ್ಸ್, ಸಮುದ್ರ ತೀರ, ಅರಣ್ಯ ಪ್ರದೇಶಗಳಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ನಡುವೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಕಡೆ ಸಫಾರಿ ಬಂದ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರೋ ಅರಣ್ಯ ಇಲಾಖೆ ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಹೊಳೆ ಅರಣ್ಯ ಪ್ರದೇಶದಲ್ಲಿಯೂ ವರುಣಾರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಫಾರಿಯನ್ನು ಅನಿರ್ಧಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ ನಣಚ್ಚಿ ಗೇಟ್ ಹಾಗೂ ಮೈಸೂರು ಜಿಲ್ಲೆಯ ವೀರನಹೊಸಳ್ಳಿ ಸಫಾರಿಯನ್ನು ರದ್ದು ಮಾಡಲಾಗಿದೆ. ಆದರೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಕೇಂದ್ರದಲ್ಲಿ ಸಫಾರಿ ಎಂದಿನಂತೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

Read More

ಮಡಿಕೇರಿ: ತಂತಿಯ ನೆಟ್ ಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಅರವಳಿಕೆ ನೀಡಿ ಅರಣ್ಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿರತೆ ರಕ್ಷಣೆ ತಂತಿಯ ನೆಟ್ ಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಅರವಳಿಕೆ ನೀಡಿ ಅರಣ್ಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಪೊನ್ನಂಪೇಟೆ ತಾಲೂಕು ಕೆದಮಳ್ಳೂರುವಿನಲ್ಲಿ ನಡೆದಿದೆ. ಕರ್ನಾಟಕ ಅರಣ್ಯ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಸ್ಥಳಕ್ಕೆ ಭೇಟಿನೀಡಿದರು.

Read More

ಮಡಿಕೇರಿ : ಭಾಗಮಂಡಲ ವ್ಯಾಪ್ತಿಯಲ್ಲಿ  ಮಳೆಯು ಹೆಚ್ಚಾಗಿದ್ದು ಬೇಂಗೂರು ಗ್ರಾಮ ಪಂಚಾಯಿತಿಯ ಬೆಂಗೂರು ಗ್ರಾಮದ ದೋಣಿಕಾಡು ಎಂಬಲ್ಲಿ ರಸ್ತೆಯ ಮೇಲೆ ನೀರು ಬಂದಿದ್ದು, ಜನರ ಓಡಾಟಕ್ಕೆ ದೋಣಿಯ ಸಿದ್ಧತೆ ಮಾಡಲಾಗಿದೆ.

Read More

ಮಡಿಕೇರಿ : ಭಾಗಮಂಡಲ ಹೋಬಳಿ ಪದಕಲ್ಲು ಗ್ರಾಮದ ಭಾಸ್ಕರ ರವರ ಮನೆಯ ಹಿಂಭಾಗದ ಗೋಡೆ ಮಳೆಯಿಂದ ಕುಸಿದು ತೀವ್ರ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಸ್ಥಳ ಪರಿಶೀಲಿಸಿದ್ದಾರೆ.

Read More

ನೆಹರು ಪುಣ್ಯಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮಡಿಕೇರಿ : ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ನೆಹರೂರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

Read More

ಮಡಿಕೇರಿ : ಕೊಡಗಿನಲ್ಲಿ ಅರಣ್ಯ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ತಾಂಡವವಡುತ್ತಿದ್ದು, ತನಿಖಾ ಸಮಿತಿ ರಚನೆ ಮಾಡುವಂತೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲವು ಅರಣಾಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ. ಪರಿಣಾಮ ಅರಣ್ಯ ಇಲಾಖೆಯಲ್ಲಿ ಮಹತ್ವದ ಯೋಜನೆಗಳು ನೆಲಕಚ್ಚುತ್ತಿದೆ. ಅಲ್ಲದೇ ಕೆಲವು ಯೋಜನೆಗಳು ಪ್ರಗತಿ ಸಾಧ್ಯವಾಗುತ್ತಿಲ್ಲ. ಜತೆಗೆ ೨೦-೨೫ ವರ್ಷಗಳಿಂದ ಜ್ವಲಂತ ಸಮಸ್ಯೆಗಳು ಪರಿಹಾರ ಕಾಣದೇ ಹಾಗೆ ಉಳಿದುಕೊಂಡಿದೆ. ಆದ್ದರಿಂದ ತನಿಖಾ ಸಮಿತಿ ರಚಿಸಿ ಭ್ರಷ್ಟಾಚಾರ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದರು. ಕಳೆದ ಎರೆಡು ವರ್ಷಗಳಿಂದ ಆನೆ ಕಂದಕ, ಸೋಲಾರ್ ಬೇಲಿ, ಅರಣ್ಯದೊಳಗೆ ಕೆರೆ ಅಭಿವೃದ್ಧಿ, ಗಿಡ ನೆಡುವ ಕಾರ್ಯಕ್ರಮ, ಬ್ಯಾರಿಕೇಡ್ ಹಾಕುವ ಮತ್ತು ದುರಸ್ತಿ ಮಾಡುವ ನೆಪದಲ್ಲಿ ಕೋಟ್ಯಾಂತರ ರೂ ಲೂಟಿಯಾಗಿದೆ. ಇಂತಹ ಹಲವು ಪ್ರಕರಣಗಳು ಇದೀಗ ಬೆಳಕಿಗೆ ಬರುತ್ತಿದೆ. ಆದ್ದರಿಂದ ಸೂಕ್ತ ತನಿಖಾ ಸಮಿತಿ ರಚಿಸಿ ಭ್ರಷ್ಟರ ಬಂಡವಾಳವನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿದರು. ಜಿಲ್ಲೆಗೆ ವರ್ಗಾವಣೆ ನೆಪದಲ್ಲಿ ಬರುವ ಕೆಲವು…

Read More

ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೇ ನೌಕರರು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿತ್ತು. ಈ ಕಾರಣದಿಂದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು. ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ, ಇದರಿಂದ ಬೇಸರಗೊಂಡಿರುವ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಇವರಿಗೆ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಹಿಂದೆ ಸರಿದಿದೆ. ಇವರುಗಳು ಕೆಲಸಕ್ಕೆ ಸೇರಿದ ನಂತರ ಇಂತಿಷ್ಟು ಸಮಯದ ಬಳಿಕ ವರ್ಗಾವಣೆಯನ್ನು ಮಾಡಬೇಕು. ವಯಸ್ಸಾದ ತಂದೆ, ತಾಯಂದಿರು, ಪತಿ-ಪತ್ನಿ ಬೇರೆ…

Read More