Author: Kodagu-admin

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚನ್ನಯ್ಯನಕೋಟೆಯ ಧ್ರುವ ಎಜುಕೇಶನ್ ಟ್ರಸ್ಟ್ ರವರ ನೂತನ ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಶಾಲಾ ಕಟ್ಟಡ ಉದ್ಘಾಟಿಸಿ ಶುಭ ಕೋರಿದ ಶಾಸಕರು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಲು ಉತ್ತಮ ಶಾಲಾ ವಾತಾವರಣದ ಅವಶ್ಯಕತೆ ತುಂಬಾ ಮುಖ್ಯವಾದದ್ದು. ನೂತನ ಕಟ್ಟಡದೊಂದಿಗೆ ಆಧುನಿಕ ಸೌಲಭ್ಯಗಳನ್ನು ಗ್ರಾಮೀಣ ಮಕ್ಕಳಿಗೆ ಕಲ್ಪಿಸಿದಷ್ಟು ಅವರಲ್ಲಿ ಓದಲು ಹುಮ್ಮಸ್ಸು ಮೂಡುತ್ತದೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ದೊರಕಿದರೆ ದೇಶದ ಭವಿಷ್ಯಕ್ಕೆ ಅದು ಒಳಿತಾಗಲಿದೆ. ಗ್ರಾಮೀಣ ಭಾಗದಲ್ಲಿ ಧ್ರುವ ಎಜುಕೇಶನ್ ಟ್ರಸ್ಟ್ ರವರ ಈ ಒಂದು ಶ್ರಮ ಶ್ಲಾಘನೀಯ. ಈ ಶಾಲೆ ವತಿಯಿಂದ ದೇಶದ ಉತ್ತಮ ಪ್ರಜೆಗಳು ಹೊರಬರುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಗಣೇಶ್, ಪಂಚಾಯಿತಿ ಅಧ್ಯಕ್ಷರು ಜಯ ಲಕ್ಷ್ಮಿ, ಸದಸ್ಯರು…

Read More

2₹ ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಿಸುವ ಕಾಮಗಾರಿಗೆ ಶಾಸಕ ಎ. ಎಸ್ ಪೊನ್ನಣ್ಣನಿಂದ ಭೂಮಿ ಪೂಜೆ ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇಲ್ಲಿಯ ಕುಮ್ಮೆ ಹೊಳಗೆ ಚೆಕ್ ಡ್ಯಾಮ್ ನಿರ್ವಹಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು ಈ ಕಾಮಗಾರಿಯು ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದ್ದು, ಸಣ್ಣ ನೀರಾವರಿ ಇಲಾಖೆ ಮೂಲಕ ನಡೆಯುವ ಈ ಕಾಮಗಾರಿಯಿಂದಾಗಿ ಸುತ್ತಮುತ್ತಲಿನ ಜಮೀನಿಗೆ ನೀರಾವರಿ ಸೌಲಭ್ಯ ಒದಗುವುದರೊಂದಿಗೆ ಅಂತರ್ಜಲ ಸಹ ವೃದ್ಧಿಯಾಗಲಿದೆ ಎಂದು ತಿಳಿಸಿದರು. ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಲ್ಲಿ ಹಾಗೂ ಅತಿ ಶೀಘ್ರವಾಗಿ ನಿರ್ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಉಪಸ್ಥಿತರಿದ್ದ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು. ಬಳಿಕ ಇಲ್ಲಿಯ ಚಾಮುಂಡಿ ಪೈಸಾರಿಗೆ ಭೇಟಿ ನೀಡಿದ ಮಾನ್ಯ ಶಾಸಕರು, ತಮ್ಮ ಅನುದಾನದ ₹15 ಲಕ್ಷಗಳಲ್ಲಿ…

Read More

ಚೆನ್ನಯ್ಯನಕೋಟೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎ. ಎಸ್ ಪೊನ್ನಣ್ಣನಿಂದ ಭೂಮಿ ಪೂಜೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಚೆನ್ನಯ್ಯನ ಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು. ಚೆನ್ನಯ್ಯನಕೋಟೆಯ ಪರಿಶಿಷ್ಟ ಜಾತಿ ಸಮುದಾಯದವರ ಗದ್ದೆಯ ಬಳಿ ಹರಿಯುವ ಹಳ್ಳಕ್ಕೆ ಪಿಕಪ್ ಹಾಗೂ ನಾಳೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಕಾಮಗಾರಿಯೂ ಸುಮಾರು ₹ 2 ಕೋಟಿ ವೆಚ್ಚದಲ್ಲಿ, ಸಣ್ಣ ನೀರಾವರಿ ಇಲಾಖೆ ಮೂಲಕ ನಡೆಯಲಿದೆ ಎಂದು ಮಾನ್ಯ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕೆಂದು ಸೂಚಿಸಿದರು. ಬಳಿಕ ಬಸವನಹಳ್ಳಿಯಲ್ಲಿ ಮಾನ್ಯ ಶಾಸಕರ ಅನುದಾನವಾದ ₹ 10 ಲಕ್ಷಗಳಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆ ನಡೆಸಿ, ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ಥಳೀಯ ಹಿರಿಯರು ಮಾನ್ಯ…

Read More

ಇರಾನ್ ನ ಸರ್ವೊಚ್ಚ ಅಧ್ಯಕ್ಷ ಖೊಮೆನೆನಿ ಹತ್ಯೆ ಈ ಪ್ರಪಂಚದ ನವ ದಬ್ಬಾಳಿಕೆ ಯುಗದ ಮುಂದುವರಿದ ಬಾಗ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ನಾಪಂಡ ಮುದ್ದಪ್ಪ ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಮುಖಪುಟದಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು “ಎಲ್ಲ ಕಾಲಕ್ಕೂ ಎಲ್ಲ ನಾಯಕರ ಮೇಲೂ ಸ್ಥಳೀಯ ಅಸಮಾಧಾನ ಇದ್ದೇ ಇರುತ್ತದೆ. ಇದಕ್ಕೆ ಯಾವ ಆಢಳಿತಗಾರರೂ ಹೊರತಲ್ಲ. ಸ್ಥಳೀಯ ಅಸಮಾಧಾನಗಳನ್ನೇ ನೆಪ ಮಾಡಿಕೊಂಡು ಬಾಹ್ಯ ಹಸ್ತಕ್ಷೇಪಗಳಿಂದ ಹತ್ಯೆ ಮಾಡುವುದೇ ನ್ಯಾಯ ಸಮ್ಮತವಾದರೆ ಭಾರತದ ಯಾವ ನಾಯಕರೂ ಹೊರತಾಗಲಾರರು. ಖೊಮೆನೆನಿ ಇರಾನಿನ ರಾಜ ಪ್ರಭುತ್ವದ ವಿರುದ್ದ ನಡೆದ ಸುಧೀರ್ಘ ಎಡಪಂಥೀಯ ಚಳುವಳಿಯ ಲಾಭ ಪಡೆದು ಇಸ್ಲಾಮಿಕ್ ರಿಪಬ್ಲಿಕ್ ಸ್ಥಾಪಿಸಿ ಮತ್ತೊಂದು ರೀತಿಯ ಸರ್ವಾಧಿಕಾರಕ್ಕೆ ನಾಂದಿ ಹಾಡಿದವರು. ಪ್ರಪಂಚದ ಅತ್ಯಂತ ಪುರಾತನ ನಾಗರೀಕತೆ ಇರಾನಿನ ಜನರ ದುರ್ಧೈವ ಮತ್ತೆ ರಾಜ ಪ್ರಭುತ್ವ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ” ಎಂದು ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದಲ್ಲದೆ ಅಮೆರಿಕ ಹಾಗೂ ಈಸ್ರೆಲ್ ದಾಳಿಯಲ್ಲಿ ಹತನಾದ…

Read More

ನಾಪೋಕ್ಲುವಿನ ಕಾಟಕೇರಿ ರಸ್ತೆಯಲ್ಲಿ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ನಾಪೋಕ್ಲು ಬ್ರೇಕ್ ವಿಫಲಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಘಟನೆ ಕಾಟಕೇರಿ ಮಡಿಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಎಮ್ಮೆ ಮಾಡುವಿನಿಂದ ನಾಪೋಕ್ಲು-ಬೆಟ್ಟಗೇರಿ ಕಾಟಕೇರಿ-ಮಡಿಕೇರಿ ಮಾರ್ಗವಾಗಿ ಮೈಸೂರಿಗೆ ತೆರಳುವ ಕೆಎಸ್ಆರ್ಟಿಸಿ ಬಸ್ ಕಾಟಕೇರಿ ಬಳಿಯ ರಸ್ತೆ ತಿರುವಿನಲ್ಲಿ ಬ್ರೇಕ್ ವಿಫಲಗೊಂಡು ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ನಿಂತಿದೆ ಚಾಲಕನ ಸಮಯಪ್ರಜ್ಞೆಯಿಂದ ಬಾರಿಯ ಅನಾಹುತ ತಪ್ಪಿದೆ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ ಅವಘಡದಿಂದ ಬಸ್ಸಿನಲ್ಲಿದ್ದ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಮಂಗಳೂರು ಕಡೆಯಿಂದ ಬರುವ ಸಾರಿಗೆ ಬಸ್ಸಿನಲ್ಲಿ ಸಂಚರಿಸುವ ವ್ಯವಸ್ಥೆ ಬಸ್ಸಿನ ನಿರ್ವಾಹಕ ಕಲ್ಪಿಸಿದ್ದಾರೆ

Read More

ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜ ದ ವತಿಯಿಂದ ಎ. ಎಸ್ ಪೊನ್ನಣ್ಣರಿಗೆ ಸನ್ಮಾನ ಕಾರ್ಯಕ್ರಮ ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಕೊಡಗಿನ ಎಲ್ಲಾ ಗೌಡ ಸಮಾಜಗಳ ವತಿಯಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕೊಡಗು ಗೌಡ ಸಮಾಜಕ್ಕೆ ಮದೆನಾಡಿನಲ್ಲಿ ಸರಕಾರದ ವತಿಯಿಂದ ಆರು ಎಕರೆಯನ್ನು ಮಂಜೂರು ಮಾಡಿಸಿಕೊಟ್ಟ ಶಾಸಕರಿಗೆ ಕೃತಜ್ಞತಾ ಪೂರ್ವಕವಾಗಿ ಈ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಎಲ್ಲರಿಗೂ ಕೊಡಗು ಗೌಡ ಸಮಾಜಕ್ಕೆ ಸರ್ಕಾರಿ ಜಮೀನನ್ನು ಮಂಜೂರು ಮಾಡಿಸಿ ಕೊಟ್ಟಿರುವುದು ಇಲ್ಲಿಯ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಇತರ ಚಟುವಟಿಕೆಗಳಿಗೆ ಪೂರಕವಾಗಲಿದೆ. ಹಲೋ ಸಮಯದಿಂದ ಗೌಡ ಸಮುದಾಯದವರು ಈ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದು ತನ್ನ ಬಳಿಗೆ ಗೌಡ ಸಮುದಾಯದ ಮುಖಂಡರು ಆಗಮಿಸಿ ಇದನ್ನು ಮಂಜೂರು ಮಾಡಿಸಿಕೊಡಬೇಕೆಂದು ಬೇಡಿಕೊಂಡಾಗ ಸಂತೋಷದಿಂದ ಒಪ್ಪಿಕೊಂಡು ಮನವಿಯನ್ನು ಮಾನ್ಯ ಮುಖ್ಯಮಂತ್ರಿಗಳು…

Read More

ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು :-ಎ.ಎಸ್.ಪೊನ್ನಣ್ಣ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ‘ಸಂವಿಧಾನ ಮತ್ತು ಪತ್ರಿಕೋದ್ಯಮ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ‘ಈಗ ಕೃತಕ ಬುದ್ಧಿಮತ್ತೆ (ಎಐ) ಬಂದಿದೆಯಾದರೂ, ಅದು ಎಲ್ಲವನ್ನೂ ಮಾಡುತ್ತದೆ ಎಂದು ಹೇಳಲಾಗದು. ಒಬ್ಬ ವ್ಯಕ್ತಿಯ ಬರಹದ ಮಟ್ಟಕ್ಕೆ ಎಐ ತಲುಪಲು ಸಾಧ್ಯವಾಗದು ಎಂದೆನಿಸುತ್ತದೆ. ಅದು ಮುಂದೆ ಎಷ್ಟು ಪರಿಣಾಮಕಾರಿಯಾಗಿ ಬರುತ್ತದೆ ಎಂಬುದು ಗೊತ್ತಿಲ್ಲ. ಆದರೆ, ನಾವಿಲ್ಲದೇ ಎಐ ಇರಲು ಸಾಧ್ಯವಿಲ್ಲ. ಅದನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ‘ನ್ಯಾಯಾಂಗ ಮತ್ತು ಪತ್ರಿಕಾಂಗವು ಸಂವಿಧಾನ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂವಿಧಾನ ಉಳಿದರೆ ಮಾತ್ರ ಸ್ವಾತಂತ್ರ್ಯ ಉಳಿಯುತ್ತದೆ ಎಂಬುದನ್ನು ಎಲ್ಲರೂ ಮನಗಾಣಬೇಕು’ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು‌ ವಿವರಿಸಿದರು.

Read More

ಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ. ಯಾವುದೇ ಸುದ್ದಿಯಾದರೂ ಸಕರಾತ್ಮಕ ವಿಮರ್ಶೆ ನೀಡಬೇಕು:-ಡಾ ಮಂತರ್ ಗೌಡ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕೊಡಗು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪತ್ರಿಕೋದ್ಯಮ ಬಗ್ಗೆ ವಿಚಾರ ಸಂಕಿರಣ, ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂ ನಲ್ಲಿ ಎಐ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಜ್ಞಾನಕ್ಕೆ ಮಿತಿ ಇಲ್ಲ. ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಪತ್ರಕರ್ತರು ಅತಿ ಮುಖ್ಯ. ರಾಜಕರಣಿಗಳು ತಲುಪದ ಕಡೆ ಪತ್ರಕರ್ತರು ತಲುಪುತ್ತಾರೆ. ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಕೆಲಸ ಮಾಡುತ್ತಾರೆ. ಈ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ ಆಗಬಾರದು. ಏಕವಚನ ಪ್ರಯೋಗ, ನಿರಾಧಾರ ಆರೋಪಗಳ ಬಗ್ಗೆ ಗಮನ ಹರಿಸಬೇಕು ಎಂದರು. ರಾಜಕಾರಣಿಗಳು ತಪ್ಪು ಮಾಡುತ್ತಾರೆ. ಅದನ್ನು ಬರೆಯಬೇಡಿ ಎಂದು ಹೇಳುವುದಿಲ್ಲ. ಆದರೆ ಸಕಾರಾತ್ಮಕ ವಿಮರ್ಶೆ ಇರಲಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಠೆ ಪತ್ರಕರ್ತರು ಮುಖ್ಯವಾಗಿದ್ದು,…

Read More

ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾತಮೆಟಿಕ್ಸ್ ವಿಭಾಗದಲ್ಲಿ ಕೊಡಗಿನ ಗ್ರೀಷ್ಮ ಳಿಗೆ ಗೋಲ್ಡ್ ಮೆಡಲ್. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆ ಹೊಸೂರು ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಪಾಚಾರಿ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿಯಾದ ಕುಮಾರಿ ಗ್ರೀಷ್ಮ ಅವರು ಜೆ.ಎಸ್.ಎಸ್ ಕಾಲೇಜು ಮೈಸೂರು, ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾತಮೆಟಿಕ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ (1st Rank) ಚಿನ್ನದ ಪದಕ (ಗೋಲ್ಡ್ ಮೆಡಲ್) ಪಡೆದುಕೊಂಡಿದ್ದಾರೆ, ಗ್ರೀಷ್ಮ ರವರ ಈ ಸಾಧನೆಗೆ ಶಿಕ್ಷಕ ವೃಂದ,ಸಿಬ್ಬಂದಿ ವರ್ಗ ಮತ್ತು ಪೋಷಕರು,ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಕೊಡಗು ನ್ಯೂಸ್

Read More

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಕುಟ್ಟ ಇವರ ಜಂಟಿ ಆಶ್ರಯದಲ್ಲಿ ಕೊಡವ ಸಾಹಿತ್ಯ ಸಂಸ್ಕೃತಿರ ಹಬ್ಬ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಕುಟ್ಟ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ, 2026ನೇ ಸಾಲಿನ, ಗೌರವ ಪ್ರಶಸ್ತಿ ಮತ್ತು ಕೊಡವ ಸಾಹಿತ್ಯ-ಸಂಸ್ಕೃತಿರ ಹಬ್ಬದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಪೊನ್ನಂಪೇಟೆ ತಾಲೂಕು ಕುಟ್ಟ ಗ್ರಾಮದ ಕೊಡವ ಸಮಾಜದ ಸಭಾಭವನದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ಅಕಾಡೆಮಿ ವತಿಯಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ. ಕೊಡವ ಸಂಸ್ಕೃತಿ, ಸಂಪ್ರದಾಯ ಭಾಷೆ ಹಾಗೂ ಸಾಹಿತ್ಯದ ಏಳಿಗೆಗೆ ನಾಡಿನಾದ್ಯಂತ, ವಿವಿಧ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಹೆಚ್ಚು ಅನುಕೂಲಕಾರಿ ಎಂದು ಬಣ್ಣಿಸಿದರು. ಅನಾದಿ ಕಾಲದಿಂದಲೂ ಕುಟ್ಟ ಭಾಗದಲ್ಲಿ ಬಹುತೇಕ ಕೊಡವ ಜನಾಂಗದವರು ವಾಸಿಸುತ್ತಿದ್ದಾರೆ. ಇಂತಹ ಜಾಗದಲ್ಲಿ ಕಾರ್ಯಕ್ರಮ ಮಾಡುವುದರಿಂದ…

Read More