Author: Kodagu-admin

ಗುಡ್ಡೆಹೊಸೂರು ಬೊಳ್ಳೂರಿನಲ್ಲಿ ಭಾರಿ ಟಿಪ್ಪರ್‌ಗಳ ಅಬ್ಬರಕ್ಕೆ ನೀರಾವರಿ ನಿಗಮದ ರಸ್ತೆ ಹಾನಿ. ಅಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಿಲ್ಲ; ಗ್ರಾಮಸ್ಥರ ಆಕ್ರೋಶ ಕುಶಾಲನಗರ: ಖಾಸಗಿ ಲೇಔಟ್ ನಿರ್ಮಾಣದ ಭರಾಟೆಯಲ್ಲಿ ಸರ್ಕಾರಿ ರಸ್ತೆ ಹಾಳಾದ ಆರೋಪ, ಭಾರಿ ಗಾತ್ರದ ಟಿಪ್ಪರ್ ಲಾರಿಗಳಲ್ಲಿ ಜಲ್ಲಿ ಕಲ್ಲು ಹಾಗೂ ಎಂ-ಸ್ಯಾಂಡ್ ಸಾಗಾಟ ಮಾಡಿರುವ ಪರಿಣಾಮ ಬೊಳ್ಳೂರು ಗ್ರಾಮದ ನೀರಾವರಿ ನಿಗಮದ ರಸ್ತೆ ಹದಗೆಟ್ಟಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳೂರು ಗ್ರಾಮದಿಂದ ಮಾದಾಪಟ್ಟಣದ ಪಾಲಿಟೆಕ್ನಿಕ್ ಮೂಲಕ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ, ಖಾಸಗಿ ಲೇಔಟ್ ಕಾಮಗಾರಿಗೆ ನಿರ್ಮಾಣ ಸಾಮಗ್ರಿ ಸಾಗಿಸುವ ವಾಹನಗಳ ಸಂಚಾರದಿಂದ ಹಾನಿಗೊಳಗಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಒಂದೇ ದಿನದಲ್ಲಿ ಭಾರಿ ಪ್ರಮಾಣದ ನಿರ್ಮಾಣ ಸಾಮಗ್ರಿ ಸಾಗಾಟ ಮಾಡಿರುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂಬುದು ಗ್ರಾಮಸ್ಥರ ದೂರಾಗಿದೆ. ಇದು ಮೊದಲೇನಲ್ಲ! ಭಾರಿ ವಾಹನಗಳ ಸಂಚಾರದಿಂದ ರಸ್ತೆ ಹಾನಿಯಾಗುತ್ತಿರುವ ಬಗ್ಗೆ ಈ ಹಿಂದೆಯೇ ನೀರಾವರಿ ನಿಗಮದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸೂಕ್ತ…

Read More

ಮಕ್ಕಳ ಜೀವಕ್ಕೆ ಅಪಾಯವಾದರೂ ಸರ್ಕಾರಕ್ಕೆ ಕಾಳಜಿ ಇಲ್ಲವೇ? ಚೆಯ್ಯಂಡಾಣೆ: ಭವಿಷ್ಯದ ಪ್ರಜೆಗಳನ್ನು ರೂಪಿಸಬೇಕಾದ ಶಾಲೆಯೇ ಅಪಾಯದ ಅಂಚಿನಲ್ಲಿದೆ! ಚೆಯ್ಯಂಡಾಣೆ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಹಾಗೂ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿಯಿದೆ ಎಂದು ಬಿಜೆಪಿ ಕೊಡಗು ಸಾಮಾಜಿಕ ಜಾಲತಾಣದಲ್ಲಿ ಆತಂಕ ವ್ಯಕ್ತಪಡಿಸಿದೆ. ಶಾಲೆಯ ಕಟ್ಟಡದ ಸ್ಥಿತಿ ದಿನದಿಂದ ದಿನಕ್ಕೆ ಚಿಂತಾಜನಕವಾಗುತ್ತಿದ್ದರೂ, ದುರಸ್ತಿಗೆ ಸರ್ಕಾರದ ಬಳಿ ಹಣವಿಲ್ಲವೇ ಎಂಬ ಪ್ರಶ್ನೆಯನ್ನು ಬಿಜೆಪಿ ಎತ್ತಿದೆ. ಮಕ್ಕಳ ಸುರಕ್ಷತೆಯೇ ಮುಖ್ಯವಾಗಬೇಕಾದ ಸಂದರ್ಭದಲ್ಲಿ, ಶಾಲೆಯ ದುಸ್ಥಿತಿ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಹಾಗೂ ಜನಪ್ರತಿನಿಧಿಗಳ ಕಾಳಜಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಕ್ಕಳು ಕಲಿಯಬೇಕಾದ ಶಾಲೆ ಸುರಕ್ಷಿತವಾಗಿರಬೇಡವೇ? ಕಟ್ಟಡದ ದುಸ್ಥಿತಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ? ಜನಪ್ರತಿನಿಧಿಗಳು ಈ ಶಾಲೆಯತ್ತ ಕಣ್ಣೆತ್ತಿಯೂ ನೋಡಿಲ್ಲವೇ? ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆಯೇ? ಎಂಬ ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ. ಮಕ್ಕಳ ಭವಿಷ್ಯದ ಬಗ್ಗೆ ಮಾತನಾಡುವ ಸರ್ಕಾರ, ಅವರ ಸುರಕ್ಷಿತ ಶಿಕ್ಷಣಕ್ಕೆ ಅಗತ್ಯವಾದ ಮೂಲಸೌಕರ್ಯ ಒದಗಿಸುವ ಜವಾಬ್ದಾರಿಯಿಂದ…

Read More

ಮಡಿಕೇರಿಯ ಜಿಲ್ಲಾ ಭವನದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೋಶಾಧಿಕಾರಿ ಮುದ್ದಯ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಆಯುಕ್ತ ರಂಜಿತ್ ಕೆ.ಯು., ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ರವಿ ಪಿ.ಎಂ. ಸೇರಿದಂತೆ ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ನಗರಸಭೆಯ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಆಯುಕ್ತರಾದ ರಮೇಶ್ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಮೂಲಕ ಕನ್ನಡಾಭಿಮಾನವನ್ನು ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು, ಜನಪ್ರತಿನಿಧಿಗಳು, ನಗರಸಭೆ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾದರು. ಜೈ ಕರ್ನಾಟಕ, ಜೈ ಕನ್ನಡಾಂಬೆ! ❤️💛

Read More

ಕೊಡಗು ಹಿತರಕ್ಷಣಾ ವೇದಿಕೆಯ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ್ ಕಾಮತ್ ಹಾಗೂ ಮಾಜಿ ಪುರಸಭಾ ಉಪಾಧ್ಯಕ್ಷ ಟಿ.ಎಂ. ಅಯ್ಯಪ್ಪ ಅವರು ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎಂ. ಅಯ್ಯಪ್ಪ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿ, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯ ಮಹತ್ವದ ಕುರಿತು ಹಿತನುಡಿಗಳನ್ನಾಡಿದರು. ವೇದಿಕೆಯ ಪದಾಧಿಕಾರಿಗಳು ಹಾಗೂ ಸಮಾಜ ಸೇವಕ ಪ್ರಭು ರೈ ಅವರು ನೆರೆದಿದ್ದವರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ರವಿ ಗೌಡ, ತಾಲೂಕು ಉಪಾಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ಅಕ್ಷಿತ್, ಮಹಿಳಾ ಅಧ್ಯಕ್ಷೆ ಕವಿತಾ ಪ್ರಸಾದ್, ಕಾರ್ಮಿಕ ಘಟಕದ ಅಧ್ಯಕ್ಷೆ ದಿವ್ಯ, ನಗರ ಉಪಾಧ್ಯಕ್ಷೆ ಲಿಲ್ಲಿ ಗೌಡ, ಪೂರ್ಣಿಮಾ, ಬಾಲಕೃಷ್ಣ ನಾಯಕ್…

Read More

ಮಡಿಕೇರಿಯಲ್ಲಿ ಎಂಡಿಎಂಎ ಮಾದಕ ವಸ್ತು ಜಪ್ತಿ ₹4.04 ಲಕ್ಷ ಮೌಲ್ಯದ ಮಾದಕ ವಸ್ತು ವಶ; ಇಬ್ಬರ ಬಂಧನ ಮಡಿಕೇರಿ: ನಗರದ ಗೌಳಿಬೀದಿಯ ಕಂಚಿ ಕಾಮಾಕ್ಷಿ ದೇವಸ್ಥಾನದ ಸಮೀಪದ ಸಾರ್ವಜನಿಕ ಮೈದಾನದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 30ರಂದು ರುಹೇಜ್ ಶೇಖ್ (29) ಹಾಗೂ ಮೊಹಮ್ಮದ್ ಶಾಕೀಬ್ (19) ಮತ್ತೊಬ್ಬ ಅಪರಿಚಿತ ವ್ಯಕ್ತಿಯೊಂದಿಗೆ ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪತ್ರಾಂಕಿತ ಅಧಿಕಾರಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ದಾಳಿಯ ವೇಳೆ ಆರೋಪಿಗಳಿಂದ 11 ಗ್ರಾಂ ಎಂಡಿಎಂಎ ಮಾದಕ ವಸ್ತು, ಐದು ಮೊಬೈಲ್ ಫೋನ್‌ಗಳು, ಒಂದು ಆಟೋ ರಿಕ್ಷಾ, ತೂಕದ ಯಂತ್ರ ಹಾಗೂ ಒಂದು ಬ್ಯಾಗ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹4.04 ಲಕ್ಷ…

Read More

ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸಲು ಯುವ ಸಂಸತ್ ಸಹಕಾರಿ: ಮಂದ್ರೀರ ಮೋಹನ್ ದಾಸ್ ಮಡಿಕೇರಿ, ಅ.30: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಕೊಡಗು ಜಿಲ್ಲೆಯ ಕೃಷಿ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಮಾದರಿಯಲ್ಲಿ ಚರ್ಚಿಸಿದರು. ಪ್ರಶ್ನೋತ್ತರ, ವಿಧೇಯಕ ಮಂಡನೆ ಹಾಗೂ ಚರ್ಚೆ ಸೇರಿದಂತೆ ಸಂಸತ್ತಿನ ಕಾರ್ಯವಿಧಾನಗಳನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಯುವ ಸಂಸತ್ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುವುದರೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಜಯಲಕ್ಷ್ಮಿ ಅವರು ಕರ್ನಾಟಕ ನಾಗರಿಕ ಸೇವೆಯ 2014 ನೇ ಬ್ಯಾಚ್ ನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಉಪ ಕಾರ್ಯದರ್ಶಿಯಾಗಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Read More

ಮಡಿಕೇರಿ -ಹಿರಿಯರು ಸಂತಸದಿಂದ ಇರುವ ಮನೆ ಹಾಗೂ ಸಮಾಜ ಉತ್ತಮವಾಗಿರಲು ಸಾಧ್ಯ. ಆದ್ದರಿಂದ ಹಿರಿಯರನ್ನು ಗೌರವಿಸುವುದರ ಜೊತೆಗೆ, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದರು. ಭಾರತೀಯ ಸಂಸ್ಕøತಿಯಲ್ಲಿ “ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ” ಎಂಬ ಉದಾತ್ತ ಪರಂಪರೆಯಿದೆ. ಹಿರಿಯರಿಗೆ ದೊರೆಯಬೇಕಾದ ಆಸ್ತಿ ಹಕ್ಕುಗಳು ಮತ್ತು ನಿರ್ವಹಣಾ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಮನವಿ ಮಾಡಿದರು. ಇಂದಿನ ಜೆನ್ ಝಿ ಯುವ ಪೀಳಿಗೆಗೆ ಕೇವಲ ಉಪದೇಶ ಅಥವಾ ಭಾಷಣಗಳ ಮೂಲಕ ಮಾರ್ಗದರ್ಶನ ನೀಡಲು ಸಾಧ್ಯವಿಲ್ಲ. ಅವರ ಮನೋಭಾವವನ್ನು ಅರ್ಥಮಾಡಿಕೊಂಡು, ಸೂಕ್ತ ವಿಧಾನಗಳ ಮೂಲಕ ಸಂವಹನ ನಡೆಸಬೇಕು. ಹಿರಿಯರ ಅನುಭವ ಮತ್ತು ಅವರು ತೋರಿಸಿಕೊಟ್ಟ ಮಾರ್ಗದ ಮಹತ್ವವನ್ನು ಯುವಜನರು ಅರಿತುಕೊಳ್ಳಬೇಕು ಎಂದು ಹೇಳಿದರು. ಮಡಿಕೇರಿ ಮಹಿಳಾ ಠಾಣೆಯ ಸಿಪಿಐ ಉಮೇಶ್ ಕುಮಾರ್…

Read More

ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ ಮಡಿಕೇರಿ: ಜಿಲ್ಲೆಯಲ್ಲಿ ಪೌರಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳಿಗೆ ಗುಣಮಟ್ಟದ ಸುರಕ್ಷತಾ ಪರಿಕರ, ಉಚಿತ ಆರೋಗ್ಯ ತಪಾಸಣೆ ಮತ್ತು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಇಎಸ್‌ಐ, ಪಿಎಫ್, ವಸತಿ ಹಾಗೂ ನಿವೇಶನ ಸೌಲಭ್ಯ ಕಲ್ಪಿಸಬೇಕು. ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳಿಗೆ ಯಾರನ್ನೂ ನೇರವಾಗಿ ಇಳಿಸಬಾರದು ಎಂದು ತಿಳಿಸಿದರು. ಗೋಣಿಕೊಪ್ಪ ವ್ಯಾಪ್ತಿಯ ಪೌರಕಾರ್ಮಿಕರ ವಸತಿ ಪ್ರದೇಶದ ಸಮಸ್ಯೆಗಳನ್ನು ಪರಿಹರಿಸಿ, ಅರ್ಹ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಸುಂಟಿಕೊಪ್ಪದ ಉಲುಗುಲಿ ಗ್ರಾಮದ ಬಡ ಕುಟುಂಬಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತೆಯೂ ತಿಳಿಸಿದರು. ಸಭೆಯಲ್ಲಿ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ರಾಜು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು…

Read More