- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಮಡಿಕೇರಿಯಲ್ಲಿ ಬೇಸಿಗೆ ಮುಂಜಾಗ್ರತೆಯ ಕುರಿತು ಅರೋಗ್ಯ ಇಲಾಖೆಯಿಂದ ಅರಿವು ಕಾರ್ಯಕ್ರಮ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು: ಮಡಿಕೇರಿ ಪಟ್ಟಣದ ಮಂಗಳಾದೇವಿ ನಗರ ಮತ್ತು ಸುದರ್ಶನ್ ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯವರು ಮನೆ ಮನೆ ಬೇಟಿ ಮಾಡಿ ಸ್ವಚ್ಚತೆ ಮತ್ತು ಲಾರ್ವಾ ಸಮೀಕ್ಷೆ ನಡೆಸಿ ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿ ಎಚ್ಚರ ವಹಿಸುವುಂತೆ ತಿಳಿಸಿದರು. ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ರವರು ಮಾತನಾಡಿ ಸ್ವಚ್ಛ ಪರಿಸರ ಮತ್ತು ಶುದ್ದ ನೀರು ಕುರಿತು ಅರಿವು ಮೂಡಿಸುತ್ತಾ ಆಶುದ್ದ ನೀರು ಮತ್ತು ಪರಿಸರದಿಂದ ವಾಂತಿ, ಬೇಧಿ, ಕಾಮಾಲೆ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಿದ್ದು ಎಚ್ಚರ ವಹಿಸುವಂತೆ ಮಾಹಿತಿ ನೀಡಿದರು. ತೆರೆದಿಟ್ಟ ಸಿಹಿತಿಂಡಿಗಳು, ಬೀದಿ ಬದಿಯಲ್ಲಿ ಕತ್ತರಿಸಿ ಮಾರಾಟ ಮಾಡುವ ಹಣ್ಣುಗಳು, ತಿನ್ನದಂತೆ ಮತ್ತು ವೈಯುಕ್ತಿಕ ಶುಚಿತ್ವ ಕಾಪಾಡುವಂತೆ ತಿಳಿಸಿ ಪ್ರತಿ ಬಾರಿ ಊಟಕ್ಕೆ ಮೊದಲು, ಶೌಚಾಲಯ…
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಜಿಲ್ಲೆಯ ಅಗತ್ಯ ಇರುವ ಕಡೆ ಸರ್ಕಾರಿ ಬಸ್ಸು ಕಲ್ಪಿಸಿ: ಧರ್ಮಜ ಉತ್ತಪ್ಪ ಕೊಡಗು ಜಿಲ್ಲೆಯ ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೆಎಸ್‍ಆರ್‍ಟಿಸಿ ಬಸ್ ಇಲ್ಲದೆ ಪರಿತಪಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಸರ್ಕಾರಿ ಬಸ್ ನಿಯೋಜಿಸುವಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬಂಧ ಶುಕ್ರವಾರ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪಿ.ವಿ.ಜಾನ್ಸನ್ ಅವರು ಪಿರಿಯಾಪಟ್ಟಣ ಮಾಲ್ದಾರೆ, ಚೆನ್ನಂಗಿ, ಚೆನ್ನಯ್ಯನಕೋಟೆ, ಪಾಲಿಬೆಟ್ಟ, ಅಮ್ಮತ್ತಿ, ವಿರಾಜಪೇಟೆ ಮಾರ್ಗ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಸರ್ಕಾರಿ ಬಸ್‍ನ್ನು ನಿಯೋಜಿಸುವಂತೆ ಅಲ್ಲಿನ…
ರಾಜ್ಯ ಬಜೆಟ್ ನಲ್ಲಿ ಕೊಡವ ನಿಗಮ ಸ್ಥಾಪನೆಯ ಘೋಷಣೆ:ಚುನಾವಣಾ ಪೂರ್ವ ಪ್ರಣಾಳಿಕೆ ಈಡೇರಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ರಾಜ್ಯ ಬಜೆಟ್ ನಲ್ಲಿ ಕೊಡವ ನಿಗಮ ಸ್ಥಾಪನೆಯ ಘೋಷಣೆ. ನಿಗಮ ಸ್ಥಾಪನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಮನವಿಗೆ ಸ್ಪಂದಿಸಿದ ಸರಕಾರ.2023 ರಲ್ಲಿ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಡವ ನಿಗಮ ಸ್ಥಾಪನೆಯ ಭರವಸೆ ನೀಡಿದ್ದ ಶಾಸಕ ಪೊನ್ನಣ್ಣ ಕೊಡವ ನಿಗಮದೊಂದಿಗೆ ಕುಂಬಾರ, ತಿಗಳ, ಗಾಣಿಗ, ಉಪ್ಪಾರ, ಈಡಿಗ,ಕಾಡುಗೊಲ್ಲ, ಸಮುದಾಯಕ್ಕೆ ಬಜೆಟ್ ನಲ್ಲಿ ನಿಗಮ ಸ್ಥಾಪನೆಯ ಘೋಷಣೆ
ಜನಸಾಮಾನ್ಯರ ನಿರೀಕ್ಷೆಗಳನ್ನು ಬಜೆಟ್ ಹುಸಿಯಾಗಿಸಿದೆ: ಸುಜಾ ಕುಶಾಲಪ್ಪ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಡಿಸಿರುವ ಈ ವರ್ಷದ ಆಯವ್ಯಯವು ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ರೈತರು, ಯುವಕರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಸಮಸ್ಯೆಗಳ ಪರಿಹಾರಕ್ಕೆ ಸ್ಪಷ್ಟವಾದ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಈ ಬಜೆಟ್‌ನಲ್ಲಿ ಸಾಕಷ್ಟು ಆದ್ಯತೆ ನೀಡಲಾಗಿಲ್ಲ. ಕೇವಲ ಘೋಷಣೆಗಳ ಮೂಲಕ ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನವೇ ಈ ಆಯವ್ಯಯದಲ್ಲಿ ಗೋಚರಿಸುತ್ತದೆ. 2025-26 ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂ 50.00 ಕೋಟಿ ಗಳ ಅನುದಾನವನ್ನು ಘೋಷಣೆ ಮಾಡಿ ಅದರಲ್ಲಿ ಕೊಡವ ಹೆರಿಟೇಜ್ ಕಾಮಗಾರಿಯನ್ನು ರೂ 5.00 ಕೋಟಿ ಗಳಲ್ಲಿ ಮುಂದುವರಿಸುವ ಭರವಸೆ ನೀಡಿ ಬಿಡಿಗಾಸು ಬಿಡುಗಡೆಯಾಗದೆ ಇರುವುದು ಇದಕ್ಕೆ ಸ್ಪಷ್ಟ ಉದಾಹರಣೆ. ಈ ವರ್ಷದ ಆಯವ್ಯಯದಲ್ಲಿ ಕೊಡಗು ಜಿಲ್ಲೆಯ ಪ್ರವಾಸೋದ್ಯಮವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. …
ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ ಕರಡಿಗೋಡುವಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕುಕ್ಕುನೂರು ಕುಟುಂಬಸ್ಥರಿಂದ ಮಳೆ ಪೂಜೆಯನ್ನ ನೆರೆವೇರಿಸಲಾಯಿತು. ದೇವರ ಸನ್ನಿಧಿಯಲ್ಲಿ ನಾಡಿಗೆ ಉತ್ತಮ ಮಳೆಯಾಗಿ ಪ್ರಕೃತಿಯು ಹಚ್ಚ ಹಸಿರಿನಿಂದ ಕಂಗೊಳಿಸಿ ಭೂಮಿಯನ್ನ ತಂಪಾಗಿಸಿ ಧನ ದಾನ್ಯ ಬೆಳೆಗಳು ಸಮೃದ್ಧಿಯಾಗಿ ಬೆಳೆಯಬೇಕು. ಹಾಗು ಜನತೆಗೆ ಉತ್ತಮ ಆರೋಗ್ಯ ದೀರ್ಘಯುಷ್ಯ ವನ್ನ ಕೊಟ್ಟು ಮಳೆಯಿಂದ ಹಸಿರು ಹುಲ್ಲುಗಳು ಚಿಗುರುಹೊಡೆದು ಹುಲ್ಲುಗಾವಲಾಗಿ ಮಾರ್ಪಟ್ಟು ದನ ಕರುಗಳಿಗೆ ಒಳ್ಳೆಯ ಮೇವು ಒದಗಬೇಕು ಜೊತೆಗೆ ಭರತ ಖಂಡದಲ್ಲಿ ಗೋ ಸಂತತಿ ಹೆಚ್ಚಾಗಿ ಪರಿವರ್ತನೆಯಾಗಬೇಕೆಂದು ದೇವರಲ್ಲಿ ಪ್ರಾರ್ಥನೆಯನ್ನ ಮಾಡಿಕೊಂಡರು. ಈ ಸಂದರ್ಭದಲ್ಲಿ ಕುಕ್ಕುನೂರು ಕುಟುಂಬದ ದೇವ ತಕ್ಕಾರದ ಕೆ ಬಿ ದೇವಪ್ರಕಾಶ್ ದೇವಸ್ಥಾನದ ಅಧ್ಯಕ್ಷರಾದ ಕೆ ಬಿ ಪ್ರಸನ್ನ ಕಾರ್ಯದರ್ಶಿ ಚಿದಾನಂದ ಕುಟುಂಬದ ಹಿರಿಯರಾದ ಮೋಹನ್, ಪುರುಷೋತ್ತಮ, ಸೋಮಣ್ಣ, ಜಯರಾಮ್, ಸೂರಜ್, ಸುನಿಲ್, ಕಿಸನ್, ನವೀನ್, ಇನ್ನಿತರರು ಹಾಜರಿದ್ದರು.
ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಲಿಮಿಟೆಡ್ ನಿಂದ ಭಾರತೀಯ ಕಾಫಿ ಮಂಡಳಿಗೆ ಪಾವತಿಸಬೇಕಾದ ಬಡ್ಡಿಯನ್ನು ಮನ್ನಾ ಮಾಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಸಂಸದರಾದ ಯದುವೀರ್ ಮನವಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಲಿಮಿಟೆಡ್‌ನಿಂದ ಭಾರತೀಯ ಕಾಫಿ ಮಂಡಳಿಗೆ ಪಾವತಿಸಬೇಕಾದ ಬಡ್ಡಿಯನ್ನು ಮನ್ನಾ ಮಾಡುವಂತೆ ಕೋರಿ ಮನವಿಯನ್ನು ಸಂಸದರಾದ ಯದುವೀರ್ ಸಲ್ಲಿಸಿದರು. ಸಣ್ಣ ಕಾಫಿ ಬೆಳೆಗಾರರನ್ನು ರಕ್ಷಿಸುವ ಮತ್ತು ಈ ಪ್ರಮುಖ ಸಹಕಾರಿ ಸಂಸ್ಥೆಯನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ, 2015 ರಲ್ಲಿ ನೀಡಿದ ಭರವಸೆಗೆ ಅನುಗುಣವಾಗಿ, ಗೌರವಾನ್ವಿತ ಸಚಿವರು ಮಧ್ಯಪ್ರವೇಶಿಸಿ ಕಾಫಿ ಮಂಡಳಿಗೆ ಸಮಾಜವು ಪಾವತಿಸಬೇಕಾದ ಬಡ್ಡಿಯನ್ನು ಮನ್ನಾ ಮಾಡಲು ಶಿಫಾರಸು ಮಾಡುವಂತೆ ಕೂಡ ವಿನಮ್ರವಾಗಿ ಒತ್ತಾಯಿಸ ಲಾಯಿತು ಎಂದು ಸಂಸದರು ತಿಳಿಸಿದರು. ಸಚಿವರ ಸಕಾಲಿಕ ಹಸ್ತಕ್ಷೇಪವು ಕೊಡಗಿನ ಸಾವಿರಾರು ಕಾಫಿ ಬೆಳೆಗಾರರು ಮತ್ತು ಕಾರ್ಮಿಕರ ಜೀವನೋಪಾಯವನ್ನು ಕಾಪಾಡುತ್ತದೆ ಮತ್ತು ಸುಮಾರು ಏಳು ದಶಕಗಳಿಂದ ಸಮುದಾಯಕ್ಕೆ…
ಕಾರಿನಿಂದ ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಇಳಿಜಾರು ರಸ್ತೆಯಲ್ಲಿ ಬರುತ್ತಿದ್ದ ಕೇರಳ ರಾಜ್ಯದ ಕಾರಿನ ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡ ಪರಿಣಾಮ, ಕಾರು ನಿಯಂತ್ರಣಕ್ಕೆ ಸಿಗದೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆಯ ಪಕ್ಕದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ನಿಂತಿದೆ. ಅ ರಸ್ತೆಯಲ್ಲಿ ಪ್ರತಿದಿನವೂ ನೂರಾರು ವಾಹನಗಳ ಸಂಚಾರ ವಿರುತ್ತದೆ ಮತ್ತು ಜನಸಂಚಾರ ಜಾಸ್ತಿ ಇರುವ ನಗರದ ಏಕಮುಖ ರಸ್ತೆಯಾಗಿದ್ದು, ಅದೃಷ್ಟವಶಾತ್ ಈ ಅವಘಡದಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಹೊರತು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು:- ಜಿಲ್ಲೆಯ ಹಿರಿಯ ದಾನಿ ಕೈಬುಲಿರ ಪಾರ್ವತಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಲಿಟಲ್ ಫ್ಲವರ್ಸ್ ಶಾಲೆ ಹುದಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಬೋಪಯ್ಯ ಸ್ಮಾರಕ ನಡೆದ ದತ್ತಿ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಕೊಡಗು ಜಿಲ್ಲೆಯ 10ನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲೂಕಿನ ನೀಡ್ತಾ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ ಎಸ್ ಪೂರ್ವಿಕ ಅವರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ಮುಂದುವರೆದ ಅವರು ವಿದ್ಯಾರ್ಥಿಗಳ ಪಾಲಿಗೆ ಅಧ್ಯಾಪಕರು ಶಿಲ್ಪಿಗಳಂತೆ ಪೋಷಕರು ಒಂದು ಕಲ್ಲಿನ ರೀತಿಯಲ್ಲಿರುವ ವಿದ್ಯಾರ್ಥಿಯನ್ನು ಶಾಲೆಗೆ ಒಪ್ಪಿಸಿದ ಸಂದರ್ಭದಲ್ಲಿ ಅಧ್ಯಾಪಕರು ಅವರನ್ನು ತಿದ್ದಿ ತೀಡಿ ಉತ್ತಮವಾದ ಶಿಲ್ಪವನ್ನಾಗಿ ಮಾಡುತ್ತಾರೆ. ಅಧ್ಯಾಪಕರ ಈ ಸೇವೆ ವಿದ್ಯಾರ್ಥಿಗಳು ಮರೆಯಕೂಡದು ಎಂದರು. ಕಾರ್ಯಕ್ರಮದಲ್ಲಿ…
ಜಿಲ್ಲಾ ಎಸ್ ವೈ ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಕೊಡಗು ಜಿಲ್ಲಾ ಸಮಿತಿ ವತಿಯಿಂದ ಪವಿತ್ರ ರಂಜಾನ್ ತಿಂಗಳ ಪ್ರಯುಕ್ತ ಜಿಲ್ಲೆಯಲ್ಲಿರುವ ನೂರಾರು ಬಡ ರೋಗಿಗಳು ಹಾಗೂ ವಿಧವೆಯರಿಗೆ ಅಕ್ಕಿ ಹಾಗೂ ಅಗತ್ಯ ಆಹಾರ ಧಾನ್ಯಗಳ ಕಿಟ್ ಅನ್ನು ಎಸ್ ವೈ ಎಸ್ ಜಿಲ್ಲಾಧ್ಯಕ್ಷರಾದ ಮುನೀರ್ ಮಹ್ಳರಿಯವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭ ಎಸ್ ವೈ ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಕೋಶಾಧಿಕಾರಿ ಶರೀಫ್ ಮಾಸ್ಟರ್, ರಾಜ್ಯ ಸಮಿತಿಯ ಸದಸ್ಯ ಅಶ್ರಫ್ ಎಮ್ಮೆಮಾಡು, ಸಾಂತ್ವನ ಕಾರ್ಯದರ್ಶಿ ಬಷೀರ್ ಕೊಟ್ಟಮುಡಿ, ಜಿಲ್ಲಾ ಸಮಿತಿ ಸದಸ್ಯ ಮೊಯ್ದು ಪಡಿಯಾಣಿ ಮತ್ತಿತರರು ಪಾಲ್ಗೊಂಡಿದ್ದರು.
ನಾಪೋಕ್ಲಿನಲ್ಲಿ ಬಲಿಜ ಸಮುದಾಯದವರಿಂದ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯ ನವರ ಜಯಂತಿ ಆಚರಣೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು:ನಾಪೋಕ್ಲುವಿನಲ್ಲಿ ಬಲಿಜಸಮುದಾಯದವರಿಂದ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯನವರ 300ನೇ ಜಯಂತಿಯನ್ನು ನಾಪೋಕ್ಲು ಬಳಿಯ ಕಕ್ಕುಂದ ಕಾಡುವಿನ ಟಿ.ವಿ.ಭವಾನಿಯವರ ಗೃಹದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಅಧ್ಯಕ್ಷ ಗೋಪಾಲ ಅವರು ಪಾಲ್ಗೊಂಡು ಮಾತನಾಡಿ ತೆಲುಗು ಬಲಿಜಗರಿಗೆ ಶಿಕ್ಷಣದಂತೆ ಉದ್ಯೋಗದಲ್ಲಿಯೂ ಸಹ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ನೀಡುವಂತಾಗಬೇಕು. ನಮ್ಮ ಊರಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು ಇದಕ್ಕೆ ಸರ್ವ ಜನತೆಯ ಸಹಕಾರ ಬೇಕೆಂದು ವಿನಂತಿಸಿಕೊಂಡರು. ದೇವಾಲಯಕ್ಕೆ ಧನಸಹಾಯ ಮಾಡುವವರು 9741548389,9980010635 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಿದರು. ಟಿ.ಮಂಜಯ್ಯ ಅವರು ಕೈವಾರ ತಾತಯ್ಯ ಅವರ ಹಿನ್ನೆಲೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಬಲಿಜ ಸಮಾಜದ ಸದಸ್ಯರು ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಎಂ.…
