- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ನವದೆಹಲಿಯಲ್ಲಿ ಕೆಜಿಎಫ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ ಆನೆ ಮಾನವ ಸಂಘಷ೯ಕ್ಕೆ ಪರಿಹಾರ ಸಂಬಂಧಿತ ಮೇನಲ್ಲಿ ಕೇಂದ್ರ – ರಾಜ್ಯದಿಂದ ಬೆಂಗಳೂರಿನಲ್ಲಿ ಸಭೆ KODAGU NEWS ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಭೂಪೇಂದ್ರ ಯಾದವ್ರವರನ್ನು ಭೇಟಿ ಮಾಡಿ .ದಶಕಗಳಿಂದ ಕೊಡಗು , ಚಿಕ್ಕಮಗಳೂರು, ಹಾಸನ ಭಾಗಗಳಲ್ಲಿ ಅತ್ಯಂತ ಗಂಭೀರ ಪಿಡುಗಾಗಿರುವ ಆನೆ-ಮಾನವ ಸಂಘರ್ಷದ ಬಗ್ಗೆ ಗಮನ ಸೆಳೆಯಿತು. ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ ನೇತೃತ್ವದ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಕೇಂದ್ರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ತಮ್ಮ ಸಚಿವಾಲಯಕ್ಕೆ ಈ ಸಮಸ್ಯೆ ಕುರಿತು ಸಂಪೂರ್ಣ ಅರಿವಿರುವುದಾಗಿಯೂ ಇದರ ನಿವಾರಣೆಗಾಗಿ ಕೇಂದ್ರ ಸರ್ಕಾರದ ಎಲ್ಲ ರೀತಿಯ ಸಹಕಾರವನ್ನು ನೀಡುವುದಲ್ಲದೇ, ಅಗತ್ಯವಾದ ಆಥಿ೯ಕ ನಿಧಿಯನ್ನು ಕೂಡಾ ಮೀಸಲಿಟ್ಟಿರುವುದಾಗಿ ತಿಳಿಸಿದರು. ಒಕ್ಕೂಟದ ನಿಯೋಗವು ಕೇಂದ್ರ ಸರ್ಕಾರದ…
ಮದೆನಾಡು :ಬೈಕ್ ಸವಾರನ ಮೇಲೆ ಕಾಡಾನೆದಾಳಿ – ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ಸವಾರ ವರದಿ:ಝಕರಿಯ ನಾಪೋಕ್ಲು KODAGU NEWS ನಾಪೋಕ್ಲು :ಕಾಡಾನೆ ಹಿಂಡು ದಾಳಿ ನಡೆಸಿ ಬೈಕ್ ಸವಾರನೊಬ್ಬ ಗಾಯಗೊಂಡು ಜೀವಪಾಯದಿಂದ ಪಾರಾಗಿ ಆಸ್ಪತ್ರೆ ಸೇರಿದ ಘಟನೆ ಮದೆನಾಡಿನಲ್ಲಿ ಭಾನುವಾರ ಸಂಜೆ ನಡೆದಿದೆ. ಮದೆ ನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬವರ ಪುತ್ರ ಭರತ್ ಕುಮಾರ್ (50) ಕಾಡಾನೆ ದಾಳಿಗೆ ಒಳಗಾದಸವಾರನಾಗಿದ್ದಾರೆ. ರೆಸಾರ್ಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಭರತ್ ಕುಮಾರ್ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು – ಬೆಟ್ಟತ್ತೂರು ಮಾರ್ಗದ ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ ದಿಢೀರನೆ ಏಕಾಏಕಿ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು ಭರತ್ ಮೇಲೆ ದಾಳಿ ಮಾಡಿ ಸೊಂಡಿಲಿನಲ್ಲಿ ಎಸೆದ ಪರಿಣಾಮ ಕಾಲು ಮುರಿತಗೊಂಡು, ತಲೆಗೂ ಗಾಯಗಳಾಗಿದ್ದು ಬೈಕ್ ಜಕಮ್ ಗೊಂಡಿದೆ. ಈ ಸಂದರ್ಭ ಸಮೀಪದ ಮನೆಯವರು ಬೊಬ್ಬೆ ಕೇಳಿ ಸ್ಥಳಕ್ಕೆ ತೆರಳಿ ವಿಷಯ ತಿಳಿದ ಬಳಿಕ ಗ್ರಾಮ…
ಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು : ಫೆ.11ರಂದು ನಾಪೋಕ್ಲುವಿನ ಬೇತು ರಸ್ತೆಯಲ್ಲಿ ಅಲ್ ನೂರ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನಾ ಸಮಾರಂಭ ಹಾಗೂ ದಅವಾ ಸಮ್ಮೇಳನ ನಡೆಯಲಿದೆ. ಫೆ.11ರಂದು ಸಂಜೆ 4ಗಂಟೆಗೆ ನೂತನ ಮಸೀದಿಯ ಉದ್ಘಾಟನೆ ನಡೆಯಲಿದ್ದು ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಷನ್ ಅಧ್ಯಕ್ಷರಾದ ಪಿ.ಎನ್.ಅಬ್ದುಲ್ ಲತೀಫ್ ಮದನಿ ಅವರು ನೂತನ ಮಸೀದಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ, ಕರ್ನಾಟಕ ಸಲಫಿ ಅಸೋಸಿಯೇಷನ್ ಅಧ್ಯಕ್ಷ ಹಫೀಸ್ ಸ್ವಲಾಹಿ,ಖಲೀಲ್ ತಲಪ್ಪಾಡಿ,ಶಿಹಾಬ್ ತಲಪ್ಪಾಡಿ,ಡಾ.ಸಣ್ಣುವಂಡ ಕಾವೇರಪ್ಪ ನಾಪೋಕ್ಲು, ನಾಪೋಕ್ಲು ಪೊಲೀಸ್ ಉಪನಿರೀಕ್ಷಕರಾದ ಪಿ.ಜಿ. ರಾಘವೇಂದ್ರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪಿ.ಎಂ. ಖಾಸಿಂ,ನಾಪೋಕ್ಲು ಗ್ರಾಮ ಪಂಚಾಯತಿ ಸದಸ್ಯರಾದ ಕುಶು ಕುಶಾಲಪ್ಪ, ಮಹಮ್ಮದ್ ಖುರಶಿ, ಅರುಣ್ ಬೇಬ,ಇಸ್ಮಾಯಿಲ್ ಭಾಗವಹಿಸಲಿದ್ದಾರೆ. ಮಸೀದಿ ಉದ್ಘಾಟನಾ…
ಮೈತ್ರಿ ಪೊಲೀಸ್ ಭವನದಲ್ಲಿ ಕ್ಯಾನ್ಸರ್ ತಪಾಸಣೆ ಜಿಲ್ಲಾ ಪೊಲೀಸ್ ಘಟಕ, ಕಿದ್ವಾಯಿ ಗ್ರಂಥಿ ಆಸ್ಪತ್ರೆ, ಬೆಂಗಳೂರು ಮತ್ತು ಲಯನ್ಸ್ ಕ್ಲಬ್, ಮೈಸೂರು ಜೀವಾಧಾರ ಇವುಗಳ ಸಹಯೋಗದಲ್ಲಿ ಜಿಲ್ಲಾ ಪೊಲೀಸ್ ಘಟಕದ ಮಹಿಳಾ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳ ಕುಟುಂಬದ ಮಹಿಳಾ ಸದಸ್ಯರುಗಳಿಗೆ ಇಂದು ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಸಲಾಯಿತು. ಈ ಸಂದರ್ಭದ ನೆನಪಿಗಾಗಿ ಮಡಿಕೇರಿಯ ಡಿಎಆರ್ ಕಚೇರಿಯ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಡಲಾಯಿತು. ಶಿಬಿರದಲ್ಲಿ ಜಿಲ್ಲೆಯ ಮಹಿಳಾ ಪೊಲೀಸ್ ಸಿಬ್ಬಂದಿಗಳು ಮತ್ತು ಕುಟುಂಬಗಳ ಮಹಿಳಾ ಸದಸ್ಯರುಗಳು ಪಾಲ್ಗೊಂಡಿದ್ದರು. ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯರು ಪರೀಕ್ಷೆಗಳನ್ನು ನಡೆಸಿದರು.
ಕನೆಕ್ಟ್ ಕೊಡಗು 2K26 ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯುಎಇ ಸಿಲ್ವರ್ ಜ್ಯುಬಿಲಿ ಪ್ರಯುಕ್ತ ಆಯೋಜಿಸಲಾದ *‘ಕನೆಕ್ಟ್ ಕೊಡಗು 2K26’* ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ ಮಂತರ್ ಗೌಡ ರವರನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ KSWA ಯುಎಇ ಅಧ್ಯಕ್ಷರಾದ ಅಹಮದ್ ಚಾಮಿಯಾಲ್, ಜಿಸಿಸಿ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ , ಕನೆಕ್ಟ್ ಛೇರ್ಮನ್ ಜಲೀಲ್ ನಿಝಾಮಿ ನೇತೃತ್ವದಲ್ಲಿ KSWA ನಾಯಕರುಗಳು ಗೌರವಪೂರ್ವಕವಾಗಿ ಆತ್ಮೀಯ ಸ್ವಾಗತಿಸಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹಂಸ ಕೊಟ್ಟಮುಡಿ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಲತೀಫ್ ಸುಂಟಿಕೊಪ್ಪ ರವರು ಉಪಸ್ಥಿತರಿದ್ದರು.
ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟನೆ KODAGU NEWS ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು. ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ ಕಾರ್ಯಪ್ಪ ಅವರ ಹೆಸರಿಡಲು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗುವುದು. ಶನಿವಾರಸಂತೆ ಬಸ್ ನಿಲ್ದಾಣದ ಆವರಣದಲ್ಲಿ ಕಾಂಕ್ರೀಟ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಕೊಡ್ಲಿಪೇಟೆಯಲ್ಲೂ ಸಹ ಜಾಗ ನೀಡಿದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಆ ನಿಟ್ಟಿನಲ್ಲಿ ಜಾಗ ಒದಗಿಸುವಂತೆ ಊರಿನ ಪ್ರಮುಖರನ್ನು ಕೋರಿದರು. ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ 670 ಕೋಟಿ ಗೂ ಹೆಚ್ಚು ಮಹಿಳೆಯರು…
ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಆಡಳಿತ ಕಟ್ಟಡ ಹಾಗೂ ರೈತರ ತರಬೇತಿ ಕೇಂದ್ರ ಕಟ್ಟಡದ ಲೋಕಾರ್ಪಣೆಯನ್ನು ಶಾಸಕ ಎ.ಎಸ್ ಪೊನ್ನಣ್ಣ ನೆರವೇರಿಸಿದರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಪ್ರವಾಸದಲ್ಲಿರುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಪಶು ವೈದ್ಯಕೀಯ ಆಸ್ಪತ್ರೆಗೆ ಭೇಟಿ ನೀಡಿದರು. ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಆಡಳಿತ ಕಟ್ಟಡ ಹಾಗೂ ರೈತರ ತರಬೇತಿ ಕೇಂದ್ರ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಮಿದೇರೀರ ನವೀನ್, ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಅಣ್ಣಿರ ಹರೀಶ್, ಉಪಾಧ್ಯಕ್ಷರು ಆಲೀರ ರಶೀದ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಜುನೈದ್, ಪಕ್ಷದ ಹಿರಿಯ ಮುಖಂಡರು ಪೆಮ್ಮಂಡ ಪೊನ್ನಪ್ಪ, ಮುಕಳೇರ ಕುಶಾಲಪ್ಪ,…
ಮೀನುಗಾರಿಕೆ ಇಲಾಖೆಯಿಂದ ವಿವಿಧ ಅರ್ಹ ಫಲನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದ ಶಾಸಕ ಎ. ಎಸ್ ಪೊನ್ನಣ್ಣ ಮೀನುಗಾರಿಕೆ ಇಲಾಖೆಯಿಂದ ವಿವಿಧ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲತ್ತುಗಳ ವಿತರಣೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ನೆರವೇರಿಸಿದರು. ಮತ್ಸ್ಯಾಶ್ರಯ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ, ಮೀನು ಹಿಡಿಯಲು ಬೇಕಾಗುವಂತಹ ಎಲ್ಲಾ ಸೌಲಭ್ಯಗಳ ವಿತರಣೆ ಹಾಗೂ ಮೀನು ಸಾಕಾಣಿಕೆಗಾಗಿ ಮೀನಿನ ಮರಿಗಳನ್ನು ವಿತರಿಸಲಾಯಿತು. ಬಳಿಕ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಸರಕಾರ ಬಡಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದ, ಮೀನು ಸಾಕಣೆ ಮೂಲಕ ನಮ್ಮ ಜೀವನೋಪಾಯವನ್ನು ಕಂಡುಕೊಂಡವರಿಗೆ ಗೃಹ ನಿರ್ಮಾಣಕ್ಕೆ ಸಹಾಯಧನ ಹಾಗೂ ಮೀನುಗಾರಿಕೆಗೆ ಬೇಕಾದಂತಹ ಎಲ್ಲಾ ಸವಲತ್ತುಗಳನ್ನು ನೀಡುತ್ತಿದ್ದು ಇದರ ಸದುಪಯೋಗವನ್ನು ಫಲಾನುಭವಿಗಳಿಗೆ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ಮನೆ ಸವಲತ್ತು ಪಡೆದ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ…
ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್ ಗೆ ಶ್ರದ್ದಾ ಭಕ್ತಿಯ ಚಾಲನೆ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಹ್ಮಾನ್ ವಲಿವುಲ್ಲಾಹಿ ಹಾಗೂ ಇತರ ಮಹಾನುಭಾವರ ವಾರ್ಷಿಕ ಉರೂಸ್ ಸಮಾರಂಭಕ್ಕೆ ಗಣ್ಯರು ಶ್ರದ್ಧಾಭಕ್ತಿಯ ಚಾಲನೆ ನೀಡಿದರು. ಶುಕ್ರವಾರ ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನದೊಂದಿಗೆ ದರ್ಗಾಗೆ ತೆರಳಿದ ಸಮುದಾಯ ಬಾಂಧವರು ಮಸೀದಿಯ ಖತೀಬರಾದ ಮುಹಮ್ಮದ್ ಶಫೀಕ್ ಅಲಿ ಸಿರಾಜಿ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚೆರಿಯಪರಂಬು ಮೊಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಎ. ಅಹಮದ್ ಅವರು ಧ್ವಜಾರೋಹಣ ನೆರವೇರಿಸಿದರು. ಉರೂಸ್ ಸಮಾರಂಭವು ಫೆ.10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಫೆ.9 ಸೋಮವಾರದಂದು ಸಂಜೆ 4ಗಂಟೆಗೆ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ಜಮಾಅತ್ ಪದಾಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭ…
ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ನಡೆದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ರಮಾದೇವಿ ಬಾಲಚಂದ್ರ ಕಳಗಿಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಮಾತನಾಡಿ ಮಕ್ಕಳ ಸಹಾಯವಾಣಿ ಮತ್ತು ಅದರ ಉಪಯೋಗ, ಮಕ್ಕಳ ಸ್ವಚ್ಛತೆ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಕೇಶಿನಿ ಅವರು ಬೇಟಿ ಬಚಾವೋ ಬೇಟಿ ಪಡಾವೋ, ಸಹಾಯವಾಣಿ 181,112, ಕುರಿತು ಮಾಹಿತಿ ನೀಡಿ, ಸಂಬಲ್ ಮತ್ತು ಸಾಮರ್ಥ್ಯ ಕಾರ್ಯಕ್ರಮದ ಕುರಿತು ಸಮಗ್ರ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಚೇತನರ ಸಭೆಯನ್ನು ಕೂಡ ನಡೆಸಲಾಯಿತು. ಈ ಸಂದರ್ಭ ಕಾರ್ಯಕ್ರಮದಲ್ಲಿ ಪಂಚಾಯತ್…
