- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಫೆ.22 ರಂದು ಸಮಾಜ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೆಬ್ರವರಿ, 22 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಫೆಬ್ರವರಿ, 22 ರಂದು ಮಧ್ಯಾಹ್ನ 1 ಗಂಟೆಗೆ ಕೊಡಗು ಜಿಲ್ಲೆಯ ದಲಿತರ ಸ್ವಾಭಿಮಾನಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ.ಶಿವಣ್ಣ ಅವರು ತಿಳಿಸಿದ್ದಾರೆ.
ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಐವರ ಬಂಧನ ಎರಡು ಪ್ರತ್ಯೇಕ ಪ್ರಕರಣ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ- ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬಂದಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ-ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಿಗ್ಗಾಲು ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸೇವನೆ ಕುರಿತು ಖಚಿತ ಮಾಹಿತಿ ಮೇರೆಗೆ ಫೆಬ್ರವರಿ 18 ರಂದು ದಾಳಿ ನಡೆಸಿ ಇಬ್ಬರು ಆರೋಪಿಗಳು ಹಾಗೂ ಕಡಗದಾಳು ಗ್ರಾಮದಲ್ಲಿ ದಿನಾಂಕ 19 ರಂದು ದಾಳಿ ನಡೆಸಿ ಮೂವರು ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ… ಸದರಿ ಆರೋಪಿಗಳ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್…
ನಾಪೋಕ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್ ಪೊನ್ನಣ್ಣ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಈ ಭಾಗದಲ್ಲಿ ಶಾಸಕರು ಒದಗಿಸಿಕೊಟ್ಟ ಅಂದಾಜು ₹ 40 ಲಕ್ಷಗಳಲ್ಲಿ, ಹಲವಾರು ರಸ್ತೆಗಳ ಕಾಮಗಾರಿ ಪ್ರಾರಂಭಿಸಲು ಭೂಮಿ ಪೂಜೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಈಗಾಗಲೇ ಪೂರ್ಣಗೊಂಡಿರುವಂತಹ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ವಲಯ ಅಧ್ಯಕ್ಷರು ಕುಶಾಲಪ್ಪ, ಹಿರಿಯರು ಬಿದ್ದತಂಡ ತಮ್ಮಯ್ಯ, ಪಂಚಾಯಿತಿ ಅಧ್ಯಕ್ಷರು ವನಜಾಕ್ಷಿ, ಸದಸ್ಯರು ಅರುಣ್ ಬೇಬ, ಶಾಬಾ ತಿಮ್ಮಯ್ಯ, ಹೇಮಾವತಿ, ಕಕ್ಕಬೆ ಪಂಚಾಯಿತಿ ಸದಸ್ಯರು ಕಲಿಯಂಡ ಸಂಪನ್ ಅಯ್ಯಪ್ಪ, ಕೌಶಿಕ್,ದೀಪು, ವಾಸಿಮ್, ಹ್ಯಾರೀಶ್, ಗ್ಯಾರಂಟಿ ಅನುಷ್ಠಾನ ಸದಸ್ಯರು ಸಿರಾಜ್ ಪರವಂಡ, ಉಬೈದುಲ್ಲಾ,…
ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತ್ರವು ಈಶ್ವರ ದೇವರ ವಾರ್ಷಿಕ ಹಬ್ಬದ ಉತ್ಸವದಲ್ಲಿ ಶಾಸಕ ಎ. ಎಸ್ ಪೊನ್ನಣ್ಣ ಭಾಗಿ ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತಾವು ಈಶ್ವರ ದೇವರ ವಾರ್ಷಿಕ ಹಬ್ಬದ ಉತ್ಸವದಲ್ಲಿ ಭಾಗವಹಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಆಗಮಿಸಿದರು. ಸಾಂಪ್ರದಾಯಿಕವಾಗಿ ನಡೆದ ಮಹಾ ಪೂಜೆಯ ಬಳಿಕ ಶಾಸಕರು ಪ್ರಸಾದ ಸ್ವೀಕರಿಸಿದರು. ಬಳಿಕ ಚೆವೂಟು ಬಾಳಿಯಾಡ ಐನ್ ಮನೆಯ ಪಟ್ಟಿಲ್ ಮುಡಿ ತೆರೆ ಉತ್ಸವದಲ್ಲಿ ಭಾಗವಹಿಸಿದರು. ದೇವರ ಕಾರ್ಯಕ್ರಮದ ಬಳಿಕ, ಬಾಳಿಯಾಡ ಕುಟುಂಬದ ಹಿರಿಯರು ತಮ್ಮ ಕುಟುಂಬದ ಪರವಾಗಿ ಶಾಸಕರನ್ನು ಸನ್ಮಾನಿಸಿ, ಶಾಸಕರು ನೀಡುತ್ತಿರುವ ಅನುದಾನಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಧನ್ಯವಾದಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ವಲಯ ಅಧ್ಯಕ್ಷರಾದ ಕುಶಾಲಪ್ಪ, ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ಶಾಬಾ ತಿಮ್ಮಯ್ಯ, ಬಾಳಿಯಾಡ ಕರುಣ್ ಕಾಳಪ್ಪ, ಬಿ.ಕೆ ಸುಬ್ರಮಣಿ, ಹರೀಶ್, ದಿವ್ಯ, ಪ್ರತೀಶ್, ಅಪ್ಪ ಸ್ವಾಮಿ, ಪೂಣಚ್ಚ, ಕಡಿಯತ್…
ಮಡಿಕೇರಿ ನಗರದ ವಿವಿಧಡೆಯಲ್ಲಿ ಗುಂಡಿ ಮುಚ್ಚುವ ಕಾರ್ಯ ಮಡಿಕೇರಿ ನಗರದ ವಿವಿದೆಡೆ ಕೇಂದ್ರದ ಎನ್ ಡಿ ಆರ್ ಎಫ್ ಅನುದಾನದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಭರ ದಿಂದ ನಡೆಯುತಿದ್ದು ಎಫ್ ಎಮ್ ಸಿ ಕಾಲೇಜು ರಸ್ತೆ ಯಲ್ಲಿನ ಕಾಮಗಾರಿಯನ್ನು ನಗರ ಸಭಾ ಅಧ್ಯಕ್ಷ ಕಲಾವತಿ ಉಪಾಧ್ಯಕ್ಷ ಮಹೇಶ್ ಜೈನಿ, ನಗರ ಸಭಾ ಸದಸ್ಯ ಚಂದ್ರಶೇಖರ್ ವೀಕ್ಷಿಸಿದರು.
ತ್ರಿಪದಿ ಕವಿ ಸರ್ವಜ್ಞ ಜಯಂತಿ ಕನ್ನಡ ಸಾಹಿತ್ಯ ಲೋಕದ ಅತ್ಯಂತ ಜನಪ್ರಿಯ ತ್ರಿಪದಿ ಕವಿ ಸರ್ವಜ್ಞ ಅವರು ಬರೆದಿರುವ ಪುಸ್ತಕ/ಹೊತ್ತಿಗೆಯನ್ನು ಎಲ್ಲಾ ಭಾಷೆಗಳಿಗೂ ಭಾಷಾಂತರ ಮಾಡಬೇಕು ಎಂದು ಕುಶಾಲನಗರ ಅನುಗ್ರಹ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಲೀಲಾಕುಮಾರಿ ತೊಡಿಕಾನ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ‘ಕವಿ ಸರ್ವಜ್ಞ ಜಯಂತಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ವಜ್ಞ ಅವರು ಬರೆದಿರುವ ತ್ರಿಪದಿ ಪದ್ಯಗಳು ಸಾರ್ವಕಾಲಿಕವಾಗಿದ್ದು, ಇಂಗ್ಲೀಷ್, ಹಿಂದಿ ಸೇರಿದಂತೆ ರಾಷ್ಟ್ರದ ಎಲ್ಲಾ ಭಾಷೆಗಳಿಗೂ ಭಾಷಾಂತರಿಸಿದಲ್ಲಿ ಪ್ರತಿಯೊಬ್ಬರಿಗೂ ತಲುಪಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಲೀಲಾಕುಮಾರಿ ತೊಡಿಕಾನ ಅವರು ಹೇಳಿದರು. ತ್ರಿಪದಿಗಳ ಬ್ರಹ್ಮ, ಚಕ್ರವರ್ತಿ ಎಂಬ ಬಿರುದು ಪಡೆದಿರುವ ಸರ್ವಜ್ಞ ಅವರು ಶ್ರೇಷ್ಠ ದಾರ್ಶನಿಕ, ಮಹಾನ್ ಮಾನವತಾವಾದಿಯಾಗಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಮೂರು ಸಾಲಿನಲ್ಲಿ ಪದ್ಯಗಳನ್ನು ರಚಿಸುವ ಮೂಲಕ ಪ್ರತಿಯೊಬ್ಬರಿಗೂ ಅರ್ಥವಾಗುವಂತೆ ಬರೆದಿರುವುದು…
ಹೊದವಾಡ: ನೂತನ ಅಂಗನವಾಡಿ ಕೇಂದ್ರಕಟ್ಟಡ ಉದ್ಘಾಟಿಸಿದ ಶಾಸಕ ಡಾ. ಮಂತರ್ ಗೌಡ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದವಾಡ ಗ್ರಾಮದ ಅಂಬಲದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಉದ್ಘಾಟಿಸಿದರು. ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಚ್.ಎ. ಹಂಸ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ ಶಾಸಕ ಮಂತರ್ ಗೌಡ ಅವರು ಮಾತನಾಡಿ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಿಗೆ ಆರೋಗ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯುವ ಮಾಹಿತಿ ನೀಡುವುದರ ಜತೆಗೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವಲ್ಲಿ ಯಶಸ್ವಿಯಾಗುತ್ತಿರವುದು ಶ್ಲಾಘನೀಯ ಕಾರ್ಯ ಎಂದರು.ಗ್ರಾಮದಲ್ಲಿ ಮುಂದಕ್ಕೂ ಎಲ್ಲರ ಸಹಕಾರ ದಿಂದ ಹೆಚ್ಚಿನ ಅಭಿವೃದ್ಧಿಯಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊದ್ದೂರು ಗ್ರಾಮ…
ಇಂದು ಜಿಲ್ಲಾ ಪೊಲೀಸ್ ಕವಾಯತು ಹಾಗೂ ಅಪರಾಧ ಚರ್ಚಾ ಕೂಟ ಇಂದು ಜಿಲ್ಲಾ ಕವಾಯತು ಮೈದಾನದಲ್ಲಿ ಜಿಲ್ಲಾ ಕವಾಯತು ನಡೆಸಲಾಯಿತು. ನಂತರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅಪರಾಧ ಚರ್ಚಾ ಕೂಟ ನಡೆಸಿ ವಿವಿಧ ಪ್ರಕರಣಗಳ ತನಿಖೆಯ ಹಂತಗಳನ್ನು ಪರಾಮರ್ಶಿಸಿ, ಜಿಲ್ಲೆಯ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಬಂದೋಬಸ್ತುಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ ಕರ್ನಾಟಕ ಅರಣ್ಯ ಇಲಾಖೆಯು ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. KFWCCF ಅಡಿಯಲ್ಲಿ ಎರಡು ವರ್ಷಗಳ ಒಪ್ಪಂದ ಆಧಾರಿತ ಈ ಹುದ್ದೆಗೆ ಫೆಬ್ರವರಿ 25ರೊಳಗೆ ಅರ್ಜಿ ಸಲ್ಲಿಸಬೇಕು. PRO ಆಗಿ ಅನುಭವವಿರುವ ಅರ್ಹ ಅಭ್ಯರ್ಥಿಗಳು KFWCCF ವೆಬ್‌ಸೈಟ್ ಮೂಲಕ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಯ ನೇಮಕಾತಿಗೆ ಸಂಬಂಧಿಸಿದ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನ ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದ ಆಧಾರಿತವಾಗಿ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು…
ಮರದಿಂದ ಬಿದ್ದು ವ್ಯಕ್ತಿ ಸಾವು ವಿರಾಜಪೇಟೆ ಸಮೀಪದ ಚೊಕಂಡಹಳ್ಳಿ ನಲ್ವತೋಕ್ಲು ಬಳಿ ಮರದಿಂದ ಬಿದ್ದು ವ್ಯಕ್ತಿ ಸಾವು. ಪೊನ್ನಂಪೇಟೆ ಮಹಾತ್ಮ ಗಾಂಧಿ ನಗರದ ನಿವಾಸಿ ಅತ್ತೂರಿನಲ್ಲಿ ನೆಲೆಸಿದ್ದ ಮದು ಅವರ ಏಕಮಾತ್ರ ಪುತ್ರ ರವಿ (30) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇಂದು ಮಧ್ಯಾಹ್ನ ಮುಸ್ತಫಾ ಅವರ ತೋಟದಲ್ಲಿ ಮರ ಕಾಪತು ಮಾಡುವ ಸಂದರ್ಭದಲ್ಲಿ ಮರದ ಮೇಲೆ ಇದ್ದ ಸಂದರ್ಭದಲ್ಲಿ ಮೂರ್ಛೆ ಗೆ ಒಳಗಾಗಿ ಮರದಿಂದ ಬಿದ್ದು ಮೃತಪಟ್ಟಿದ್ದಾರೆ. ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಮೃತ ರವಿ ಅವರ ಮೃತ ದೇಹವನ್ನು ಶವಪರೀಕ್ಷೆಗೆ ಸಾಗಿಸಲಾಗಿದ್ದು ,ವಿರಾಜಪೇಟೆ ಗ್ರಾಮಾಂತರ ಠಾಣೆ ಯಲ್ಲಿ ಮೊಕದ್ದಮೆ ದಾಖಲಾಗಿದೆ. ಮೃತ ರವಿ ವಿವಾಹಿತ ನಾಗಿದ್ದು ಪತ್ನಿ ,ಏಳು ವರ್ಷಗಳ ಪುತ್ರಿ, ಐದು ತಿಂಗಳ ಗಂಡು ಮಗುವನ್ನು ಅಗಲಿದ್ದಾರೆ.
