- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಮೊಗೇರ ಸಮಾಜದ ಮಾನವೀಯ ಸ್ಪಂದನೆ: ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ KODAGU NEWS ಸೋಮವಾರಪೇಟೆ: ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ತಣ್ಣೀರುಹಳ್ಳ ನಿವಾಸಿ, ಸುಮಾರು 38 ವರ್ಷದ ಸುನಂದ ಅವರನ್ನು ಮೊಗೇರ ಸಮಾಜದ ವತಿಯಿಂದ ಮಾನವೀಯ ದೃಷ್ಟಿಯಿಂದ ರಕ್ಷಿಸಿ ಚಿಕಿತ್ಸೆ ಒದಗಿಸಲಾಗಿದೆ. ಸುನಂದ ಅವರು ಕಳೆದ ಕೆಲವು ದಿನಗಳಿಂದ ಸೋಮವಾರಪೇಟೆ ಪಟ್ಟಣದಲ್ಲಿ ಅಲೆದಾಡುತ್ತಾ ಬಸ್ ನಿಲ್ದಾಣದಲ್ಲಿ ಮಲಗಿಕೊಂಡಿರುವುದು ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಕೆಲವರು ಸಾಮಾಜಿಕ ಜಾಲತಾಣದ ಗುಂಪುಗಳಲ್ಲಿ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸೋಮವಾರಪೇಟೆ ಮೊಗೇರ ಸಮಾಜದ ಸದಸ್ಯರು ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು. ಸಭೆಯ ತೀರ್ಮಾನದಂತೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಮೊಗೇರ ಸಮಾಜದ ಉಪಾಧ್ಯಕ್ಷರಾದ ಪಿ.ಕೆ. ಚಂದ್ರು, ಜಿಲ್ಲಾ ಮೊಗೇರ ಸಮಾಜದ ಸದಸ್ಯರಾದ ಕೆ.ಬಿ. ನಂದ, ಹರೀಶ್ ತಣ್ಣೀರುಹಳ್ಳ, ವಿಜಯ್ ಕಾಗಡಿಕಟ್ಟೆ, ಹರೀಶ್ ಬಿಲ್ಕಿಕೊಪ್ಪ ಹಾಗೂ ರವಿ ಕರ್ಕಲಿ ಅವರುಗಳು ಸುನಂದ ಅವರ…
ಮಾಜಿ ಸಚಿವರಾದ ಎಂ. ಸಿ ನಾಣಯ್ಯನಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಭೇಟಿ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ವೀಕ್ಷಿಸಿದರು. ಇದೇ ಜನವರಿ 28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಿನ್ನೆಲೆ ವಿವಿಧ ಸಿದ್ಧತೆ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ ಇದ್ದರು. ಕೊಡಗು ನ್ಯೂಸ್
ಭಾರತ ಸಂವಿಧಾನ ಜಾರಿಯಾದ ದಿನದ ಶುಭಾಶಯಗಳು:-ಶಾಸಕ ಎ.ಎಸ್ ಪೊನ್ನಣ್ಣ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಹಾಗೂ ಪೊನ್ನಂಪೇಟೆಯ ಜೂನಿಯರ್ ಕಾಲೇಜು ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮಗಳ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಮೊದಲಿಗೆ ರಾಷ್ಟ್ರಧ್ವಜೋರಾಹಣ ಮಾಡಿ ಧ್ವಜವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಶಾಸಕರು, ಇಡೀ ವಿಶ್ವಕ್ಕೆ ಮಾದರಿಯಾದ ಭಾರತದ ಸಂವಿಧಾನ ಜಾರಿಯಾದ ಈ ದಿನದಂದು ನಾವುಗಳು ಹೆಮ್ಮೆಯಿಂದ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಪ್ರಾಮುಖ್ಯತೆಯ ದಿನವಾಗಿದೆ. ಈ ಗಣತಂತ್ರ ಹಬ್ಬವನ್ನು ಆಚರಿಸುವ ಮೂಲಕ, ನಾವು ನಮ್ಮ ದೇಶದ ಸಾಂವಿಧಾನಿಕ, ಸಾಂಸ್ಕೃತಿಕ ಹಾಗೂ ವೈವಿಧ್ಯಮಯ ಅನನ್ಯತೆಯನ್ನು ವಿಶ್ವಾದ್ಯಂತ ಸಾರೋಣ. ಗಣತಂತ್ರ ವ್ಯವಸ್ಥೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ನಾಡಿನ ಏಳಿಗೆಗಾಗಿ ಶ್ರಮಿಸೋಣ ಎಂದು ಕರೆ ನೀಡಿದರು. ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವೀಕ್ಷಿಸಿದ ಮಾನ್ಯ ಶಾಸಕರು ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು…
ಮಡಿಕೇರಿ:-77ನೇ ಗಣರಾಜ್ಯೋತ್ಸವ ದಿನಾಚರಣೆ ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಕಾರು ಮತ್ತು ಬೈಕ್ ಮೇಲೆ ಕಾಡಾನೆ ದಾಳಿ-ಚರಂಡಿಯಲ್ಲಿ ಅವಿತು ಜೀವ ಉಳಿಸಿಕೊಂಡ ಸವಾರ! ಕಾಡಾನೆಯೊಂದು ಚಲಿಸುತ್ತಿದ್ದ ಕಾರು ಮತ್ತು ಬೈಕಿನ ಮೇಲೆ ದಾಳಿ ಮಾಡಿರುವ ಘಟನೆ ಶನಿವಾರ ರಾತ್ರಿ 8 ಗಂಟೆ ಸಮಯದಲ್ಲಿ ಸೋಮವಾರಪೇಟೆ ಸಮೀಪದ ಕಾಜೂರು ಬಳಿ ನಡೆದಿದೆ. ಸೋಮವಾರಪೇಟೆ ನಾಡಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ, ಮಾದಾಪುರ ನಿವಾಸಿ, ರುದ್ರಕುಮಾರ್ (ಸುನಿಲ್) ರವರು ಪರಿಚಿತರ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲೆಂದು ಸ್ನೇಹಿತರೊಂದಿಗೆ ಕಾರಿನಲ್ಲಿ ಮಾದಾಪುರದಿಂದ ಸೋಮವಾರಪೇಟೆಗೆ ತೆರಳುತ್ತಿದ್ದಾಗ ಮಾರ್ಗಮಧ್ಯದಲ್ಲಿ ಕಾಡಾನೆ ಎದುರಾಗಿದೆ. ಚಲಿಸುತಿದ್ದ ಕಾರಿನ ಮೇಲೆ ಎರಗಿ ಒದ್ದು ಕಾರನ್ನು ಜಖಂಗೊಳಿಸಿದೆ. ಕಾರಿನ ಒಳಗೆ ಒಟ್ಟು ಐದು ಜನರಿದ್ದು, ಕಾಡಾನೆ ಮುತ್ತಿಗೆ ಹಾಕಿದಾಗ ಜೋರಾಗಿ ಬೊಬ್ಬಿಟ್ಟಿದ್ದಾರೆ. ಅವರ ಬೊಬ್ಬೆಗೆ ಮತ್ತು ಹಾರನ್ ಶಬ್ದಕ್ಕೆ ಹಿಂದಕ್ಕೆ ಸರಿದ ಕಾಡಾನೆ ಸೋಮವಾರಪೇಟೆ ಕಡೆಯಿಂದ ಬರುತ್ತಿದ್ದ ಬೈಕ್ ವೊಂದರ ಮೇಲೆ ಲಗ್ಗೆಯಿಟ್ಟಿದೆ. ಕಾಡಾನೆಯ ಒದೆತಕ್ಕೆ ಬೈಕ್ ಕೆಳಗೆ ಬಿದ್ದಿದ್ದು, ಸವಾರ ರಸ್ತೆ ಬದಿಯ ಚರಂಡಿಯ ಒಳಗೆ ಹಾರಿ ಅವಿತುಕೊಂಡು ಕಾಡಾನೆಯ ವಕ್ರದೃಷ್ಟಿಯಿಂದ ಪಾರಾಗಿ ಜೀವ ಉಳಿಸಿಕೊಂಡಿದ್ದಾನೆ. ಅದೃಷ್ಟವಶಾತ್…
ಶಾಸಕರಾದ ಎ.ಎಸ್ ಪೊನ್ನಣ್ಣ ನವರಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸ್ಮಾರಕ ಬಳಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಲಾಯಿತು. ಬೆಂಗಳೂರಿನಿಂದ ತನ್ನ ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಂದರ್ಭ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸದ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಸೂರಜ್ ಹೊಸೂರು, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರುಗಳು ಪಪು ತಿಮ್ಮಯ್ಯ, ಸಂಜು ಕಾವೇರಪ್ಪ ಉಪಸ್ಥಿತರಿದ್ದರು. ಕೊಡಗು ನ್ಯೂಸ್
ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರಾಜಸೀಟು ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು ರಾಜಸೀಟು ಉದ್ಯಾನವನದ ಒಳಭಾಗದಲ್ಲಿ ಹೈಟೆಕ್ ಮಾದರಿಯ ಕ್ಯಾಂಟೀನ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ರಾಜಸೀಟು ಉದ್ಯಾನವನಲ್ಲಿ ಈ ಬಾರಿ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಾಲಯ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಆಕರ್ಷಣಿಯವಾಗಿದೆ. ಹಾಗೆಯೇ ಮಕ್ಕಳಿಗಾಗಿ ಕನ್ನಡ ಅಕ್ಷರ ಮಾಲೆಯ ಪುಷ್ಪ ಪ್ರದರ್ಶನ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು. ರಾಜಸೀಟು ಉದ್ಯಾನವನದಲ್ಲಿ ವರ್ಷಕ್ಕೊಮ್ಮೆ ಬದಲಾಗಿ ವಿಶೇಷ ಸಂದರ್ಭಗಳಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. ರಾಜಸೀಟು ಉದ್ಯಾನವನ್ನು ಮತ್ತಷ್ಟು ಆಕರ್ಷಣೀಯ ಮಾಡುವಲ್ಲಿ ಇನ್ನಷ್ಟು ಹಸಿರುಮಯವನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸುವಂತೆ ಸಲಹೆ…
ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರಾಜಸೀಟು ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು ರಾಜಸೀಟು ಉದ್ಯಾನವನದ ಒಳಭಾಗದಲ್ಲಿ ಹೈಟೆಕ್ ಮಾದರಿಯ ಕ್ಯಾಂಟೀನ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ರಾಜಸೀಟು ಉದ್ಯಾನವನಲ್ಲಿ ಈ ಬಾರಿ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಾಲಯ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಆಕರ್ಷಣಿಯವಾಗಿದೆ. ಹಾಗೆಯೇ ಮಕ್ಕಳಿಗಾಗಿ ಕನ್ನಡ ಅಕ್ಷರ ಮಾಲೆಯ ಪುಷ್ಪ ಪ್ರದರ್ಶನ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು. ರಾಜಸೀಟು ಉದ್ಯಾನವನದಲ್ಲಿ ವರ್ಷಕ್ಕೊಮ್ಮೆ ಬದಲಾಗಿ ವಿಶೇಷ ಸಂದರ್ಭಗಳಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. ರಾಜಸೀಟು ಉದ್ಯಾನವನ್ನು ಮತ್ತಷ್ಟು ಆಕರ್ಷಣೀಯ ಮಾಡುವಲ್ಲಿ ಇನ್ನಷ್ಟು ಹಸಿರುಮಯವನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸುವಂತೆ ಸಲಹೆ…
ಕೊಡಗಿನ ಬಹುತೇಕ ರಸ್ತೆಗಳು ನಮ್ಮ ನೆಚ್ಚಿನ ಎಂ.ಎಲ್.ಎ.ಗಳ ಕೃಪೆಯಿಂದ ನಳನಲಿಸುತ್ತಿವೆ ಆದರೆ ಮಡಿಕೇರಿ–ಸಿದ್ದಾಪುರ ರಸ್ತೆ ಜನರೇನು ಚಿಕ್ಕವ್ವನ ಮಕ್ಕಳೇ? ✍️ಪಪ್ಪು ತಿಮ್ಮಯ್ಯ ಚೆಟ್ಟಳ್ಳಿ ಮಡಿಕೇರಿ–ಸಿದ್ದಾಪುರ ರಸ್ತೆಯ ಸ್ಥಿತಿ ಇಂದು ಅತ್ಯಂತ ದಯನೀಯ ಮಟ್ಟ ತಲುಪಿದೆ. ಕಳೆದ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಈ ರಸ್ತೆಗೆ ಡಾಮರೀಕರಣದ ಭಾಗ್ಯ ದೊರೆತಿಲ್ಲ. ಕತ್ತಲೆಕಾಡು–ಚೆಟ್ಟಳ್ಳಿ ಮಾರ್ಗವಾಗಿ ಸಾಗುವ ಈ ರಸ್ತೆ ದಿನನಿತ್ಯ ನೂರಾರು ಸಾರ್ವಜನಿಕರ ಜೀವನಾಡಿಯಾಗಿದೆ. ಶಾಲಾ ಮಕ್ಕಳು, ವೃದ್ಧರು, ರೋಗಗ್ರಸ್ತರು, ಸರ್ಕಾರಿ ನೌಕರರು ಹಾಗೂ ಪ್ರವಾಸಿಗರು ಈ ರಸ್ತೆಯನ್ನೇ ಅವಲಂಬಿಸಿಕೊಂಡು ಸಂಚರಿಸುತ್ತಿದ್ದಾರೆ. ಆದರೆ ರಸ್ತೆ ಎನ್ನುವ ಹೆಸರಿಗಿಂತ ಇದು ಅಪಘಾತಗಳ ಹಾದಿಯಾಗಿ ಮಾರ್ಪಟ್ಟಿದೆ. ಗುಂಡಿ–ಗುಂಡಿಗಳು, ಮಣ್ಣು, ಧೂಳು, ಮಳೆಯಾದರೆ ಕೆಸರು—ಒಟ್ಟಿನಲ್ಲಿ ಜನಸಾಮಾನ್ಯರ ಸಹನೆಗೆ ಸವಾಲು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಗಂಭೀರ ಪರಿಸ್ಥಿತಿಯ ನಡುವೆಯೂ, ಇದುವರೆಗೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಈ ರಸ್ತೆಯ ದುಸ್ಥಿತಿಯತ್ತ ತಿರುಗಿ ನೋಡಿರುವ ಉದಾಹರಣೆ ಕಾಣಿಸುವುದಿಲ್ಲ. ಹೀಗಾದರೆ ಈ ಭಾಗದ ಜನರು ಕೇಳುವ ಪ್ರಶ್ನೆಗಳು ಸಹಜವೇ: “ನಾವೇನು ಮತ ಹಾಕಿಲ್ಲವೇ?”…
ನಿರ್ಗತಿಕ ಕುಟುಂಬಕ್ಕೆ ಧರ್ಮಸ್ಥಳ ಸಂಘ ಆಶ್ರಯ- ಕೋಕೇರಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಡಿಕೇರಿ ತಾಲೂಕಿನ ಭಾಗಮಂಡಲ ವಲಯದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಕೇರಿಗ್ರಾಮದಲ್ಲಿ ವಾಸವಿರುವ ಜಾಜಿ ಎಂಬವರಿಗೆ ವಾಸಿಸಲು ಯೋಗ್ಯವಾದ ಮನೆ ಇಲ್ಲದ ಕಾರಣ ಧರ್ಮಸ್ಥಳ ಸಂಘದಿಂದ ವಾತ್ಸಲ್ಯ ಮನೆ ಮಂಜುರಾಗಿದ್ದು ಮನೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭ ಬಾಬು ಆಚಾರ್ಯ, ತೀರ್ಥರಾಮ್, ನಯನ್ ಕುಮಾರ್,ವಲಯ ಮೇಲ್ವಿಚಾರಕರಾದ ಸುನಿಲ್, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಮಾಲಿನಿ ಸೇವಾ ಪ್ರತಿನಿಧಿ ಪ್ರಭಾ,ಟ್ರಸ್ಟಿನ ಸದಸ್ಯರು,ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
