- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
28 ವರ್ಷಗಳಿಂದ ನಿರಂತರ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಮಾಜಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಹಾಲಿ ರಾಜ್ಯ ಕಾಂಗ್ರೆಸ್ ವಕ್ತಾರ ಸದ್ಯಅರಣ್ಯ ಮತ್ತು ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಕ್ರಿಯ ರಾಜಕಾರಣದಿಂದ ಹೊರಗುಳಿದಿದ್ದು ರಾಜಕೀಯವಾಗಿ ಹತ್ತು ಹಲವು ಪ್ರಶ್ನೆಗಳು ಜನಸಾಮಾನ್ಯರಲ್ಲಿ ಕಾಡತೊಡಗಿದೆ. ಸಾಮಾಜಿಕ ಕಳಕಳಿಯ ವಿಡಿಯೋ ವೈರಲ್ ಬಳಿಕ ಮೌನ: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಂಕೇತ್ ಪೂವಯ್ಯ ಕೊಡಗಿನ ಸ್ಥಳೀಯ ದೃಶ್ಯವಾಹಿನಿಯ ಮೂಲಕ ಸಂವಿಧಾನ, ರಾಜಕೀಯ, ರಾಜಕಾರಣಿಗಳು, ಸೇವೆ ಮತ್ತು ಮತದಾರನ ಮಹತ್ವದ ಕುರಿತು ಹಲವು ವಿಡಿಯೋಗಳನ್ನು ಹಂತಹಂತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದರು. ವಿಡಿಯೋಗಳು ಸಮಾಜಕ್ಕೆ ಸಂದೇಶವನ್ನು ನೀಡಿತ್ತಾದರೂ ಅದರ ಬೆನ್ನಲ್ಲೇ ಶಾಸಕರೊಬ್ಬರ ತೇಜೋವದೆಯ ಆರೋಪಗಳು ಕೇಳಿ ಬಂದಿದ್ದವು. ಈ ಬೆಳವಣಿಗೆಯ ಮಧ್ಯೆಯೇ ಸಮಾಜ ಸೇವಕ ಸಂಕೇತ್ ಪೂವಯ್ಯ ಸಕ್ರೀಯ ರಾಜಕಾರಣ ಮತ್ತು ಸಾರ್ವಜನಿಕ ಜೀವನದಿಂದ ಕೊಂಚ ದೂರ ಉಳಿದ್ದಿದ್ದಾರೆ. ಸಾರ್ವಜನಿಕ ವಲಯದಲ್ಲಿನ ಹೂಹಾಪೋಹಗಳೇನು? ಸಂಕೇತ ಪೂವಯ್ಯ ಸಾಮಾಜಿಕ ಕಳಕಳಿಯುಳ್ಳ ವಿಡಿಯೋ ವೈರಲ್…
ಕೊಡಗಿನಲ್ಲಿ ಮುಂದುವರಿದ ಆನೆ ದಾಳಿ ಸಿದ್ದಾಪುರ ಸಮೀಪ ಗೌರಿ ಬೆಟ್ಟದಲ್ಲಿ ಆನೆ ತುಳಿತಕ್ಕೆ ಓರ್ವ ಸಾವು KODAGUNEWS ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಪ್ರದೇಶದಲ್ಲಿ ಕಾಡಾನೆ ತುಳಿತಕ್ಕೆ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದು, ನಿರಂತರ ಆನೆ ದಾಳಿಯಿಂದ ಜೀವ ಭಯದಲ್ಲಿ ಬದುಕುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣವೆಂದು ಆರೋಪಿಸಿದರು. ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಸ್ಕೂಲ್ ಬಸ್ ಅನ್ನು ಒಂಟಿ ಸಲಗವೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದ್ದು , ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಚಿರಾಡಿ ಭಯಭೀತರಾಗಿದ್ದಾರೆ. ಮಾಲ್ದಾರೆ ಗ್ರಾಮ ಪಂಚಾಯಿತಿಗೆ ಒಳಪಡುವ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಲ್ಲಿನ ಬಿಜಿಎಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಶಾಲಾ ಬಸ್ಸಿನಲ್ಲಿ ಕರೆದುಕೊಂಡು ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಒಂಟಿ ಸಲಗ ಶಾಲಾ ವಾಹನವನ್ನು ಹಿಂಬಾಲಿಸಿ ಅಟ್ಟಿಸಿಕೊಂಡು ಬಂದ ದೃಶ್ಯವನ್ನು ಶಾಲಾ ಬಸ್ಸಿನಲ್ಲಿದ್ದ ಚಾಲಕ ಸುನಿಲ್ ರವರ ಪುತ್ರಿ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಣಂಗಾಲ ಮಠ ನಡುವೆ ಇರುವ “ಇವೊಲ್ವ್ ಬ್ಯಾಕ್” ಸಂಸ್ಥೆಗೆ ಸೇರಿದ ಕಾಫಿ ತೋಟದಿಂದ ಏಕಾಏಕಿ ರಸ್ತೆಗಿಳಿದ ಕಾಡಾನೆ ಶಾಲಾ ವಾಹನವನ್ನು ಅಟ್ಟಿಸಿ ಬಂದಿದೆ. ಘಟನೆ ನಡೆದ ಅಲ್ಪ ದೂರದಲ್ಲೇ ಸುಮಾರು 10 ಮಂದಿ ವಿದ್ಯಾರ್ಥಿಗಳು ಶಾಲಾ ವಾಹನಕ್ಕಾಗಿ ಕಾದು ಕುಳಿತ್ತಿದ್ದರು ಎನ್ನಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಆತಂಕಗೊಂಡಿರುವ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯ…
ಬೊಲೆರೋ ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ದುರ್ಮರಣ ಬೊಲೆರೋ ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಮೃತಪಟ್ಟ ಘಟನೆ ಹೆಬ್ಬಾಲೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಕೊಣನೂರು ಕಡೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಬೊಲೆರೋ (ಕೆ.ಎ.13.ಎನ್.8637) ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮಹಿಳೆ ಮಂಜುಳಾ (50) ಎಂಬವರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜುಳಾ ಅವರನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ರವಾನಿಸಿದರೂ ಮೃತಪಟ್ಟಿದ್ದಾರೆ. ಮೃತ ಮಹಿಳೆ ಹೆಬ್ಬಾಲೆಯ ನಿವೃತ್ತ ಶಿಕ್ಷಕ ಪಾಲಾಕ್ಷ ಎಂಬವರ ಪತ್ನಿ. ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ಸಂಚಾರ ಪೊಲೀಸ್ ಠಾಣಾಧಿಕಾರಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿ ಜೀಪ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ
ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಹಶೀಲ್ದಾರ್ ಶ್ರೀಧರ, ಡಿವೈಎಸ್‍ಪಿಗಳಾದ ಸೂರಜ್, ಮೇದಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪದ್ಮಶ್ರೀ…
ಶಾಸಕರಾದ ಪೊನ್ನಣ್ಣ ಸೂಚನೆ ಮೇರೆಗೆ ನಾಪೋಕ್ಲು ಶಾದಿಮಹಲ್ ಕಾರ್ಯ ಕಾಯ್ದಿರಿಸಲಾಗಿದೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರ ಸೂಚನೆ ಮೇರೆಗೆ, ನಾಪೋಕ್ಲು ಶಾದಿ ಮಹಲ್ ವಿಚಾರವಾಗಿ, ಮುಂದಿನ ತನಿಖೆ ಹಾಗೂ ಆದೇಶದ ವರೆಗೆ ಯಥಾಸ್ತುತಿ ಕಾಯ್ದುಕೊಳ್ಳಲು ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ ಸರ್ವೇ ನಡೆಸಲು ಅಧಿಕಾರಿ ಗಳ ತಂಡ ರಚನೆ. ನಾಪೋಕ್ಲು ಹೋಬಳಿ ಬೇತು ಗ್ರಾಮದ ಸರ್ವೆ ನಂ. 18/3ರ ಜಾಗದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶ ಮಡಿಕೇರಿ ತಾಲೂಕು ನಾಪೋಕ್ಲು ಹೋಬಳಿಯ ಬೇತು ಗ್ರಾಮದ ಸರ್ವೆ ನಂ. 18/3ರ ಜಾಗದ ಜಂಟಿ ತಪಾಸಣೆ ಮತ್ತು ಸರ್ವೆ ನಡೆಸಿ ನಿಯಮಾನುಸಾರ ಸೂಕ್ರ ಕ್ರಮ ಕೈಗೊಂಡು ವರದಿ ಸಲ್ಲಿಸಲು ಅಧಿಕಾರಿಗಳ ತಂಡವನ್ನು ರಚಿಸಲಾಗಿದ್ದು, ಅಧಿಕಾರಿಗಳ ತಂಡದ ವರದಿ ಬರುವವರೆಗೂ ಹಾಗೂ ಮುಂದಿನ ನಿರ್ದೇಶನದವರೆಗೆ ಸದರಿ ಜಾಗದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಕ್ರ ಕ್ರಮ ವಹಿಸುವಂತೆ ಉಪವಿಭಾಗಾಧಿಕಾರಿ ಹಾಗೂ ಮಡಿಕೇರಿ ತಾಲೂಕು ತಹಶೀಲ್ದಾರ್ ರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಕೊಡಗು ನ್ಯೂಸ್
ನಾಪೋಕ್ಲು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲುವಿನ ಅಂಗನವಾಡಿ ಕೇಂದ್ರದಲ್ಲಿ ನಾಪೋಕ್ಲು ಪಟ್ಟಣ, ಕೋಟೇರಿ, ಮುಟೇರಿ, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಆಯೋಜಿಸಲಾದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಪಾಲ್ಗೊಂಡು ಮಾತನಾಡಿ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳನ್ನು ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಗೆ ಕರೆತಂದು ತೂಕ ಎತ್ತರ ವನ್ನು ಪರಿಶೀಲಿಸಬೇಕು.ಅದರಂತೆ ಮಾತೃವಂಧನ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳು ಸರಿಯಾದ ದಾಖಲೆಗಳನ್ನು ನೀಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು. ಮಕ್ಕಳ ವೈದ್ಯರಾದ ಡಾ. ಚೈತ್ರ ಹಾಗೂ ಡಾ. ಪವನ್ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರಾದ ಶ್ವೇತ, ಗೀತಾ, ಕೃತಿಕಾ, ಸಹಾಯಕಿಯರಾದ ಸರೋಜಾ,…
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್,ಮಡಿಕೇರಿ ತಾಲೂಕು ವತಿಯಿಂದ ಪದವಿಪೂರ್ವ ಕಾಲೇಜು ಮಕ್ಕಳಿಗೆ ಆನ್ಲೈನ್ ಜಾನಪದ ಗೀತೆ ಸ್ಪರ್ಧೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ಜಾನಪದ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯು ಮಡಿಕೇರಿ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು ಶ್ರೀ ಮತಿ ಕೂಡಕಂಡಿ ಓಂ ಶ್ರೀ ದಯಾನಂದ, ವಾಟ್ಸಾಪ್ ಸಂಖ್ಯೆ :6363376487ಗೆ ದಿನಾಂಕ 05/02/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಡಿಜಿಟಲ್ ಅಭಿನಂದನಾಪತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಡಿಕೇರಿ…
ಕರಡ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು: ಕರಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸಿಐಎಸ್ಎಫ್ ಬೇಪಡಿಯಂಡ ಎಸ್.ಅಯ್ಯಣ್ಣನವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು, ಉತ್ತಮ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು,ದೇಶಾಭಿಮಾನ ರೂಡಿಸಿಕೊಳ್ಳಬೇಕು ಮಕ್ಕಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷೆ ಎಂ.ಎ. ನೇತ್ರಾವತಿ ವಹಿಸಿದರು. ದಿನದ ಮಹತ್ವದ ಕುರಿತು ಮುಖ್ಯ ಶಿಕ್ಷಕಿ ಲಿಲಾವತಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು,ಭಾಷಣ,ಹಾಡು ನೃತ್ಯಗಳು ನಡೆಯಿತು. ಸಂವಿಧಾನ ಪೀಠಿಕೆ ಓದಲಾಯಿತು. ಅತಿಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಈ ಸಂದರ್ಭ ಸಲಹಾ ಸಮಿತಿಯ ಸದಸ್ಯರಾದ ಐತಿಚಂಡ ಬೀಮಯ್ಯ,ಎಸ್ ಡಿಎಂಸಿ ಸದಸ್ಯರಾದ ಬಿಂದು,ಪ್ರಿಯ, ಪೋಷಕರು,ಗ್ರಾಮಸ್ಥರು,ಅತಿಥಿ ಶಿಕ್ಷಕಿ ಫಶೀಲ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಡಿಕೆ ಲಿಲಾವತಿ ಸ್ವಾಗತಿಸಿ ಸರ್ವರನ್ನು ವಂದಿಸಿದರು.
ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ನವೀಕರಣ ಶಾಸಕ ಪೊನ್ನಣ್ಣ ಪರಿಶೀಲನೆ ಮೆಚ್ಚುಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿ ಸುದರ್ಶನ ವೃತ್ತದ ಬಳಿ ಇರುವ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರವರ ಪುತ್ತಳಿ ಸ್ಮಾರಕಕ್ಕೆ ಭೇಟಿ ನೀಡಿದರು. ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಪುತ್ತರಿರ ಪಪ್ಪು ತಿಮ್ಮಯ್ಯ,ಹಾಗೂ ಪಾಲೆಂಗಡ ಅಮಿತ್, ರವರು ಪುತ್ತಳಿ ಆವರಣವನ್ನು ನವೀಕರಣಗೊಳಿಸುತ್ತಿದ್ದು ಇದನ್ನು ವೀಕ್ಷಿಸಿದ ಮಾನ್ಯ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ವೀಣಾ ಅಚ್ಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲಕ್ಶ್ಮಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
