Author: Kodagu-admin

ದ್ವಿತೀಯ ಪಿಯುಸಿ ಫಲಿತಾಂಶ ಫಾತಿಮತ್ ಜಸ್ನ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಕೊಡಗು:- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆಯ ಸಂತ ಅನ್ನಮ್ಮ ಪಿ. ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಜಸ್ನ ಜೆ 520/600 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಅಬ್ದುಲ್ ಜುಬೇರ್ ಹಾಗೂ ಉಮೈಬಾ ದಂಪತಿಗಳ ಪುತ್ರಿಯಾಗಿದ್ದಾರೆ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಕುಟುಂಬಕ್ಕೆ ಕಾಲೇಜಿಗೆ ಮತ್ತು ಊರಿಗೆ ಕೀರ್ತಿ ತಂದಿದ್ದಾರೆ.

Read More

ಇತಿಹಾಸ ಪುಟ ಸೇರಿದ ಟೌನ್‍ಹಾಲ್ ಕಾವೇರಿ ಕಲಾಕ್ಷೇತ್ರ ನೂತನ ಕಲಾಭವನ ನಿರ್ಮಾಣಕ್ಕೆ ಡಾ.ಮಂತರ್ ಗೌಡ ಭೂಮಿಪೂಜೆ ನಗರದ ನಗರಸಭೆ ಆವರಣದಲ್ಲಿರುವ ಹಳೆಯ ಕಾವೇರಿ ಕಲಾಕ್ಷೇತ್ರ(ಟೌನ್ ಹಾಲ್) ಕಟ್ಟಡವನ್ನು ತೆರವುಗೊಳಿಸಿ ಸುಸಜ್ಜಿತವಾದ ಎರಡು ಅಂತಸ್ತಿನ ವಾಹನ ನಿಲುಗಡೆ ಹಾಗೂ 450 ಆಸನ ಒಳಗೊಂಡ ಸಭಾಭವನ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚುರಂಜನ್, ಎಂ.ಸಿ.ನಾಣಯ್ಯ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರೀರ ಮೋಹನ್‍ದಾಸ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಾಳಚಂಡ ಅಪ್ಪಣ್ಣ, ಎಸ್.ಸಿ.ಸತೀಶ್,…

Read More

ನಾಳೆಯಿಂದ ಕೊಂಡಂಗೇರಿ ಮಖಾಂ ಉರೂಸ್ ಆರಂಭ- ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಉರೂಸ್ ಆಚರಣೆಗೆ ನಿರ್ಧಾರ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ಇತಿಹಾಸ ಪ್ರಸಿದ್ಧ ಕೊಂಡಂಗೇರಿ ಮಖಾಂ ಉರೂಸ್ ಸಮಾರಂಭವು ಏ. 10ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಂಡಂಗೇರಿ ಸುನ್ನೀ ಮುಸ್ಲಿಂ ಜಮಾಅತ್ ಅಧ್ಯಕ್ಷ ಪೇರಿಯಂಡ. ಎ.ಯೂಸುಫ್ ಹಾಜಿ ತಿಳಿಸಿದ್ದಾರೆ. ಕೊಂಡಂಗೇರಿ ಜಮಾಅತ್ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷ ಯೂಸುಫ್ ಹಾಜಿ ಅವರು ಉರೂಸ್ ಸಮಾರಂಭ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದು ಜಾತಿ,ಧರ್ಮ, ಭೇದ ಮರೆತು ಸರ್ವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಜಮಾಅತ್ ಕಾರ್ಯದರ್ಶಿ ಪಿ. ಎ.ಮುಜೀಬ್ ಮಾತನಾಡಿ ಏ.10ರ ಶುಕ್ರವಾರ ಜುಮಾ ನಮಾಜಿನ ಬಳಿಕ ಕೊಂಡಂಗೇರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಯೂಸುಫ್ ಹಾಜಿ ಹಾಗೂ ಉಪಾಧ್ಯಕ್ಷರಾದ ಬಶೀರ್ ಅವರು ಜಂಟಿಯಾಗಿ ದ್ವಜಾರೋಹಣ ನೆರವೇರಿಸುವ ಮೂಲಕ…

Read More

ಶಾಸಕ ಡಾ ಮಂತರ್ ಗೌಡ ರವರಿಗೆ ಕೋರಿಕೆ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು ಮಡಿಕೇರಿ ನಗರದ ಕನ್ನಂಡಬಾಣೆ ನಿವಾಸಿಗಳು ಇಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರನ್ನು ಭೇಟಿ ಮಾಡಿ ತಡೆಗೋಡೆ ನಿರ್ಮಿಸುವಂತೆ ಕೋರಿಕೆ ಸಲ್ಲಿಸಿದರು. ಕನ್ನಂಡಬಾಣೆಗೆ ಸುಸಜ್ಜಿತವಾದ ಕಾಂಕ್ರೀಟ್ ರಸ್ತೆ ನಿರ್ಮಿಸಿದ ಹಿನ್ನಲೆಯಲ್ಲಿ ಧನ್ಯವಾದಗಳನ್ನು ಸಲ್ಲಿಸಿದ ನಿವಾಸಿಗಳು ರಸ್ತೆಯ ಅಂಚಿನಲ್ಲಿ(ಕನ್ನಂಡಬಾಣೆ ಕೃಷ್ಣ ಲೈನ್ ದಾರಿ) ಅಪಾಯಕಾರಿ ತಿರವು ಇದ್ದು ವಾಹನಗಳು ಗುಂಡಿಗೆ ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ ತಡಗೋಡೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಮನವಿಯನ್ನು ಆಲಿಸಿದ ಶಾಸಕರು ಈ ವರ್ಷದ ತಮ್ಮ ಶಾಸಕರ ನಿಧಿಯಿಂದ ತಡೆಗೋಡೆ ನಿರ್ಮಿಸಿಕೊಡುವ ಭರವಸೆ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರೊಂದಿಗೆ ತೆರಳಿದ ನಿಯೋಗದಲ್ಲಿ ದೇವಯ್ಯ,ಪಿ.ಎಂ.ಜಗದೀಶ್,ಬಾಳಾಡಿ ಪ್ರತಾಪ್ ಕುಮಾರ್,ಪ್ರಸನ್ನ ಭರತ್,ಯತೀನ್ ಮತ್ತಿತರರು ಉಪಸ್ಥಿತರಿದ್ದರು.

Read More

ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲಿಸಿ: ದಿನಕರ ಶೆಟ್ಟಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಪೊಲೀಸ್ ಉಪ ಅಧೀಕ್ಷಕರಾದ ದಿನಕರ ಶೆಟ್ಟಿ ಅವರು ದೂರು ಅರ್ಜಿ ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರಿಂದ ಸಲ್ಲಿಕೆಯಾದ 6 ಅರ್ಜಿಗಳಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು. ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸರ್ಕಾರಿ ನೌಕರರು ಸ್ಪಂದಿಸುವಂತಾಗಬೇಕು. ಆಗದಿರುವ ಕೆಲಸಕ್ಕೆ ಹಿಂಬರಹ ನೀಡುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಕೆಲಸ ಸಾರ್ವಜನಿಕರ ಕೆಲಸವಾಗಿದ್ದು, ಅದನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ದಿನಕರ ಶೆಟ್ಟಿ ಅವರು ಎಚ್ಚರಿಸಿದರು. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಮನವಿಗಳಿಗೆ ಒಂದು ಅಥವಾ ಎರಡು ವರ್ಷವಾದರೂ ಬಗೆಹರಿಸಿಲ್ಲ. ಹೀಗೆ…

Read More

ಸಂಸದರಿಂದ ಪಾಸ್‍ಪೋರ್ಟ್ ಮೇಳಕ್ಕೆ ಚಾಲನೆ ಕೊಡಗು ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್‍ಪೋರ್ಟ್ ಮೇಳಕ್ಕೆ ಬುಧವಾರ ಚಾಲನೆ ದೊರೆಯಿತು. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಸ್‍ಪೋರ್ಟ್ ಮೇಳಕ್ಕೆ ಚಾಲನೆ ನೀಡಿದರು. ಕೊಡಗು ಜಿಲ್ಲೆಯ ಜನರು ಪಾಸ್‍ಪೋರ್ಟ್‍ಗಾಗಿ ದೂರದ ಊರಿಗೆ ಹೋಗುತ್ತಿದ್ದರು. ಆ ನಿಟ್ಟಿನಲ್ಲಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆ ಬೆಂಗಳೂರಿನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿ ಅವರು ಮೂರು ದಿನಗಳ ಕಾಲ ಪಾಸ್‍ಪೋರ್ಟ್ ಮೇಳ ಹಮ್ಮಿಕೊಂಡಿದ್ದು, ಈಗಾಗಲೇ ನೋಂದಣಿ ಮಾಡಿರುವವರು ಇದರ ಪ್ರಯೋಜನವನ್ನು ಪಡೆಯುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಸಭೆ ಸದಸ್ಯರು, ಪಾರ್ಸ್ ಪೋರ್ಟ್ ಮೇಳದ ಅಧಿಕಾರಿಗಳು ಇತರರು ಇದ್ದರು. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಕೊಡಗು ಜಿಲ್ಲೆಯಲ್ಲಿ ಪಾಸ್‍ಪೆÇೀರ್ಟ್…

Read More

ವಿರಾಜಪೇಟೆ ಆರ್ಜಿ ಗ್ರಾಮದ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಸರಬರಾಜು:-ನಾಲ್ವಾರು ಆರೋಪಿಗಳು ಅಂದರ್ ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣ ವ್ಯಾಪ್ತಿಯ ಅರ್ಜಿ ಗ್ರಾಮದ ಹೆಗ್ಗಡ ಜಂಕ್ಷನ್ ಸಮೀಪ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸರಬರಾಜು ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ 7-4-2026ರಂದು ದಾಳಿ ನಡೆಸಿ ಆರೋಪಿಗಳನ್ನು ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಸದರಿ ಆರೋಪಿಗಳ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ 20(b) NDPS ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. …

Read More

ಮಡಿಕೇರಿ‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಲ‌ಜೀವನ್ ಮಿಷನ್ 2.0 ಪ್ರಗತಿ‌ ಪರಿಶೀಲನೆ ಸಭೆ- ಸಂಸದ ಯದುವೀರ್ ಒಡೆಯರ್ ಭಾಗಿ ಸಂಸದ ಯದುವೀರ್ ಒಡೆಯರ್ ಅವರು ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಲ ಜೀವನ್ ಮಿಷನ್ 2.0 ಯೋಜನೆಯ ಅನುಷ್ಠಾನ ಕುರಿತು ಆಯೋಜಿಸಿರುವ ಸಭೆಯಲ್ಲಿ ಪಾಲ್ಗೊಂಡು ಪ್ರಗತಿ ಪರಿಶೀಲಿಸಿ,ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಜಿಲ್ಲಾಧಿಕಾರಿ,ಜಿ.ಪಂ ಸಿಇಒ ಭಾಗವಹಿಸಿದರು.

Read More

ಕೊಡಗು ಪತ್ರಕರ್ತರ ಸಂಘ (ರಿ)ದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ ಮಡಿಕೇರಿ: ಕೊಡಗು ಪತ್ರಕರ್ತರ ಸಂಘ (ರಿ) ದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದ ನೂತನ ಸದಸ್ಯತ್ವಕ್ಕೆ 800 ಹಾಗೂ ಕ್ಷೇಮನಿಧಿ ಸಮಿತಿಗೆ 200 ಸೇರಿದಂತೆ 1000 ರೂ ಹಾಗೂ ಸದಸ್ಯತ್ವ ನವೀಕರಣಕ್ಕೆ ರೂ 500 ಹಾಗೂ ಕ್ಷೇಮನಿಧಿ ಸಮಿತಿಗೆ 100 ಸೇರಿದಂತೆ 600 ರೂ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30, 2026 ಕೊನೆಯ ದಿನಾಂಕವಾಗಿದೆ ಸ್ಥಳೀಯ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ ಮಟ್ಟದ ಪತ್ರಿಕೆ ಮತ್ತು ಮಾಧ್ಯಮಗಳು,ವಾರಪತ್ರಿಕೆ, ಪಾಕ್ಷಿಕಗಳು, ವೆಬ್ ನ್ಯೂಸ್ ಸೇರಿದಂತೆ ಅಧಿಕೃತ ಸುದ್ದಿಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಸಂಪಾದಕರು, ಸಂಪಾದಕರು, ಉಪ ಸಂಪಾದಕರು, ವರದಿಗಾರರು, ಬಿಡಿ ವರದಿಗಾರರು, ಛಾಯಾಚಿತ್ರಗಾರರು, ಕ್ಯಾಮೆರಾ ಮ್ಯಾನ್ ಗಳು ಹಾಗೂ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ಸಹಿಯೊಂದಿಗೆ ಎರಡು ಭಾವ ಚಿತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು ಅರ್ಜಿಗಳಿಗಾಗಿ 9449290718, 9844060174, 9901657211 ದೂರವಾಣಿಯನ್ನು ಸಂಪರ್ಕಿಸಿ…

Read More

ಅರಣ್ಯದಲ್ಲಿ ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ: ಚಂದ್ರದ್ರೋಣ ಪರ್ವತದಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಆಕೆ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಇದೀಗ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆಗಳು ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ. ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ…

Read More