- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ KODAGU NEWS ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ,, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,…
ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ….!!! ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್ KODAGU NEWS ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇದೇ ಫೆಬ್ರವರಿ, 28 ರಿಂದ ಮಾರ್ಚ್, 17 ರವರೆಗೆ ನಡೆಯಲಿದ್ದು., ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು…
ಐನ್ ಆಪ್ಟಿಕಲ್ಸ್ ಆಪ್ರೋಮೆಟ್ರಿ ಕ್ಲಿನಿಕ್ ಇವರ ಆಶ್ರಯದಲ್ಲಿ ಏರ್ಪಡಿಸಲಾದ ಉಚಿತ ನೇತ್ರ ತಪಾಸಣಾ ಶಿಬಿರ ವನ್ನು ಜಿಲ್ಲಾ ಜೆ ಡಿ ಎಸ್ ಘಟಕದ ಮುಖಂಡರಿಂದ ಉದ್ಘಾಟಿಸಲಾಯಿತು ಐನ್ ಆಪ್ಟಿಕಲ್ಸ್ ಅಪ್ರೋಮೆಟ್ರಿ ಕ್ಲಿನಿಕ್, ಕುಶಾಲನಗರ ಇವರ ಆಶ್ರಯದಲ್ಲಿ ಅಭ್ಯತ್ ಮಂಗಲ ಗ್ರಾಮೀಣ ಕೃಷಿಪತ್ತಿನ ಸಹಕಾರ ಸಂಘ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರ, ಹಾಗೂ ಚಿಕಿತ್ಸೆ ಶಿಬಿರವನ್ನು ಕೊಡಗು ಜಿಲ್ಲಾ ಜೆ.ಡಿ.ಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು, ನೆಲ್ಯಹುದಿಕೇರಿ ಜೆಡಿಎಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಶಿಯಾಬುದ್ದೀನ್ ವಿ.ಪಿ.ಎಸ್ ಉದ್ಘಾಟಿಸಿದರು. ಬಳಿಕಮಾತನಾಡಿದವರು ಅವರು ಸಂಸ್ಥೆಯು ನೀಡುತ್ತಿರುವ ಕಣ್ಣಿನ ತಪಾಸಣೆ ಹಾಗೂ ಉಚಿತ ಸೇವೆಯನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದರು. 50ಕ್ಕಿಂತಲೂ ಅಧಿಕ ಮಂದಿ ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಶಿಬಿರದಲ್ಲಿ ಅಗತ್ಯವಿದ್ದವರಿಗೆ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಸಹ ವಿತರಿಸಲಾಯಿತು. ಸಂಸ್ಥೆಯಮುಖ್ಯಸ್ಥರಾದ ಫಾಸಿಲ್ ರಹೀಮ್, ಅನ್ಸಾರ್, ಅನ್ಸಾರುದ್ದೀನ್ , ಶಿಫಾನತ್, ಫಾತಿಮತ್ ಅಫೀಫ ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು.
ಪೇರೂರು ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಮಹಾಶಿವರಾತ್ರಿ ಆಚರಣೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು: ನಾಪೋಕ್ಲು ಬಳಿಯ ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಭಾನುವಾರ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನಡೆಯಿತು. ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು,ತಕ್ಕ ಮುಖ್ಯಸ್ಥರು,ದೇವಾಲಯ ಅಭಿವೃದ್ದಿ ಸಮಿತಿ ಸದಸ್ಯರು,ಅಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ದೇವರಕಾಡು ಉಳಿವಿಗಾಗಿ ಪೊನ್ನಂಪೇಟೆಯಲ್ಲಿ ಸಂವಾದ KODAGU NEWS ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಮಾಡೆಲ್ ಫಾರೆಸ್ಟ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ಸುಲೋಚನಾ ಡಾ. ಎಂ.ಜಿ ನಾಗರಾಜ್ ದತ್ತಿ ಆಶಯದಂತೆ ಕೊಡಗಿನ ದೇವರ ಕಾಡುಗಳ ಸಂರಕ್ಷಣೆ ಕುರಿತ ಉಪನ್ಯಾಸದಲ್ಲಿ ಮಾತನಾಡುತಿದ್ದರು. ಮುಂದುವರೆದ ಅವರು ಕೊಡಗಿನಲ್ಲಿ 1,215 ದೇವರ ಕಾಡುಗಳಿವೆ ಅವುಗಳಲ್ಲಿ 165ಕ್ಕೂ ಹೆಚ್ಚು ಬೇರೆ ಬೇರೆ ದೇವರುಗಳಿವೆ. ಇವು ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ ಕೊಡಗಿನ ಎಲ್ಲ ಸಮುದಾಯಗಳ ದೇವರು ಕಾಡುಗಳಿದ್ದು ವಿಶೇಷವಾಗಿ ಕೊಡವ ಮಾಪಿಳ್ಳೆ ದೇವರ ಕಾಡುಗಳು ಇದ್ದು ಪಳ್ಳಿಕಾಡು ಎನ್ನುವ ಹೆಸರಿಂದ ಗುರುತಿಸಲ್ಪಡುತ್ತಿದೆ. ದೇವರ ಕಾಡುಗಳಲ್ಲಿರುವ ಅಯ್ಯಪ್ಪ ಭದ್ರಕಾಳಿ ಮುಂತಾದ ದೇವರುಗಳಿಗೆ ಗುಡಿಗಳಿಲ್ಲ ಅದು ಆಕಾಶಕ್ಕೆ ಮುಖ ಮಾಡಿಕೊಂಡು ಮಳೆ ಕರೆಯುತ್ತಿವೆ ಇವುಗಳ ಜೊತೆಯಲ್ಲಿ ಬೇಟೆ ನಾಯಿಗಳು ಇವೆ ಎಂದರು. ದೇವರ ಕಾಡುಗಳು ಧಾರ್ಮಿಕ ಸಂಪ್ರದಾಯ, ಸಂಸ್ಕೃತಿ ಉಳಿಸುವ ಜೊತೆಗೆ ಊರಿನ ನ್ಯಾಯ ಪಂಚಾಯಿತಿಯನ್ನು ಮಾಡುವ ತಾಣಗಳಾಗಿವೆ.…
ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಟೂರ್ನಿಯಾ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು. ವಿರಾಜಪೇಟೆ ನಗರದಲ್ಲಿರುವ ಸಂತ ಅನ್ನಮ್ಮನ ಚರ್ಚ್ ಮೈದಾನದಲ್ಲಿ ಈ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆಗೊಂಡಿತ್ತು. ಟೂರ್ನಮೆಂಟನ್ನು ಉದ್ಘಾಟಿಸಿ ಮಾತನಾಡಿದ ಸ್ವತಹ ಕ್ರೀಡಾಪಟು ಆಗಿರುವ ಶಾಸಕರು, ಯುವಜನತೆಯನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗಿದೆ. ಅದರಲ್ಲೂ ವಿಶೇಷವಾಗಿ ವಿಶ್ವ ವ್ಯಪ್ತಿ ಮನ್ನಣೆ ಪಡೆದು ಯುವಜನತೆಯಲ್ಲಿ ಹಾಸು ಹೊಕ್ಕಿರುವ ಕ್ರಿಕೆಟ್ ಪಂದ್ಯಾಟ ಪ್ರತಿಯೊಬ್ಬ ಯುವಕನಿಗೆ ಜೀವಾಳವಾಗಿದೆ. ಇಂತಹ ಕ್ರೀಡಾಕೂಟಗಳು ಸಮುದಾಯದ ಯುವ ಕ್ರೀಡಾಳುಗಳಿಗೆ ಸ್ಪೂರ್ತಿ ನೀಡಿ ತಮ್ಮ ಮುಂದಿನ ಕ್ರೀಡಾ ಭವಿಷ್ಯಕ್ಕೆ ದಾರಿದೀಪವಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಸಂತ ಅನ್ನಮ್ಮ ಶಾಲೆಯ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಾಲ ಕರಾಟೆ ಶಿಬಿರದಲ್ಲಿ ವಿವಿಧ ಶಾಲೆಯ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ…
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಶಾಸಕ ಪೊನ್ನಣ್ಣನವರಿಂದ ಉದ್ಘಾಟಿಸಲಾಯಿತು ಸುಳ್ಯ ಮೂಲದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಪ್ರಾರಂಭಿಸಲಾಯಿತು. ಈ ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ಸದ್ರಿ ಬ್ಯಾಂಕಿನ 24ನೇ ಶಾಖೆ ಇದಾಗಿದ್ದು, ಮೂರ್ನಾಡು ಭಾಗದಲ್ಲಿ ಇದು ಮತ್ತಷ್ಟು ಯಶಸ್ಸು ಕಾಣಲಿ ಎಂದು ಉದ್ಘಾಟನೆ ಬಳಿಕ ಶಾಸಕರು ಶುಭ ಕೋರಿದರು. ಮುಂದುವರೆದು ಮಾತನಾಡುತ್ತಾ, ಗ್ರಾಮೀಣ ಭಾಗದ ಜನರಿಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಕೋಪರೇಟಿವ್ ಸೊಸೈಟಿ ಗಳು ತುಂಬಾ ಪ್ರಾಮುಖ್ಯತೆ ನೀಡುತ್ತಿವೆ. ಅದೇ ರೀತಿ ಈ ವರ್ಗದ ಜನರಿಗೆ ಕಾರ್ಪೊರೇಟಿವ್ ಸೊಸೈಟಿಯಿಂದ ಹೆಚ್ಚಿನ ಅನುಕೂಲ ಆಗುತ್ತಿದೆ. ಆದ್ದರಿಂದ ಇಂತಹ ಸೊಸೈಟಿಗಳು ಜನಸಾಮಾನ್ಯರ ಒಳಿತನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ತಮ್ಮ ಸಂಸ್ಥೆಯ ಬೆಳವಣಿಗೆಗು ಪೂರಕವಾದ…
ಅಂಬೇಡ್ಕರ್ ಪುತ್ತಳಿ ಕಾಮಗಾರಿ ವೀಕ್ಷಿಸಿದ ಗೃಹ ಸಚಿವ ಪರಮೇಶ್ವರ್ ಮಡಿಕೇರಿಯ ಸುದರ್ಶನ್ ವೃತ್ತದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಪುತ್ತಳಿ ಕಾಮಗಾರಿಯನ್ನು ಕರ್ನಾಟಕ ಘನ ಸರ್ಕಾರದ ಗೃಹಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರೊಂದಿಗೆ ವೀಕ್ಷಣೆ ನಡೆಸಿದರು. ಸಂಧರ್ಭ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ತಿತೀರ ಧರ್ಮಜಾ ಉತ್ತಪ್ಪ, ವೀಣಾ ಅಚ್ಚಯ್ಯ, ಟಿ.ಪಿ ರಮೇಶ್, ಸುಜು ತಿಮ್ಮಯ್ಯ, ಹಂಸ ಹೆಚ್.ಎ, ನಂದಕುಮಾರ್, ವಿ.ಜಿ ಮೋಹನ್, ಮೋಹನ್ ಮೌರ್ಯ, ರಾಜೇಶ್ ಎಲ್ಲಪ್ಪ, ಖಲೀಲ್ ಬಾಷಾ, ಹರಿಪ್ರಸಾದ್ ಕೋಚನ, ಮಂದ್ರಿರ ಮೋಹನ್ ದಾಸ್, ತೆನ್ನಿರಾ ಮೈನ, ದಿನೇಶ್ ಶೆಟ್ಟಿ, ಪ್ರಕಾಶ್ ಆಚಾರ್ಯ ಮತ್ತು ಪ್ರಮುಖರು ಉಪಸ್ಥಿತರಿದ್ದರು. ಕೊಡಗು ನ್ಯೂಸ್
ಕೊಡಗು ಜಿಲ್ಲೆಗೆ ಆಗಮಿಸಿದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ ರವರು ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪನವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರಾದ ಪಿಎ ಅನೀಫ್ ಚೌಕಂಡಳ್ಳಿ ರವರು, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಸಮಿತಿಯ ಸದಸ್ಯರಾದ ಮೊಹಮ್ಮದ್ ಅಲಿ ಸಿದ್ದಾಪುರ, ಎಚ್ ಎಮ್ ನೌಫಲ್ ಮತ್ತು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆಎಂ ಸೈಯದ್ ಭಾವ,ಪಕ್ಷದ ನಾಯಕರು ಮತ್ತು ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು KODAGU NEWS UPDATE
ಕೊಂಡಗೇರಿಗಿಂದು ಶಾಸಕ ಎ. ಎಸ್ ಪೊನ್ನಣ್ಣ ಭೇಟಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ತಮ್ಮ ಕ್ಷೇತ್ರದ ಕೊಂಡಂಗೇರಿ ಗ್ರಾಮಕ್ಕೆ ಭೇಟಿ ನೀಡಿದರು. ಕೊಂಡಂಗೇರಿ ನೂತನವಾಗಿ ಪ್ರಾರಂಭಗೊಂಡ ಕಥಣೀರ ಕಾಂಪ್ಲೆಕ್ಸ್ ಹಾಗೂ ಎಂ ಎಂ ಸಿ ಹೆಲ್ತ್ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಉದ್ಘಾಟನೆ ನೆರೆವೇರಿಸಿದ ಶಾಸಕರು ಕಥಣೀರ ಕಾಂಪ್ಲೆಕ್ಸ್ ನಲ್ಲಿ ಇರುವ ಈ ಹೆಲ್ತ್ ಕ್ಲೀನಿಗೆ ಹಾಗೂ ಕಥಣೀರ ಕಾಂಪ್ಲೆಕ್ಸ್ ಮಾಲೀಕರಿಗೆ ಯಶಸ್ಸು ದೊರಕಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಹಾಲುಗುಂದ ಪಂಚಾಯಿತಿ ಅಧ್ಯಕ್ಷರು ದಿನೇಶ್, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರು ದುಡಿಯಂಡ ಸೂಫಿ ಹಾಜಿ, ಕೊಂಡಂಗೇರಿ ಮುಸ್ಲಿಂ ಜಮಾತ್ ಅಧ್ಯಕ್ಷರು ಜನಾಬ್ ಪೆರಿಯಂಡ ಯುಸುಫ್, ತಾಲೂಕು ಕೆಡಿಪಿ ಸದಸ್ಯರು ರಫೀಕ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು…
