Author: Kodagu-admin

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಒಟ್ಟು 14 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ತಲಕ್ಕೇರಿ ನಿವಾಸಿ ನಿಮಿಲ್‌ ಆ‌ರ್.ಕೆ (37), ಮಡಿಕೇರಿಯ ಹಾಕತ್ತೂರು ನಿವಾಸಿಗಳಾದ ಇರ್ಶಾದ್ (40) ಮತ್ತು ಮುಸ್ತಾಫ (49) ಬಂಧಿತರು.

Read More

ಕೆಎಸ್‌ಎಫ್‌ಎ ಅಂತರ ಜಿಲ್ಲಾ ಫುಟ್‌ಬಾಲ್ ಟೂರ್ನಿಗೆ ಕೊಡಗು ತಂಡ ಜುಲೈ 7ರಿಂದ ತುಮಕೂರಿನಲ್ಲಿ ಪಂದ್ಯಾವಳಿ ಅಮ್ಮತ್ತಿಯಲ್ಲಿ ತಂಡ ಘೋಷಣೆ ವಿಜೇಶ್‌ಗೆ ನಾಯಕತ್ವ ವರದಿ ಅಶೋಕ್_ಮಡಿಕೇರಿ ಮಡಿಕೇರಿ, ಜು. 3: ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆ (KSFA) ಆಶ್ರಯದಲ್ಲಿ ತುಮಕೂರಿನಲ್ಲಿ ಜುಲೈ 7ರಿಂದ 17ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲಾ ಫುಟ್‌ಬಾಲ್ ಸಂಸ್ಥೆ (KDFA) ತನ್ನ 18 ಸದಸ್ಯರ ತಂಡವನ್ನು ಶುಕ್ರವಾರ ಅಮ್ಮತ್ತಿ ಮೈದಾನದಲ್ಲಿ ಅಧಿಕೃತವಾಗಿ ಪ್ರಕಟಿಸಿತು. ಜಿಲ್ಲೆಯ ವಿವಿಧ ಭಾಗಗಳಿಂದ ಪ್ರತಿಭಾವಂತ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಈ ಬಾರಿ ಕೊಡಗು ತಂಡ ಉತ್ತಮ ಸಾಧನೆ ಮಾಡುವ ವಿಶ್ವಾಸ ವ್ಯಕ್ತವಾಗಿದೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಬಲಿಷ್ಠ ತಂಡಗಳು ಸೆಣಸಲಿದ್ದು, ಕೊಡಗು ತಂಡದ ನಾಯಕತ್ವವನ್ನು ವಿಜೇಶ್ ಕೆ.ಎಂ. ಅವರಿಗೆ ವಹಿಸಲಾಗಿದೆ. ಅನುಭವಿ ಹಾಗೂ ಯುವ ಆಟಗಾರರ ಸಮನ್ವಯದೊಂದಿಗೆ ತಂಡವನ್ನು ರೂಪಿಸಲಾಗಿದ್ದು, ಜಿಲ್ಲೆಯ ಫುಟ್‌ಬಾಲ್ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ. *ಆಯ್ಕೆಯಾದ…

Read More

ವಿಷಯ:- ನಮ್ಮ ಹೆಮ್ಮೆಯ ಪ್ರದಾನಿ ಮೋದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗೌರವಕ್ಕೆ ಧಕ್ಕೆ ಮಾಡಿರುವ ಬಗ್ಗೆ ದೂರು. ನಾನು ಪೊನ್ನಂಪೇಟೆ ತಾಲೂಕು ನಿವಾಸಿಯಾಗಿದ್ದು, ವಿರಾಜಪೇಟೆ-ಪೊನ್ನಂಪೇಟೆ ಬಿ.ಜೆ.ಪಿ ಮಂಡಳ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಪೊನ್ನಂಪೇಟೆ ತಾಲೂಕು ನಾಯರ್ ಸೊಸಾಯಿಟಿಯ ಮಾಜಿ ಅಧ್ಯಕ್ಷ ಹಾಗೂ ಬಿ.ಎಸ್.ಎನ್.ಎಲ್ ನಿವೃತ್ತ ನೌಕರ ಪವಿತ್ರನ್ ರವರು ನಮ್ಮ ಹೆಮ್ಮೆಯ ಪ್ರದಾನಿ ಮೋದಿಯವರನ್ನು ಸಾಮಾಜಿಕ ಜಾಲತಾಣದಲ್ಲಿ ‘ನಾಲಾಯಕ್ ಸೂಳೆಮಗ’ ಎಂಬ ಪದಗಳಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಇದರಿಂದ ಮಾನ್ಯ ಪ್ರದಾನಿಯವರ ಗೌರವಕ್ಕೆ ಧಕ್ಕೆ ಹಾಗೂ ಮಾನ ಹಾನಿ ಉಂಟುಮಾಡಿರುತ್ತಾರೆ. ಆದುದರಿಂದ ತಾವುಗಳು ಸದರಿ ಪವಿತ್ರನ್ ರವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇನೆ. ໖: 03/07/2026 ತಮ್ಮ ವಿಶ್ವಾಸಿ, ಲಗತ್ತುಗಳು ಇದರೊಂದಿಗೆ ಪವಿತ್ರನ್ ರವರ ಆಡಿಯೋ ಸಿ.ಡಿಯನ್ನು ಲಗತ್ತಿಸಿದೆ.

Read More

ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಿ: ಕೆ.ಎನ್.ಫಣೀಂದ್ರ ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಬಳಿ ಸಂಗ್ರಹಿಸಲಾಗುವ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಕಸ ವಿಲೇವಾರಿ ಘಟಕದ ಗೇಟ್ ಬಳಿಗೆ ಇಳಿಯುತ್ತಿದ್ದಂತೆ ರಸ್ತೆಯನ್ನೇ ಸರಿಯಾಗಿ ಇಟ್ಟುಕೊಂಡಿಲ್ಲ, ಇನ್ನು ಕಸವನ್ನು ಹೇಗೆ ವಿಲೇವಾರಿ ಮಾಡುತ್ತಿದ್ದೀರ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕನಿಷ್ಟ ಓಡಾಡಲು ರಸ್ತೆ ಸುಗಮವಾಗಿರಬೇಕು. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಸವನ್ನು ವಿಲೇವಾರಿ ಮಾಡುವುದು ಹೀಗೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಸ ವಿಲೇವಾರಿ ಘಟಕ ಕೇಂದ್ರ ನಿರ್ವಹಣೆ ತುಂಬಾ ಕಳಪೆಯಿಂದ ಕೂಡಿದ್ದು, ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡುತ್ತಿಲ್ಲ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಿಟ್ಟಾದರು. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ ಕಸ ವಿಲೇವಾರಿ ಮಾಡಬೇಕು. ಆ ಕೆಲಸ ಇಲ್ಲಿ ಆಗುತ್ತಿಲ್ಲ. ಕಸದಿಂದ ಸೋರುವ ನೀರು ಎಲ್ಲಿಗೆ ಹೋಗುತ್ತಿದೆ ಎಂಬ ಬಗ್ಗೆ…

Read More

ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ಮಡಿಕೇರಿ:-ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಬಳಿ ಸಂಗ್ರಹಿಸಲಾಗುವ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಕಸ ವಿಲೇವಾರಿ ಘಟಕದ ಗೇಟ್ ಬಳಿಗೆ ಇಳಿಯುತ್ತಿದ್ದಂತೆ ರಸ್ತೆಯನ್ನೇ ಸರಿಯಾಗಿ ಇಟ್ಟುಕೊಂಡಿಲ್ಲ, ಇನ್ನು ಕಸವನ್ನು ಹೇಗೆ ವಿಲೇವಾರಿ ಮಾಡುತ್ತಿದ್ದೀರ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕನಿಷ್ಟ ಓಡಾಡಲು ರಸ್ತೆ ಸುಗಮವಾಗಿರಬೇಕು. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಸವನ್ನು ವಿಲೇವಾರಿ ಮಾಡುವುದು ಹೀಗೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಸ ವಿಲೇವಾರಿ ಘಟಕ ಕೇಂದ್ರ ನಿರ್ವಹಣೆ ತುಂಬಾ ಕಳಪೆಯಿಂದ ಕೂಡಿದ್ದು, ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡುತ್ತಿಲ್ಲ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಿಟ್ಟಾದರು. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ ಕಸ ವಿಲೇವಾರಿ ಮಾಡಬೇಕು. ಆ ಕೆಲಸ ಇಲ್ಲಿ ಆಗುತ್ತಿಲ್ಲ. ಕಸದಿಂದ ಸೋರುವ ನೀರು ಎಲ್ಲಿಗೆ ಹೋಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದೆಯೇ ಎಂದು…

Read More

ಕೊಡಗಿನ ಯುವತಿ ಈಗ ಕರ್ನಾಟಕದ ಹೆಮ್ಮೆ ಒಡಿಶಾ ರಾಜ್ಯದ ಭುವನೇಶ್ವರದಲ್ಲಿ ನಡೆದ 65ನೇ ರಾಷ್ಟ್ರೀಯ ಅಂತಾರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ವನಿತೆಯರ 200 ಮೀ. ಓಟದಲ್ಲಿ 23.40 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದು ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್‌ ಗೇಮ್ಸ್‌ಗೆ ಆಯ್ಕೆಯಾಗಿರುವ ಕೊಡಗು ಮೂಲದ ಕರ್ನಾಟಕದ ಹೆಮ್ಮೆ ಉನ್ನತಿ ಅಯ್ಯಪ್ಪ ಬೊಲ್ಲಂಡ ಅವರಿಗೆ ಅಭಿನಂದನೆಗಳು. ನಿಮ್ಮ ಕ್ರೀಡಾ ಸಾಧನೆಯು ಭವಿಷ್ಯದ ಕ್ರೀಡಾಪಟುಗಳಿಗೆ ಮಾದರಿಯಾಗಲಿ. ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಗೆದ್ದು ಕರ್ನಾಟಕದ ಮತ್ತು ದೇಶದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಹಾರೈಸುತ್ತೇವೆ.

Read More

ಕೊಡಗಿಗೆ ಉಪ ಲೋಕಾಯುಕ್ತ ಕೆ. ಎನ್ ಪಣೀಂದ್ರ ಭೇಟಿ ಮಾನ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್ ಪಣೀಂದ್ರ ಅವರು ನಗರದ ಹೊರ ವಲಯದಲ್ಲಿರುವ ಕಸ ವಿಲೇವಾರಿ ಘಟಕ, ನಗರದ ಮಾರುಕಟ್ಟೆ, ksrtc ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

Read More

ಶ್ವಾಸಕೋಶದ ಸೋಂಕಿನಿಂದ ಉರಗತಜ್ಞ ಮಹಮ್ಮದ್ ಅನೀಸ್ ನಿಧನ ಕಾಳಿಂಗ ಸರ್ಪದ ಬಗ್ಗೆ ಅದ್ಯಯನ ನಡೆಸಿದ್ದ ಅನೀಸ್ ಉರಗ ತಜ್ಞ, ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿಯ ಮುಖ್ಯದ್ವಾರದ ವಿನ್ಯಾಸಕಾರ ಮಹಮ್ಮದ್ ಅನೀಸ್(55) ಶ್ವಾಸಕೋಶ ಸೋಂಕಿನಿಂದಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಬೆಂಗಳೂರಿನವರಾದ ಇವರು ಹಾವುಗಳನ್ನು ಹಿಡಿಯುವ, ನಂತರದಲ್ಲಿ ಅವುಗಳ ಬಗ್ಗೆ ಅಧ್ಯಯನ ನಡೆಸಿ ಸಾರ್ವಜನಿಕರಲ್ಲಿ ಉರಗಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಇವರು ಹತ್ತು ವರ್ಷಗಳ ಹಿಂದೆ ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿಯಲ್ಲಿ ಜಮೀನು ಖರೀದಿಸಿ, ತಮ್ಮದೇ ಆದ ವೈಲ್ಡ್ನೆಸ್ ರೀಟ್ರೀಟ್ ಎಂಬ ಸಂಸ್ಥೆ ಹುಟ್ಟು ಹಾಕಿ, ಆಮೂಲಕ ವನ್ಯಜೀವಿಗಳು ಅದರಲ್ಲೂ ಹಾವಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಬೆಂಗಳೂರಿನಲ್ಲಿ ಸಾವಿರಾರು ಹಾವುಗಳನ್ನು ಹಿಡಿದು ಜೀವಕಂಠಕವನ್ನು ತಪ್ಪಿಸಿದ್ದ ಇವರನ್ನು ಸ್ನೇಕ್ ಅನೀಸ್ ಎಂದೇ ಪ್ರಖ್ಯಾತರಾಗಿದ್ದರು. ನಾಗರಹೊಳೆ ಹೆಬ್ಬಾಗಿಲ ಗಜಪಯಣ ಆರಂಭವಾಗುವ ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿಯ ಮುಖ್ಯದ್ವಾರವನ್ನು ಆಕರ್ಷಕವಾಗಿ ನಿರ್ಮಿಸುವಲ್ಲಿ ಹಾಗೂ ಆನೆದಾಳಿಗೊಳಗಾದ ನಾಗರಹೊಳೆ ಉದ್ಯಾನದ ಮುಖ್ಯಸ್ಥರಾಗಿದ್ದ ದಿ.ಮಣಿಕಂದನ್ರ ಹೆಸರಿನಲ್ಲಿ ವೀರನಹೊಸಹಳ್ಳಿ ವಲಯದಲ್ಲಿ ನಿರ್ಮಿಸಿರುವ ಕಳ್ಳಭೇಟೆ ತಡೆ ಶಿಬಿರವನ್ನು ಸಹ…

Read More

ನೆಲ್ಯಾಹುದಿಕೇರಿ ಶಾಲಾ ಪರಿಸರ ಭಾಗದಲ್ಲಿ ಒಂಟಿಸಲಗದ ಕಾಟ ವರ್ಷಗಳು ಉರುಳಿದರು ನೆಲ್ಲಿಯಾಹುದಿಕೇರಿ ಕಾಫೀ ತೋಟ ಒಂದರಲ್ಲಿ ಸೇರಿರುವ ಆನೆಯನ್ನು ಅರಣ್ಯಕ್ಕೆ ಅಟ್ಟುವ ಸುಳಿವೇ ಇಲ್ಲಾ ಆನೆ ಕಾಡಿಗಟ್ಟುವ ಕಾರ್ಯಚರಣೆ ನಡೆಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ಮಕ್ಕಳು ಓಡಾಡುವ ಪರಿಸರದಲ್ಲಿ ಅಗ್ಗಾಗ್ಗೆ ಈ ಆನೆ ಪ್ರತ್ಯಕ್ಷವಾಗುತ್ತಿರುತ್ತದೆ. ಗ್ರಾಮಸ್ಥರು ಅರಣ್ಯಇಲಾಖೆಗೆ ಮಾಹಿತಿ ನೀಡಿದರು ಯಾವುದೇ ಪ್ರಯೋಜನವಿಲ್ಲ ಯಾವುದಾದರೊಂದು ಜೀವ ಆನೆಗೆ ಬಲಿಯಾಗುವ ವರೆಗೂ ಅರಣ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತದೆ.

Read More

ಮನುಜ ಮತದ ತತ್ವದಡಿ ಕರ್ತವ್ಯ ಪರರಾಗಿ. – ಸಾಬು ವರ್ಗಿಸ್ ಕರೆ. ಮಡಿಕೇರಿ ಜು. 1 – ವಿಶ್ವವೇ ಮೆಚ್ಚುವ ಮಹಾತ್ಮಾ ಗಾಂಧೀಜಿ ಮತ್ತು ಜ್ಞಾನ ಸಂಪನ್ನರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳಂತೆ ನಾವೆಲ್ಲರೂ ಮನುಜರು ಎನ್ನುವ ವಿಶಾಲ ಚಿಂತನೆಗಳಡಿ ನಾವೆಲ್ಲರೂ ಕರ್ತವ್ಯ ಪರರಾಗಬೇಕೆಂದು ಸಮಾಜಸೇವಕರು ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಸಾಬು ವರ್ಗಿಸ್ ಕರೆ ನೀಡಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಬಿ. ಎಸ್. ಗೋಪಾಲಕೃಷ್ಣ ರಸ್ತೆಯಲ್ಲಿನ ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ “ಪತ್ರಿಕಾ ದಿನಾಚರಣೆ” ಮತ್ತು ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬರು ಮೈಮುಚ್ಚುವಂತೆ ವಸ್ತçವನ್ನು ತೊಡುವವರೆಗೂ ತಾನು ಅವರಂತೆಯೇ ಇರುವುದಾಗಿ ಬದುಕಿನುದ್ದಕ್ಕೂ ಅರೆಬೆತ್ತಲೆಯಾಗಿ ಬದುಕು ನಡೆಸಿದ ಮಹಾತ್ಮಾ ಗಾಂಧೀಜಿ ಹಾಗೂ ಹಲವಾರು ಪದವಿಗಳನ್ನು ಪಡೆದ ಡಾ.ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು ಹಾಗೂ ಅವರ ತತ್ವಾದರ್ಶ ಚಿಂತನೆಗಳಿಗೆ ತಕ್ಕಂತೆ ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸುವವರು…

Read More