Author: Kodagu-admin

KODAGU NEWS UPDATE ಕುಶಾಲನಗರದ ಬೈಚನಹಳ್ಳಿ ಗೂಡ್ಸ್ ಗಾಡಿ -ಬೈಕ್ ನಡುವೆ ಅಪಘಾತ ಕುಶಾಲನಗರ ಫೆ: 19 ಬೈಚನಳ್ಳಿ ಮಾರಮ್ಮ ದೇವಾಲಯ ಮುಂಭಾಗ ಹೆದ್ದಾರಿ ಬಳಿ ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಆಗಿದ್ದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ… ಗಾಯಾಳುವನ್ನು ಇದೀಗ ಮೈಸೂರಿಗೆ ರವಾನಿಸಲಾಗಿದ್ದು…. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. KODAGU NEWS UPDATE

Read More

ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ಮಂತರ್ ಗೌಡ ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು. ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು. ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು. ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಡಾವಣೆ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ…

Read More

ಮಡಿಕೇರಿ ಫೆ.19 ಆನ್ ಲೈನ್ ನಲ್ಲಿ ಔಷಧ ವ್ಯಾಪಾರಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಮಾದಕ ದ್ರವ್ಯಗಳಿಗೂ ಸಂಪೂಣ೯ ತಡೆ ಸಾಧ್ಯವಾಗದು ಎಂದು ಅಭಿಪ್ರಾಯಪಟ್ಟಿರುವ ಕನಾ೯ಟಕ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆರ್ ರಘುನಾಥ ರೆಡ್ಡಿ, ಆನ್ ಲೈನ ಮೂಲಕ ಮಾದಕ ದ್ರವ್ಯ ಸಾಗಾಣಿಕೆ ಊಹೆಗೂ ಮೀರಿ ಬೆಳೆಯುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ. ನೂತನವಾಗಿ ನಿಮಿ೯ಸಲಾದ ಸಂಘದ ಕಛೇರಿ, ಸಭಾಂಗಣವನ್ನು ಹೊಂದಿರುವ ಎರಡಂತಸ್ತಿನ ಫಾಮಾ೯ ಭವನ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಸಾಗಾಣಿಕೆ ದೇಶವ್ಯಾಪಿ ವಿಸ್ತಾರಗೊಳ್ಳುತ್ತಿದೆ. ಆನ್ ಲೈನ್ ನಲ್ಲಿ ಔಷಧಿ ವಹಿವಾಟು ನೆಪದಲ್ಲಿ ಮಾದಕ ದ್ರವ್ಯ ಸಾಗಾಣಿಕೆಯೂ ಹೆಚ್ಚಾಗುತ್ತಿದೆ. ಇಂಥ ಸಂದಭ೯ ಅನಗತ್ಯವಾಗಿ ಔಷಧಿ ವ್ಯಾಪಾರಿಗಳನ್ನು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸುತ್ತಿವೆ ಸಾಗಾಣಿಕೆ ಮಾಡುವ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್ ಲೈನ್ ಔಷಧಿ ವಹಿವಾಟಿಗೇ ತಡೆಯೊಡ್ಡುವ ನಿಟ್ಟಿನಲ್ಲಿ ಸಕಾ೯ರ ಮುಂದಾಗಬೇಕೆಂದು ಒತ್ತಾಯಿಸಿದರು. ಸಂಘದ ಅಧೀನದಲ್ಲಿರುವ ಔಷಧ ವ್ಯಾಪಾರಿಗಳು ಯಾವುದೇ ಕಾರಣಕ್ಕೂ ಮಾದಕ ಪದಾಥ೯ಗಳು, ಮಾದಕ ದ್ರವ್ಯಗಳ…

Read More

1.5 ಕೋಟಿ ವೆಚ್ಚದ ಕ್ಯಾಮಾಟ್ ಕುಂಬಳದಾಳು ಮೂರ್ನಾಡ್ ರಸ್ತೆ ನವೀಕರಣಕ್ಕೆ ಡಾ ಮಂತರ್ ಗೌಡ ಚಾಲನೆ ಮಡಿಕೇರಿ ತಾಲೂಕಿನ ಕ್ಯಾಮಾಟ್ ಕುಂಬಳದಾಳು, ಮೂರ್ನಾಡ್ ರಸ್ತೆ ನವೀಕರಣದ 1.5 ಕೋಟಿ ರೂ ವೆಚ್ಚದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡರವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಮುಖ್ಯಮಂತ್ರಿಗಳು ಶಾಸಕರ ವಿಶೇಷ ಅನುದಾನವಾಗಿ ನೀಡಿದ 50 ಕೋಟಿ ರೂಗಳ ಅನುದಾನದಲ್ಲಿ ಸದರಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜಿಗೆ ತಾವು ಸಿದ್ದರಿಲ್ಲ.ಕಾಮಗಾರಿ ಉತ್ತಮವಾಗಿದ್ದರೆ ಮಾತ್ರ ಬಿಲ್ ಪಾವತಿ ಮಾಡಲಾಗುವುದು ಎಂದು ಡ ಮಂತರ್ ಗೌಡ ರವರು ಸ್ಪಷ್ಟಪಡಿಸಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ರವರು ಮಾತನಾಡಿ ಈ ಬಾಗದ ಜನರ ಬಹುಕಾಲದ ಬೇಡಿಕೆ ಈ ರಸ್ತೆ ಅಭಿವೃದ್ಧಿ ಆಗಿದ್ದು ಮಾನ್ಯ ಶಾಸಕರು ವಿಶೇಷ ಕಾಳಜಿ ವಹಿಸಿ ಜನರ ಕೋರಿಕೆಯನ್ನು ಈಡೇರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪ…

Read More

ರಾಜ್ಯಾದ್ಯಂತ ಫೆ.19ಕ್ಕೆ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾರಿಗೆ ನೌಕರರು ವಿವಿಧ ಬೇಡಿಕೆಗೆ ಒತ್ತಾಯಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರು ಚಲೋಗೆ ಕೂಡ ಕರೆಕೊಟ್ಟಿದ್ದಾರೆ. ಹೀಗಾಗಿ, ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇತ್ತ ಸಾರಿಗೆ ನಿಗಮಗಳು ನೌಕರರು ರಜೆ ತೆಗೆದುಕೊಳ್ಳ ಬಾರದು ಎಂದು ಸೂಚನೆ ನೀಡಿದೆ. ಜತೆಗೆ ವೇತನ ಕಡಿತದ ಎಚ್ಚರಿಕೆಯನ್ನು ನೀಡಿದೆ. ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ (ಫೆಬ್ರವರಿ 19) ‘ಬೆಂಗಳೂರು ಚಲೋ’ ನಡೆಸಲಿದ್ದಾರೆ. ಈ ಹಿನ್ನೆಲೆ ರಾಜ್ಯಾದ್ಯಂತ ಬಸ್‌ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರ ಸಂಘಟನೆಗಳು ಈ ಹಿಂದೆ ಜನವರಿ 29 ರಂದು ನಡೆಸಲು ಉದ್ದೇಶಿಸಿದ್ದ ಬೆಂಗಳೂರು ಚಲೋ ಹೋರಾಟವನ್ನು ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್‌ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ…

Read More

ಸಂತ್ರಸ್ತರ ಗೌಪ್ಯತೆ ಇನ್ನು ಕಡ್ಡಾಯ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹತ್ವದ ಬದಲಾವಣೆ ತಂದ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಕರ್ನಾಟಕ: ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಂತ್ರಸ್ತರ ಗುರುತನ್ನು ರಕ್ಷಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲೇಖಿಸಿ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಅಥವಾ ಅಪ್ರಾಪ್ತ ಸಂತ್ರಸ್ತರ ಹೆಸರು, ವಿಳಾಸ ಹಾಗೂ ಯಾವುದೇ ರೀತಿಯ ಗುರುತನ್ನು ಸಾರ್ವಜನಿಕವಾಗಿ ಅಥವಾ ದಾಖಲೆಗಳಲ್ಲಿ ಬಹಿರಂಗಪಡಿಸುವಂತಿಲ್ಲ. ದೂರು ಸ್ವೀಕರಿಸಿದ ನಂತರ ಠಾಣಾಧಿಕಾರಿ ಅಥವಾ ತನಿಖಾಧಿಕಾರಿಯು ಮೂಲ ಹೆಸರನ್ನು ಬದಲಾಯಿಸಿ, ಸಾಂಕೇತಿಕ ಹೆಸರನ್ನು ಬಳಸಬೇಕು. FIR ನಲ್ಲೂ ಈ ಬದಲಾದ ಹೆಸರನ್ನೇ ನಮೂದಿಸಬೇಕು ಮತ್ತು ಜತೆಗೆ ಇದರಲ್ಲಿ ‘ಹೆಸರು ಬದಲಿಸಲಾಗಿದೆ’ ಎಂದು ಸ್ಪಷ್ಟಪಡಿಸಬೇಕು. ನ್ಯಾಯಾಲಯಕ್ಕೆ ಸಲ್ಲಿಸುವ ದೂರು ಪ್ರತಿ, ಮಹಜರು ವರದಿ ಹಾಗೂ ಚಾರ್ಜ್‌ಶೀಟ್ (ದೋಷಾರೋಪ ಪಟ್ಟಿ)…

Read More

ಮರಗೋಡುನಲ್ಲಿ ಐತಿಹಾಸಿಕ ಹಿಂದು ಸಂಗಮಕ್ಕೆ ಭರ್ಜರಿ ಸಿದ್ಧತೆ ಶೋಭಾಯಾತ್ರೆ, ಟ್ಯಾಬ್ಲೋ, ಚಂಡೆ ನಾದದೊಂದಿಗೆ ಇಂದು ಸಾವಿರಾರು ಜನರ ಮಹಾ ಸಂಗಮ ASHOK MADIKERI ಮರಗೋಡು: ಧರ್ಮ, ಸಂಸ್ಕೃತಿ, ಕುಟುಂಬ ಮೌಲ್ಯಗಳು ಹಾಗೂ ರಾಷ್ಟ್ರಭಕ್ತಿಯ ಸಂದೇಶವನ್ನು ಜನತೆಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಹಿಂದು ಸಂಗಮ ಆಯೋಜನಾ ಸಮಿತಿಯ ವತಿಯಿಂದ ಫೆಬ್ರವರಿ 21ರಂದು ಮರಗೋಡುನಲ್ಲಿ ಭವ್ಯ ಹಿಂದು ಸಂಗಮ ಮಹಾಸಮಾವೇಶ ನಡೆಯಲಿದೆ. ಈ ಐತಿಹಾಸಿಕ ಧಾರ್ಮಿಕ–ಸಾಂಸ್ಕೃತಿಕ ಉತ್ಸವಕ್ಕೆ ಮರಗೋಡು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಗಳು ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದೆ. ಬೆಳಿಗ್ಗೆ 9.30 ಗಂಟೆಗೆ ಮರಗೋಡು ಪ್ರೌಢ ಶಾಲಾ ಮೈದಾನದಿಂದ ಭವ್ಯ ಶೋಭಾಯಾತ್ರೆ ಆರಂಭವಾಗಲಿದ್ದು, ವಿವಿಧ ಸ್ಥಳಗಳಿಂದ ಜನರು ಸೇರಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಕಳಸ ಹೊತ್ತು ಸಂಪ್ರದಾಯಬದ್ಧವಾಗಿ ಸಾಗಲಿದ್ದು, ಸಮಾಜದ ಏಕತೆ ಹಾಗೂ ಸಂಸ್ಕೃತಿಯ ಶಕ್ತಿಯನ್ನು ಪ್ರತಿಬಿಂಬಿಸಲಿದ್ದಾರೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ವೈವಿಧ್ಯಮಯ ಟ್ಯಾಬ್ಲೋ ವಾಹನಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿದ್ದು, ಮಕ್ಕಳ ಛದ್ಮವೇಷ…

Read More

ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನೀಶನ್ ಕಡ್ಡಾಯ, ಶಿಕ್ಷಣ ಇಲಾಖೆ ಆದೇಶ ಶಿಕ್ಷಣ ಇಲಾಖೆಯ ಮಹತ್ವದ ಆದೇಶ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಎ ಐ ಆಧಾರಿತ ಹಾಜರಾತಿ ಕರ್ನಾಟಕ ಸರ್ಕಾರ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರಕಗ್ನೀಶನ್ ಕಡ್ಡಾಯ ಮಾಡಲಾಗಿದೆ. ಎಐ ಆಧಾರಿತ ವಿದ್ಯಾರ್ಥಿಗಳ ಮುಖದ ಹಾಜರಾತಿ ಮಾನಿಟರಿಂಗ್ ಸಿಸ್ಟಮ್ ಮೂಲಕ ದಾಖಲಾತಿ ನಡೆಯಲಿದೆ ಎಂದಿದೆ. ಈ ಕುರಿತು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಹಾಜರಾತಿ ತಪ್ಪದಂತೆ ಎಐ ತಂತ್ರಾಂಶದಲ್ಲಿ ದಾಖಲಿಸಲು ಸೂಚನೆ ನೀಡಲಾಗಿದೆ. ಈ ಬಾರಿಯ ಶೈಶಕ್ಷಣಿಕ ವರ್ಷದಿಂದಲೇ ಜಾರಿಯಾಗುತ್ತಿದೆ. *ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಡ್ಡಾಯ* 2026-27ನೇ ಸಾಲಿನಿಂದಲೇ ಫೇಸ್ ರಕಗ್ನೀಶನ್ ತಂತ್ರಜ್ಞಾನ ಜಾರಿ ಆಗಲಿದೆ. ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯ ಮಾಡಲಾಗಿದೆ. ಬರೋಬ್ಬರಿ ಒಟ್ಟು 2.16 ಕೋಟಿ ವೆಚ್ಚದಲ್ಲಿ ಫೇಸ್ ರಕಗ್ನೀಶನ್ ತಂತ್ರಜ್ಞಾನ ಅಭಿವೃದ್ಧಿ ಮಾಡಲಾಗಿದೆ. ಮೇ ತಿಂಗಳೊಳಗೆ ಎಲ್ಲಾ ಶಾಲೆಗಳಲ್ಲಿ ಎಐ ಮೊಬೈಲ್ ಆ್ಯಪ್ ಅನುಷ್ಠಾನ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ…

Read More

ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ಕಾನೂನಿನ ಅರಿವು ಕಾರ್ಯಕ್ರಮ ಬಸವನಹಳ್ಳಿ ಹಾಡಿಯ ನಿವಾಸಿಗಳಿಗೆ ಹಾಗೂ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಅಕ್ಕಪಡೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಏ.28 ರಂದು ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ KODAGU NEWS ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್‌ 28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಉಪಾಧ್ಯಕ್ಷ ಎಂ.ಎ. ನಾಸಿರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮ್ಮೇಳನದ ಸ್ವರೂಪ ಮತ್ತು ಹಮ್ಮಿಕೊಳ್ಳಬಹುದಾಗ ಕಾರ್ಯಕ್ರಮಗಳ ವಿವರ ನೀಡಿದರು. ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಬಿ.ಎ. ಶಂಷುದ್ದೀನ್‌ ಮಡಿಕೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಎಸ್.ಪಿ. ಮುನೀರ್‌ ಅಹ್ಮದ್‌ ಸ್ವಾಗತಿಸಿದರು. ಅಬ್ದುಲ್ಲಾ ಧನ್ಯವಾದವಿತ್ತರು. ಎಂ.ಯು.…

Read More