- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಸಕಾಲಕ್ಕೆ ಬಾರದ ಕುಶಾಲನಗರ 108 ಆಂಬ್ಯುಲೆನ್ಸ್ *ಅಪಘಾತಕ್ಕೊಳಗಾದ ವೃದ್ಧೆಯನ್ನು ಅರ್ಧ ಗಂಟೆ ಬಳಿಕ ಆಟೋದಲ್ಲಿ ಆಸ್ಪತ್ರೆಗೆ ಕಳುಹಿಸಿದ ಸಾರ್ವಜನಿಕರು* ಕುಶಾಲನಗರ: ಗುಡ್ಡೆ ಹೊಸೂರು ಬಸವನಹಳ್ಳಿ ಹಾಡಿ ಪಕ್ಕದ ಜಂಕ್ಷನ್ ನಲ್ಲಿ ರಾತ್ರಿ ಅಂದಾಜು 7 ಗಂಟೆಗೆ ಕುಶಾಲನಗರದ ಕಡೆಯಿಂದ ಕಲ್ಲಂಗಡಿ ಹಣ್ಣು ತುಂಬಿದ ಪಿಕಪ್ ವಾಹನವೊಂದು ಡಿಕ್ಕಿಯಾಗಿ ಚಿಕಿತ್ಸೆಗೆಂದು ಕುಶಾಲನಗರ 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದರು ಬರಲು ಹಿಂದೇಟು ಹಾಕಿದ ಅವಮಾನವೀಯ ಘಟನೆಯೊಂದು ನಡೆದಿದೆ. ಘಟನೆ ವಿವರ: ಇಂದು ರಾತ್ರಿ 7 ಗಂಟೆ ಸಮಯಕ್ಕೆ ಅನೇಕಾಡು ನಿವಾಸಿಯಾಗಿರುವ ಆದಿವಾಸಿ ವೃದ್ಧೆಯೊಬ್ಬರು ರಸ್ತೆ ದಾಟುವಾಗ ಪಿರಿಯಾಪಟ್ಟಣದಿಂದ ಕಲ್ಲಂಗಡಿ ಹಣ್ಣು ತುಂಬಿಕೊಂಡು ಬರುತಿದ್ದ KA09 D9483 ಸಂಖ್ಯೆಯ ಪಿಕಪ್ ವಾಹನ ಡಿಕ್ಕಿಯಾಗಿ ವೃದ್ಧೆ ತಲೆ ಮತ್ತು ಮುಖಕ್ಕೆ ಗಾಯವಾಗಿತ್ತು. ಚಿಕಿತ್ಸೆಗಾಗಿ ಸ್ಥಳದಲ್ಲಿದ್ದ ಸರಕಾರಿ ಸಿಬ್ಬಂದಿಯೊಬ್ಬರು ತಕ್ಷಣ 108 ಸಂಖ್ಯೆಗೆ ಕರೆ ಮಾಡಿ ಘಟನೆಯ ಬಗ್ಗೆ ವಿವರಿಸಿದ ಬಳಿಕ ಬಸವನಹಳ್ಳಿಗೆ ಆಂಬ್ಯುಲೆನ್ಸ್ ಕಳಿಸುವುದಾಗಿ ಹೇಳಿದ ಕಾಲ್ ಸೆಂಟರ್ ಸಿಬ್ಬಂದಿ 15-20 ನಿಮಿಷವಾದರೂ…
ಮಾಜಿ ಶಾಸಕ ಎಂ ಪಿ ಅಪ್ಪಚ್ಚುರಂಜನ್ ರವರಿಂದ ಮಾಹಿತಿ ಕಾರ್ಯಗಾರ ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಇತರೆ ಕೂಲಿ ಕಾರ್ಮಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳ ಬಗೆಗಿನ ಮಾಹಿತಿ ಕಾರ್ಯಗಾರ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ ಪಿ ಅಪ್ಪಚುರಂಜನ್ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಗ್ರಹಣ ಸಭೆಯಲ್ಲಿ ಜಿಲ್ಲೆಯ ಮೂಲಭೂತ ಸಮಸ್ಯೆಗಳ ಕುರಿತು ಚರ್ಚೆ ದಿನಾಂಕ 07-03-2026 ರಂದು ಶನಿವಾರ ವಿರಾಜಪೇಟೆಯ ಪ್ರವಾಸಿಮಂದಿರದಲ್ಲಿ ಕರ್ನಾಟಕರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಪದಾಧಿಕಾರಿಗಳ ಪದಗ್ರಹಣ ಸಭೆ ಯಲ್ಲಿ ಜಿಲ್ಲೆಯ ಮೂಲಭೂತ ಸಮಸ್ಯೆಗಳು ಮತ್ತು ಸೌಲಭ್ಯಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಚರ್ಚೆಯ ಭಾಗವಾಗಿ ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರೊಂದಿಗೆ ಜಿಲ್ಲಾ ಉಸ್ತುವಾರಿಗಳಾದ ಬೆಲ್ಲು ಕಾರ್ಯಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಕಲಾ ಪ್ರಕಾಶ್, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀಮತಿ ವಾಣಿ ಮಾಚಿಮಾಡ, ಜಿಲ್ಲಾ ಕಾರ್ಯದರ್ಶಿಗಳಾದ ಸುರೇಶ್ , ಜಿಲ್ಲಾ ಸಲಹಗಾರರಾದ ಸಜಿಲ್ ಕುಮಾರ್, ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಪವಿತ್ರ ರೈ, ಜಿಲ್ಲಾ ವಕ್ತಾರ ಜೀವನ್, ಜಿಲ್ಲಾ ಮಹಿಳಾ ಘಟಕದ ಉಸ್ತುವಾರಿ ತನುಕಿಶೋರ್, ಕುಶಾಲನಗರ ತಾಲೂಕು ಅಧ್ಯಕ್ಷೆ ಮಂಜುಳಾ, ವಿರಾಜಪೇಟೆ ತಾಲೂಕು ಉಸ್ತುವಾರಿ ರಂಜನ್ ಹಾಜರಿದ್ದರು. ಸಿದ್ದಾಪುರದ ಸರ್ಕಾರಿ ಆಸ್ಪತ್ರೆಯ ಕುಂದುಕೊರತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಘಟನೆಯು ಜಿಲ್ಲಾ ವೈದ್ಯಾಧಿಕಾರಿಗೆ ಹೋರಾಟದ ಮುಖೇನ ಒತ್ತಡ…
ಪೊನ್ನಂಪೇಟೆ ತಾಲೂಕಿನ ಬಾಳಲೆ ಭಾಗದ ಪ್ರವಾಸದಲ್ಲಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿದರು. ಬಾಳಲೆ ಪಂಚಾಯಿತಿ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು. ಶಾಸಕರು ಅಧ್ಯಕ್ಷತೆ ವಹಿಸಿದ ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು. ಸಾರ್ವಜನಿಕರು ತಮ್ಮ ಅನೇಕ ಸಮಸ್ಯೆಗಳನ್ನು ಶಾಸಕರಲ್ಲಿ ಈ ಸಂದರ್ಭ ಮನವರಿಕೆ ಮಾಡಿ ಕೊಟ್ಟರು. ಹಂತ ಹಂತವಾಗಿ ಎಲ್ಲರ ಸಮಸ್ಯೆಗಳನ್ನು ಕೂಲಂಕುಶವಾಗಿ ಆಲಿಸಿ, ಪರಿಶೀಲಿಸಿದ ಮಾನ್ಯ ಶಾಸಕರು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಅಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಪ್ರಮುಖವಾಗಿ ಕಂದಾಯ, ರಸ್ತೆ, ಅರಣ್ಯ ಹಾಗೂ ಇತರ ದೈನಂದಿನ ಸಮಸ್ಯೆಗಳ ಬಗ್ಗೆ ಮಾನ್ಯ ಶಾಸಕರಿಗೆ ಮನವಿಗಳು ಬಂದಿದ್ದು, ಎಲ್ಲವನ್ನೂ ಪರಿಗಣಿಸಿ ಶೀಘ್ರದಲ್ಲೇ ಜನರಿಗೆ ಅನುಕೂಲ ಆಗುವಂತೆ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಮಾನ್ಯ ಶಾಸಕರು ಖಡಕ್ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ್, ತಾಲೂಕು ಇ ಒ ಅಪ್ಪಣ್ಣ,…
ಹುದಿಕೇರಿ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹಾಬಲ ರವರ ಮನೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಸೌಹಾರ್ದ ಭೇಟಿ ನೀಡಿದರು. ಮಹಾಬಲ ರವರ ತಾಯಿಯವರು ವಯೋಹಸಹಜ ತೊಂದರೆಗಳಿಂದ ಬಳಲುತ್ತಿದ್ದು, ಪೊನ್ನಂಪೇಟೆ ಭಾಗದ ಪ್ರವಾಸದಿಂದ ಶಾಸಕರು ಹುದಿಕೇರಿಯ ಇವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಮಿದೇರೀರ ನವೀನ್, ಪಕ್ಷದ ಮುಖಂಡರು ಅಜ್ಜಿಕುಟ್ಟಿರ ಗಿರೀಶ್ ಉಪಸ್ಥಿತರಿದ್ದರು.
ಬಾಳೆಲೆಯಲ್ಲಿ ರೂ., 27.23 ಕೋಟಿ ವೆಚ್ಚದಲ್ಲಿ 66/11 ಕೆವಿಎ ಸಾಮರ್ಥ್ಯದ ನೂತನ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಪೊನ್ನಣ್ಣ ಭೂಮಿಪೂಜೆ ಬಾಳೆಲೆ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಮಹತ್ವಕಾoಕ್ಷೆಯಿಂದ ರೂ. 27.23 ಕೋಟಿ ವೆಚ್ಚದಲ್ಲಿ 66/11 ಕೆವಿಎ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಗೆ ಭೂಮಿ ಪೂಜೆಯನ್ನು ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಆದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ನೆರವೇರಿಸಲಾಯಿತು. ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕ್ಷೇತ್ರಾದ್ಯಂತ ಗುಣಮಟ್ಟದ ವಿದ್ಯುತ್ ಪೂರೈಕೆ ಕೈಗೊಳ್ಳಲು ಸುಮಾರು ರೂ.200 ಕೋಟಿಗೂ ಅಧಿಕ ಅನುದಾನವನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರಾದ್ಯಂತ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಾಳೆಲೆಯಲ್ಲಿ ಸ್ಥಾಪನೆಗೊಳ್ಳಲಿರುವ ಈ ವಿದ್ಯುತ್ ವಿಚಾರಣಾ ಕೇಂದ್ರದಿಂದ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಆಗಲು ಸಹಕಾರಿಯಾಗಲಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷರಾದ…
ತಿತಿಮತಿ :ಮಾನವ ಕಾಡಾನೆ ಸಂಘರ್ಷ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ ಶಾಸಕ ಪೊನ್ನಣ್ಣ ಭೂಮಿಪೂಜೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಭಾಗಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಭೇಟಿ ನೀಡಿದರು. ಈ ಭಾಗದ ದಶಕಗಳ ಸಮಸ್ಯೆಯಾದ ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ, ಸರಕಾರ ಹಮ್ಮಿಕೊಂಡಿರುವ ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಯೋಜನೆಗೆ ಮಾನ್ಯ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಭಾಗದ ಸದ್ರಿ ಕಾಮಗಾರಿಯೂ ₹ 88 ಲಕ್ಷಗಳಲ್ಲಿ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ಒಟ್ಟು ಬ್ಯಾರಿಕೆಡ್ ನಿರ್ಮಾಣಕ್ಕಾಗಿ ₹ 20 ಕೋಟಿ ಮೀಸಲಿರಿಸಿದೆ. ಬಂಬು ಕಾರ್ಡ್ ಪೈಸಾರಿ ಭಾಗದ ಸುಮಾರು 7 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ನಡೆಯಲಿದೆ. ಬಂಬುಕಾಡು ಪೈಸಾರಿಯಿಂದ ಕಿಸಾನ್ ತೋಟದ ಮೂಲೆಯ ತನಕ ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾರ್ಯಕ್ರಮ ಇದಾಗಿದ್ದು, ತಿತಿಮತಿ ಭಾಗದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು. ಭೂಮಿ…
ರೆವಿನ್ಯೂಪ್ರೀಮಿಯರ್ ಲೀಗ್-2: ರೆವಿನ್ಯೂ ವಾರಿಯರ್ಸ್ ಮಡಿಕೇರಿ ತಂಡದ ಜರ್ಸಿ ಬಿಡುಗಡೆ ಮಡಿಕೇರಿ:ರೆವಿನ್ಯೂ ಪ್ರೀಮಿರ್ ಲೀಗ್ ಸೀಸನ್ -2 ಕ್ರಿಕೆಟ್ ಟೂರ್ನಿಯ ಅಂಗವಾಗಿ Revenue Warriors Madikeri ತಂಡದ ಜರ್ಸಿ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶ್ರೀಧರ್, ಉಪ ತಹಶೀಲ್ದಾರ್‌ಗಳಾದ ಗುರುರಾಜ್ ಹಾಗೂ ದೇವರಾಜ್ ಅವರು ಜರ್ಸಿಯನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಂಡದ ನಾಯಕ ಸಂತೋಷ್ ಪಾಟೀಲ್ ಸೇರಿದಂತೆ ತಂಡದ ಆಟಗಾರರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು. ಕ್ರೀಡಾ ಕೂಟವು ಪೊನ್ನಂಪೇಟೆಯಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಯುಪಿಎಸ್‍ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ 525ನೇ ರ್ಯಾಂಕ್ ಕೊಡಗು ಜಿಲ್ಲೆಯ ವಿರಾಜಪೇಟೆಯ ಕೆ.ಎಲ್.ಸೂರಜ್ ಅವರು ಯುಪಿಎಸ್‍ಸಿ ಪರೀಕ್ಷೆಯಲ್ಲಿ 525ನೇ ರ್ಯಾಂಕ್ ಪಡೆದಿದ್ದಾರೆ. ಇದು ಅವರ ನಾಲ್ಕನೇ ಪ್ರಯತ್ನದ ಯಶಸ್ಸು. 3ನೇ ಪ್ರಯತ್ನದಲ್ಲಿ 713 ನೇ ರ್ಯಾಂಕ್ ಗಳಿಸಿ, ಕರ್ನಾಟಕ ಕೇಡರ್‍ನಲ್ಲೇ ಐಪಿಎಸ್ ಆಗಿ ಆಯ್ಕೆಯಾಗಿದ್ದರು. 29 ವರ್ಷ ವಯಸ್ಸಿನ ಅವರು ಕೊಡಗು ಜಿಲ್ಲೆ ವಿರಾಜಪೇಟೆಯವರು. ತಂದೆ ಕೆ.ಬಿ.ಲಿಂಗರಾಜ್ ಅವರು ನಿವೃತ್ತ ಭಾರತೀಯ ಕಂದಾಯ ಸೇವೆಯಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರಿನ ಜೆಎಸ್‍ಎಸ್ ಶಾಲೆಯಲ್ಲಿ ಪ್ರಾಥಮಿಕ, ಅಳಿಕೆಯಲ್ಲಿ ಪ್ರೌಢಶಿಕ್ಷಣ ಮೈಸೂರಿನ ವಿದ್ಯಾವರ್ಧಕ ಗೋಲ್ಡನ್ ಜ್ಯುಬಿಲಿ ಕಾಲೇಜಿನಲ್ಲಿ ಪಿಯುಸಿ, ಎಸ್‍ಜೆಸಿಇ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಮಾರ್ಚ್, 18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಇದೇ ಮಾರ್ಚ್, 18 ರಿಂದ ಏಪ್ರಿಲ್, 02 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಷಷ್ಟ ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು. ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್‍ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಎಸ್.ಜೆ.ಸೋಮಶೇಖರ್…
