Author: Kodagu-admin

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ: ವೀಣಾ ಅಚ್ಚಯ್ಯ ಅಭಿನಂದನೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ, ಅವರನ್ನು ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮೊದಲ ಬಾರಿಗೆ ಭೇಟಿಯಾದರು. ಈ ವೇಳೆ ಪೊನ್ನಣ್ಣ ಅವರ ನೂತನ ಜವಾಬ್ದಾರಿಗೆ ಶುಭಾಶಯ ತಿಳಿಸಿದ ವೀಣಾ ಅಚ್ಚಯ್ಯ, ಹೊಸ ಹೊಣೆಗಾರಿಕೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ಹಾರೈಸಿದರು. 

Read More

ಕೊಡಗು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ತೆರಳಿ ಪೂಜೆ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ ತಲಕಾವೇರಿಗೆ ತೆರಳಿದ ಉಷಾ ಶಿವಕುಮಾರ್ ಅವರು ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು. ಇದೇ ವೇಳೆ ಭಾಗಮಂಡಲದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ತಲಕಾವೇರಿಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಕೊಡಗಿನ ಮಹಿಳಾ ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕೊಡಗಿಗೆ ಪ್ರತ್ಯೇಕ ಯೋಜನೆ: ಸಿಎಂ ಡಿ.ಕೆ.ಶಿವಕುಮಾರ್ ಭರವಸೆ ಮಡಿಕೇರಿ: ಕೊಡಗು ಜಿಲ್ಲೆಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕವಾದ ಬೃಹತ್ ಯೋಜನೆ ರೂಪಿಸಿ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಭಾಗಮಂಡಲದಲ್ಲಿ ಕಾವೇರಿ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು. ಮುಖ್ಯಮಂತ್ರಿಯಾಗಿ ಕೊಡಗಿಗೆ ಆಗಮಿಸಿದ ಸಂದರ್ಭದಲ್ಲಿ ಕಾರ್ಯಕರ್ತರು ನೀಡಿದ ಅದ್ಧೂರಿ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್, ಶಾಸಕ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡಗಿನಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. “ನಿಮ್ಮೆಲ್ಲರ ಪ್ರತಿನಿಧಿಯಾಗಿ, ನಿಮ್ಮ ಶಾಸಕರೊಂದಿಗೆ ಕೈಜೋಡಿಸಿ ಕೊಡಗಿಗೆ ವಿಶೇಷ ಯೋಜನೆ ನೀಡಲು ಬದ್ಧನಿದ್ದೇನೆ” ಎಂದು ಅವರು ಹೇಳಿದರು. ಇದೇ ವೇಳೆ 2028ರಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ಮಡಿಕೇರಿಯ ಜನರಲ್…

Read More

ಓಂ ಶ್ರೀ ಭಗಂಡೇಶ್ವರ್ಯೈ ನಮಃ” ಎಂದು ಭಕ್ತಿಭಾವದಿಂದ ದೇವರನ್ನು ಸ್ಮರಿಸಿ ನಾಡಿನ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ ಭಾಗಮಂಡಲ, ಆ.16: ಕೊಡಗು ಜಿಲ್ಲೆಯ ಪವಿತ್ರ ಕ್ಷೇತ್ರವಾದ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರ್ಮಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಡಿನಲ್ಲಿ ಉತ್ತಮ ಮಳೆಯಾಗಿ, ಸಮೃದ್ಧ ಬೆಳೆ ಬೆಳೆದು ಅನ್ನದಾತರ ಬದುಕು ಹಸನಾಗಲಿ. ರಾಜ್ಯದ ಜನತೆಯ ಮೇಲೆ ಶ್ರೀ ಭಗಂಡೇಶ್ವರ ಸ್ವಾಮಿಯ ಕೃಪೆ ಸದಾ ಇರಲಿ ಎಂದು ಮುಖ್ಯಮಂತ್ರಿ ಅವರು ಪ್ರಾರ್ಥಿಸಿದರು. ಭಗಂಡೇಶ್ವರ ದೇವರ ದರ್ಶನಕ್ಕೂ ಮುನ್ನ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ದಂಪತಿ, ಬಳಿಕ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. “ಓಂ ಶ್ರೀ ಭಗಂಡೇಶ್ವರ್ಯೈ ನಮಃ” ಎಂದು ಭಕ್ತಿಭಾವದಿಂದ ದೇವರನ್ನು ಸ್ಮರಿಸಿ ನಾಡಿನ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು.

Read More

ಭಾಗಮಂಡಲ ಭಗಂಡೇಶ್ವರನ ಸನ್ನಿಧಿಯಲ್ಲಿ ಸಿಎಂ ದಂಪತಿ; ನಾಡಿನ ಸಮೃದ್ಧಿಗಾಗಿ ವಿಶೇಷ ಪೂಜೆ ಮಡಿಕೇರಿ, ಆ.16: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಭಾನುವಾರ ಕೊಡಗಿನ ಪುಣ್ಯಕ್ಷೇತ್ರ ಭಾಗಮಂಡಲಕ್ಕೆ ಭೇಟಿ ನೀಡಿ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ದಂಪತಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಭಗಂಡೇಶ್ವರ ದೇವಾಲಯಕ್ಕೆ ತೆರಳಿ ಶ್ರೀ ಮಹಾಗಣಪತಿ, ಶ್ರೀ ಮಹಾವಿಷ್ಣು ಹಾಗೂ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು. ನಾಡಿನಲ್ಲಿ ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆ ಬರಲಿ. ಜನರಿಗೆ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ದೊರೆಯಲಿ ಎಂದು ಮುಖ್ಯಮಂತ್ರಿ ಅವರು ದೇವರಲ್ಲಿ ಪ್ರಾರ್ಥಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ…

Read More

ಮುಖ್ಯಮಂತ್ರಿಯಾದ ಬಳಿಕ ಕೊಡಗಿಗೆ ಡಿಕೆ ಶಿವಕುಮಾರ್ ಮೊದಲ ಭೇಟಿ — ಭಗಂಡೇಶ್ವರನಿಗೆ ವಿಶೇಷ ಪೂಜೆ ಭಾಗಮಂಡಲ: ಮಳೆಯ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಭಾಗಮಂಡಲಕ್ಕೆ ಆಗಮಿಸಿದರು. ಮುಖ್ಯಮಂತ್ರಿಯಾದ ಬಳಿಕ ಕೊಡಗು ಜಿಲ್ಲೆಗೆ ಇದು ಅವರ ಮೊದಲ ಭೇಟಿ. ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿದ ಸಿಎಂ ಅವರನ್ನು ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರ ಸ್ವಾಮಿ, ಐಜಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಅರುಣ್ ಮಾಚಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ತೆರಳಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಗಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹೆಲಿಕಾಪ್ಟರ್ ಮೂಲಕ ಮಡಿಕೇರಿಗೆ ತೆರಳಲಿರುವ ಸಿಎಂ ಅವರನ್ನು ಸ್ವಾಗತಿಸಲು ಜನರಲ್ ತಿಮ್ಮಯ್ಯ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಸಜ್ಜಾಗಿದ್ದಾರೆ.…

Read More

ಮಡಿಕೇರಿ ಕೋಟೆ ಆವರಣದಲ್ಲಿ ರಾರಾಜಿಸಿದ ತ್ರಿವರ್ಣ ಧ್ವಜ ಮಡಿಕೇರಿ: ಆ 15 ಕೊಡಗು ಜಿಲ್ಲಾಡಳಿತ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗಣ್ಯಾತಿ ಗಣ್ಯರಿಂದ ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಆಚರಿಸಲಾಯಿತು. ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಕುರಿತು ಮಾತನಾಡಿ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಅಸಂಖ್ಯಾತ ಮಹನೀಯರ ತ್ಯಾಗ, ಬಲಿದಾನ ಮತ್ತು ಕನಸುಗಳನ್ನು ಸ್ಮರಿಸುವ ಪವಿತ್ರ ದಿನವನ್ನು ಆಚರಿಸುತ್ತಿದ್ದೇವೆ. ಕೊಡಗು ಎಂದರೆ ಕೇವಲ ಪ್ರಕೃತಿಯ ಸೌಂದರ್ಯವಲ್ಲ, ಇದು ಶೌರ್ಯ, ತ್ಯಾಗ, ದೇಶಪ್ರೇಮ ಮತ್ತು ಸಂಸ್ಕೃತಿಯ ಸಂಗಮವಾಗಿದೆ. ಪಶ್ಚಿಮ ಘಟ್ಟಗಳ ಹಸಿರು ಹೊದಿಕೆಯ ನಡುವೆ ಕಾವೇರಿ ಹುಟ್ಟುವ ಈ ಪುಣ್ಯಭೂಮಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ ತನ್ನದೇ ಆದ ಅಮೂಲ್ಯ ಕೊಡುಗೆಯನ್ನು ನೀಡಿದೆ. ಕೊಡಗಿನ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸಿಕೊಂಡಾಗ ಗುಡ್ಡೆಮನೆ ಅಪ್ಪಯ್ಯಗೌಡ ಅವರಂತಹ ವೀರರನ್ನು ನಾವು ಮರೆಯಲು ಸಾಧ್ಯವಿಲ್ಲ. ಬ್ರಿಟಿಷರ ವಿರುದ್ಧದ ಹೋರಾಟದ ಆರಂಭಿಕ ಅಧ್ಯಾಯಗಳಲ್ಲೇ ಕೊಡಗಿನ…

Read More

ಗೋಣಿಕೊಪ್ಪ:ಭೀಕರ ರಸ್ತೆ ಅಪಘಾತ ಗೋಣಿಕೊಪ್ಪ ವಿರಾಜಪೇಟೆ ಮುಖ್ಯ ರಸ್ತೆಯ ಹಾತೂರಿನ ಸೇತುವೆ ಹತ್ತಿರ ಪಿಕ್ ಅಪ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು ಬೈಕಿನಲಿದ್ದ ಇಬ್ಬರು ಸವಾರರ ಕಾಲು ಮುರಿದಿದ್ದು ತಲೆ ಹಾಗೂ ಇತರ ಭಾಗಗಳಿಗೆ ತೀವ್ರ ಪೆಟ್ಟಾಗಿದ್ದು ಸ್ಥಳೀಯರು ಹಾಗೂ ಇತರ ವಾಹನ ಸವಾರರ ನೆರವಿನಿಂದ ಆ್ಯಂಬುಲೆನ್ಸ್ ಮೂಲಕ ಗೋಣಿಕೊಪ್ಪ ಆಸ್ಪತ್ರೆಗೆ ರವಾನಿಸಿದ್ದು ಈ ಸಂಬಂಧ ಗೋಣಿಕೊಪ್ಪ ವೋಲಿಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ.

Read More

ವಾಂಟೆಡ್ ಬಾಲ ಚಿತ್ರದಲ್ಲಿ ಕೊಡವ ಮಹಿಳೆಯರಿಗೆ ಅವಮಾನ: ವಕೀಲ ಎಂ.ಟಿ. ಕಾರ್ಯಪ್ಪ ಆರೋಪ. “ವಾಂಟೆಡ್ ಬಾಲ” ಚಿತ್ರದಲ್ಲಿ ಕೊಡವ ಸಂಸ್ಕೃತಿಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ವಾಂಟೆಡ್ ಬಾಲ ಚಿತ್ರದಲ್ಲಿ ಕೊಡವ ಮಹಿಳೆಯರನ್ನು ಅವಮಾನಿಸುವ ರೀತಿಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದ್ದು, ಕೊಡವ ಸಂಸ್ಕೃತಿಯನ್ನೂ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ವಕೀಲ ಹಾಗೂ ಸಮಾಜ ಸೇವಕ ಎಂ.ಟಿ. ಕಾರ್ಯಪ್ಪ ಆರೋಪಿಸಿದ್ದಾರೆ. ಚಿತ್ರದಲ್ಲಿ ಪತಿ ಸೇನೆಯಲ್ಲಿ ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ತೋಟವನ್ನು ನೋಡಿಕೊಳ್ಳುವ ಕೊಡವ ಮಹಿಳೆ ಹಾಗೂ ಕಾರ್ಮಿಕ ವರ್ಗಕ್ಕೆ ಸೇರಿದ ಬ್ರೋಕರ್ ನಡುವೆ ಪ್ರೀತಿ, ಆಕರ್ಷಣೆ ಮೂಡುವ ರೀತಿಯಲ್ಲಿ ಸನ್ನಿವೇಶಗಳನ್ನು ಪರೋಕ್ಷವಾಗಿ ಚಿತ್ರಿಸಲಾಗಿದೆ. ಇದರಿಂದ ಕೊಡವ ಮಹಿಳೆಯರ ಬಗ್ಗೆ ಹೊರಗಿನ ಪ್ರೇಕ್ಷಕರಲ್ಲಿ ತಪ್ಪು ಅಭಿಪ್ರಾಯ ಮೂಡುವ ಸಾಧ್ಯತೆ ಇದೆ ಎಂದು ಕಾರ್ಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ಕಾರ್ಮಿಕರು ನಮ್ಮ ಬದುಕಿನ ಅವಿಭಾಜ್ಯ ಭಾಗವಾಗಿದ್ದು, ಅವರಿಗೆ ಗೌರವ ನೀಡುತ್ತೇವೆ. ಆದರೆ ಇಂತಹ ಕಥೆಯನ್ನು ಹೇಳಲು ಕೊಡವ ಮಹಿಳೆಯನ್ನೇ ಹಾಗೂ ಕೊಡವ ವೇಷಭೂಷಣವನ್ನೇ ಏಕೆ ಬಳಸಲಾಗಿದೆ ಎಂಬುದು ನಮ್ಮ ಪ್ರಶ್ನೆ ಎಂದು ಅವರು…

Read More

ಮಡಿಕೇರಿ: ಗಾನ ಕೋಗಿಲೆ ದಿವಂಗತ ಎಸ್. ಜಾನಕಿ ಅವರ ಸ್ಮರಣಾರ್ಥ ಮಡಿಕೇರಿಯ ಕೊಡಗು ಪತ್ರಿಕಾ ಭವನದ ಟಾಟಾ ಕಾಫಿ ಸಭಾಂಗಣದಲ್ಲಿ ಶುಕ್ರವಾರ ಗೀತ ನಮನ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನುಡಿ ನಮನ ಹಾಗೂ ಗಾನ ನಮನ ಅರ್ಪಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ‘ಶಕ್ತಿ’ ದಿನಪತ್ರಿಕೆ ಸಂಪಾದಕ ಹಾಗೂ ಗಾಯಕ ಜಿ. ಚಿದ್ವಿಲಾಸ್, ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಂಗೀತ ಲೋಕವನ್ನು ಶ್ರೀಮಂತಗೊಳಿಸಿದ ಎಸ್. ಜಾನಕಿ ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದರು. ಕಲೆ, ಸಾಹಿತ್ಯ ಹಾಗೂ ಸಂಗೀತವು ಸಮಾಜವನ್ನು ಒಗ್ಗೂಡಿಸುವ ಶಕ್ತಿ ಹೊಂದಿವೆ ಎಂದು ಹೇಳಿದರು. ಟಿ.ಜಿ. ಪ್ರೇಮಕುಮಾರ್, ಎಂ.ಪಿ. ಕೇಶವಕಾಮತ್ ಸೇರಿದಂತೆ ಗಣ್ಯರು ಮಾತನಾಡಿದರು. ಜಿಲ್ಲೆಯ ವಿವಿಧ…

Read More