Author: Kodagu-admin

ಮಳೆಯಿಂದಾಗುವ ಅನಾವುತಗಳಿಗೆ ಜಿಲ್ಲಾಡಳಿತ ಪ್ರತಿ ವರ್ಷ ನಿರಾಶ್ರಿತರಿಗೆ ಟಾರ್ಪಲ್ ವಿತರಿಸುತ್ತದೆ. ಹಲವಾರು ವರ್ಷಗಳಿಂದ ಮಳೆ, ನೆರೆ ಸಮಸ್ಯೆಯಿಂದ ಶಾಶ್ವತ ಪರಿಹಾರ ಅಪೇಕ್ಷಿಸುವ ನಿರಾಶ್ರಿತರಿಗೆ ಕಾಳಜಿ ಕೇಂದ್ರ ಜೊತೆಗೆ ಟಾರ್ಪಲ್ ಭಾಗ್ಯ ಮಾತ್ರ ಅನ್ನೋದು ಈಗ ಮಾಮೂಲಿಯಾಗಿದೆ ನೋಡಿ.. ಒಂದು ಟಾರ್ಪಲ್ಈ ವಿತರಿಸಿ ಅದೇನೋ ಸಾಧನೆ ಮಾಡಿದ ಹಾಗೆ ಫೋಟೋ ಕ್ಲಿಕ್ಕಿಸಿ ಕಳುಹಿಸುವ ಅಧಿಕಾರಿಗಳಿಗೆ ಏನನ್ನಬೇಕೋ ದೇವರೇ ಬಲ್ಲ.. ಈ ವರ್ಷದ ಮೊದಲ ಉದಾಹರಣೆ ಇಲ್ಲಿದೆ. ಈ ದಿನ ಭಾರಿ ಗಾಳಿ ಮಳೆಗೆ ಬೆಳಿಕಿಕೊಪ್ಪ ಚೌಡ್ಲು ಗ್ರಾಮ ಪಂಚಾಯಿತಿ ಸೋಮವಾರಪೇಟೆ ವ್ಯಾಪ್ತಿಯ ಲೀಲಾ ಎಂಬುವವರ.. ಮನೆಯ ಮುಂಭಾಗ ಸಂಪೂರ್ಣ ತಡೆ ಗೋಡೆ ಕುಸಿದಿದ್ದು ನೋಡಲ್ ಅಧಿಕಾರಿ ಕಂದಾಯ ಅಧಿಕಾರಿಗಳು ಪಿಡಿಒ ಹಾಗೂ ಇಂಜಿನಿಯರ್ ಅವರ ಸಮಕ್ಷಮದಲ್ಲಿ ಸ್ಥಳ ಪರಿಶೀಲನ ಮಾಡಲಾಯಿತು ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಟಾರ್ಪಲ್ ವಿತರಿಸಲಾಯಿತು.

Read More

ಮಲ್ಲಳ್ಳಿ ಜಲಪಾತದಲ್ಲಿ ಅವಘಡ ತಪ್ಪಿತು: ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಸ್ಥಳೀಯ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದೆ. ಆಂಧ್ರಪ್ರದೇಶದಿಂದ ಪ್ರವಾಸಕ್ಕೆ ಬಂದಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಬಂಡೆಯನ್ನು ಹಿಡಿದು ಸುಮಾರು ಒಂದು ಗಂಟೆ ಕಾಲ ಪರದಾಡಿದ ಘಟನೆ ಸೋಮವಾರ ನಡೆದಿದೆ. ರಕ್ಷಣೆಗೊಂಡ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಮೂಲದ ಗಣೇಶ್ ನಾಯಕ್ (21) ಹಾಗೂ ಸಂತೋಷ್ ಕುಮಾರ್ (23) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ಆಗಮಿಸಿದ್ದರು. ಮಾಹಿತಿಯ ಪ್ರಕಾರ, ಜಲಪಾತದ ಬಳಿ ಅಳವಡಿಸಲಾಗಿದ್ದ ಸುರಕ್ಷತಾ ಬೇಲಿಯನ್ನು ಲೆಕ್ಕಿಸದೆ ಇಬ್ಬರು ವಿದ್ಯಾರ್ಥಿಗಳು ಹೊಳೆಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದೇ ವೇಳೆ ಮೇಲ್ಭಾಗದಲ್ಲಿರುವ ಜಲವಿದ್ಯುತ್ ಉತ್ಪಾದನಾ ಘಟಕದಿಂದ ನೀರನ್ನು ಹರಿಸಲಾಯಿತು. ನೀರು ಬಿಡುವ ಮೊದಲು ನಿಯಮಾನುಸಾರ ಸೈರನ್ ಮೊಳಗಿಸಲಾಗಿದ್ದರೂ, ನೀರಿನಲ್ಲಿ ತಲ್ಲೀನರಾಗಿದ್ದ ವಿದ್ಯಾರ್ಥಿಗಳಿಗೆ ಅದರ…

Read More

ಮೂರು ದಿನವಾದರು ಮರದ ದಿಮ್ಮಿ ತೆರವುಗೊಳಿಸದ ಅರಣ್ಯ ಇಲಾಖೆ ಅಪಾಯದ ಅರಿವಿಲ್ಲದೆ ಸಂಚರಿಸುತ್ತಿದೆ ನಿತ್ಯ ಸಾವಿರಾರು ವಾಹನಗಳು ಕಳೆದ ಎರಡು ದಿನಗಳ ಹಿಂದೆ ಮಡಿಕೇರಿ ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಬೋಯಿಕೇರಿ ಬಳಿ ಬಾರಿ ಗಾಳಿ ಮಳೆಗೆ ಬೃಹದಾಕಾರದ ಮರವೊಂದು ಹೆದ್ದಾರಿಗೆ ಮುರಿದು ಬಿದ್ದಿತ್ತು. ಬಳಿಕ ಅರಣ್ಯ ಇಲಾಖೆ ಮರವನ್ನು ಕತ್ತರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿತ್ತು.. ಆದರೆ ಈಗೇನಾಗಿದೆ? ಮರವನ್ನು ಕತ್ತರಿಸಿ ದೊಡ್ಡ ದೊಡ್ಡ ದಿಮ್ಮಿಗಳನ್ನು ರಸ್ತೆ ಬಂಡಿಯಲ್ಲೇ ಬಿಟ್ಟು ಅಲ್ಲಿಂದ ಕಾಲ್ಕಿತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತೆ ಅತ್ತ ಕಡೆ ಬರಲೇ ಇಲ್ಲ. ಪರಿಣಾಮ ದಿಮ್ಮಿಗಳು ರಸ್ತೆಗೆ ಅಂಟಿಕೊಂಡಿದ್ದು ತಿರುವಿನಿಂದ ಬರುವ ವಾಹನಗಳಿಗೆ ಅಪಾಯವನ್ನು ತಂದೊಡ್ಡುವ ಸಾಧ್ಯತೆಯಿದೆ. ಮಳೆ ಹೆಚ್ಚಾಗಿರುವುದರಿಂದ ರಾತ್ರಿ ಸಂಚರಿಸುವ ವಾಹನಗಳಿಗೆ ಈ ದೊಡ್ಡ ದೊಡ್ಡ ಮರದ ದಿಮ್ಮಿಗಳು ಅಪಾಯದ ಸೂಚನೆಯನ್ನು ನೀಡಿದ್ದು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಕಾಡಾನೆ-ಮಾನವ ಸಂಘರ್ಷ ನಿಯಂತ್ರಣದಲ್ಲಿ ವಿಫಲವಾದ ರಾಜ್ಯ ಸರ್ಕಾರ ಮಡಿಕೇರಿ: ಕಾಡಾನೆ-ಮಾನವ ಸಂಘರ್ಷ ನಿಯಂತ್ರಣದಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿಯಿಂದ “ಜನಾಕ್ರೋಶ ವಾಹನ ಜಾಥಾ” ನಡೆಯಿತು. ಭಾಗಮಂಡಲ, ಸೋಮವಾರಪೇಟೆ, ಕುಟ್ಟ, ಸಿದ್ದಾಪುರ, ತೊರೆನೂರು ಭಾಗಗಳಿಂದ ಆಗಮಿಸಿದ 700ಕ್ಕೂ ಹೆಚ್ಚು ರೈತರು, ಕಾರ್ಯಕರ್ತರು ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡರು. ಸಂಸದ ಯದುವೀ‌ರ್ ಒಡೆಯ‌ರ್, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಎಂಎಲ್ಸಿ ಸುಜಾಕುಶಾಲಪ್ಪ ಪಾಲ್ಗೊಂಡಿದ್ದರು. “ಬಿಜೆಪಿ ಅವಧಿಯಲ್ಲಿ 120 ಕೋಟಿ, ಕಾಂಗ್ರೆಸ್‌ ಸರ್ಕಾರ 120 ಕೋಟಿ ಅನುದಾನ ಘೋಷಿಸಿತ್ತು. ಆದರೆ ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ಎಷ್ಟು ಮಾಡಿದ್ದೀರಿ?” ಎಂದು ಬೋಪಯ್ಯ ಪ್ರಶ್ನಿಸಿದರು. ಆನೆ ಹಾವಳಿಯಿಂದ ಕಾರ್ಮಿಕರು ತೋಟಕ್ಕೆ ಹೋಗಲು ಭಯಪಡುತ್ತಿದ್ದಾರೆ ಎಂದು ಹೇಳಿದರು. ಸಿ ಮತ್ತು ಡಿ ಲ್ಯಾಂಡ್ ಅರಣ್ಯಕ್ಕೆ ವರ್ಗಾವಣೆ ಆದೇಶದಿಂದ ಸೋಮವಾರಪೇಟೆಯಲ್ಲಿ 5000 ಕುಟುಂಬಗಳು ಸಂಕಷ್ಟದಲ್ಲಿವೆ” ಎಂದು ಅಪ್ಪಚ್ಚು ರಂಜನ್ ಆರೋಪಿಸಿದರು. ಸಂಸದ ಯದುವೀ‌ರ್ ಮಾತನಾಡಿ “ವನ್ಯಜೀವಿ ಸಂಘರ್ಷಕ್ಕೆ ಕೇಂದ್ರ 350 ಕೋಟಿ ರೂ. ಅನುದಾನ ನೀಡಿದೆ. ಆದರೆ…

Read More

ವಿರಾಜಪೇಟೆ ಹೋಬಳಿ ಬೇಟೋಳಿ ಗ್ರಾಮದ ನಿವಾಸಿ ಸಿಂಧು ರವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಮರ ಬಿದ್ದು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ವಿರಾಜಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

Read More

ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ : ಸಚಿವ ಯು.ಟಿ. ಖಾದರ್ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯನ್ನು ಎದುರಿಸಲು ಸಜ್ಜಾಗುವಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ನಿರ್ದೇಶನ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಭಾನುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸದ್ಯ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಬೇಕು. ಜೊತೆಗೆ ‘ಎಲ್ ನಿನೊ’ ಪರಿಣಾಮದಿಂದ ಕಡಿಮೆ ಮಳೆಯಾದಲ್ಲಿ ಅನಾವೃಷ್ಠಿಯನ್ನೂ ಸಹ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು. ಪ್ರಾಕೃತಿಕ ವಿಕೋಪಗಳು ಯಾರನ್ನು ಕೇಳಿ ಬರುವುದಿಲ್ಲ. ಆದರೆ, ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಸ್ಪಂದಿಸುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ…

Read More

ಎಸ್.ಐ.ಆರ್ ಕಾರ್ಯಕ್ರಮ: ಪೊನ್ನಂಪೇಟೆ ಬೆಳ್ಳೂರಿನಲ್ಲಿ ಅರ್ಜಿ ಸಲ್ಲಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಶಾಸಕ ಪೊನ್ನಣ್ಣ ಪೊನ್ನಂಪೇಟೆ: ರಾಜ್ಯಾದ್ಯಂತ ನಡೆಯುತ್ತಿರುವ ಎಸ್.ಐ.ಆರ್ ಕಾರ್ಯಕ್ರಮದ ಭಾಗವಾಗಿ ಇಂದು ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಬೆಳ್ಳೂರಿನಲ್ಲಿರುವ ಪೊನ್ನಣ್ಣ ಅವರ ನಿವಾಸದಲ್ಲಿ ಅರ್ಜಿ ಭರ್ತಿ ಮಾಡುವ ಮೂಲಕ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು ಎಂದು ಹೇಳಿದರು. “ಮತದಾನ ಎಂಬುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಯಾರೂ ಇದನ್ನು ಕಸಿದುಕೊಳ್ಳದಂತೆ ನಾವೆಲ್ಲರೂ ಜಾಗೃತಿ ವಹಿಸಿಕೊಳ್ಳಬೇಕು” ಎಂದು ಅವರು ಹೇಳಿದರು. ಕೊನೆಯಲ್ಲಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ಪೊನ್ನಣ್ಣ ಮನವಿ ಮಾಡಿದರು.

Read More

ಪೊನ್ನಂಪೇಟೆ ಶಾಲೆಯ ತಡೆಗೋಡೆ ಕುಸಿತ ಪೊನ್ನಂಪೇಟೆ : ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯ ಪರಿಣಾಮವಾಗಿ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ತಡೆಗೋಡೆಯೊಂದು ಕುಸಿದು ಬಿದ್ದಿದೆ. ತಡೆಗೋಡೆ ಕುಸಿದ ಪರಿಣಾಮ ಅದರ ಸಮೀಪದಲ್ಲೇ ನಿರ್ಮಿಸಲಾಗಿರುವ ಶೌಚಾಲಯಕ್ಕೂ ಧಕ್ಕೆ ಉಂಟಾಗಿದ್ದು, ಅದು ಕೂಡ ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿಯಲ್ಲಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಕೆಲವೇ ದಿನಗಳ ಹಿಂದೆ ಶಾಲೆಯ ಪಕ್ಕದಲ್ಲಿರುವ ಖಾಸಗಿ ನಿವೇಶನದಲ್ಲಿ ಕಾಮಗಾರಿ ನಡೆಸುವ ಉದ್ದೇಶದಿಂದ ತಡೆಗೋಡೆಯ ತಳಭಾಗದ ಮಣ್ಣನ್ನು ಜೆಸಿಬಿ ಯಂತ್ರದ ಮೂಲಕ ತೆಗೆದುಹಾಕಲಾಗಿತ್ತು. ಇದರಿಂದ ತಡೆಗೋಡೆಯ ಅಡಿಪಾಯ ದುರ್ಬಲಗೊಂಡಿದ್ದು, ನಿರಂತರ ಮಳೆಯಿಂದ ಮಣ್ಣು ಸಡಿಲವಾಗಿ ಗೋಡೆ ಕುಸಿದಿರುವುದು ಸ್ಥಳದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ಬಿ.ಎಂ ವಿಜಯ್ ಮಾತನಾಡಿ, ಪ್ರಸ್ತುತ ಮಳೆಗಾಲ ಇನ್ನೂ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಉಳಿದಿರುವ ತಡೆಗೋಡೆಯೂ ಅಪಾಯದ ಸ್ಥಿತಿಯಲ್ಲಿದೆ. ಗೋಡೆ ಸಂಪೂರ್ಣ ಕುಸಿದರೆ ಶಾಲಾ ಕಟ್ಟಡ, ಶೌಚಾಲಯ ಹಾಗೂ ಶಾಲಾ ಆವರಣಕ್ಕೆ ಮತ್ತಷ್ಟು…

Read More

ಜ್ಞಾನ ಜ್ಯೋತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಮಿತಾ ಕೇಂದ್ರ ಸರ್ಕಾರದ ‘ಪ್ರೇರಣಾ’ ಕಾರ್ಯಕ್ರಮಕ್ಕೆ ಆಯ್ಕೆ ಜ್ಞಾನ ಜ್ಯೋತಿ ಶಾಲೆಯ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಪಮಿತಾ ಕೇಂದ್ರ ಶಿಕ್ಷಣ ಸಚಿವಾಲಯದ ಪ್ರತಿಷ್ಠಿತ ‘ಪ್ರೇರಣಾ’ (PRERANA) ಪ್ರಾಯೋಗಿಕ ಕಲಿಕಾ ಕಾರ್ಯಕ್ರಮಕ್ಕೆ ಹೆಮ್ಮೆಯಿಂದ ಆಯ್ಕೆಯಾಗಿದ್ದಾಳೆ. ಈ ವಿಶೇಷ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಪಮಿತಾ ಜುಲೈ 9ರಂದು ಪ್ರಯಾಣ ಬೆಳೆಸಲಿದ್ದಾಳೆ. ದೇಶದ ಯುವ ಪೀಳಿಗೆಯಲ್ಲಿ ನಾಯಕತ್ವದ ಗುಣಗಳು, ದೇಶಭಕ್ತಿ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಭಾರತ ಸರ್ಕಾರ ಜಾರಿಗೆ ತಂದಿರುವ ಈ ಕಾರ್ಯಕ್ರಮವು ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯನ್ನು ಒಳಗೊಂಡಿದೆ. ಜಿಲ್ಲಾ ಮಟ್ಟದಲ್ಲಿ ನಡೆದ ‘ಪ್ರೇರಣಾ ಉತ್ಸವ’ದ ಸ್ಪರ್ಧೆಗಳು, ವ್ಯಕ್ತಿತ್ವ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪಮಿತಾ ಈ ಅಪೂರ್ವ ಅವಕಾಶವನ್ನು ಮುಡಿಗೇರಿಸಿಕೊಂಡಿದ್ದಾಳೆ. ಈ ಆಯ್ಕೆಯ ಮೂಲಕ ಪಮಿತಾ ಗುಜರಾತ್‌ನ ವಾಡ್‌ನಗರದಲ್ಲಿರುವ ಐತಿಹಾಸಿಕ ಶಾಲೆಯಲ್ಲಿ ನಡೆಯಲಿರುವ ಒಂದು ವಾರದ ಉಚಿತ ವಸತಿ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲಿದ್ದಾಳೆ.…

Read More