- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
- ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
- ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
Author: Kodagu-admin
ಮಡಿಕೇರಿ ಆ. 19- ಪ್ರತಿಯೊಬ್ಬರು ಛಾಯಾಗ್ರಾಹಕರೇ ಆಗಿರುವ ಪ್ರಸ್ತುತ ಕಾಲ ಘಟ್ಟದಲ್ಲಿ, ತೆಗೆಯುವ ಫೋಟೋಗಳಲ್ಲಿ ಮನಸ್ಸನ್ನು ಕೇಂದ್ರೀಕರಿಸಿ “ಮೌಲ್ಯ”ವನ್ನು ತುಂಬುವ ಪ್ರಯತ್ನ ಮಾಡಬೇಕಾಗಿದೆಯೆಂದು ಖ್ಯಾತ ಛಾಯಾಗ್ರಾಹಕರು, ಪಕ್ಷಿ ತಜ್ಞರು ಆದ ಡಾ.ಎಸ್.ವಿ.ನರಸಿಂಹನ್ ಕರೆ ನೀಡಿದರು. ಕೊಡಗು ಪತ್ರಕರ್ತರ ಸಂಘ ಮತ್ತು ವೀರಾಜಪೇಟೆ ತಾಲ್ಲೂಕು ಪತ್ರPರ್ತರ ಸಂಘದ ವತಿಯಿಂದ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ “ವಿಶ್ವ ಛಾಯಾಗ್ರಹಣ ದಿನಾಚರಣೆ-2026″ನ್ನು ಕ್ಯಾಮೆರಾದಿಂದ ಛಾಯಾಚಿತ್ರವನ್ನು ಕ್ಲಿಕ್ಕಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಫಿಲ್ಮ್ ರೋಲ್ ಗಳನ್ನು ಳಸಿ ಛಾಯಾಗ್ರಹಣ ಮಾಡುತ್ತಿದ್ದ ಹಳೆಯ ಕಾಲ ಘಟ್ಟದಲ್ಲಿ ಛಾಯಾಗ್ರಾಹಕ ಮತ್ತು ಪತ್ರಕರ್ತರು ಬೇರೆ ಬೇರೆಯಾಗಿ ಗುರುತಿಸಲ್ಪಡುತ್ತಿದ್ದರು. ಡಿಜಿಟಲ್ ಛಾಯಾಗ್ರಹಣ ಬಂದ ಬಳಿಕ ಒಟ್ಟು ಛಾಯಾಗ್ರಹಣದ ಆಯಾಮವೇ ಬದಲಾವಣೆಯನ್ನು ಕಂಡು ಕೊಂಡಿದೆ. ಪ್ರಸ್ತುತ ಅತ್ಯುನ್ನತ ತಂತ್ರಜ್ಞಾನದ ಮೊಬೈಲ್‌ಗಳ ಮೂಲಕ ಗುಣಮಟ್ಟದ ಛಾಯಾಗ್ರಹಣ ಸಾಧ್ಯವಾಗಿದೆಯೆಂದು ನರಸಿಂಹನ್ ತಿಳಿಸಿದರು. ಮೈಕ್ರೋ ಪೋಟೋಗ್ರಾಫಿಯತ್ತ ಆಸಕ್ತರಾಗಿ- ಛಾಯಾಗ್ರಹಣದತ್ತ ಆಸಕ್ತಾಗಿರುವವರು ಸೂಕ್ಷಾತಿಸೂಕ್ಷ್ಯವಾದ “ಮೈಕ್ರೋ…
ಮಡಿಕೇರಿ: ಕೊಡಗಿನ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಅಂಡರ್-17 ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ರಾಜ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರ್ಷಿತ್, ಸಾಯಿ ಹಾಗೂ ಜೀವಿತ್ ಫಾರ್ವರ್ಡ್ ಆಟಗಾರರಾಗಿದ್ದು, ಶೋಬಿತ್ ಗೋಲ್ ಕೀಪರ್ ಆಗಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ತರಬೇತುದಾರ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ಆಗಸ್ಟ್ 21ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಗೋವಾ ವಿರುದ್ಧ ಕರ್ನಾಟಕ ತಂಡದ ಮೊದಲ ಪಂದ್ಯ ನಡೆಯಲಿದೆ. ನಾಲ್ವರು ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. KODAGUNEWS
ಕರ್ನಾಟಕ ಅಂಡರ್-17 ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳ ಆಯ್ಕೆ ಮಡಿಕೇರಿ: ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಂಡರ್-17 ತಂಡವನ್ನು ಪ್ರತಿನಿಧಿಸಲಿದ್ದಾರೆ. ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ ಹಾಗೂ ಜೀವಿತ್ ಚಂಗಪ್ಪ ಅವರು ಫಾರ್ವರ್ಡ್ ಆಟಗಾರರಾಗಿ, ಶೋಬಿತ್ ಕೆ.ಎಲ್. ಅವರು ಗೋಲ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಾಲೆಯ ಕ್ರೀಡಾ ತರಬೇತುದಾರರಾದ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ಕರ್ನಾಟಕ ತಂಡವು ಆಗಸ್ಟ್ 21ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಗೋವಾ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಅರಣ್ಯ ಸಚಿವರ ಗಮನ ಸೆಳೆದ ಪೊನ್ನಣ್ಣ ಮಾನವ–ವನ್ಯಜೀವಿ ಸಂಘರ್ಷ, ಜಮ್ಮಾಬಾಣೆ ಸಮಸ್ಯೆ ಕುರಿತು ವಿಸ್ತೃತ ಚರ್ಚೆ; ಆ.28ರಂದು ಕೊಡಗು ಭೇಟಿ ಸಾಧ್ಯತೆ ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ತೀವ್ರವಾಗುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು. ಕೊಡಗು ಜಿಲ್ಲೆ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಎದುರಾಗುತ್ತಿರುವ ವನ್ಯಜೀವಿ ಹಾವಳಿ, ಮಾನವ–ವನ್ಯಜೀವಿ ಸಂಘರ್ಷದಿಂದ ಜನರು ಅನುಭವಿಸುತ್ತಿರುವ ಸಂಕಷ್ಟ ಹಾಗೂ ಜಮ್ಮಾಮಲೆ ವಿಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಚಿವರಿಗೆ ಪೊನ್ನಣ್ಣ ಅವರು ಸಂಪೂರ್ಣ ಮಾಹಿತಿಯನ್ನು ನೀಡಿದರು. ವನ್ಯಜೀವಿಗಳ ಹಾವಳಿಯಿಂದ ಜನರು ಹಾಗೂ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸಚಿವರಿಗೆ ಮನವಿ ಮಾಡಿದರು.…
ಟಿ ಎ ಸಲೀಂ ಇವನು ಕರ್ನಾಟಕ (ಕೊಡಗು)ಹಾಗೂ ಕೇರಳ ರಾಜ್ಯಗಳಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈತನು ನಿನ್ನೆ ದಿನಾಂಕ 16-08-26 ರಂದು ಕೊಡಗಿಗೆ(ವಿರಾಜಪೇಟೆ) ಬಂದಿರುವ ಸಂಶಯವಿದ್ದು ತಮ್ಮ ಗ್ರಾಮದ ದೇವಸ್ಥಾನಗಳು ಚರ್ಚ್ ಮಸೀದಿಗಳಲ್ಲಿ ಇರುವ ಬಂಡಾರ ದ ಬಗ್ಗೆ ಗಮನವಿರಲಿ ಆದಷ್ಟು ಸೆಕ್ಯೂರಿಟಿ ಮಾಡಿಕೊಳ್ಳಬೇಕಾಗಿ ತಮ್ಮಲ್ಲಿ ಮನವಿ.ಹಾಗೂ ಗ್ರಾಮದಲ್ಲಿ ಯಾರೇ ಅಪರಿಚಿತ ಅಥವಾ ಅನುಮಾನಾಸ್ಪದ ವ್ಯಕ್ತಿ ಕಂಡು ಬಂದಲ್ಲಿ ನಮಗಾಗಲಿ ಅಥವಾ 948080 4955 ಪಿಎಸ್ಐ ವಿರಾಜಪೇಟೆ town ಇವರಿಗೆ ಕರೆ ಮಾಡಬೇಕಾಗಿ ಮನವಿ
ವಿರಾಜಪೇಟೆಯ 11 ಗ್ರಾಮಗಳಲ್ಲಿ ಸೆಕ್ಷನ್ 144 ಜಾರಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಹಿನ್ನೆಲೆ ಮುನ್ನೆಚ್ಚರಿಕೆ; ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ವಿರಾಜಪೇಟೆ: ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವಿರಾಜಪೇಟೆ ತಾಲ್ಲೂಕಿನ 11 ಗ್ರಾಮಗಳ ವ್ಯಾಪ್ತಿಯಲ್ಲಿ ಇಂದು (ಆ.18) ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅನ್ವಯ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಕಾವಡಿ, ಹಬ್ಬಿನಾಡು, ಬೇರಂಬಾಡ, ಕಣ್ಣಂಗಾಲ, ಹಾಲುಗುಂದ, ಯಡೂರು, ಚಿಕ್ಕನಳ್ಳಿ, ಗುಂಡ, ಪುಲಿಯೇರಿ, ಅಮತ್ತಿ ಹಾಗೂ ಕರಡಿಗೋಡು ಗ್ರಾಮಗಳ ವ್ಯಾಪ್ತಿಯಲ್ಲಿ ಈ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳ ಚಲನವಲನದ ಮೇಲೆ ನಿಗಾ ವಹಿಸಿ, ನಾಡಿಗೆ ಬಂದಿರುವ ಆನೆಗಳನ್ನು ಸುರಕ್ಷಿತವಾಗಿ ಕಾಡಿನತ್ತ ಓಡಿಸುವ ಕಾರ್ಯಾಚರಣೆ ನಡೆಸಲಿದ್ದಾರೆ. ಕಾರ್ಯಾಚರಣೆಯ ವೇಳೆ ಸಾರ್ವಜನಿಕರು ಸ್ಥಳಕ್ಕೆ ತೆರಳಿ ಆನೆಗಳನ್ನು ಹಿಂಬಾಲಿಸುವುದು ಅಥವಾ ಗುಂಪುಗೂಡುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ…
ಮಡಿಕೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಮಂತರ್ ಗೌಡ ಧ್ವನಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಶಾಸಕ ಡಾ. ಮಂತರ್ ಗೌಡ ಅವರು ಇಂದು ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ಗ್ರಾಮೀಣ ಭಾಗದ ರಸ್ತೆಗಳಿಗೆ ಅನುದಾನ ಹಾಗೂ ಮಳೆಹಾನಿಯಿಂದ ಮನೆ ಕುಸಿದು ಹಾನಿಗೊಳಗಾದವರಿಗೆ ಬಾಕಿ ಉಳಿದಿರುವ ಪರಿಹಾರ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸದನದಲ್ಲಿ ಒತ್ತಾಯಿಸಿದರು. ಮಡಿಕೇರಿ, ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನ ಹಾಗೂ ಪರಿಹಾರ ಒದಗಿಸುವಂತೆ ಸರ್ಕಾರದ ಗಮನಕ್ಕೆ ತಂದರು.
ಜಾನಪದ ಯುವ ಬ್ರಿಗೇಡ್ ಕೊಡಗು ಜಿಲ್ಲಾ ಸಂಚಾಲಕರಾಗಿ ಸುಜಯ್ ಟಿ.ಪಿ. ನೇಮಕ ಮಡಿಕೇರಿ: ಕನ್ನಡ ಜಾನಪದ ಪರಿಷತ್ ಅಂಗಸಂಸ್ಥೆಯಾದ ಜಾನಪದ ಯುವ ಬ್ರಿಗೇಡ್‌ನ ಕೊಡಗು ಜಿಲ್ಲಾ ಸಂಚಾಲಕರಾಗಿ ಪೊನ್ನಂಪೇಟೆ ತಾಲೂಕಿನ ನೆಮ್ಮಲೆ ಗ್ರಾಮದ ಸುಜಯ್ ಟಿ.ಪಿ. ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್ ರಾಜ್ಯಾದ್ಯಂತ ಜಾನಪದ ಸಂರಕ್ಷಣೆ, ಜಾನಪದ ಕಲೆ ಹಾಗೂ ಕಲಾವಿದರ ಅಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಅಂಗಸಂಸ್ಥೆಯಾಗಿ 2020ರಲ್ಲಿ ಜಾನಪದ ಯುವ ಬ್ರಿಗೇಡ್ ಸ್ಥಾಪನೆಯಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ವಿಚಾರ ಸಂಕಿರಣಗಳು ಹಾಗೂ ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಯುವಜನತೆ ದೇಶದ ಭವಿಷ್ಯವಾಗಿದ್ದು, ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಜಾನಪದ ಚಟುವಟಿಕೆಗಳನ್ನು ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗೆ ವಿಸ್ತರಿಸುವ ಉದ್ದೇಶದಿಂದ ಸುಜಯ್ ಟಿ.ಪಿ. ಅವರನ್ನು ಕೊಡಗು ಜಿಲ್ಲಾ ಸಂಚಾಲಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಹೋಬಳಿ ಹಾಗೂ ಗ್ರಾಮಮಟ್ಟದ ಸಂಚಾಲಕರನ್ನು ಆಯ್ಕೆ ಮಾಡಿಕೊಂಡು ಜಾನಪದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಜವಾಬ್ದಾರಿಯನ್ನು ಅವರಿಗೆ…
ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ನೀಡಲಾಗುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಪುತ್ರಿ ಡಾ. ಅನುಶ್ರೀ ಅವರ ‘ಹ್ಯಾಪಿಟೀತ್ ಡೆಂಟಲ್ ಕ್ಲಿನಿಕ್’ ಹೆಸರಿನಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ, ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಉಪಸಂಪಾದಕ ಉಜ್ವಲ್ ರಂಜಿತ್ ಅವರ ‘ನೋವಿಂದ ನರಳುತ್ತಿರುವ ಗಜರಾಜ’ ಚಿತ್ರ ಆಯ್ಕೆಯಾಗಿದೆ. ಕೊಡಗು ಪತ್ರಕರ್ತರ ಸಂಘದಿಂದ ಮಳೆಗಾಲದ ಪ್ರಕೃತಿ ಸೌಂದರ್ಯವನ್ನು ಬಿಂಬಿಸುವ ಅತ್ಯುತ್ತಮ ವೀಡಿಯೋಗ್ರಫಿಗಾಗಿ ನೀಡಲಾಗುವ ಪ್ರಶಸ್ತಿಗೆ ಕೊಡಗು ಚಾನೆಲ್‌ನ ಕ್ಯಾಮೆರಾಮನ್ ಹನೀಫ್ ಅವರ ವೀಡಿಯೋ ಆಯ್ಕೆಯಾಗಿದೆ. 3- ಗುಂಡುಕುಟ್ಟಿ ಎಸ್ಟೇಟ್ ಮಾಲೀಕ ಜಿ.ಎಂ..ಮಹೇಂದ್ರ ಅವರು ತಮ್ಮ ತಂದೆ ಜಿ.ಎಂ. ಮೋಹನ್ ಹೆಸರಿನಲ್ಲಿ ನೀಡುವ ದತ್ತಿನಿಧಿ ಪ್ರಶಸ್ತಿ ಕಾಫಿ ಉದ್ಯಮದ ಕುರಿತ ವರದಿಗೆ ವಿನೋದ್ ಮೂಡಗಡ್ಡೆ ಅವರ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕಾಫಿ ಬೆಳೆಯಿಂದ ಹಸನಾದ ಕೃಷಿಕ…
ಶಿಲ್ಪಿ ಎಸ್ಟೇಟ್‌ನಲ್ಲಿ ಕಾಡಾನೆ ದಾಳಿ: ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ಕಾಡಾನೆ ದಾಳಿ ನಡೆಸಿದ್ದು, ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಪಾವರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದೇ ವೇಳೆ ಮತ್ತೋರ್ವ ಕಾರ್ಮಿಕ ಜಾದವ್ ಪಾವರಿ ಮೇಲೂ ಆನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರ ಮೇಲೂ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
