- ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
Author: Kodagu-admin
ಉತ್ತರ ಕನ್ನಡ ವಿರುದ್ಧ ಕೊಡಗುಗೆ 6-1 ಭರ್ಜರಿ ಜಯ ಅಶೋಕ್_ಮಡಿಕೇರಿ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಅಮೋಘ ಪ್ರದರ್ಶನ ಕೊಡಗು, ಜು.10 : ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಉತ್ತರ ಕನ್ನಡ ತಂಡವನ್ನು 6-1 ಗೋಲುಗಳ ಅಂತರದಿಂದ ಮಣಿಸಿ ಭರ್ಜರಿ ಜಯ ದಾಖಲಿಸಿದೆ. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡ ಪಂದ್ಯದ ಸಂಪೂರ್ಣ ಅವಧಿಯಲ್ಲಿ ಮೇಲುಗೈ ಸಾಧಿಸಿ ಎದುರಾಳಿ ತಂಡಕ್ಕೆ ತಿರುಗೇಟು ನೀಡುವ ಅವಕಾಶವನ್ನೇ ನೀಡಲಿಲ್ಲ. ಪಂದ್ಯದ ಮೊದಲಾರ್ಧದಲ್ಲೇ ಕೊಡಗು ತಂಡ ಹಲವು ಅವಕಾಶಗಳನ್ನು ಸೃಷ್ಟಿಸಿ ಗೋಲು ಗಳಿಸುವ ಮೂಲಕ ಮುನ್ನಡೆ ಸಾಧಿಸಿತು. ದ್ವಿತೀಯಾರ್ಧದಲ್ಲಿಯೂ ಅದೇ ಲಯ ಮುಂದುವರಿಸಿದ ಕೊಡಗು ತಂಡ ಇನ್ನಷ್ಟು ಗೋಲುಗಳನ್ನು ದಾಖಲಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಕೊಡಗು ತಂಡದ ಪರ ದಿವಾಕರ್ ಎರಡು ಗೋಲುಗಳನ್ನು ಬಾರಿಸಿ ಮಿಂಚಿದರೆ, ಆಶಿರ್ ಕೂಡ ಎರಡು ಗೋಲುಗಳನ್ನು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಬಿತ್ ಮತ್ತು…
ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಡಿಕೇರಿ, ಜು. 10: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಜಯ ವೈ.ಎಂ. ಅವರಿಗೆ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ವಿವರಗಳ ಪ್ರಕಾರ, ಆರೋಪಿ 2021ರ ಜುಲೈನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು, ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಬಳಿಕ 2021ರ ಆಗಸ್ಟ್‌ನಿಂದ ನವೆಂಬರ್‌ವರೆಗೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ…
ಗೋಣಿಕೊಪ್ಪಲು, ಜುಲೈ 9: ಕೊಡಗು ಜಿಲ್ಲೆಯ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ (ರಿ.) ವತಿಯಿಂದ ಕೈಕೇರಿ, ಗೋಣಿಕೊಪ್ಪಲಿನಲ್ಲಿ ನಿರ್ಮಿಸಲಾದ ನೂತನ ಸಭಾಭವನ ಹಾಗೂ ನೂತನ ಅನ್ನಪೂರ್ಣ ಭವನದ ಲೋಕಾರ್ಪಣೆ ಶುಭ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಪೂಜ್ಯ ಶ್ರೀಗಳು, ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು. ನೂತನ ಸಭಾಭವನ ಹಾಗೂ ಅನ್ನಪೂರ್ಣ ಭವನವು ಸಮುದಾಯದ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವದ ಕೊಡುಗೆಯಾಗಲಿದ್ದು, ಸಂಘದ ಮುಂದಿನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಕೊಂಡಂಗೇರಿ ಐಕೋಳ ಮಾರ್ಗದಲ್ಲಿ ತನ್ನ ಓಮ್ನಿ ಕಾರಿನಲ್ಲಿ ತೆರಳುತ್ತಿದ ಅಲಿ ಎಂಬುವವರ ಕಾರಿನ ಮೇಲೆ ದೊಡ್ಡ ಗಾತ್ರದ ಮರವೊಂದು ಬಿದ್ದ ಪರಿಣಾಮ ಅಲಿ ಎಂಬುವವರ ತಲೆಗೆ ಗಂಬೀರ ಗಾಯಗೊಂಡು ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಒಮ್ನಿ ಕಾರು ಸಂಪೂರ್ಣ ಜಖಂ ಗೊಂಡಿದೆ. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ಸ್ಥಳೀಯರು ಮರವನ್ನು ತೆರವು ಮಾಡಲು ಪ್ರಯತ್ನಿಸಿದ್ದಾರೆ.
ಹುಲಿತಾಳ : ಧಾರಾಕಾರ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಸಂಪೂರ್ಣ ಹಾನಿ ಮನೆಯೊಳಗೆ ಯಾರೂ ಇಲ್ಲದಿದ್ದರಿಂದ ಪ್ರಾಣಾಪಾಯದಿಂದ ಪಾರು ✍🏻 ಅಶೋಕ್ _ಮಡಿಕೇರಿ ಮಡಿಕೇರಿ, ಜು.9 : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಮನೆಗಳಿಗೆ ಹಾನಿ ಉಂಟಾಗುತ್ತಿದ್ದು, ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಮನೆಯೊಂದರ ಮೇಲ್ಛಾವಣಿ ಕುಸಿದು ಸಂಪೂರ್ಣ ಹಾನಿಗೊಳಗಾದ ಘಟನೆ ನಡೆದಿದೆ. ಹುಲಿತಾಳ ಗ್ರಾಮದ ನಿವಾಸಿ ಎಚ್.ಟಿ. ಜಾನಕಿ ಅವರ ಮನೆ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕುಸಿದಿದೆ. ಮನೆಯ ಮೇಲ್ಛಾವಣಿಯ ಹಾಗೂ ಹಂಚಿನ ಚಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮನೆಯೊಳಗಿನ ಪೀಠೋಪಕರಣಗಳು ಮತ್ತು ಇತರೆ ಗೃಹೋಪಯೋಗಿ ವಸ್ತುಗಳು ಜಖಂಗೊಂಡಿವೆ. ಘಟನೆ ನಡೆದ ವೇಳೆ ಮನೆಯೊಳಗೆ ಯಾರೂ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಕೆಲವೇ ಕ್ಷಣಗಳ ವ್ಯತ್ಯಾಸದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಕಳೆದ ಬಾರಿಯ ಮಳೆಯಲ್ಲಿಯೂ ಇದೇ ಮನೆ ಭಾಗಶಃ ಹಾನಿಗೊಳಗಾಗಿತ್ತು. ಈ ಬಾರಿ ಸುರಿದ ಧಾರಾಕಾರ ಮಳೆಯಿಂದ…
ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ ಅಶೋಕ್_ಮಡಿಕೇರಿ ತುಮಕೂರು, ಜು.9: ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪ್ರಶಸ್ತಿಯತ್ತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ತುಮಕೂರು ತಂಡವನ್ನು ಎದುರಿಸಿದ ಕೊಡಗು ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 8-0 ಗೋಲುಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿತು. ತಂಡದ ಪರ ಸಬಿತ್ ಎರಡು ಗೋಲು, ಸವಾದ್ ಎರಡು ಗೋಲು, ಫಾರೂಕ್ ಒಂದು ಗೋಲು, ಅಜಿತ್ ಒಂದು ಗೋಲು ಹಾಗೂ ದಿವಾಕರ್ ಒಂದು ಗೋಲು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕೊಡಗು ತಂಡದ ಸಮನ್ವಯದ ಆಟ, ವೇಗದ ಪಾಸ್‌ಗಳು ಮತ್ತು ಪರಿಣಾಮಕಾರಿ ದಾಳಿ ಎದುರಾಳಿ ತಂಡವನ್ನು ಸಂಪೂರ್ಣವಾಗಿ ಕಟ್ಟಿಹಾಕಿತು. ಎರಡನೇ ಪಂದ್ಯದಲ್ಲಿ ದಕ್ಷಿಣ ಕನ್ನಡ…
ವಿರಾಜಪೇಟೆ ತಾಲ್ಲೂಕು ಅಮ್ಮತಿ ಹೋಬಳಿ ಕರಡಿಗೋಡು ಕಾವೇರಿ ನದಿ ಪಾತ್ರದಲಿರುವ ಹೊಳೆಕೆರೆಯಲ್ಲಿ ಕರಡಿಗೋಡು ಚಿಕ್ಕನಳ್ಳಿ ಸಂಪರ್ಕ ರಸ್ತೆ ಕಡಿತ ಗೊಂಡಿರುತ್ತದೆ. ಸದರಿ ಜಾಗಕ್ಕೆ ನೂಡಲ್ ಅಧಿಕಾರಿಗಳು, ಕಂದಾಯ ಪರಿವೀಕ್ಷಕರು, ಪೊಲೀಸ್ ಇಲಾಖೆಯವರು ಭೇಟಿ ನೀಡಿರುತ್ತಾರೆ. ಸದರಿ ರಸ್ತೆಯಲ್ಲಿ ಸಾರ್ವಜನಿಕರಿಗೆ ಸಂಚಾರ ಮಾಡದಂತೆ ಬ್ಯಾರಿಕೆಡ್ ಹಾಕಲಾಗಿರುತ್ತದೆ.
ಕುಶಾಲನಗರ ಪಟ್ಟಣದಲ್ಲಿ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ ಕುಶಾಲನಗರ, ಜು. 8: ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ಹೃದಯಭಾಗದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಯಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯ ರಸ್ತೆಯಲ್ಲಿ ಆಳವಾದ ಗುಂಡಿಯನ್ನು ತೋಡಿರುವ ಹಿನ್ನೆಲೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮಳೆ ಸುರಿಯುತ್ತಿರುವ ಕಾರಣ ಗುಂಡಿಯಲ್ಲಿ ನೀರು ನಿಂತು ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ದ್ವಿಚಕ್ರ ವಾಹನ ಸವಾರರು ಅಪಾಯದ ನಡುವೆ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಪಾದಚಾರಿಗಳಿಗೂ ಓಡಾಟ ದುಸ್ತರವಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸುರಕ್ಷತಾ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದರೂ, ರಸ್ತೆ ಕಿರಿದಾಗಿರುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ವ್ಯಾಪಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಮಳೆಗಾಲದಲ್ಲಿ ಇಂತಹ ಕಾಮಗಾರಿಗಳು ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತ್ವರಿತ ಕ್ರಮ ಕೈಗೊಂಡು ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಸೋಮವಾರ ಮಲ್ಲಳ್ಳಿ ಜಲಪಾತದಲ್ಲಿ ನೀರಿನ ಸಮೀಪಕ್ಕೆ ತೆರಳಲು ನಿಷೇಧ ವಿಧಿಸಿದ್ದರು ಅದನ್ನು ಮೀರಿ ನೀರಿನಲ್ಲಿ ತೇಲಿ ಹೋಗುತ್ತಿದ್ದ ಯುಬಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದರು. ಇಂದು ಯುವಕರ ಮೇಲೆ ಪ್ರಕರಣ ದಾಖಲಿಸಿದ ಕೊಡಗು ಪೊಲೀಸರು ದಂಡ ವಿಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಯಾರೇ ಇಂತಹ ದುಸಸಾಹಸಕ್ಕೆ ತೊಡಗಿಸಿಕೊಂಡರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ತಿಳಿಸಿದ್ದಾರೆ.
SIR ವೇಳೆ ವಲಸಿಗರ ದ್ವಿತೀಯ ಮತದಾರರ ಗುರುತಿನ ಚೀಟಿ ಕುರಿತು ತನಿಖೆಗೆ ಮನವಿ ಮಡಿಕೇರಿ, ಜುಲೈ 6: ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಕೇರಳ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಮೂಲದ ಕೆಲ ವಲಸಿಗರು ತಮ್ಮ ಮೂಲ ರಾಜ್ಯಗಳಲ್ಲಿಯೂ ಹಾಗೂ ಕರ್ನಾಟಕದಲ್ಲಿಯೂ ಮತದಾರರ ಗುರುತಿನ ಚೀಟಿ ಹೊಂದಿರಬಹುದೆಂಬ ಶಂಕೆ ವ್ಯಕ್ತವಾಗಿರುವುದಾಗಿ ಸಾಮಾಜಿಕ ಹೋರಾಟಗಾರ ಪ್ರತೀಕ್ ಪೊನ್ನಣ್ಣ ತಿಳಿಸಿದ್ದಾರೆ. ಈ ಸಂಬಂಧ ಮಾನ್ಯ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ಕೊಡಗು ಜಿಲ್ಲಾಧಿಕಾರಿಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ. “ಕೆಲವು ವಲಸಿಗರು ಎರಡು ರಾಜ್ಯಗಳಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿರಬಹುದೆಂಬ ಮಾಹಿತಿ ಹಾಗೂ ಅನುಮಾನ ವ್ಯಕ್ತವಾಗಿದೆ. ಒಬ್ಬ ವ್ಯಕ್ತಿಗೆ ಒಂದೇ ಮತದಾರರ ನೋಂದಣಿ ಇರಬೇಕು. ಎರಡು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಅದು ಕಾನೂನು ಹಾಗೂ ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿರುತ್ತದೆ. ಆದ್ದರಿಂದ ಈ…
